Bible

Leviticus 17 - WEB (Kannada)

1 Yahweh spoke to Moses, saying,ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ--

2 "Speak to Aaron, and to his sons, and to all the children of Israel, and say to them: 'This is the thing which Yahweh has commanded,ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲ್‌ ಮಕ್ಕಳಿಗೂ ಮಾತನಾಡಿ ಅವರಿಗೆ ಹೀಗೆ ಹೇಳು--ಕರ್ತನು ನಿಮಗೆ ಆಜ್ಞಾಪಿಸಿ ಹೇಳುವದೇನಂದರೆ,

3 Whatever man there is of the house of Israel, who kills an ox, or lamb, or goat, in the camp, or who kills it outside the camp,ಇಸ್ರಾಯೇಲಿನ ಮನೆತನದಲ್ಲಿ ಯಾವನಾದರೂ ಒಂದು ಎತ್ತನ್ನಾಗಲಿ ಕುರಿಮರಿಯ ನ್ನಾಗಲಿ ಆಡನ್ನಾಗಲಿ ಪಾಳೆಯದೊಳಗಾಗಲಿ ಹೊರ ಗಾಗಲಿ ವಧಿಸಿ

4 and hasn't brought it to the door of the Tent of Meeting, to offer it as an offering to Yahweh before the tabernacle of Yahweh: blood shall be imputed to that man. He has shed blood; and that man shall be cut off from among his people.ಕರ್ತನಿಗೆ ಸಮರ್ಪಿಸುವ ಬಲಿಯಾಗಿ ಕರ್ತನ ಸನ್ನಿಧಿಯಲ್ಲಿರುವ ಸಭೆಯ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ ಆ ಮನುಷ್ಯನ ಮೇಲೆ ರಕ್ತಾ ಪರಾಧವು ಹೊರಿಸಲ್ಪಡಬೇಕು; ಅವನು ರಕ್ತ ಸುರಿಸಿ ರುವನು; ಆ ಮನುಷ್ಯನು ತನ್ನ ಜನರ ಮಧ್ಯದೊ ಳಗಿಂದ ತೆಗೆದುಹಾಕಲ್ಪಡಬೇಕು.

5 This is to the end that the children of Israel may bring their sacrifices, which they sacrifice in the open field, that they may bring them to Yahweh, to the door of the Tent of Meeting, to the priest, and sacrifice them for sacrifices of peace offerings to Yahweh.ಇಸ್ರಾಯೇಲ್‌ ಮಕ್ಕಳು ತಾವು ಬಯಲಿನಲ್ಲಿ ಸಮರ್ಪಿಸುವ ಬಲಿಗಳನ್ನು ಕರ್ತನಿಗೆ ಸಭೆಯ ಗುಡಾರದ ಬಾಗಿಲಿನ ಬಳಿಯಲ್ಲಿ ಯಾಜಕನ ಬಳಿಗೆ ತಂದು ಕರ್ತನಿಗೆ ಸಮಾಧಾನದ ಬಲಿಯಾಗಿ ಸಮರ್ಪಿಸಬೇಕು.

6 The priest shall sprinkle the blood on the altar of Yahweh at the door of the Tent of Meeting, and burn the fat for a sweet savor to Yahweh.ಯಾಜಕನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಯಜ್ಞವೇದಿಯ ಮೇಲೆ ರಕ್ತವನ್ನು ಚಿಮುಕಿಸಬೇಕು. ಕೊಬ್ಬನ್ನು ಕರ್ತನಿಗೆ ಸುಗಂಧವಾಸನೆಯಾಗಿ ಸುಡಬೇಕು.

7 They shall no more sacrifice their sacrifices to the goat idols, after which they play the prostitute. This shall be a statute forever to them throughout their generations.'ಅವರು ಜಾರತ್ವ ಮಾಡುವಂತೆ ಯಾರ ಹಿಂದೆ ಹೋದರೋ ಆ ದೆವ್ವ ಗಳಿಗೆ ಇನ್ನೆಂದಿಗೂ ಅವರು ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೆ ಅವರ ತಲ ತಲಾಂತರಗಳ ವರೆಗೆ ಶಾಶ್ವತವಾದ ನಿಯಮವಾಗಿ ರುವದು.

8 "You shall say to them, 'Any man there is of the house of Israel, or of the strangers who live as foreigners among them, who offers a burnt offering or sacrifice,ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ--ಇಸ್ರಾಯೇಲಿನ ಮನೆತನದವರಲ್ಲಿ ಯಾವ ಮನುಷ್ಯನಾದರೂ ನಿಮ್ಮೊಳಗೆ ಪ್ರವಾಸಿಯರಾಗಿದ್ದ ಪರಕೀಯರು ದಹನಬಲಿಯನ್ನಾಗಲಿ ಯಜ್ಞಸಮ ರ್ಪಣೆಯನ್ನಾಗಲಿ ಅರ್ಪಿಸಿದರೆ

9 and doesn't bring it to the door of the Tent of Meeting, to sacrifice it to Yahweh; that man shall be cut off from his people.ಅದನ್ನು ಕರ್ತನಿಗೆ ಸಮರ್ಪಿಸುವಂತೆ ಸಭೆಯ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ ಆ ಮನುಷ್ಯನು ತನ್ನ ಜನಗಳ ಮಧ್ಯ ದೊಳಗಿಂದ ತೆಗೆದುಹಾಕಲ್ಪಡಬೇಕು.

10 "'Any man of the house of Israel, or of the strangers who live as foreigners among them, who eats any kind of blood, I will set my face against that soul who eats blood, and will cut him off from among his people.ಇದಲ್ಲದೆ ಇಸ್ರಾಯೇಲ್‌ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾ ದರೂ ಯಾವದೇ ತರದ ರಕ್ತವನ್ನು ತಿಂದರೆ ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.

11 For the life of the flesh is in the blood; and I have given it to you on the altar to make atonement for your souls: for it is the blood that makes atonement by reason of the life.ಯಾಕಂದರೆ ಪ್ರತಿ ದೇಹಿಗೂ ರಕ್ತವೇ ಪ್ರಾಣಾಧಾರ. ಅಂಥ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮ ಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರ ವಾಗಿರುವ ಕಾರಣ ಅದರಿಂದ ದೋಷಪರಿಹಾರ ವಾಗುತ್ತದಷ್ಟೆ.

12 Therefore I have said to the children of Israel, "No person among you shall eat blood, neither shall any stranger who lives as a foreigner among you eat blood."ಆದಕಾರಣ ನಿಮ್ಮಲ್ಲಿ ಯಾವನಾ ದರೂ ರಕ್ತವನ್ನು ತಿನ್ನಬಾರದೆಂದು ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನು ರಕ್ತವನ್ನು ತಿನ್ನಬಾರ ದೆಂದು ನಾನು ಇಸ್ರಾಯೇಲ್‌ ಮಕ್ಕಳಿಗೆ ಹೇಳಿದೆನು.

13 "'Whatever man there is of the children of Israel, or of the strangers who live as foreigners among them, who takes in hunting any animal or bird that may be eaten; he shall pour out its blood, and cover it with dust.ಇದಲ್ಲದೆ ಇಸ್ರಾಯೇಲ್‌ ಮಕ್ಕಳಲ್ಲಿ ಯಾವ ಮನುಷ್ಯನಾದರೂ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ ತಿನ್ನುವದಕ್ಕಾಗಿ ಬೇಟೆಯಾಡಿ ಯಾವದೇ ಪಶುವನ್ನಾಗಲಿ ಇಲ್ಲವೆ ಪಕ್ಷಿಯನ್ನಾಗಲಿ ಹಿಡಿದರೆ ಅದರ ರಕ್ತವನ್ನೆಲ್ಲಾ ಸುರಿದು ಅದನ್ನು ಮಣ್ಣಿ ನಿಂದ ಮುಚ್ಚಬೇಕು.

14 For as to the life of all flesh, its blood is with its life: therefore I said to the children of Israel, "You shall not eat the blood of any kind of flesh; for the life of all flesh is its blood. Whoever eats it shall be cut off."ಯಾಕಂದರೆ ರಕ್ತವೇ ಎಲ್ಲಾ ಶರೀರಗಳ ಜೀವವಾಗಿದೆ; ಅದಕ್ಕಿರುವ ರಕ್ತವು ಅದರ ಜೀವಕ್ಕಾಗಿಯೇ ಇದೆ; ಆದದರಿಂದ ನಾನು ಇಸ್ರಾ ಯೇಲ್‌ ಮಕ್ಕಳಿಗೆ--ನೀವು ಯಾವ ಬಗೆಯ ಶರೀರದ ರಕ್ತವನ್ನೂ ತಿನ್ನಬಾರದೆಂದು ಹೇಳಿದ್ದೇನೆ. ಎಲ್ಲಾ ಶರೀರಗಳ ಜೀವವು ರಕ್ತದಲ್ಲಿಯೇ ಇದೆ; ಇದನ್ನು ತಿನ್ನುವ ಯಾವನಾದರೂ ತೆಗೆದುಹಾಕಲ್ಪಡಬೇಕು.

15 "'Every person that eats what dies of itself, or that which is torn by animals, whether he is native-born or a foreigner, he shall wash his clothes, and bathe himself in water, and be unclean until the evening: then he shall be clean.ನಿಮ್ಮ ದೇಶದವನಾಗಲಿ ಪರಕೀಯನಾಗಲಿ ತನ್ನ ಷ್ಟಕ್ಕೆ ತಾನೇ ಸತ್ತುಹೋದದ್ದನ್ನು ಇಲ್ಲವೆ ಮೃಗಗಳಿಂದ ಹರಿಯಲ್ಪಟ್ಟಿರುವದನ್ನು ತಿನ್ನುವ ಪ್ರತಿಯೊಬ್ಬನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡ ಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರ ಬೇಕು, ತರುವಾಯ ಅವನು ಶುದ್ಧನಾಗಿರುವನು.

16 But if he doesn't wash them, or bathe his flesh, then he shall bear his iniquity.'"ಆದರೆ ಅವನು ಅವುಗಳನ್ನು ಒಗೆದುಕೊಳ್ಳದೆ ಇದ್ದರೆ ಇಲ್ಲವೆ ತಾನು ಸ್ನಾನಮಾಡದಿದ್ದರೆ ತನ್ನ ಅಪರಾಧವನ್ನು ತಾನೇ ಹೊತ್ತುಕೊಳ್ಳಬೇಕು.

Kannada Bible