Leviticus 16 - BBE (Kannada)
1 And the Lord said to Moses, after the death of the two sons of Aaron when they took in strange fire before the Lord and death overtook them;ಆರೋನನ ಇಬ್ಬರು ಗಂಡುಮಕ್ಕಳು ಕರ್ತನ ಸನ್ನಿಧಿಯಲ್ಲಿ ಅರ್ಪಣೆಮಾಡಿ ಸತ್ತ ನಂತರ ಕರ್ತನು ಮೋಶೆಯೊಂದಿಗೆ ಮಾತನಾಡಿದನು.
2 The Lord said to Moses, Say to Aaron, your brother, that he may not come at all times into the holy place inside the veil, before the cover which is on the ark, for fear that death may overtake him; for I will be seen in the cloud on the cover of the ark.ಆಗ ಕರ್ತನು ಮೋಶೆಗೆ--ಅವನು ಸಾಯದಂತೆ ಮಂಜೂಷದ ಮೇಲಿರುವ ಕರುಣಾಸನದ ಮುಂದಿ ರುವ ಪರದೆಯ ಒಳಗೆ ಪರಿಶುದ್ಧವಾದ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ; ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.
3 Let Aaron come into the holy place in this way: with an ox for a sin-offering and a male sheep for a burned offering.ಆರೋನನು ಪಾಪಬಲಿಗಾಗಿ ಒಂದು ಹೋರಿಯನ್ನು ದಹನಬಲಿಗಾಗಿ ಒಂದು ಟಗರನ್ನು ತೆಗೆದುಕೊಂಡು ಪರಿಶುದ್ಧವಾದ ಸ್ಥಳಕ್ಕೆ ಬರಬೇಕು.
4 Let him put on the holy linen coat, and the linen trousers on his body, and the linen band round him, and the linen head-dress on his head; for this is holy clothing, and before he puts them on his body is to be washed with water.ಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು.
5 And let him take from the children of Israel two he-goats for a sin-offering and one male sheep for a burned offering.ಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು.
6 And Aaron is to give the ox of the sin-offering for himself, to make himself and his house free from sin.ಇದಲ್ಲದೆ ಆರೋನನು ತನಗೋಸ್ಕರ ಪಾಪಬಲಿ ಗಾಗಿ ತನ್ನ ಹೋರಿಯನ್ನು ಸಮರ್ಪಿಸಿ ತನ್ನ ಮನೆಯ ವರಿಗೋಸ್ಕರವೂ ಪ್ರಾಯಶ್ಚಿತ್ತಮಾಡಬೇಕು.
7 And he is to take the two goats and put them before the Lord at the door of the Tent of meeting.ಅವನು ಎರಡು ಮೇಕೆಗಳನ್ನು ತೆಗೆದುಕೊಂಡು ಸಭೆಯ ಗುಡಾರದ ಬಾಗಿಲ ಬಳಿಗೆ ತಂದು ಅವುಗಳನ್ನು ಕರ್ತನ ಎದುರಿನಲ್ಲಿ ನಿಲ್ಲಿಸಬೇಕು.
8 And Aaron will make selection from the two goats by the decision of the Lord, one goat for the Lord and one for Azazel.ಆರೋನನು ಆ ಎರಡು ಆಡುಗಳಿಗಾಗಿ ಚೀಟು ಹಾಕಬೇಕು; ಒಂದು ಚೀಟು ಕರ್ತನಿಗೋಸ್ಕರ ಮತ್ತೊಂದು ಚೀಟು ಪಾಪ ಪಶುವಿ ಗೋಸ್ಕರ.
9 And the goat which is marked out for the Lord, let Aaron give for a sin-offering.ಆರೋನನು ಕರ್ತನ ಚೀಟು ಬಿದ್ದ ಆಡನ್ನು ತಂದು ಅದನ್ನು ಪಾಪಬಲಿಗಾಗಿ ಸಮರ್ಪಿಸ ಬೇಕು.
10 But the goat for Azazel is to be placed living before the Lord, for the taking away of sin, that it may be sent away for Azazel into the waste land.ಆದರೆ ಪಾಪ ಪಶುವಿಗಾಗಿ ಚೀಟು ಬಿದ್ದ ಆ ಆಡನ್ನು ತನ್ನೊಂದಿಗೆ ಪ್ರಾಯಶ್ಚಿತ್ತಮಾಡುವದ ಕ್ಕಾಗಿ ಕರ್ತನ ಸನ್ನಿಧಿಯಲ್ಲಿ ಸಜೀವವಾಗಿ ನಿಲ್ಲಿಸಿ ಅದನ್ನು ಪಾಪ ಪಶುವಾಗಿ ಕಾಡಿನಲ್ಲಿ ಹೋಗುವಂತೆ ಬಿಟ್ಟುಬಿಡಬೇಕು.
11 And Aaron is to give the ox of the sin-offering for himself and take away sin from himself and his house, and put to death the ox of the sin-offering which is for himself.ಇದಲ್ಲದೆ ಆರೋನನು ಪಾಪಬಲಿಗಾಗಿರುವ ಹೋರಿಯನ್ನು ತನಗೋಸ್ಕರವೂ ತನ್ನ ಮನೆತನದವರಿ ಗೋಸ್ಕರವೂ ಪ್ರಾಯಶ್ಚಿತ್ತಮಾಡಿ, ಪಾಪಬಲಿಗಾಗಿ ಆ ಹೋರಿಯನ್ನು ವಧಿಸಬೇಕು.
12 And he is to take a vessel full of burning coal from the altar before the Lord and in his hand some sweet perfume crushed small, and take it inside the veil;ಅವನು ಕರ್ತನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಧೂಪ ಸುಡುವ ಪಾತ್ರೆಯ ತುಂಬ ಬೆಂಕಿಯಿಂದ ಉರಿಯುವ ಕೆಂಡ ಗಳನ್ನು ಮತ್ತು ತನ್ನ ಕೈಗಳ ತುಂಬ ಸಣ್ಣದಾಗುವಂತೆ ಕಟ್ಟಿದ ಧೂಪವನ್ನು ತೆಗೆದುಕೊಂಡು ಅದನ್ನು ತೆರೆಯ ಒಳಗಡೆ ತರಬೇಕು.
13 And let him put the perfume on the fire before the Lord so that the ark may be covered with a cloud of the smoke of the perfume, in order that death may not overtake him.ಅವನು ಸಾಯದ ಹಾಗೆ ಆ ಧೂಪದ ಹೊಗೆಯು ಸಾಕ್ಷಿಯ ಮೇಲಿರುವ ಕೃಪಾಸನವು ಮುಚ್ಚಿಕೊಳ್ಳುವಂತೆ ಆ ಧೂಪವನ್ನು ಕರ್ತನ ಎದುರಿನಲ್ಲಿ ಉರಿಯುವ ಕೆಂಡಗಳ ಮೇಲೆ ಹಾಕಬೇಕು.
14 And let him take some of the blood of the ox, shaking drops of it from his finger on the cover of the ark on the east side, and before it, seven times.ಆ ಹೋರಿಯ ರಕ್ತದಿಂದ ತೆಗೆದು ಕೊಂಡು ಕೃಪಾಸನದ ಮೇಲೆ ಪೂರ್ವಕ್ಕೆ ತನ್ನ ಬೆರಳಿನಿಂದ ಚಿಮುಕಿಸಬೇಕು; ಕೃಪಾಸನದ ಮುಂದೆ ಆ ರಕ್ತವನ್ನು ತನ್ನ ಬೆರಳಿನಿಂದ ಏಳು ಸಾರಿ ಚಿಮುಕಿಸಬೆಕು.
15 Then let him put to death the goat of the sin-offering for the people, and take its blood inside the veil and do with it as he did with the blood of the ox, shaking drops of it on and before the cover of the ark.ತರುವಾಯ ಅವನು ಜನರಿಗೋಸ್ಕರ ಪಾಪಬಲಿ ಯಾಗಿರುವ ಆಡನ್ನು ವಧಿಸಿ ಅದರ ರಕ್ತವನ್ನು ತೆರೆಯ ಒಳಗಡೆ ತಂದು ಹೋರಿಯ ರಕ್ತದಿಂದ ಮಾಡಿ ದಂತೆಯೇ ಕೃಪಾಸನದ ಮೇಲೆಯೂ ಮುಂದೆಯೂ ಚಿಮುಕಿಸಬೇಕು.
16 And let him make the holy place free from whatever is unclean among the children of Israel and from their wrongdoing in all their sins; and let him do the same for the Tent of meeting, which has its place among an unclean people.ಇಸ್ರಾಯೇಲಿನ ಮಕ್ಕಳ ಅಶುದ್ಧ ತ್ವದ ನಿಮಿತ್ತವಾಗಿಯೂ ಅವರ ಪಾಪಗಳಲ್ಲಿರುವ ಎಲ್ಲಾ ಅಪರಾಧಗಳಿಗಾಗಿಯೂ ಅವನು ಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತಮಾಡಬೇಕು. ಅವರ ಅಶುದ್ಧ ತ್ವದ ಮಧ್ಯದಲ್ಲಿ ಉಳಿದವರಿಗೋಸ್ಕರ ಸಭೆಯಗುಡಾರಕ್ಕೂ ಅದರಂತೆಯೇ ಮಾಡಬೇಕು.
17 And no man may be in the Tent of meeting from the time when Aaron goes in to take away sin in the holy place till he comes out, having made himself and his house and all the people of Israel free from sin.ಅವನು ಪ್ರಾಯಶ್ಚಿತ್ತಮಾಡುವದಕ್ಕಾಗಿ ಪರಿಶುದ್ಧ ಸ್ಥಳಕ್ಕೆ ಹೋಗಿರುವಾಗ ತನಗೋಸ್ಕರವೂ ತನ್ನ ಮನೆಯ ವರೆಲ್ಲರಿಗೋಸ್ಕರವೂ ಇಸ್ರಾಯೇಲ್ಯರ ಸಭೆ ಯವರೆಲ್ಲರಿಗೋಸ್ಕರವೂ ಪ್ರಾಯಶ್ಚಿತ್ತಮಾಡಿ ಹೊರಗೆ ಬರುವ ತನಕ ಸಭೆಯ ಗುಡಾರದಲ್ಲಿ ಒಬ್ಬ ಮನುಷ್ಯನಾದರೂ ಇರಬಾರದು.
18 And he is to go out to the altar which is before the Lord and make it free from sin; and he is to take some of the blood of the ox and the blood of the goat and put it on the horns of the altar and round it;ಇದಲ್ಲದೆ ಅವನು ಕರ್ತನ ಎದುರಿನಲ್ಲಿರುವ ಯಜ್ಞವೇದಿಯ ಬಳಿಗೆ ಬಂದು ಅದಕ್ಕೋಸ್ಕರ ಪ್ರಾಯಶ್ಚಿತ್ತವನ್ನುಮಾಡಬೇಕು; ಹೋರಿಯ ರಕ್ತವನ್ನೂ ಆಡಿನ ರಕ್ತವನ್ನೂ ತೆಗೆದು ಕೊಂಡು ಯಜ್ಞವೇದಿಯ ಸುತ್ತಲೂ ಇರುವ ಕೊಂಬು ಗಳಿಗೆ ಹಚ್ಚಬೇಕು.
19 Shaking drops of the blood from his finger on it seven times to make it holy and clean from whatever is unclean among the children of Israel.ಇದಲ್ಲದೆ ಅವನು ಏಳು ಸಾರಿ ಅದರ ಮೇಲೆ ಬೆರಳಿನಿಂದ ರಕ್ತವನ್ನು ಚಿಮುಕಿಸಿ ಅದನ್ನು ಶುದ್ಧಮಾಡಬೇಕು ಇಸ್ರಾಯೇಲ್ ಮಕ್ಕಳ ಅಶುದ್ಧತೆಯಿಂದ ಅದನ್ನು ಶುದ್ಧಮಾಡಬೇಕು.
20 And when he has done whatever is necessary to make the holy place and the Tent of meeting and the altar free from sin, let him put the living goat before the Lord;ಹೀಗೆ ಪರಿಶುದ್ಧ ಸ್ಥಳದಲ್ಲಿಯೂ ಸಭೆಯ ಗುಡಾರದಲ್ಲಿಯೂ ಯಜ್ಞವೇದಿಗೂ ಪ್ರಾಯಶ್ಚಿತ್ತವನ್ನು ಮಾಡಿ ಮುಗಿಸಿದ ಮೇಲೆ ಅವನು ಒಂದು ಜೀವವುಳ್ಳ ಆಡನ್ನು ತರಬೇಕು.
21 And Aaron, placing his two hands on the head of the living goat, will make a public statement over him of all the evil doings of the children of Israel and all their wrongdoing, in all their sins; and he will put them on the head of the goat and send him away, in the care of a man who will be waiting there, into the waste land.ಆರೋನನು ಆ ಜೀವವುಳ್ಳ ಆಡಿನ ತಲೆಯ ಮೇಲೆ ತನ್ನ ಎರಡೂ ಕೈಗಳನ್ನು ಇಟ್ಟು ಇಸ್ರಾಯೇಲ್ ಮಕ್ಕಳ ಎಲ್ಲಾ ಅಕ್ರಮಗಳನ್ನೂ ಎಲ್ಲಾ ಪಾಪಗಳಲ್ಲಿರುವ ದ್ರೋಹಗಳನ್ನೂ ಅರಿಕೆ ಮಾಡಿ ಅವುಗಳನ್ನು ಆಡಿನ ತಲೆಯ ಮೇಲೆ ಇರಿಸಿ ಯೋಗ್ಯನಾದ ಒಬ್ಬ ಮನುಷ್ಯನ ಕೈಯಿಂದ ಅದನ್ನು ಅಡವಿಯೊಳಗೆ ಕಳುಹಿಸಿಬಿಡಬೇಕು.
22 And the goat will take all their sins into a land cut off from men, and he will send the goat away into the waste land.ಆ ಆಡು ಅವರ ಎಲ್ಲಾ ಅಕ್ರಮಗಳನ್ನು ನಿರ್ಜನವಾದ ಸ್ಥಳಕ್ಕೆ ತೆಗೆದುಕೊಂಡು ಹೋಗುವಂತೆ ಆ ಆಡನ್ನು ಅಡವಿಗೆ ಬಿಟ್ಟುಬಿಡಬೇಕು.
23 Then let Aaron come into the Tent of meeting and take off the linen clothing which he put on when he went into the holy place, and put them down there;ಆರೋನನು ಸಭೆಯ ಗುಡಾರದೊಳಗೆ ಬಂದು ತಾನು ಪರಿಶುದ್ಧ ಸ್ಥಳದೊಳಕ್ಕೆ ಹೋಗುವಾಗ ತೊಟ್ಟು ಕೊಂಡಿದ್ದ ನಾರಿನ ಬಟ್ಟೆಗಳನ್ನು ತೆಗೆದುಹಾಕಿ ಅವುಗ ಳನ್ನು ಅಲ್ಲಿಯೇ ಬಿಡಬೇಕು.
24 And after bathing his body in water in a holy place, he is to put on his clothing and come out and give his burned offering and the burned offering of the people, to take away his sin and the sin of the people.ಅವನು ಪರಿಶುದ್ಧ ಸ್ಥಳದಲ್ಲಿ ತನ್ನ ಶರೀರವನ್ನು ನೀರಿನಿಂದ ತೊಳೆದು ತನ್ನ ಬಟ್ಟೆಗಳನ್ನು ಧರಿಸಿಕೊಂಡು ಹೊರಗೆ ಬಂದು ತನ್ನ ದಹನಬಲಿಯನ್ನೂ ಜನರ ದಹನಬಲಿಯನ್ನೂ ಸಮ ರ್ಪಿಸಿ ತನಗೋಸ್ಕರವೂ ಜನರಿಗೋಸ್ಕರವೂ ಪ್ರಾಯ ಶ್ಚಿತ್ತಮಾಡಬೇಕು.
25 And the fat of the sin-offering is to be burned by him on the altar.ಪಾಪಬಲಿಯ ಕೊಬ್ಬು ಯಜ್ಞ ವೇದಿಯ ಮೇಲೆ ಸುಡಲ್ಪಡಬೇಕು.
26 And the man who takes away the goat for Azazel is to have his clothing washed and his body bathed in water and then he may come back to the tent-circle.ಪಾಪ ಪಶುವಿಗಾಗಿ ಆಡನ್ನು ಹೋಗಲು ಬಿಟ್ಟ ವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ತನ್ನ ಶರೀರ ವನ್ನು ನೀರಿನಲ್ಲಿ ತೊಳೆದುಕೊಂಡ ಮೇಲೆ ಅವನು ಪಾಳೆಯದೊಳಕ್ಕೆ ಬರಬೇಕು.
27 And the ox of the sin-offering and the goat of the sin-offering, whose blood was taken in to make the holy place free from sin, are to be taken away outside the tent-circle and their skins and their flesh and their waste are to be burned with fire.ಇದಲ್ಲದೆ ಪರಿಶುದ್ಧ ಸ್ಥಳದಲ್ಲಿ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಯಾವದರ ರಕ್ತವು ತರಲ್ಪಟ್ಟಿತೋ ಆ ಪಾಪಬಲಿಯ ಹೋರಿಯನ್ನು ಮತ್ತು ಪಾಪಬಲಿಯ ಆಡನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ ಅವುಗಳ ಚರ್ಮವನ್ನೂ ಮಾಂಸವನ್ನೂ ಸಗಣಿಯನ್ನೂ ಸುಡಬೇಕು.
28 And the man by whom they are burned is to have his clothing washed and his body bathed in water, and then he may come back to the tent-circle.ಅವು ಗಳನ್ನು ಸುಡುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ಶರೀರವನ್ನು ನೀರಿನಲ್ಲಿ ತೊಳೆದುಕೊಂಡ ನಂತರ ಪಾಳೆಯದೊಳಕ್ಕೆ ಬರಬೇಕು.
29 And let this be an order to you for ever: in the seventh month, on the tenth day, you are to keep yourselves from pleasure and do no sort of work, those who are Israelites by birth and those from other lands who are living among you:ನೀವು ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮಲ್ಲಿ ಒಬ್ಬ ಸ್ವದೇಶದವನಾಗಲಿ ಪ್ರವಾಸಿಯಾಗಿರುವ ಪರಕೀಯನಾಗಲಿ ನಿಮ್ಮ ಆತ್ಮಗಳನ್ನು ಕುಂದಿಸಿ ಯಾವ ಕೆಲಸವನ್ನೂ ಮಾಡದಂತೆ ಇದು ನಿಮಗೆ ಶಾಶ್ವತವಾದ ಒಂದು ನಿಯಮವಾಗಿರುವದು.
30 For on this day your sin will be taken away and you will be clean: you will be made free from all your sins before the Lord.ಯಾಕಂದರೆ ನೀವು ಕರ್ತನ ಸನ್ನಿಧಿಯಲ್ಲಿ ನಿಮ್ಮ ಎಲ್ಲಾ ಪಾಪಗಳಿಂದ ಶುದ್ಧರಾಗಿರುವಂತೆ ನಿಮ್ಮನ್ನು ಶುದ್ಧೀಕರಿಸುವ ಹಾಗೆ ಆ ದಿನದಲ್ಲಿ ಯಾಜಕನು ನಿಮಗೋಸ್ಕರ ಪ್ರಾಯಶ್ಚಿತ್ತ ವನ್ನು ಮಾಡುವನು.
31 It is a special Sabbath for you, and you are to keep yourselves from pleasure; it is an order for ever.ಇದೇ ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿರುವದು. ನಿಮಗೆ ನಿತ್ಯವಾದ ನಿಯಮ ವಿರುವಂತೆ ನಿಮ್ಮ ಪ್ರಾಣಗಳನ್ನು ಕುಂದಿಸಬೇಕು.
32 And the man on whose head the holy oil has been put, and who has been marked out to be a priest in his father's place, will do what is necessary to take away sin, and will put on the linen clothing, even the holy robes:ಯಾವನು ತನ್ನ ತಂದೆಯ ಬದಲಾಗಿ ಯಾಜಕ ಉದ್ಯೋಗಕ್ಕೋಸ್ಕರ ಅಭಿಷೇಕಿಸಲ್ಪಟ್ಟವನಾಗಿ ಪ್ರತಿಷ್ಠಿಸ ಲ್ಪಟ್ಟಿದ್ದಾನೋ ಆ ಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು.
33 And he will make the holy place and the Tent of meeting and the altar free from sin; he will take away sin from the priests and from all the people.ಅವನು ಪರಿಶುದ್ಧ ಉಡುಪುಗಳಾದ ನಾರು ಬಟ್ಟೆಗಳನ್ನು ಧರಿಸಿಕೊಳ್ಳಬೇಕು. ಹೀಗೆ ಅವನು ಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತಮಾಡಬೇಕು. ಇದ ಲ್ಲದೆ ಸಭೆಯ ಗುಡಾರಕ್ಕಾಗಿಯೂ ಯಜ್ಞವೇದಿ ಗಾಗಿಯೂ ಪ್ರಾಯಶ್ಚಿತ್ತಮಾಡಬೇಕು. ಯಾಜಕರಿ ಗಾಗಿಯೂ ಸಭೆಯ ಎಲ್ಲಾ ಜನರಿಗೋಸ್ಕರವೂ ಪ್ರಾಯಶ್ಚಿತ್ತಮಾಡಬೇಕು.
34 And let this be an order for ever for you, so that the sin of the children of Israel may be taken away once every year. And he did as the Lord gave orders to Moses.ಹೀಗೆ ಇಸ್ರಾಯೇಲಿನ ಮಕ್ಕಳ ಎಲ್ಲಾ ಪಾಪಗಳಿಗಾಗಿ ವರ್ಷಕ್ಕೊಂದಾವರ್ತಿ ಪ್ರಾಯಶ್ಚಿತ್ತಮಾಡುವಂತೆ ಇದು ನಿಮಗೆ ನಿರಂತರ ವಾದ ನಿಯಮವಾಗಿರುವದು ಎಂದು ಹೇಳಿದನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.
Kannada Bible