Bible

Leviticus 2 - ASV (Kannada)

1 And when any one offereth an oblation of a meal-offering unto Jehovah, his oblation shall be of fine flour; and he shall pour oil upon it, and put frankincense thereon:ಯಾರಾದರೂ ಕರ್ತನಿಗೆ ಆಹಾರ ಸಮರ್ಪಣೆಯನ್ನು ಸಮರ್ಪಿಸುವದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರ ಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಯ ಬೇಕು; ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು.

2 and he shall bring it to Aaron's sons the priests; and he shall take thereout his handful of the fine flour thereof, and of the oil thereof, with all the frankincense thereof; and the priest shall burn `it as' the memorial thereof upon the altar, an offering made by fire, of a sweet savor unto Jehovah:ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಕುಮಾರರ ಬಳಿಗೆ ತರಬೇಕು; ಅವನು ಹಿಟ್ಟಿನಲ್ಲಿಯೂ ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜ ಕನು ಅದನ್ನು ಜ್ಞಾಪಕಾರ್ಥವಾಗಿ ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು.

3 and that which is left of the meal-offering shall be Aaron's and his sons': it is a thing most holy of the offerings of Jehovah made by fire.ಆಹಾರದ ಸಮರ್ಪಣೆ ಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರ ರಿಗೂ ಆಗಬೇಕು; ಅದು ಬೆಂಕಿಯಿಂದ ಮಾಡಿದ ಕರ್ತನ ಸಮರ್ಪಣೆಗಳಲ್ಲಿ ಅತಿ ಪರಿಶುದ್ಧವಾದದ್ದು.

4 And when thou offerest an oblation of a meal-offering baken in the oven, it shall be unleavened cakes of fine flour mingled with oil, or unleavened wafers anointed with oil.ನೀನು ಒಲೆಯಲ್ಲಿ ಸುಟ್ಟ ಆಹಾರ ಸಮರ್ಪಣೆ ಯನ್ನು ಕಾಣಿಕೆಯಾಗಿ ತರುವದಾದರೆ ಅದು ಹುಳಿ ಯಿಲ್ಲದ್ದಾಗಿ ಎಣ್ಣೆಯಿಂದ ಬೆರೆಸಿದ ನಯವಾದ ಹಿಟ್ಟಿನ ರೊಟ್ಟಿಗಳು ಇಲ್ಲವೆ ಹುಳಿಯಿಲ್ಲದ ಎಣ್ಣೆ ಹೊಯ್ದ ದೋಸೆಗಳಾಗಿರಬೇಕು.

5 And if thy oblation be a meal-offering of the baking-pan, it shall be of fine flour unleavened, mingled with oil.ನಿನ್ನ ಕಾಣಿಕೆಯು ಬೋಗುಣಿ ಯಲ್ಲಿ ಬೇಯಿಸಿದ ಆಹಾರ ಸಮರ್ಪಣೆಯಾಗಿದ್ದರೆ ಅದು ಹುಳಿಯಿಲ್ಲದ ನಯವಾದ ಹಿಟ್ಟಿನಿಂದ ಎಣ್ಣೆ ಮಿಶ್ರಿತವಾದದ್ದು ಆಗಿರಬೇಕು.

6 Thou shalt part it in pieces, and pour oil thereon: it is a meal-offering.ನೀನು ಅದನ್ನು ತುಂಡುಗಳನ್ನಾಗಿ ವಿಭಾಗಿಸಿ ಅದರ ಮೇಲೆ ಎಣ್ಣೆ ಸುರಿಯಬೇಕು; ಅದು ಆಹಾರ ಸಮರ್ಪಣೆಯಾಗಿದೆ.

7 And if thy oblation be a meal-offering of the frying-pan, it shall be made of fine flour with oil.ನಿನ್ನ ಕಾಣಿಕೆಯು ಬಾಂಡ್ಲೆಯಲ್ಲಿ ಬೇಯಿಸಿದ ಆಹಾರ ವಾಗಿದ್ದರೆ ಅದು ನಯವಾದ ಎಣ್ಣೆಯಿಂದ ಕೂಡಿದ ಹಿಟ್ಟಿನಿಂದ ಮಾಡಿದ್ದಾಗಿರಬೇಕು.

8 And thou shalt bring the meal-offering that is made of these things unto Jehovah: and it shall be presented unto the priest, and he shall bring it unto the altar.ನೀನು ಇವುಗಳಿಂದ ಮಾಡಿದ ಆಹಾರ ಸಮರ್ಪಣೆಯನ್ನು ಕರ್ತನಿಗೆ ತರಬೇಕು; ಅದು ಯಾಜಕನಿಗೆ ಒಪ್ಪಿಸಿದಾಗ ಅವನು ಅದನ್ನು ಯಜ್ಞವೇದಿಗೆ ತರುವನು.

9 And the priest shall take up from the meal-offering the memorial thereof, and shall burn it upon the altar, an offering made by fire, of a sweet savor unto Jehovah.ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾದ ಆಹಾರ ಸಮರ್ಪಣೆ ಯನ್ನಾಗಿ ತೆಗೆದುಕೊಂಡು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು: ಅದು ಬೆಂಕಿಯಿಂದ ಮಾಡಿ ದ್ದಾಗಿದ್ದು ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ರುವದು.

10 And that which is left of the meal-offering shall be Aaron's and his sons': it is a thing most holy of the offerings of Jehovah made by fire.ಆಹಾರ ಸಮರ್ಪಣೆಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರರಿಗೂ ಆಗಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಕರ್ತನ ಸಮ ರ್ಪಣೆಗಳಲ್ಲಿ ಅತಿ ಪರಿಶುದ್ಧವಾಗಿರುವದು.

11 No meal-offering, which ye shall offer unto Jehovah, shall be made with leaven; for ye shall burn no leaven, nor any honey, as an offering made by fire unto Jehovah.ಕರ್ತನಿಗೆ ನೀನು ತರುವ ಆಹಾರ ಸಮರ್ಪಣೆಯು ಯಾವದೂ ಹುಳಿಯಿಂದ ಮಾಡಿದ್ದಾಗಿರಬಾರದು; ಕರ್ತನಿಗೆ ನೀವು ಬೆಂಕಿಯಿಂದ ಮಾಡುವ ಎಲ್ಲಾ ಸಮರ್ಪಣೆಗಳಲ್ಲಿ ಹುಳಿಯನ್ನಾಗಲಿ ಜೇನನ್ನಾಗಲಿ ಸುಡಬಾರದು.

12 As an oblation of first -`fruits' ye shall offer them unto Jehovah: but they shall not come up for a sweet savor on the altar.ಪ್ರಥಮ ಫಲದ ಕಾಣಿಕೆಯ ವಿಷಯ ದಲ್ಲಿಯಾದರೋ ನೀವು ಅವುಗಳನ್ನು ಕರ್ತನಿಗೆ ಸಮ ರ್ಪಿಸಬೇಕು; ಆದರೆ ಅವುಗಳನ್ನು ಯಜ್ಞವೇದಿಯ ಮೇಲೆ ಸುವಾಸನೆಗಾಗಿ ಸುಡಬಾರದು.

13 And every oblation of thy meal-offering shalt thou season with salt; neither shalt thou suffer the salt of the covenant of thy God to be lacking from thy meal-offering: with all thine oblations thou shalt offer salt.ನಿನ್ನ ಪ್ರತಿ ಯೊಂದು ಆಹಾರ ಸಮರ್ಪಣೆಯೂ ಉಪ್ಪಿನಲ್ಲಿ ಬೆರಿಕೆ ಯಾಗಿರಬೇಕು; ನಿನ್ನ ದೇವರ ಒಡಂಬಡಿಕೆಯನ್ನು ಸೂಚಿಸುವ ಉಪ್ಪು ನಿನ್ನ ಸಮರ್ಪಣೆಯಲ್ಲಿ ಇಲ್ಲದೆ ಇರಬಾರದು; ನಿನ್ನ ಎಲ್ಲಾ ಸಮರ್ಪಣೆಗಳಲ್ಲಿ ನೀನು ಉಪ್ಪನ್ನು ಸಮರ್ಪಿಸಬೇಕು.

14 And if thou offer a meal-offering of first-fruits unto Jehovah, thou shalt offer for the meal-offering of thy first-fruits grain in the ear parched with fire, bruised grain of the fresh ear.ನೀನು ನಿನ್ನ ಪ್ರಥಮ ಫಲಗಳ ಆಹಾರ ಸಮ ರ್ಪಣೆಯನ್ನು ಕರ್ತನಿಗೆ ಮಾಡಿದರೆ ನಿನ್ನ ಪ್ರಥಮ ಫಲದ ಆಹಾರ ಕಾಣಿಕೆಯನ್ನು ಬೆಂಕಿಯಿಂದ ಸುಟ್ಟ ಕಾಳಿನ ಹಸಿರು ತೆನೆಗಳನ್ನೂ ಅಲ್ಲದೆ ತುಂಬಿದ ತೆನೆ ಗಳಿಂದ ಬಡಿದ ಒಣಗಿದ ಕಾಳುಗಳನ್ನೂ ಸಮರ್ಪಿಸ ಬೇಕು.

15 And thou shalt put oil upon it, and lay frankincense thereon: it is a meal-offering.ನೀನು ಅದರ ಮೇಲೆ ಎಣ್ಣೆಯನ್ನು ಹಾಕಿ ಅದರ ಮೇಲೆ ಸಾಂಬ್ರಾಣಿಯನ್ನು ಇಡಬೇಕು; ಅದು ಆಹಾರ ಸಮರ್ಪಣೆಯಾಗಿದೆ.

16 And the priest shall burn the memorial of it, part of the bruised grain thereof, and part of the oil thereof, with all the frankincense thereof: it is an offering made by fire unto Jehovah.ಯಾಜಕನು ಬಡಿದ ಕಾಳುಗಳಲ್ಲಿ ಸ್ವಲ್ಪ ಭಾಗವನ್ನು ಮತ್ತು ಎಣ್ಣೆಯ ಸ್ವಲ್ಪ ಭಾಗವನ್ನು ಅದರ ಜೊತೆಯಲ್ಲಿ ಎಲ್ಲಾ ಸಾಂಬ್ರಾಣಿ ಯನ್ನು ಜ್ಞಾಪಕಾರ್ಥವಾಗಿ ಸುಡಬೇಕು: ಇದು ಕರ್ತ ನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯಾಗಿದೆ.

Kannada Bible