Leviticus 5 - YLT (Kannada)
1 `And when a person doth sin, and hath heard the voice of an oath, and he `is' witness, or hath seen, or hath known -- if he declare not, then he hath borne his iniquity:ಯಾವನಾದರೂ ಆಣೆಯಿಡುವದನ್ನು ಕೇಳಿ ಸಾಕ್ಷಿಯಾಗಿದ್ದು ಪಾಪಮಾಡಿದರೆ ಅವನು ಅದನ್ನು ನೋಡಿಯೂ ಇಲ್ಲವೆ ತಿಳಿದೂ ಹೇಳದಿದ್ದರೆ ಅವನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು.
2 `Or when a person cometh against any thing unclean, or against a carcase of an unclean beast, or against a carcase of unclean cattle, or against a carcase of an unclean teeming creature, and it hath been hidden from him, and he unclean, and guilty;ಇಲ್ಲವೆ ಯಾವನಾದರೂ ಅಶುದ್ಧವಾದ ಯಾವದನ್ನಾದರೂ ಮುಟ್ಟಿದರೆ, ಅಂದರೆ ಅದು ಅಶುದ್ಧ ವಾದ ಮೃಗದ ಹೆಣವಾಗಲಿ ದನದ ಹೆಣವಾಗಲಿ ಹರಿದಾಡುವವುಗಳ ಹೆಣಗಳಾಗಲಿ ಅವನಿಗೆ ತಿಳಿಯದಿ ದ್ದರೂ ಅವನು ಅಶುದ್ಧನಾಗಿದ್ದು ಅಪರಾಧಿಯಾಗಿರುವನು.
3 `Or when he cometh against uncleanness of man, even any of his uncleanness whereby he is unclean, and it hath been hidden from him, and he hath known, and hath been guilty:ಮನುಷ್ಯದೇಹದಿಂದುಂಟಾದ ಯಾವದಾ ದರೂ ಒಂದು ಅಶುದ್ಧವಸ್ತು ತಗಲಿದ್ದು ಅವನಿಗೆ ತಿಳಿಯದೆ ಹೋದರೂ ತಿಳಿದು ಬಂದಾಗ ಅವನು ದೋಷಿಯಾಗುವನು.
4 `Or when a person sweareth, speaking wrongfully with the lips to do evil, or to do good, even anything which man speaketh wrongfully with an oath, and it hath been hid from him; -- when he hath known then he hath been guilty of one of these;ಇಲ್ಲವೆ ಒಬ್ಬನು ಆಣೆಯಿಟ್ಟು ಕೆಟ್ಟದ್ದನ್ನಾಗಲಿ ಒಳ್ಳೆಯದನ್ನಾಗಲಿ ಮಾಡುವದನ್ನು ತನ್ನ ತುಟಿಗಳಿಂದ ಉಚ್ಚರಿಸಿ ಪ್ರಮಾಣದೊಡನೆ ಉಚ್ಚರಿಸಿದ್ದು ಯಾವದೇ ಆಗಿರಲಿ ಅದು ಅವನಿಗೆ ತಿಳಿಯದೆ ಇದ್ದು ತರುವಾಯ ತಿಳಿದಾಗ ಇವುಗಳಲ್ಲೊಂದರಲ್ಲಿ ಅವನು ಅಪರಾಧಿಯಾಗಿರುವನು.
5 `And it hath been when he is guilty of one of these, that he hath confessed concerning that which he hath sinned,ಅವನು ಇವುಗಳಲ್ಲೊಂದ ರಲ್ಲಿ ಅಪರಾಧಿಯಾಗಿದ್ದು ತಾನು ಅದರಲ್ಲಿ ಪಾಪಮಾಡಿ ದ್ದೇನೆಂದು ಅರಿಕೆ ಮಾಡುವದಾದರೆ
6 and hath brought in his guilt-offering to Jehovah for his sin which he hath sinned, a female out of the flock, a lamb, or a kid of the goats, for a sin-offering, and the priest hath made atonement for him, because of his sin.ಅವನು ತಾನು ಮಾಡಿದ ಪಾಪಕ್ಕಾಗಿ ಕರ್ತನಿಗೆ ಅಪರಾಧ ಬಲಿಯನ್ನು ಪಾಪದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣುಕುರಿ ಇಲ್ಲವೆ ಮೇಕೆಗಳಲ್ಲಿ ಒಂದು ಮರಿಯನ್ನು ತರಬೇಕು; ಯಾಜಕನು ಅವನ ಪಾಪದ ವಿಷಯದಲ್ಲಿ ಪ್ರಾಯಶ್ಚಿತ್ತ ಮಾಡಬೇಕು.
7 `And if his hand reach not to the sufficiency of a lamb, then he hath brought in his guilt-offering -- he who hath sinned -- two turtle-doves or two young pigeons to Jehovah, one for a sin-offering, and one for a burnt-offering;ಅವನು ಒಂದು ಕುರಿಮರಿಯನ್ನು ತರುವದಕ್ಕೆ ಅಶಕ್ತನಾಗಿದ್ದರೆ ತಾನು ಮಾಡಿದ ಅಪರಾಧಕ್ಕಾಗಿ ಎರಡು ಬೆಳವಗಳನ್ನಾಗಲಿ ಇಲ್ಲವೆ ಎರಡು ಪಾರಿವಾಳದ ಮರಿ ಗಳನ್ನಾಗಲಿ ಕರ್ತನಿಗೆ ತರಬೇಕು; ಒಂದನ್ನು ಪಾಪದ ಬಲಿಗಾಗಿ ಮತ್ತೊಂದನ್ನು ದಹನಬಲಿಗಾಗಿ ತರಬೇಕು.
8 and he hath brought them in unto the priest, and hath brought near that which `is' for a sin-offering first, and hath wrung off its head from its neck, and doth not separate `it',ಅವನು ಅವುಗಳನ್ನು ಯಾಜಕರ ಬಳಿಗೆ ತಂದಾಗ ಪಾಪದ ಬಲಿಗೆ ತಂದಿರುವದನ್ನು ಮೊದಲು ಸಮರ್ಪಿಸಿ ಅದರ ತಲೆಯನ್ನು ಕುತ್ತಿಗೆಯಿಂದ ಮುರಿಯಬೇಕು, ಅದನ್ನು ವಿಭಾಗಿಸಬಾರದು.
9 and he hath sprinkled of the blood of the sin-offering on the side of the altar, and that which is left of the blood is wrung out at the foundation of the altar; it `is' a sin-offering.ಇದಲ್ಲದೆ ಅವನು ಪಾಪದ ಬಲಿಯ ರಕ್ತವನ್ನು ಯಜ್ಞವೇದಿಯ ಬದಿಯಲ್ಲಿ ಚಿಮುಕಿಸಬೇಕು. ಉಳಿದ ರಕ್ತವನ್ನು ಯಜ್ಞವೇದಿಯ ಬದಿಯಲ್ಲಿ ಹಿಂಡಬೇಕು; ಅದು ಪಾಪದ ಬಲಿಯಾಗಿದೆ.
10 `And the second he maketh a burnt-offering, according to the ordinance, and the priest hath made atonement for him, because of his sin which he hath sinned, and it hath been forgiven him.ಅವನು ಕ್ರಮದ ಪ್ರಕಾರ ಎರಡನೆಯದನ್ನು ದಹನ ಬಲಿಯಾಗಿ ಸಮರ್ಪಿಸಬೇಕು; ಅವನು ಮಾಡಿದ ಪಾಪಕ್ಕಾಗಿ ಯಾಜಕನು ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
11 `And if his hand reach not to two turtle-doves, or to two young pigeons, then he hath brought in his offering -- he who hath sinned -- a tenth of an ephah of flour for a sin-offering; he putteth no oil on it, nor doth he put on it frankincense, for it `is' a sin-offering,ಆದರೆ ಅವನು ಎರಡು ಬೆಳವಗಳನ್ನಾಗಲಿ ಇಲ್ಲವೆ ಎರಡು ಪಾರಿವಾಳದ ಮರಿಗಳನ್ನಾಗಲಿ ತರುವದಕ್ಕೆ ಅಶಕ್ತನಾಗಿದ್ದರೆ ಪಾಪಮಾಡಿದವನು ತನ್ನ ಸಮರ್ಪಣೆ ಗಾಗಿ ಒಂದು ಎಫದ ಹತ್ತನೆಯ ಭಾಗದಷ್ಟು ನಯ ವಾದ ಹಿಟ್ಟನ್ನು ಪಾಪದ ಬಲಿಗಾಗಿ ತರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಇಲ್ಲವೆ ಸಾಂಬ್ರಾಣಿಯನ್ನು ಹಾಕಬಾರದು. ಅದು ಪಾಪದ ಬಲಿಯಾಗಿದೆ.
12 and he hath brought it in unto the priest, and the priest hath taken a handful from it -- the fulness of his hand -- its memorial -- and hath made perfume on the altar, according to the fire-offerings of Jehovah; it `is' a sin-offering.ತರುವಾಯ ಅವನು ಅದನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಜ್ಞಾಪಕಾರ್ಥವಾಗಿ ಅದರಿಂದ ತನ್ನ ಹಿಡಿ ಯಷ್ಟು ತೆಗೆದುಕೊಂಡು ಕರ್ತನಿಗೆ ಯಜ್ಞವೇದಿಯ ಮೇಲೆ ಬೆಂಕಿಯ ಅರ್ಪಣೆಗಳಿಗನುಸಾರವಾಗಿ ಸುಡ ಬೇಕು; ಅದು ಪಾಪದ ಬಲಿಯಾಗಿರುವದು.
13 `And the priest hath made atonement for him, for his sin which he hath sinned against one of these, and it hath been forgiven him, and `the remnant' hath been to the priest, like the present.'ಇವು ಗಳಲ್ಲಿ ಒಂದನ್ನು ಪಾಪದ ವಿಷಯವಾಗಿ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು ಮತ್ತು ಉಳಿದದ್ದು ಯಾಜಕನಿಗೋಸ್ಕರ ಆಹಾರಬಲಿಯಾಗಿ ಇರುವದು ಅಂದನು.
14 And Jehovah speaketh unto Moses, saying,ಕರ್ತನು ಮೋಶೆಯೊಂದಿಗೆ ಮಾತನಾಡಿ--
15 `When a person committeth a trespass, and hath sinned through ignorance against the holy things of Jehovah, then he hath brought in his guilt-offering to Jehovah, a ram, a perfect one, out of the flock, at thy valuation `in' silver -- shekels by the shekel of the sanctuary -- for a guilt-offering.ಯಾವನಾದರೂ ಅತಿಕ್ರಮಿಸಿ ಕರ್ತನ ಪರಿಶುದ್ಧ ವಾದವುಗಳನ್ನು ಅರಿಯದೆ ಪಾಪಮಾಡಿದ್ದರೆ ಅವನು ತನ್ನ ಅತಿಕ್ರಮಕ್ಕಾಗಿ ತನ್ನ ಹಿಂಡುಗಳಿಂದ ದೋಷವಿಲ್ಲದ ಟಗರನ್ನು ನಿನ್ನ ಅಂದಾಜಿನ ಪ್ರಕಾರ ಪವಿತ್ರ ಸ್ಥಳದ ಶೆಕೆಲುಗಳಿಗನುಸಾರವಾಗಿ ಬೆಳ್ಳಿಯ ಶೆಕೆಲುಗಳನ್ನು ಅತಿ ಕ್ರಮದ ಬಲಿಗಾಗಿ ಕರ್ತನಿಗೆ ತರಬೇಕು.
16 `And that which he hath sinned against the holy thing he repayeth, and its fifth is adding to it, and hath given it to the priest, and the priest maketh atonement for him with the ram of the guilt-offering, and it hath been forgiven him.ಪರಿಶುದ್ಧ ವಾದದ್ದಲ್ಲದೆ ಮಾಡಿದ ಕೇಡಿಗೆ ಬದಲು ಕೊಟ್ಟು ಅದಕ್ಕೆ ಐದನೇ ಪಾಲನ್ನು ಕೂಡಿಸಿ ಅದನ್ನು ಯಾಜಕನಿಗೆ ಕೊಡಬೇಕು, ಯಾಜಕನು ಅವನಿಗಾಗಿ ಅತಿಕ್ರಮದ ಬಲಿಯಾದ ಟಗರಿನಿಂದ ಪ್ರಾಯಶ್ಚಿತ್ತಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
17 `And when any person sinneth, and hath done `something against' one of all the commands of Jehovah `regarding things' which are not to be done, and hath not known, and he hath been guilty, and hath borne his iniquity,ಯಾವನಾದರೂ ಕರ್ತನು ನಿಷೇಧಿಸಿದ ಆಜ್ಞೆ ಗಳಲ್ಲಿ ಯಾವದನ್ನಾದರೂ ಮಾಡಿ ಪಾಪಮಾಡಿದರೆ ಅದು ಅವನಿಗೆ ತಿಳಿಯದಿದ್ದಾಗ್ಯೂ ಅವನು ಅಪರಾಧಿ ಯಾಗಿರುವನು, ಅವನು ತನ್ನ ಅಪರಾಧವನ್ನು ಹೊತ್ತು ಕೊಳ್ಳುವನು.
18 `Then he hath brought in a ram, a perfect one, out of the flock, at thy valuation, for a guilt-offering, unto the priest; and the priest hath made atonement for him, for his ignorance in which he hath erred and he hath not known, and it hath been forgiven him;ಅಲ್ಲದೆ ಅವನು ಹಿಂಡಿನೊಳಗಿಂದ ದೋಷವಿಲ್ಲದ ಒಂದು ಟಗರನ್ನು ನಿನ್ನ ಅಂದಾಜಿ ಗನುಸಾರ ಅತಿಕ್ರಮದ ಬಲಿಗಾಗಿ ಯಾಜಕನ ಬಳಿಗೆ ತರಬೇಕು; ತನ್ನ ಅಜ್ಞಾನದಲ್ಲಿ ಅವನು ಉದ್ದೇಶವಿಲ್ಲದೆ ಮಾಡಿದ ತಪ್ಪಿಗಾಗಿ ಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು. ಅದು ಅವನಿಗೆ ಕ್ಷಮಿಸಲ್ಪಡುವದು.
19 it `is' a guilt-offering; he hath been certainly guilty before Jehovah.'ಇದು ಅತಿಕ್ರಮದ ಬಲಿಯಾಗಿದೆ; ಅವನು ನಿಶ್ಚಯ ವಾಗಿಯೂ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದ್ದಾನೆ ಅಂದನು.
Kannada Bible