Bible

Leviticus 22 - DBY (Kannada)

1 And Jehovah spoke to Moses, saying,1 ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ --

2 Speak unto Aaron, and to his sons, that they separate themselves from the holy things of the children of Israel, and that they profane not my holy name in the things that they hallow unto me: I am Jehovah.ಆರೋನನೊಂದಿಗೂ ಅವನ ಕುಮಾರರೊಂದಿಗೂ ಮಾತನಾಡು; ಅವರು ನನ್ನ ಪರಿಶುದ್ಧ ಹೆಸರನ್ನು ಅಪವಿತ್ರ ಮಾಡದಂತೆ ಇಸ್ರಾಯೇಲ್‌ ಮಕ್ಕಳು ನನಗೆ ಸಲ್ಲಿಸುವ ಪರಿಶುದ್ಧವಾದವುಗಳಿಂದ ಅವರು ಪ್ರತ್ಯೇಕ ವಾಗಿರಬೇಕು; ನಾನೇ ಕರ್ತನು.

3 Say unto them, Every one of all your seed, throughout your generations, that approacheth the holy things, which the children of Israel hallow unto Jehovah, having his uncleanness upon him, that soul shall be cut off from before me: I am Jehovah.ಅವರಿಗೆ ನೀನು ಹೀಗೆ ಹೇಳು--ನಿಮ್ಮ ಎಲ್ಲಾ ಸಂತತಿಯ ವಂಶಾವಳಿ ಗಳಲ್ಲಿ ಅಶುದ್ಧತ್ವವಿರುವ ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಸಲ್ಲಿಸುವ ಪರಿಶುದ್ಧವಾದವುಗಳ ಬಳಿಗೆ ಯಾವನು ಬರುವನೋ ಅವನು ನನ್ನ ಸನ್ನಿಧಿ ಯಿಂದ ತೆಗೆದುಹಾಕಲ್ಪಡಬೇಕು; ನಾನೇ ಕರ್ತನು.

4 Whatsoever man of the seed of Aaron is a leper, or hath a flux, he shall not eat of the holy things, until he is clean. And he that toucheth any one that is unclean by a dead person, or a man whose seed of copulation hath passed from him;ಆರೋನನ ಸಂತತಿಯವರಲ್ಲಿ ಒಬ್ಬನು ಕುಷ್ಠರೋಗಿ ಇಲ್ಲವೆ ಸ್ರಾವವುಳ್ಳವನಿದ್ದರೆ ಅವನು ಶುದ್ಧನಾಗುವ ವರೆಗೆ ಪರಿಶುದ್ಧವಾದವುಗಳನ್ನು ತಿನ್ನಬಾರದು. ಹೆಣದಿಂದ ಅಶುದ್ಧವಾದದ್ದನ್ನು ಮುಟ್ಟಿದವನು ಇಲ್ಲವೆ ತನ್ನೊಳಗಿಂದ ವೀರ್ಯ ಹೊರಟವನು

5 or a man that toucheth any crawling thing whereby he becometh unclean, or a man by whom he may become unclean, whatever may be his uncleanness,ಅಶುದ್ಧನಾಗಿ ಮಾಡಲ್ಪಡುವಂತೆ ಹರಿದಾಡುವ ಯಾವದನ್ನಾಗಲಿ ಇಲ್ಲವೆ ಯಾವದೇ ಅಶುದ್ಧತ್ವದಿಂದ ಅಶುದ್ಧ ಮಾಡುವ ಮನುಷ್ಯನನ್ನಾಗಲಿ ಮುಟ್ಟಿದವನು--

6 -- a person that toucheth any such shall be unclean until even, and shall not eat of the holy things; but he shall bathe his flesh with water,ಅಂಥದ್ದನ್ನು ಮುಟ್ಟಿದ ಮನುಷ್ಯನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಅವನು ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಳ್ಳದ ಹೊರತು ಪರಿಶುದ್ಧ ವಾದವುಗಳನ್ನು ತಿನ್ನಬಾರದು.

7 and when the sun goeth down, he shall be clean, and may afterwards eat of the holy things; for it is his food.ಸೂರ್ಯನು ಮುಳು ಗಿದಾಗ ಅವನು ಶುದ್ಧನಾಗಿರುವನು, ತರುವಾಯ ಅವನು ಪರಿಶುದ್ಧವಾದವುಗಳನ್ನು ತಿನ್ನಲಿ, ಅದು ಅವನಿಗೆ ಆಹಾರ.

8 Of a dead carcase and what is torn shall he not eat, to make himself unclean therewith: I am Jehovah.ತನ್ನನ್ನು ಹೊಲೆಮಾಡಿಕೊಳ್ಳದಂತೆ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನಾಗಲಿ ಇಲ್ಲವೆ ಮೃಗಗಳಿಂದ ಹರಿಯಲ್ಪಟ್ಟದ್ದನ್ನಾಗಲಿ ತಿನ್ನಬಾರದು; ನಾನೇ ಕರ್ತನು.

9 And they shall keep my charge, lest they bear sin for it, and die by it, if they profane it: I am Jehovah who do hallow them.ಆದದರಿಂದ ಅವರು ಅದನ್ನು ಅಪವಿತ್ರಪಡಿಸಿದರೆ ಅದರ ನಿಮಿತ್ತವಾಗಿ ಪಾಪವನ್ನು ಹೊತ್ತು ಸಾಯದಂತೆ ನನ್ನ ವಿಧಿಗಳನ್ನು ಕೈಕೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.

10 And no stranger shall eat the holy thing; the sojourner with the priest, and the hired servant, shall not eat of the holy thing.ಪರಿಶುದ್ಧವಾದದ್ದನ್ನು ಪರಕೀಯನು ತಿನ್ನಬಾರದು. ಯಾಜಕನ ಪ್ರವಾಸಿಯಾಗಲಿ ಇಲ್ಲವೆ ಕೂಲಿ ಆಳಾಗಲಿ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.

11 But if a priest buy any one for money, he may eat of it, and he that is born in his house: they may eat of his food.ಆದರೆ ಯಾಜಕನು ಯಾವನನ್ನಾದರೂ ತನ್ನ ಹಣದಿಂದ ಕೊಂಡುಕೊಂಡರೆ ಅವನು ಅದರಲ್ಲಿ ತಿನ್ನಬೇಕು, ಅವನ ಮನೆಯಲ್ಲಿ ಹುಟ್ಟಿದವನು ತಿನ್ನಲಿ; ಅವರು ಅವನ ಆಹಾರವನ್ನು ತಿನ್ನಲಿ.

12 And a priest's daughter who is [married] to a stranger may not eat of the heave-offering of the holy things.ಯಾಜಕನ ಮಗಳು ಒಬ್ಬ ಪರಕೀಯನನ್ನು ಮದುವೆಯಾದರೆ ಅವಳು ಸಮ ರ್ಪಣೆಯಾದ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.

13 But a priest's daughter that becometh a widow, or is divorced, and hath no seed, and returneth unto her father's house, as in her youth, she may eat of her father's food; but no stranger shall eat thereof.ಯಾಜಕನ ಮಗಳು ವಿಧವೆಯಾಗಿದ್ದರೆ ಇಲ್ಲವೆ ಬಿಡಲ್ಪಟ್ಟವಳಾಗಿದ್ದರೆ ಮತ್ತು ಮಕ್ಕಳಿಲ್ಲದವಳಾಗಿ ತನ್ನ ಯೌವನದಲ್ಲಿದ್ದಂತೆಯೇ ತನ್ನ ತಂದೆಯ ಮನೆಗೆ ಹಿಂದಿರುಗಿದವಳಾಗಿದ್ದರೆ ಅವಳು ತನ್ನ ತಂದೆಯ ಆಹಾರದಲ್ಲಿ ತಿನ್ನಲಿ; ಆದರೆ ಪರಕೀಯನು ಅದರಲ್ಲಿ ತಿನ್ನಬಾರದು.

14 And if a man eat of a holy thing through inadvertence, then he shall put the fifth part thereof unto it, and shall give it unto the priest with the holy thing.ಇದಲ್ಲದೆ ಒಬ್ಬನು ತಪ್ಪಾಗಿ ಪರಿಶುದ್ಧ ವಾದದ್ದನ್ನು ತಿಂದರೆ ಅವನು ಅದರ ಐದನೇ ಪಾಲನ್ನು ಕೂಡಿಸಿ ಪರಿಶುದ್ಧವಾದದ್ದನ್ನು ಯಾಜಕನಿಗೆ ಕೊಡ ಬೇಕು.

15 And they shall not profane the holy things of the children of Israel which they offer unto Jehovah,ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಅರ್ಪಿ ಸುವ ಪರಿಶುದ್ಧವಾದವುಗಳನ್ನು ಅವರು ಅಪವಿತ್ರ ಮಾಡಬಾರದು.

16 and cause them to bear the iniquity of trespass when they eat their holy things; for I am Jehovah who do hallow them.ಇಲ್ಲವೆ ಅವರು ಪರಿಶುದ್ಧವಾದವು ಗಳನ್ನು ತಿನ್ನುವದರಿಂದ ತಮ್ಮ ಮೇಲೆ ಅತಿಕ್ರಮದ ಅಪರಾಧವನ್ನು ಹೊತ್ತುಕೊಳ್ಳದಿರಲಿ; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.

17 And Jehovah spoke to Moses, saying,ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--

18 Speak unto Aaron, and to his sons, and unto all the children of Israel, and say unto them, Whatever man of the house of Israel, or of the sojourners in Israel, that presenteth his offering for any of his vows, and for any of his voluntary offerings, which they present to Jehovah as a burnt-offering,ಆರೋನನೊಂದಿಗೂ ಅವನ ಕುಮಾರರೊಂದಿಗೂ ಇಸ್ರಾಯೇಲ್‌ ಎಲ್ಲಾ ಮಕ್ಕ ಳೊಂದಿಗೂ ಮಾತನಾಡಿ ಅವರಿಗೆ ಹೇಳಬೇಕಾದ ದ್ದೇನಂದರೆ--ಇಸ್ರಾಯೇಲ್‌ ಮನೆತನದವರಲ್ಲಾಗಲಿ ಇಸ್ರಾಯೇಲ್ಯರ ಪರಕೀಯರಲ್ಲಾಗಲಿ ಯಾವನಾದರೂ ತನ್ನ ಎಲ್ಲಾ ಪ್ರಮಾಣಗಳ ನಿಮಿತ್ತವಾಗಿ ಕಾಣಿಕೆಯನ್ನು ದಹನಬಲಿಯಾಗಿ ಕರ್ತನಿಗೆ ಅರ್ಪಿಸುವ ಉಚಿತವಾದ ಅರ್ಪಣೆಗಳಲ್ಲಿ

19 it shall be for your acceptance, without blemish, a male of the oxen, of the sheep, and of the goats.ನೀವು ನಿಮ್ಮ ಸ್ವಇಚ್ಛೆಯಿಂದ ಪಶುಗಳೊಳಗೆ ಕುರಿಗಳೊಳಗೆ ಇಲ್ಲವೆ ಮೇಕೆಗಳೊಳಗೆ ದೋಷವಿಲ್ಲದ ಗಂಡಾಗಿರುವದನ್ನು ಅರ್ಪಿಸಬೇಕು;

20 Nothing that hath a defect shall ye present; for it shall not be acceptable for you.ಆದರೆ ದೋಷವಿರುವ ಯಾವದನ್ನೂ ಸಮರ್ಪಿಸ ಬಾರದು; ಅದು ನಿಮಗೋಸ್ಕರ ಅಂಗೀಕಾರವಾಗು ವದಿಲ್ಲ.

21 And if any present a sacrifice of peace-offering to Jehovah to accomplish a vow, or a voluntary offering of oxen or small cattle, it shall be without blemish to be accepted: there shall be no defect therein.ತನ್ನ ಪ್ರಮಾಣವನ್ನು ಪೂರೈಸುವ ಹಾಗೆ ಯಾವನಾದರೂ ಸಮಾಧಾನದ ಬಲಿಗಳ ಯಜ್ಞ ಸಮರ್ಪಣೆಯನ್ನಾಗಲಿ ಪಶುಗಳನ್ನಾಗಲಿ ಕುರಿಗಳ ನ್ನಾಗಲಿ ಉಚಿತವಾದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸುವದಾದರೆ ಅದು ಅಂಗೀಕಾರಕ್ಕೆ ಪರಿಪೂರ್ಣ ವುಳ್ಳದ್ದಾಗಿರಬೇಕು; ಅದರೊಳಗೆ ಯಾವ ದೋಷವು ಇರಬಾರದು.

22 Blind, or broken, or maimed, or ulcerous, or with itch, or scabbed -- ye shall not present these to Jehovah, nor make an offering by fire of them on the altar to Jehovah.ಕುರುಡಾದದ್ದು, ಮುರಿದದ್ದು, ಅಂಗ ಹೀನವಾದದ್ದು, ಬೊಕ್ಕೆಯುಳ್ಳದ್ದು, ತುರಿಯುಳ್ಳದ್ದು, ಇಲ್ಲವೆ ಹುರುಕುಳ್ಳದ್ದು ಇವುಗಳನ್ನು ನೀವು ಕರ್ತನಿಗೆ ಸಮರ್ಪಿಸಲೂಬಾರದು ಮತ್ತು ಅವುಗಳಿಂದ ಯಜ್ಞ ವೇದಿಯ ಮೇಲೆ ದಹನಬಲಿಯಾಗಿ ಕರ್ತನಿಗೆ ಸಮರ್ಪಿಸಲೂಬಾರದು.

23 A bullock and a sheep that hath a member too long or too short, that mayest thou offer as a voluntary offering; but as a vow it shall not be accepted.ಹೋರಿಯಾಗಲಿ ಇಲ್ಲವೆ ಕುರಿಮರಿಯಾಗಲಿ ಅದಕ್ಕೆ ಹೆಚ್ಚಾದ ಅಂಗವಿರುವ ದಾಗಿದ್ದರೆ ಇಲ್ಲವೆ ಅದರ ಅಂಗಗಳಲ್ಲಿ ಕೊರತೆ ಯಿರುವದಾಗಿದ್ದರೆ ಅದನ್ನು ಉಚಿತ ಕಾಣಿಕೆಯಾಗಿ ಅರ್ಪಿಸಬಹುದು; ಆದರೆ ಪ್ರಮಾಣಕ್ಕಾಗಿ ಅದು ಅಂಗೀಕಾರವಾಗುವದಿಲ್ಲ.

24 That which is bruised, or crushed, or broken, or cut shall ye not present to Jehovah; neither in your land shall ye do [the like].ಜಜ್ಜಿ ಗಾಯವಾದ, ನುಜ್ಜುಗುಜ್ಜಾದ, ಮುರಿದ ಇಲ್ಲವೆ ಕೊಯ್ದಿರುವ ಯಾವದನ್ನೂ ಕರ್ತನಿಗೆ ಸಮರ್ಪಿಸಬಾರದು. ಅಲ್ಲದೆ ನಿಮ್ಮ ದೇಶದೊಳಗಿರುವ ಅಂಥ ಯಾವ ಸಮರ್ಪಣೆ ಯನ್ನಾ ದರೂ ನೀವು ಸಮರ್ಪಿಸಬಾರದು.

25 Nor from the hand of the stranger shall ye present the bread of your God, of any of these; for their corruption is in them: a defect is in them; they shall not be accepted for you.ಇದಲ್ಲದೆ ಪರಕೀಯನ ಕೈಯೊಳಗಿಂದಲೂ ಅಂಥವುಗಳಲ್ಲಿ ಯಾವದನ್ನಾದರೂ ನಿಮ್ಮ ದೇವರಿಗೆ ರೊಟ್ಟಿಯಾಗಿ ಅರ್ಪಿಸಬಾರದು. ಅವರ ನೀತಿಭ್ರಷ್ಠತೆಯೂ ದೋಷ ಗಳೂ ಅವುಗಳಲ್ಲಿ ಇರುತ್ತವೆ. ಅವು ನಿಮಗೋಸ್ಕರ ವಾಗಿ ಅಂಗೀಕಾರವಾಗುವದಿಲ್ಲ.

26 And Jehovah spoke to Moses, saying,ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--

27 An ox, or a sheep, or a goat, when it is brought forth, shall be seven days under its dam; and from the eighth day and thenceforth it shall be accepted for an offering by fire to Jehovah.ಹೋರಿಯನ್ನಾಗಲಿ ಕುರಿಯನ್ನಾಗಲಿ ಇಲ್ಲವೆ ಆಡನ್ನಾಗಲಿ ತಂದಾಗ ಏಳು ದಿವಸಗಳ ವರೆಗೆ ಅದು ತನ್ನ ತಾಯಿಯ ಬಳಿಯಲ್ಲಿ ಇರಲಿ. ಎಂಟನೆಯ ದಿನದಿಂದ ಅದು ಕರ್ತನಿಗೆ ದಹನಬಲಿಯಾಗಿ ಅಂಗೀ ಕಾರವಾಗಿರುವದು.

28 A cow, or sheep -- it and its young shall ye not slaughter in one day.ಹಸುವನ್ನಾಗಲಿ ಕುರಿಯನ್ನಾಗಲಿ ಅದರ ಮರಿಯೊಂದಿಗೆ ಎರಡನ್ನೂ ಒಂದೇ ದಿನದಲ್ಲಿ ವಧಿಸಬಾರದು.

29 And when ye sacrifice a sacrifice of thanksgiving to Jehovah, ye shall sacrifice it for your acceptance.ನೀವು ಕೃತಜ್ಞತೆಯ ಯಜ್ಞಾರ್ಪಣೆಯನ್ನು ಸಮರ್ಪಿಸುವಾಗ ನಿಮ್ಮ ಸ್ವಇಷ್ಟದಿಂದ ಅರ್ಪಿಸಿರಿ.

30 On that day shall it be eaten: ye shall leave none of it until morning: I am Jehovah.ಅದೇ ದಿನದಲ್ಲಿ ಅದನ್ನು ತಿನ್ನಬೇಕು. ಅದರಲ್ಲಿ ಯಾವದನ್ನೂ ಮಾರನೆಯ ದಿನದ ವರೆಗೆ ಉಳಿಸ ಬಾರದು; ನಾನೇ ಕರ್ತನು.

31 And ye shall observe my commandments and do them: I am Jehovah.ಆದದರಿಂದ ನೀವು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು.

32 And ye shall not profane my holy name; but I will be hallowed among the children of Israel: I am Jehovah who do hallow you,ಆದರೆ ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ನಾನು ಪರಿಶುದ್ಧ ಮಾಡಲ್ಪಡುವ ಹಾಗೆ ನನ್ನ ಪರಿಶುದ್ಧವಾದ ಹೆಸರನ್ನು ಅಪವಿತ್ರಮಾಡಬಾರದು;

33 who brought you out of the land of Egypt, to be your God: I am Jehovah.ನಿಮಗೆ ದೇವರಾಗಿರು ವದಕ್ಕೆ ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಗೆ ತಂದವನೂ ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನೂ ನಾನೇ; ನಾನೇ ಕರ್ತನು.

Kannada Bible