Leviticus 2 - WEB (Kannada)
1 "'When anyone offers an offering of a meal offering to Yahweh, his offering shall be of fine flour; and he shall pour oil on it, and put frankincense on it.ಯಾರಾದರೂ ಕರ್ತನಿಗೆ ಆಹಾರ ಸಮರ್ಪಣೆಯನ್ನು ಸಮರ್ಪಿಸುವದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರ ಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಯ ಬೇಕು; ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು.
2 He shall bring it to Aaron's sons the priests; and he shall take his handful of its fine flour, and of its oil, with all its frankincense; and the priest shall burn the memorial of it on the altar, an offering made by fire, of a sweet savor to Yahweh.ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಕುಮಾರರ ಬಳಿಗೆ ತರಬೇಕು; ಅವನು ಹಿಟ್ಟಿನಲ್ಲಿಯೂ ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜ ಕನು ಅದನ್ನು ಜ್ಞಾಪಕಾರ್ಥವಾಗಿ ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು.
3 That which is left of the meal offering shall be Aaron's and his sons'. It is a most holy thing of the offerings of Yahweh made by fire.ಆಹಾರದ ಸಮರ್ಪಣೆ ಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರ ರಿಗೂ ಆಗಬೇಕು; ಅದು ಬೆಂಕಿಯಿಂದ ಮಾಡಿದ ಕರ್ತನ ಸಮರ್ಪಣೆಗಳಲ್ಲಿ ಅತಿ ಪರಿಶುದ್ಧವಾದದ್ದು.
4 "'When you offer an offering of a meal offering baked in the oven, it shall be unleavened cakes of fine flour mixed with oil, or unleavened wafers anointed with oil.ನೀನು ಒಲೆಯಲ್ಲಿ ಸುಟ್ಟ ಆಹಾರ ಸಮರ್ಪಣೆ ಯನ್ನು ಕಾಣಿಕೆಯಾಗಿ ತರುವದಾದರೆ ಅದು ಹುಳಿ ಯಿಲ್ಲದ್ದಾಗಿ ಎಣ್ಣೆಯಿಂದ ಬೆರೆಸಿದ ನಯವಾದ ಹಿಟ್ಟಿನ ರೊಟ್ಟಿಗಳು ಇಲ್ಲವೆ ಹುಳಿಯಿಲ್ಲದ ಎಣ್ಣೆ ಹೊಯ್ದ ದೋಸೆಗಳಾಗಿರಬೇಕು.
5 If your offering is a meal offering of the baking pan, it shall be of unleavened fine flour, mixed with oil.ನಿನ್ನ ಕಾಣಿಕೆಯು ಬೋಗುಣಿ ಯಲ್ಲಿ ಬೇಯಿಸಿದ ಆಹಾರ ಸಮರ್ಪಣೆಯಾಗಿದ್ದರೆ ಅದು ಹುಳಿಯಿಲ್ಲದ ನಯವಾದ ಹಿಟ್ಟಿನಿಂದ ಎಣ್ಣೆ ಮಿಶ್ರಿತವಾದದ್ದು ಆಗಿರಬೇಕು.
6 You shall cut it in pieces, and pour oil on it. It is a meal offering.ನೀನು ಅದನ್ನು ತುಂಡುಗಳನ್ನಾಗಿ ವಿಭಾಗಿಸಿ ಅದರ ಮೇಲೆ ಎಣ್ಣೆ ಸುರಿಯಬೇಕು; ಅದು ಆಹಾರ ಸಮರ್ಪಣೆಯಾಗಿದೆ.
7 If your offering is a meal offering of the frying pan, it shall be made of fine flour with oil.ನಿನ್ನ ಕಾಣಿಕೆಯು ಬಾಂಡ್ಲೆಯಲ್ಲಿ ಬೇಯಿಸಿದ ಆಹಾರ ವಾಗಿದ್ದರೆ ಅದು ನಯವಾದ ಎಣ್ಣೆಯಿಂದ ಕೂಡಿದ ಹಿಟ್ಟಿನಿಂದ ಮಾಡಿದ್ದಾಗಿರಬೇಕು.
8 You shall bring the meal offering that is made of these things to Yahweh: and it shall be presented to the priest, and he shall bring it to the altar.ನೀನು ಇವುಗಳಿಂದ ಮಾಡಿದ ಆಹಾರ ಸಮರ್ಪಣೆಯನ್ನು ಕರ್ತನಿಗೆ ತರಬೇಕು; ಅದು ಯಾಜಕನಿಗೆ ಒಪ್ಪಿಸಿದಾಗ ಅವನು ಅದನ್ನು ಯಜ್ಞವೇದಿಗೆ ತರುವನು.
9 The priest shall take from the meal offering its memorial, and shall burn it on the altar, an offering made by fire, of a sweet savor to Yahweh.ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾದ ಆಹಾರ ಸಮರ್ಪಣೆ ಯನ್ನಾಗಿ ತೆಗೆದುಕೊಂಡು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು: ಅದು ಬೆಂಕಿಯಿಂದ ಮಾಡಿ ದ್ದಾಗಿದ್ದು ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ರುವದು.
10 That which is left of the meal offering shall be Aaron's and his sons'. It is a thing most holy of the offerings of Yahweh made by fire.ಆಹಾರ ಸಮರ್ಪಣೆಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರರಿಗೂ ಆಗಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಕರ್ತನ ಸಮ ರ್ಪಣೆಗಳಲ್ಲಿ ಅತಿ ಪರಿಶುದ್ಧವಾಗಿರುವದು.
11 "'No meal offering, which you shall offer to Yahweh, shall be made with yeast; for you shall burn no yeast, nor any honey, as an offering made by fire to Yahweh.ಕರ್ತನಿಗೆ ನೀನು ತರುವ ಆಹಾರ ಸಮರ್ಪಣೆಯು ಯಾವದೂ ಹುಳಿಯಿಂದ ಮಾಡಿದ್ದಾಗಿರಬಾರದು; ಕರ್ತನಿಗೆ ನೀವು ಬೆಂಕಿಯಿಂದ ಮಾಡುವ ಎಲ್ಲಾ ಸಮರ್ಪಣೆಗಳಲ್ಲಿ ಹುಳಿಯನ್ನಾಗಲಿ ಜೇನನ್ನಾಗಲಿ ಸುಡಬಾರದು.
12 As an offering of firstfruits you shall offer them to Yahweh: but they shall not come up for a sweet savor on the altar.ಪ್ರಥಮ ಫಲದ ಕಾಣಿಕೆಯ ವಿಷಯ ದಲ್ಲಿಯಾದರೋ ನೀವು ಅವುಗಳನ್ನು ಕರ್ತನಿಗೆ ಸಮ ರ್ಪಿಸಬೇಕು; ಆದರೆ ಅವುಗಳನ್ನು ಯಜ್ಞವೇದಿಯ ಮೇಲೆ ಸುವಾಸನೆಗಾಗಿ ಸುಡಬಾರದು.
13 Every offering of your meal offering you shall season with salt; neither shall you allow the salt of the covenant of your God to be lacking from your meal offering. With all your offerings you shall offer salt.ನಿನ್ನ ಪ್ರತಿ ಯೊಂದು ಆಹಾರ ಸಮರ್ಪಣೆಯೂ ಉಪ್ಪಿನಲ್ಲಿ ಬೆರಿಕೆ ಯಾಗಿರಬೇಕು; ನಿನ್ನ ದೇವರ ಒಡಂಬಡಿಕೆಯನ್ನು ಸೂಚಿಸುವ ಉಪ್ಪು ನಿನ್ನ ಸಮರ್ಪಣೆಯಲ್ಲಿ ಇಲ್ಲದೆ ಇರಬಾರದು; ನಿನ್ನ ಎಲ್ಲಾ ಸಮರ್ಪಣೆಗಳಲ್ಲಿ ನೀನು ಉಪ್ಪನ್ನು ಸಮರ್ಪಿಸಬೇಕು.
14 "'If you offer a meal offering of first fruits to Yahweh, you shall offer for the meal offering of your first fruits grain in the ear parched with fire, bruised grain of the fresh ear.ನೀನು ನಿನ್ನ ಪ್ರಥಮ ಫಲಗಳ ಆಹಾರ ಸಮ ರ್ಪಣೆಯನ್ನು ಕರ್ತನಿಗೆ ಮಾಡಿದರೆ ನಿನ್ನ ಪ್ರಥಮ ಫಲದ ಆಹಾರ ಕಾಣಿಕೆಯನ್ನು ಬೆಂಕಿಯಿಂದ ಸುಟ್ಟ ಕಾಳಿನ ಹಸಿರು ತೆನೆಗಳನ್ನೂ ಅಲ್ಲದೆ ತುಂಬಿದ ತೆನೆ ಗಳಿಂದ ಬಡಿದ ಒಣಗಿದ ಕಾಳುಗಳನ್ನೂ ಸಮರ್ಪಿಸ ಬೇಕು.
15 You shall put oil on it, and lay frankincense on it: it is a meal offering.ನೀನು ಅದರ ಮೇಲೆ ಎಣ್ಣೆಯನ್ನು ಹಾಕಿ ಅದರ ಮೇಲೆ ಸಾಂಬ್ರಾಣಿಯನ್ನು ಇಡಬೇಕು; ಅದು ಆಹಾರ ಸಮರ್ಪಣೆಯಾಗಿದೆ.
16 The priest shall burn as its memorial, part of its bruised grain, and part of its oil, along with all its frankincense: it is an offering made by fire to Yahweh.ಯಾಜಕನು ಬಡಿದ ಕಾಳುಗಳಲ್ಲಿ ಸ್ವಲ್ಪ ಭಾಗವನ್ನು ಮತ್ತು ಎಣ್ಣೆಯ ಸ್ವಲ್ಪ ಭಾಗವನ್ನು ಅದರ ಜೊತೆಯಲ್ಲಿ ಎಲ್ಲಾ ಸಾಂಬ್ರಾಣಿ ಯನ್ನು ಜ್ಞಾಪಕಾರ್ಥವಾಗಿ ಸುಡಬೇಕು: ಇದು ಕರ್ತ ನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯಾಗಿದೆ.
Kannada Bible