Leviticus 22 - WBT (Kannada)
1 And the LORD spoke to Moses, saying,1 ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ --
2 Speak to Aaron and to his sons, that they separate themselves from the holy things of the children of Israel, and that they profane not my holy name in those things which they hallow to me: I am the LORD.ಆರೋನನೊಂದಿಗೂ ಅವನ ಕುಮಾರರೊಂದಿಗೂ ಮಾತನಾಡು; ಅವರು ನನ್ನ ಪರಿಶುದ್ಧ ಹೆಸರನ್ನು ಅಪವಿತ್ರ ಮಾಡದಂತೆ ಇಸ್ರಾಯೇಲ್ ಮಕ್ಕಳು ನನಗೆ ಸಲ್ಲಿಸುವ ಪರಿಶುದ್ಧವಾದವುಗಳಿಂದ ಅವರು ಪ್ರತ್ಯೇಕ ವಾಗಿರಬೇಕು; ನಾನೇ ಕರ್ತನು.
3 Say to them, Whoever he may be of all your seed among your generations, that approacheth the holy things, which the children of Israel hallow to the LORD, having his uncleanness upon him, that soul shall be cut off from my presence: I am the LORD.ಅವರಿಗೆ ನೀನು ಹೀಗೆ ಹೇಳು--ನಿಮ್ಮ ಎಲ್ಲಾ ಸಂತತಿಯ ವಂಶಾವಳಿ ಗಳಲ್ಲಿ ಅಶುದ್ಧತ್ವವಿರುವ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಸಲ್ಲಿಸುವ ಪರಿಶುದ್ಧವಾದವುಗಳ ಬಳಿಗೆ ಯಾವನು ಬರುವನೋ ಅವನು ನನ್ನ ಸನ್ನಿಧಿ ಯಿಂದ ತೆಗೆದುಹಾಕಲ್ಪಡಬೇಕು; ನಾನೇ ಕರ್ತನು.
4 Whatever man of the seed of Aaron is a leper, or hath a running issue; he shall not eat of the holy things, until he is clean. And whoever toucheth any thing that is unclean by the dead, or a man whose seed goeth from him;ಆರೋನನ ಸಂತತಿಯವರಲ್ಲಿ ಒಬ್ಬನು ಕುಷ್ಠರೋಗಿ ಇಲ್ಲವೆ ಸ್ರಾವವುಳ್ಳವನಿದ್ದರೆ ಅವನು ಶುದ್ಧನಾಗುವ ವರೆಗೆ ಪರಿಶುದ್ಧವಾದವುಗಳನ್ನು ತಿನ್ನಬಾರದು. ಹೆಣದಿಂದ ಅಶುದ್ಧವಾದದ್ದನ್ನು ಮುಟ್ಟಿದವನು ಇಲ್ಲವೆ ತನ್ನೊಳಗಿಂದ ವೀರ್ಯ ಹೊರಟವನು
5 Or whoever toucheth any creeping animal, by which he may be made unclean, or a man of whom he may take uncleanness, whatever uncleanness he hath:ಅಶುದ್ಧನಾಗಿ ಮಾಡಲ್ಪಡುವಂತೆ ಹರಿದಾಡುವ ಯಾವದನ್ನಾಗಲಿ ಇಲ್ಲವೆ ಯಾವದೇ ಅಶುದ್ಧತ್ವದಿಂದ ಅಶುದ್ಧ ಮಾಡುವ ಮನುಷ್ಯನನ್ನಾಗಲಿ ಮುಟ್ಟಿದವನು--
6 The soul which hath touched any such shall be unclean until evening, and shall not eat of the holy things, unless he shall wash his flesh with water.ಅಂಥದ್ದನ್ನು ಮುಟ್ಟಿದ ಮನುಷ್ಯನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಅವನು ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಳ್ಳದ ಹೊರತು ಪರಿಶುದ್ಧ ವಾದವುಗಳನ್ನು ತಿನ್ನಬಾರದು.
7 And when the sun is set, he shall be clean, and shall afterward eat of the holy things, because it is his food.ಸೂರ್ಯನು ಮುಳು ಗಿದಾಗ ಅವನು ಶುದ್ಧನಾಗಿರುವನು, ತರುವಾಯ ಅವನು ಪರಿಶುದ್ಧವಾದವುಗಳನ್ನು ತಿನ್ನಲಿ, ಅದು ಅವನಿಗೆ ಆಹಾರ.
8 That which dieth of itself, or is torn by beasts, he shall not eat to defile himself with it: I am the LORD.ತನ್ನನ್ನು ಹೊಲೆಮಾಡಿಕೊಳ್ಳದಂತೆ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನಾಗಲಿ ಇಲ್ಲವೆ ಮೃಗಗಳಿಂದ ಹರಿಯಲ್ಪಟ್ಟದ್ದನ್ನಾಗಲಿ ತಿನ್ನಬಾರದು; ನಾನೇ ಕರ್ತನು.
9 They shall therefore keep my ordinance, lest they bear sin for it, and die therefore, if they profane it: I the LORD do sanctify them.ಆದದರಿಂದ ಅವರು ಅದನ್ನು ಅಪವಿತ್ರಪಡಿಸಿದರೆ ಅದರ ನಿಮಿತ್ತವಾಗಿ ಪಾಪವನ್ನು ಹೊತ್ತು ಸಾಯದಂತೆ ನನ್ನ ವಿಧಿಗಳನ್ನು ಕೈಕೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.
10 There shall no stranger eat of the holy thing: a sojourner of the priest, or a hired servant, shall not eat of the holy thing.ಪರಿಶುದ್ಧವಾದದ್ದನ್ನು ಪರಕೀಯನು ತಿನ್ನಬಾರದು. ಯಾಜಕನ ಪ್ರವಾಸಿಯಾಗಲಿ ಇಲ್ಲವೆ ಕೂಲಿ ಆಳಾಗಲಿ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.
11 But if the priest shall buy any soul with his money, he shall eat of it, and he that is born in his house: they shall eat of his meat.ಆದರೆ ಯಾಜಕನು ಯಾವನನ್ನಾದರೂ ತನ್ನ ಹಣದಿಂದ ಕೊಂಡುಕೊಂಡರೆ ಅವನು ಅದರಲ್ಲಿ ತಿನ್ನಬೇಕು, ಅವನ ಮನೆಯಲ್ಲಿ ಹುಟ್ಟಿದವನು ತಿನ್ನಲಿ; ಅವರು ಅವನ ಆಹಾರವನ್ನು ತಿನ್ನಲಿ.
12 If the priest's daughter also shall be married to a stranger, she may not eat of an offering of the holy things.ಯಾಜಕನ ಮಗಳು ಒಬ್ಬ ಪರಕೀಯನನ್ನು ಮದುವೆಯಾದರೆ ಅವಳು ಸಮ ರ್ಪಣೆಯಾದ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.
13 But if the priest's daughter shall be a widow, or divorced, and shall have no child, and have returned to her father's house, as in her youth, she shall eat of her father's meat; but there shall no stranger eat of it.ಯಾಜಕನ ಮಗಳು ವಿಧವೆಯಾಗಿದ್ದರೆ ಇಲ್ಲವೆ ಬಿಡಲ್ಪಟ್ಟವಳಾಗಿದ್ದರೆ ಮತ್ತು ಮಕ್ಕಳಿಲ್ಲದವಳಾಗಿ ತನ್ನ ಯೌವನದಲ್ಲಿದ್ದಂತೆಯೇ ತನ್ನ ತಂದೆಯ ಮನೆಗೆ ಹಿಂದಿರುಗಿದವಳಾಗಿದ್ದರೆ ಅವಳು ತನ್ನ ತಂದೆಯ ಆಹಾರದಲ್ಲಿ ತಿನ್ನಲಿ; ಆದರೆ ಪರಕೀಯನು ಅದರಲ್ಲಿ ತಿನ್ನಬಾರದು.
14 And if a man shall eat of the holy thing unknowingly, then he shall put to it the fifth part, and shall give it to the priest, with the holy thing.ಇದಲ್ಲದೆ ಒಬ್ಬನು ತಪ್ಪಾಗಿ ಪರಿಶುದ್ಧ ವಾದದ್ದನ್ನು ತಿಂದರೆ ಅವನು ಅದರ ಐದನೇ ಪಾಲನ್ನು ಕೂಡಿಸಿ ಪರಿಶುದ್ಧವಾದದ್ದನ್ನು ಯಾಜಕನಿಗೆ ಕೊಡ ಬೇಕು.
15 And they shall not profane the holy things of the children of Israel which they offer to the LORD;ಇಸ್ರಾಯೇಲ್ ಮಕ್ಕಳು ಕರ್ತನಿಗೆ ಅರ್ಪಿ ಸುವ ಪರಿಶುದ್ಧವಾದವುಗಳನ್ನು ಅವರು ಅಪವಿತ್ರ ಮಾಡಬಾರದು.
16 Or suffer them to bear the iniquity of trespass, when they eat their holy things: for I the LORD do sanctify them.ಇಲ್ಲವೆ ಅವರು ಪರಿಶುದ್ಧವಾದವು ಗಳನ್ನು ತಿನ್ನುವದರಿಂದ ತಮ್ಮ ಮೇಲೆ ಅತಿಕ್ರಮದ ಅಪರಾಧವನ್ನು ಹೊತ್ತುಕೊಳ್ಳದಿರಲಿ; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.
17 And the LORD spoke to Moses, saying,ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
18 Speak to Aaron, and to his sons, and to all the children of Israel, and say to them, Whoever he may be of the house of Israel, or of the strangers in Israel, that will offer his oblation for all his vows, and for all his free-will-offerings, which they will offer to the LORD for a burnt-offering:ಆರೋನನೊಂದಿಗೂ ಅವನ ಕುಮಾರರೊಂದಿಗೂ ಇಸ್ರಾಯೇಲ್ ಎಲ್ಲಾ ಮಕ್ಕ ಳೊಂದಿಗೂ ಮಾತನಾಡಿ ಅವರಿಗೆ ಹೇಳಬೇಕಾದ ದ್ದೇನಂದರೆ--ಇಸ್ರಾಯೇಲ್ ಮನೆತನದವರಲ್ಲಾಗಲಿ ಇಸ್ರಾಯೇಲ್ಯರ ಪರಕೀಯರಲ್ಲಾಗಲಿ ಯಾವನಾದರೂ ತನ್ನ ಎಲ್ಲಾ ಪ್ರಮಾಣಗಳ ನಿಮಿತ್ತವಾಗಿ ಕಾಣಿಕೆಯನ್ನು ದಹನಬಲಿಯಾಗಿ ಕರ್ತನಿಗೆ ಅರ್ಪಿಸುವ ಉಚಿತವಾದ ಅರ್ಪಣೆಗಳಲ್ಲಿ
19 Ye shall offer at your own will a male without blemish of the beeves, of the sheep, or of the goats.ನೀವು ನಿಮ್ಮ ಸ್ವಇಚ್ಛೆಯಿಂದ ಪಶುಗಳೊಳಗೆ ಕುರಿಗಳೊಳಗೆ ಇಲ್ಲವೆ ಮೇಕೆಗಳೊಳಗೆ ದೋಷವಿಲ್ಲದ ಗಂಡಾಗಿರುವದನ್ನು ಅರ್ಪಿಸಬೇಕು;
20 But whatever hath a blemish, that shall ye not offer: for it shall not be acceptable for you.ಆದರೆ ದೋಷವಿರುವ ಯಾವದನ್ನೂ ಸಮರ್ಪಿಸ ಬಾರದು; ಅದು ನಿಮಗೋಸ್ಕರ ಅಂಗೀಕಾರವಾಗು ವದಿಲ್ಲ.
21 And whoever offereth a sacrifice of peace-offerings to the LORD to accomplish his vow, or a free-will-offering in beeves, or sheep, it shall be perfect to be accepted: there shall be in it no blemish.ತನ್ನ ಪ್ರಮಾಣವನ್ನು ಪೂರೈಸುವ ಹಾಗೆ ಯಾವನಾದರೂ ಸಮಾಧಾನದ ಬಲಿಗಳ ಯಜ್ಞ ಸಮರ್ಪಣೆಯನ್ನಾಗಲಿ ಪಶುಗಳನ್ನಾಗಲಿ ಕುರಿಗಳ ನ್ನಾಗಲಿ ಉಚಿತವಾದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸುವದಾದರೆ ಅದು ಅಂಗೀಕಾರಕ್ಕೆ ಪರಿಪೂರ್ಣ ವುಳ್ಳದ್ದಾಗಿರಬೇಕು; ಅದರೊಳಗೆ ಯಾವ ದೋಷವು ಇರಬಾರದು.
22 Blind, or broken, or maimed, or having a wen, or scurvy, or scabbed, ye shall not offer these to the LORD, nor make an offering by fire of them upon the altar to the LORD.ಕುರುಡಾದದ್ದು, ಮುರಿದದ್ದು, ಅಂಗ ಹೀನವಾದದ್ದು, ಬೊಕ್ಕೆಯುಳ್ಳದ್ದು, ತುರಿಯುಳ್ಳದ್ದು, ಇಲ್ಲವೆ ಹುರುಕುಳ್ಳದ್ದು ಇವುಗಳನ್ನು ನೀವು ಕರ್ತನಿಗೆ ಸಮರ್ಪಿಸಲೂಬಾರದು ಮತ್ತು ಅವುಗಳಿಂದ ಯಜ್ಞ ವೇದಿಯ ಮೇಲೆ ದಹನಬಲಿಯಾಗಿ ಕರ್ತನಿಗೆ ಸಮರ್ಪಿಸಲೂಬಾರದು.
23 Either a bullock, or a lamb that hath any thing superfluous or lacking in his parts, that mayest thou offer for a free-will-offering; but for a vow it shall not be accepted.ಹೋರಿಯಾಗಲಿ ಇಲ್ಲವೆ ಕುರಿಮರಿಯಾಗಲಿ ಅದಕ್ಕೆ ಹೆಚ್ಚಾದ ಅಂಗವಿರುವ ದಾಗಿದ್ದರೆ ಇಲ್ಲವೆ ಅದರ ಅಂಗಗಳಲ್ಲಿ ಕೊರತೆ ಯಿರುವದಾಗಿದ್ದರೆ ಅದನ್ನು ಉಚಿತ ಕಾಣಿಕೆಯಾಗಿ ಅರ್ಪಿಸಬಹುದು; ಆದರೆ ಪ್ರಮಾಣಕ್ಕಾಗಿ ಅದು ಅಂಗೀಕಾರವಾಗುವದಿಲ್ಲ.
24 Ye shall not offer to the LORD that which is bruised, or crushed, or broken, or cut; neither shall ye make any offering thereof in your land.ಜಜ್ಜಿ ಗಾಯವಾದ, ನುಜ್ಜುಗುಜ್ಜಾದ, ಮುರಿದ ಇಲ್ಲವೆ ಕೊಯ್ದಿರುವ ಯಾವದನ್ನೂ ಕರ್ತನಿಗೆ ಸಮರ್ಪಿಸಬಾರದು. ಅಲ್ಲದೆ ನಿಮ್ಮ ದೇಶದೊಳಗಿರುವ ಅಂಥ ಯಾವ ಸಮರ್ಪಣೆ ಯನ್ನಾ ದರೂ ನೀವು ಸಮರ್ಪಿಸಬಾರದು.
25 Neither from a stranger's hand shall ye offer the bread of your God of any of these; because their corruption is in them, and blemishes are in them: they shall not be accepted for you.ಇದಲ್ಲದೆ ಪರಕೀಯನ ಕೈಯೊಳಗಿಂದಲೂ ಅಂಥವುಗಳಲ್ಲಿ ಯಾವದನ್ನಾದರೂ ನಿಮ್ಮ ದೇವರಿಗೆ ರೊಟ್ಟಿಯಾಗಿ ಅರ್ಪಿಸಬಾರದು. ಅವರ ನೀತಿಭ್ರಷ್ಠತೆಯೂ ದೋಷ ಗಳೂ ಅವುಗಳಲ್ಲಿ ಇರುತ್ತವೆ. ಅವು ನಿಮಗೋಸ್ಕರ ವಾಗಿ ಅಂಗೀಕಾರವಾಗುವದಿಲ್ಲ.
26 And the LORD spoke to Moses, saying,ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--
27 When a bullock, or a sheep, or a goat is brought forth, then it shall be seven days under the dam; and from the eighth day and thenceforth it shall be accepted for an offering made by fire to the LORD.ಹೋರಿಯನ್ನಾಗಲಿ ಕುರಿಯನ್ನಾಗಲಿ ಇಲ್ಲವೆ ಆಡನ್ನಾಗಲಿ ತಂದಾಗ ಏಳು ದಿವಸಗಳ ವರೆಗೆ ಅದು ತನ್ನ ತಾಯಿಯ ಬಳಿಯಲ್ಲಿ ಇರಲಿ. ಎಂಟನೆಯ ದಿನದಿಂದ ಅದು ಕರ್ತನಿಗೆ ದಹನಬಲಿಯಾಗಿ ಅಂಗೀ ಕಾರವಾಗಿರುವದು.
28 And whether it is cow, or ewe, ye shall not kill it and her young both in one day.ಹಸುವನ್ನಾಗಲಿ ಕುರಿಯನ್ನಾಗಲಿ ಅದರ ಮರಿಯೊಂದಿಗೆ ಎರಡನ್ನೂ ಒಂದೇ ದಿನದಲ್ಲಿ ವಧಿಸಬಾರದು.
29 And when ye will offer a sacrifice of thanksgiving to the LORD, offer it at your own will.ನೀವು ಕೃತಜ್ಞತೆಯ ಯಜ್ಞಾರ್ಪಣೆಯನ್ನು ಸಮರ್ಪಿಸುವಾಗ ನಿಮ್ಮ ಸ್ವಇಷ್ಟದಿಂದ ಅರ್ಪಿಸಿರಿ.
30 On the same day it shall be eaten up, ye shall leave none of it until the morrow: I am the LORD.ಅದೇ ದಿನದಲ್ಲಿ ಅದನ್ನು ತಿನ್ನಬೇಕು. ಅದರಲ್ಲಿ ಯಾವದನ್ನೂ ಮಾರನೆಯ ದಿನದ ವರೆಗೆ ಉಳಿಸ ಬಾರದು; ನಾನೇ ಕರ್ತನು.
31 Therefore shall ye keep my commandments, and do them: I am the LORD.ಆದದರಿಂದ ನೀವು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು.
32 Neither shall ye profane my holy name; but I will be hallowed among the children of Israel: I am the LORD who hallow you,ಆದರೆ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ನಾನು ಪರಿಶುದ್ಧ ಮಾಡಲ್ಪಡುವ ಹಾಗೆ ನನ್ನ ಪರಿಶುದ್ಧವಾದ ಹೆಸರನ್ನು ಅಪವಿತ್ರಮಾಡಬಾರದು;
33 That brought you out of the land of Egypt, to be your God: I am the LORD.ನಿಮಗೆ ದೇವರಾಗಿರು ವದಕ್ಕೆ ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಗೆ ತಂದವನೂ ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನೂ ನಾನೇ; ನಾನೇ ಕರ್ತನು.
Kannada Bible