Leviticus 16 - ASV (Kannada)
1 And Jehovah spake unto Moses, after the death of the two sons of Aaron, when they drew near before Jehovah, and died;ಆರೋನನ ಇಬ್ಬರು ಗಂಡುಮಕ್ಕಳು ಕರ್ತನ ಸನ್ನಿಧಿಯಲ್ಲಿ ಅರ್ಪಣೆಮಾಡಿ ಸತ್ತ ನಂತರ ಕರ್ತನು ಮೋಶೆಯೊಂದಿಗೆ ಮಾತನಾಡಿದನು.
2 and Jehovah said unto Moses, Speak unto Aaron thy brother, that he come not at all times into the holy place within the veil, before the mercy-seat which is upon the ark; that he die not: for I will appear in the cloud upon the mercy-seat.ಆಗ ಕರ್ತನು ಮೋಶೆಗೆ--ಅವನು ಸಾಯದಂತೆ ಮಂಜೂಷದ ಮೇಲಿರುವ ಕರುಣಾಸನದ ಮುಂದಿ ರುವ ಪರದೆಯ ಒಳಗೆ ಪರಿಶುದ್ಧವಾದ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ; ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.
3 Herewith shall Aaron come into the holy place: with a young bullock for a sin-offering, and a ram for a burnt-offering.ಆರೋನನು ಪಾಪಬಲಿಗಾಗಿ ಒಂದು ಹೋರಿಯನ್ನು ದಹನಬಲಿಗಾಗಿ ಒಂದು ಟಗರನ್ನು ತೆಗೆದುಕೊಂಡು ಪರಿಶುದ್ಧವಾದ ಸ್ಥಳಕ್ಕೆ ಬರಬೇಕು.
4 He shall put on the holy linen coat, and he shall have the linen breeches upon his flesh, and shall be girded with the linen girdle, and with the linen mitre shall he be attired: they are the holy garments; and he shall bathe his flesh in water, and put them on.ಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು.
5 And he shall take of the congregation of the children of Israel two he-goats for a sin-offering, and one ram for a burnt-offering.ಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು.
6 And Aaron shall present the bullock of the sin-offering, which is for himself, and make atonement for himself, and for his house.ಇದಲ್ಲದೆ ಆರೋನನು ತನಗೋಸ್ಕರ ಪಾಪಬಲಿ ಗಾಗಿ ತನ್ನ ಹೋರಿಯನ್ನು ಸಮರ್ಪಿಸಿ ತನ್ನ ಮನೆಯ ವರಿಗೋಸ್ಕರವೂ ಪ್ರಾಯಶ್ಚಿತ್ತಮಾಡಬೇಕು.
7 And he shall take the two goats, and set them before Jehovah at the door of the tent of meeting.ಅವನು ಎರಡು ಮೇಕೆಗಳನ್ನು ತೆಗೆದುಕೊಂಡು ಸಭೆಯ ಗುಡಾರದ ಬಾಗಿಲ ಬಳಿಗೆ ತಂದು ಅವುಗಳನ್ನು ಕರ್ತನ ಎದುರಿನಲ್ಲಿ ನಿಲ್ಲಿಸಬೇಕು.
8 And Aaron shall cast lots upon the two goats; one lot for Jehovah, and the other lot for Azazel.ಆರೋನನು ಆ ಎರಡು ಆಡುಗಳಿಗಾಗಿ ಚೀಟು ಹಾಕಬೇಕು; ಒಂದು ಚೀಟು ಕರ್ತನಿಗೋಸ್ಕರ ಮತ್ತೊಂದು ಚೀಟು ಪಾಪ ಪಶುವಿ ಗೋಸ್ಕರ.
9 And Aaron shall present the goat upon which the lot fell for Jehovah, and offer him for a sin-offering.ಆರೋನನು ಕರ್ತನ ಚೀಟು ಬಿದ್ದ ಆಡನ್ನು ತಂದು ಅದನ್ನು ಪಾಪಬಲಿಗಾಗಿ ಸಮರ್ಪಿಸ ಬೇಕು.
10 But the goat, on which the lot fell for Azazel, shall be set alive before Jehovah, to make atonement for him, to send him away for Azazel into the wilderness.ಆದರೆ ಪಾಪ ಪಶುವಿಗಾಗಿ ಚೀಟು ಬಿದ್ದ ಆ ಆಡನ್ನು ತನ್ನೊಂದಿಗೆ ಪ್ರಾಯಶ್ಚಿತ್ತಮಾಡುವದ ಕ್ಕಾಗಿ ಕರ್ತನ ಸನ್ನಿಧಿಯಲ್ಲಿ ಸಜೀವವಾಗಿ ನಿಲ್ಲಿಸಿ ಅದನ್ನು ಪಾಪ ಪಶುವಾಗಿ ಕಾಡಿನಲ್ಲಿ ಹೋಗುವಂತೆ ಬಿಟ್ಟುಬಿಡಬೇಕು.
11 And Aaron shall present the bullock of the sin-offering, which is for himself, and shall make atonement for himself, and for his house, and shall kill the bullock of the sin-offering which is for himself:ಇದಲ್ಲದೆ ಆರೋನನು ಪಾಪಬಲಿಗಾಗಿರುವ ಹೋರಿಯನ್ನು ತನಗೋಸ್ಕರವೂ ತನ್ನ ಮನೆತನದವರಿ ಗೋಸ್ಕರವೂ ಪ್ರಾಯಶ್ಚಿತ್ತಮಾಡಿ, ಪಾಪಬಲಿಗಾಗಿ ಆ ಹೋರಿಯನ್ನು ವಧಿಸಬೇಕು.
12 and he shall take a censer full of coals of fire from off the altar before Jehovah, and his hands full of sweet incense beaten small, and bring it within the veil:ಅವನು ಕರ್ತನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಧೂಪ ಸುಡುವ ಪಾತ್ರೆಯ ತುಂಬ ಬೆಂಕಿಯಿಂದ ಉರಿಯುವ ಕೆಂಡ ಗಳನ್ನು ಮತ್ತು ತನ್ನ ಕೈಗಳ ತುಂಬ ಸಣ್ಣದಾಗುವಂತೆ ಕಟ್ಟಿದ ಧೂಪವನ್ನು ತೆಗೆದುಕೊಂಡು ಅದನ್ನು ತೆರೆಯ ಒಳಗಡೆ ತರಬೇಕು.
13 and he shall put the incense upon the fire before Jehovah, that the cloud of the incense may cover the mercy-seat that is upon the testimony, that he die not:ಅವನು ಸಾಯದ ಹಾಗೆ ಆ ಧೂಪದ ಹೊಗೆಯು ಸಾಕ್ಷಿಯ ಮೇಲಿರುವ ಕೃಪಾಸನವು ಮುಚ್ಚಿಕೊಳ್ಳುವಂತೆ ಆ ಧೂಪವನ್ನು ಕರ್ತನ ಎದುರಿನಲ್ಲಿ ಉರಿಯುವ ಕೆಂಡಗಳ ಮೇಲೆ ಹಾಕಬೇಕು.
14 and he shall take of the blood of the bullock, and sprinkle it with his finger upon the mercy-seat on the east; and before the mercy-seat shall he sprinkle of the blood with his finger seven times.ಆ ಹೋರಿಯ ರಕ್ತದಿಂದ ತೆಗೆದು ಕೊಂಡು ಕೃಪಾಸನದ ಮೇಲೆ ಪೂರ್ವಕ್ಕೆ ತನ್ನ ಬೆರಳಿನಿಂದ ಚಿಮುಕಿಸಬೇಕು; ಕೃಪಾಸನದ ಮುಂದೆ ಆ ರಕ್ತವನ್ನು ತನ್ನ ಬೆರಳಿನಿಂದ ಏಳು ಸಾರಿ ಚಿಮುಕಿಸಬೆಕು.
15 Then shall he kill the goat of the sin-offering, that is for the people, and bring his blood within the veil, and do with his blood as he did with the blood of the bullock, and sprinkle it upon the mercy-seat, and before the mercy-seat:ತರುವಾಯ ಅವನು ಜನರಿಗೋಸ್ಕರ ಪಾಪಬಲಿ ಯಾಗಿರುವ ಆಡನ್ನು ವಧಿಸಿ ಅದರ ರಕ್ತವನ್ನು ತೆರೆಯ ಒಳಗಡೆ ತಂದು ಹೋರಿಯ ರಕ್ತದಿಂದ ಮಾಡಿ ದಂತೆಯೇ ಕೃಪಾಸನದ ಮೇಲೆಯೂ ಮುಂದೆಯೂ ಚಿಮುಕಿಸಬೇಕು.
16 and he shall make atonement for the holy place, because of the uncleannesses of the children of Israel, and because of their transgressions, even all their sins: and so shall he do for the tent of meeting, that dwelleth with them in the midst of their uncleannesses.ಇಸ್ರಾಯೇಲಿನ ಮಕ್ಕಳ ಅಶುದ್ಧ ತ್ವದ ನಿಮಿತ್ತವಾಗಿಯೂ ಅವರ ಪಾಪಗಳಲ್ಲಿರುವ ಎಲ್ಲಾ ಅಪರಾಧಗಳಿಗಾಗಿಯೂ ಅವನು ಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತಮಾಡಬೇಕು. ಅವರ ಅಶುದ್ಧ ತ್ವದ ಮಧ್ಯದಲ್ಲಿ ಉಳಿದವರಿಗೋಸ್ಕರ ಸಭೆಯಗುಡಾರಕ್ಕೂ ಅದರಂತೆಯೇ ಮಾಡಬೇಕು.
17 And there shall be no man in the tent of meeting when he goeth in to make atonement in the holy place, until he come out, and have made atonement for himself, and for his household, and for all the assembly of Israel.ಅವನು ಪ್ರಾಯಶ್ಚಿತ್ತಮಾಡುವದಕ್ಕಾಗಿ ಪರಿಶುದ್ಧ ಸ್ಥಳಕ್ಕೆ ಹೋಗಿರುವಾಗ ತನಗೋಸ್ಕರವೂ ತನ್ನ ಮನೆಯ ವರೆಲ್ಲರಿಗೋಸ್ಕರವೂ ಇಸ್ರಾಯೇಲ್ಯರ ಸಭೆ ಯವರೆಲ್ಲರಿಗೋಸ್ಕರವೂ ಪ್ರಾಯಶ್ಚಿತ್ತಮಾಡಿ ಹೊರಗೆ ಬರುವ ತನಕ ಸಭೆಯ ಗುಡಾರದಲ್ಲಿ ಒಬ್ಬ ಮನುಷ್ಯನಾದರೂ ಇರಬಾರದು.
18 And he shall go out unto the altar that is before Jehovah, and make atonement for it, and shall take of the blood of the bullock, and of the blood of the goat, and put it upon the horns of the altar round about.ಇದಲ್ಲದೆ ಅವನು ಕರ್ತನ ಎದುರಿನಲ್ಲಿರುವ ಯಜ್ಞವೇದಿಯ ಬಳಿಗೆ ಬಂದು ಅದಕ್ಕೋಸ್ಕರ ಪ್ರಾಯಶ್ಚಿತ್ತವನ್ನುಮಾಡಬೇಕು; ಹೋರಿಯ ರಕ್ತವನ್ನೂ ಆಡಿನ ರಕ್ತವನ್ನೂ ತೆಗೆದು ಕೊಂಡು ಯಜ್ಞವೇದಿಯ ಸುತ್ತಲೂ ಇರುವ ಕೊಂಬು ಗಳಿಗೆ ಹಚ್ಚಬೇಕು.
19 And he shall sprinkle of the blood upon it with his finger seven times, and cleanse it, and hallow it from the uncleannesses of the children of Israel.ಇದಲ್ಲದೆ ಅವನು ಏಳು ಸಾರಿ ಅದರ ಮೇಲೆ ಬೆರಳಿನಿಂದ ರಕ್ತವನ್ನು ಚಿಮುಕಿಸಿ ಅದನ್ನು ಶುದ್ಧಮಾಡಬೇಕು ಇಸ್ರಾಯೇಲ್ ಮಕ್ಕಳ ಅಶುದ್ಧತೆಯಿಂದ ಅದನ್ನು ಶುದ್ಧಮಾಡಬೇಕು.
20 And when he hath made an end of atoning for the holy place, and the tent of meeting, and the altar, he shall present the live goat:ಹೀಗೆ ಪರಿಶುದ್ಧ ಸ್ಥಳದಲ್ಲಿಯೂ ಸಭೆಯ ಗುಡಾರದಲ್ಲಿಯೂ ಯಜ್ಞವೇದಿಗೂ ಪ್ರಾಯಶ್ಚಿತ್ತವನ್ನು ಮಾಡಿ ಮುಗಿಸಿದ ಮೇಲೆ ಅವನು ಒಂದು ಜೀವವುಳ್ಳ ಆಡನ್ನು ತರಬೇಕು.
21 and Aaron shall lay both his hands upon the head of the live goat, and confess over him all the iniquities of the children of Israel, and all their transgressions, even all their sins; and he shall put them upon the head of the goat, and shall send him away by the hand of a man that is in readiness into the wilderness:ಆರೋನನು ಆ ಜೀವವುಳ್ಳ ಆಡಿನ ತಲೆಯ ಮೇಲೆ ತನ್ನ ಎರಡೂ ಕೈಗಳನ್ನು ಇಟ್ಟು ಇಸ್ರಾಯೇಲ್ ಮಕ್ಕಳ ಎಲ್ಲಾ ಅಕ್ರಮಗಳನ್ನೂ ಎಲ್ಲಾ ಪಾಪಗಳಲ್ಲಿರುವ ದ್ರೋಹಗಳನ್ನೂ ಅರಿಕೆ ಮಾಡಿ ಅವುಗಳನ್ನು ಆಡಿನ ತಲೆಯ ಮೇಲೆ ಇರಿಸಿ ಯೋಗ್ಯನಾದ ಒಬ್ಬ ಮನುಷ್ಯನ ಕೈಯಿಂದ ಅದನ್ನು ಅಡವಿಯೊಳಗೆ ಕಳುಹಿಸಿಬಿಡಬೇಕು.
22 and the goat shall bear upon him all their iniquities unto a solitary land: and he shall let go the goat in the wilderness.ಆ ಆಡು ಅವರ ಎಲ್ಲಾ ಅಕ್ರಮಗಳನ್ನು ನಿರ್ಜನವಾದ ಸ್ಥಳಕ್ಕೆ ತೆಗೆದುಕೊಂಡು ಹೋಗುವಂತೆ ಆ ಆಡನ್ನು ಅಡವಿಗೆ ಬಿಟ್ಟುಬಿಡಬೇಕು.
23 And Aaron shall come into the tent of meeting, and shall put off the linen garments, which he put on when he went into the holy place, and shall leave them there:ಆರೋನನು ಸಭೆಯ ಗುಡಾರದೊಳಗೆ ಬಂದು ತಾನು ಪರಿಶುದ್ಧ ಸ್ಥಳದೊಳಕ್ಕೆ ಹೋಗುವಾಗ ತೊಟ್ಟು ಕೊಂಡಿದ್ದ ನಾರಿನ ಬಟ್ಟೆಗಳನ್ನು ತೆಗೆದುಹಾಕಿ ಅವುಗ ಳನ್ನು ಅಲ್ಲಿಯೇ ಬಿಡಬೇಕು.
24 and he shall bathe his flesh in water in a holy place, and put on his garments, and come forth, and offer his burnt-offering and the burnt-offering of the people, and make atonement for himself and for the people.ಅವನು ಪರಿಶುದ್ಧ ಸ್ಥಳದಲ್ಲಿ ತನ್ನ ಶರೀರವನ್ನು ನೀರಿನಿಂದ ತೊಳೆದು ತನ್ನ ಬಟ್ಟೆಗಳನ್ನು ಧರಿಸಿಕೊಂಡು ಹೊರಗೆ ಬಂದು ತನ್ನ ದಹನಬಲಿಯನ್ನೂ ಜನರ ದಹನಬಲಿಯನ್ನೂ ಸಮ ರ್ಪಿಸಿ ತನಗೋಸ್ಕರವೂ ಜನರಿಗೋಸ್ಕರವೂ ಪ್ರಾಯ ಶ್ಚಿತ್ತಮಾಡಬೇಕು.
25 And the fat of the sin-offering shall he burn upon the altar.ಪಾಪಬಲಿಯ ಕೊಬ್ಬು ಯಜ್ಞ ವೇದಿಯ ಮೇಲೆ ಸುಡಲ್ಪಡಬೇಕು.
26 And he that letteth go the goat for Azazel shall wash his clothes, and bathe his flesh in water, and afterward he shall come into the camp.ಪಾಪ ಪಶುವಿಗಾಗಿ ಆಡನ್ನು ಹೋಗಲು ಬಿಟ್ಟ ವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ತನ್ನ ಶರೀರ ವನ್ನು ನೀರಿನಲ್ಲಿ ತೊಳೆದುಕೊಂಡ ಮೇಲೆ ಅವನು ಪಾಳೆಯದೊಳಕ್ಕೆ ಬರಬೇಕು.
27 And the bullock of the sin-offering, and the goat of the sin-offering, whose blood was brought in to make atonement in the holy place, shall be carried forth without the camp; and they shall burn in the fire their skins, and their flesh, and their dung.ಇದಲ್ಲದೆ ಪರಿಶುದ್ಧ ಸ್ಥಳದಲ್ಲಿ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಯಾವದರ ರಕ್ತವು ತರಲ್ಪಟ್ಟಿತೋ ಆ ಪಾಪಬಲಿಯ ಹೋರಿಯನ್ನು ಮತ್ತು ಪಾಪಬಲಿಯ ಆಡನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ ಅವುಗಳ ಚರ್ಮವನ್ನೂ ಮಾಂಸವನ್ನೂ ಸಗಣಿಯನ್ನೂ ಸುಡಬೇಕು.
28 And he that burneth them shall wash his clothes, and bathe his flesh in water, and afterward he shall come into the camp.ಅವು ಗಳನ್ನು ಸುಡುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ಶರೀರವನ್ನು ನೀರಿನಲ್ಲಿ ತೊಳೆದುಕೊಂಡ ನಂತರ ಪಾಳೆಯದೊಳಕ್ಕೆ ಬರಬೇಕು.
29 And it shall be a statute for ever unto you: in the seventh month, on the tenth day of the month, ye shall afflict your souls, and shall do no manner of work, the home-born, or the stranger that sojourneth among you:ನೀವು ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮಲ್ಲಿ ಒಬ್ಬ ಸ್ವದೇಶದವನಾಗಲಿ ಪ್ರವಾಸಿಯಾಗಿರುವ ಪರಕೀಯನಾಗಲಿ ನಿಮ್ಮ ಆತ್ಮಗಳನ್ನು ಕುಂದಿಸಿ ಯಾವ ಕೆಲಸವನ್ನೂ ಮಾಡದಂತೆ ಇದು ನಿಮಗೆ ಶಾಶ್ವತವಾದ ಒಂದು ನಿಯಮವಾಗಿರುವದು.
30 for on this day shall atonement be made for you, to cleanse you; from all your sins shall ye be clean before Jehovah.ಯಾಕಂದರೆ ನೀವು ಕರ್ತನ ಸನ್ನಿಧಿಯಲ್ಲಿ ನಿಮ್ಮ ಎಲ್ಲಾ ಪಾಪಗಳಿಂದ ಶುದ್ಧರಾಗಿರುವಂತೆ ನಿಮ್ಮನ್ನು ಶುದ್ಧೀಕರಿಸುವ ಹಾಗೆ ಆ ದಿನದಲ್ಲಿ ಯಾಜಕನು ನಿಮಗೋಸ್ಕರ ಪ್ರಾಯಶ್ಚಿತ್ತ ವನ್ನು ಮಾಡುವನು.
31 It is a sabbath of solemn rest unto you, and ye shall afflict your souls; it is a statute for ever.ಇದೇ ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿರುವದು. ನಿಮಗೆ ನಿತ್ಯವಾದ ನಿಯಮ ವಿರುವಂತೆ ನಿಮ್ಮ ಪ್ರಾಣಗಳನ್ನು ಕುಂದಿಸಬೇಕು.
32 And the priest, who shall be anointed and who shall be consecrated to be priest in his father's stead, shall make the atonement, and shall put on the linen garments, even the holy garments:ಯಾವನು ತನ್ನ ತಂದೆಯ ಬದಲಾಗಿ ಯಾಜಕ ಉದ್ಯೋಗಕ್ಕೋಸ್ಕರ ಅಭಿಷೇಕಿಸಲ್ಪಟ್ಟವನಾಗಿ ಪ್ರತಿಷ್ಠಿಸ ಲ್ಪಟ್ಟಿದ್ದಾನೋ ಆ ಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು.
33 and he shall make atonement for the holy sanctuary; and he shall make atonement for the tent of meeting and for the altar; and he shall make atonement for the priests and for all the people of the assembly.ಅವನು ಪರಿಶುದ್ಧ ಉಡುಪುಗಳಾದ ನಾರು ಬಟ್ಟೆಗಳನ್ನು ಧರಿಸಿಕೊಳ್ಳಬೇಕು. ಹೀಗೆ ಅವನು ಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತಮಾಡಬೇಕು. ಇದ ಲ್ಲದೆ ಸಭೆಯ ಗುಡಾರಕ್ಕಾಗಿಯೂ ಯಜ್ಞವೇದಿ ಗಾಗಿಯೂ ಪ್ರಾಯಶ್ಚಿತ್ತಮಾಡಬೇಕು. ಯಾಜಕರಿ ಗಾಗಿಯೂ ಸಭೆಯ ಎಲ್ಲಾ ಜನರಿಗೋಸ್ಕರವೂ ಪ್ರಾಯಶ್ಚಿತ್ತಮಾಡಬೇಕು.
34 And this shall be an everlasting statute unto you, to make atonement for the children of Israel because of all their sins once in the year. And he did as Jehovah commanded Moses.ಹೀಗೆ ಇಸ್ರಾಯೇಲಿನ ಮಕ್ಕಳ ಎಲ್ಲಾ ಪಾಪಗಳಿಗಾಗಿ ವರ್ಷಕ್ಕೊಂದಾವರ್ತಿ ಪ್ರಾಯಶ್ಚಿತ್ತಮಾಡುವಂತೆ ಇದು ನಿಮಗೆ ನಿರಂತರ ವಾದ ನಿಯಮವಾಗಿರುವದು ಎಂದು ಹೇಳಿದನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.
Kannada Bible