Bible

Leviticus 9 - YLT (Kannada)

1 And it cometh to pass on the eighth day, Moses hath called for Aaron and for his sons, and for the elders of Israel,1 ಎಂಟನೆಯ ದಿನದಲ್ಲಿ ಆದದ್ದೇನಂದರೆ, ಮೋಶೆಯು ಆರೋನನನ್ನೂ ಅವನ ಕುಮಾರರನ್ನೂ ಇಸ್ರಾಯೇಲಿನ ಹಿರಿಯರನ್ನೂ ಕರೆ ದನು;

2 and he saith unto Aaron, `Take to thyself a calf, a son of the herd, for a sin-offering, and a ram for a burnt-offering, perfect ones, and bring near before Jehovah.ಅವನು ಆರೋನನಿಗೆ ಹೇಳಿದ್ದೇನಂದರೆ--ಪಾಪದ ಬಲಿಗಾಗಿ ಒಂದು ಎಳೆಯ ಕರುವನ್ನೂ ದಹನ ಬಲಿಗಾಗಿ ದೋಷವಿಲ್ಲದ ಟಗರನ್ನೂ ನೀನು ತೆಗೆದು ಕೊಂಡು ಅವುಗಳನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸು.

3 `And unto the sons of Israel thou dost speak, saying, Take ye a kid of the goats for a sin-offering, and a calf, and a lamb, sons of a year, perfect ones, for a burnt-offering,ನೀನು ಇಸ್ರಾಯೇಲ್‌ ಮಕ್ಕಳಿಗೆ ಹೇಳಬೇಕಾದದ್ದೇ ನಂದರೆ--ಪಾಪದ ಬಲಿಗಾಗಿ ಮೇಕೆಗಳಲ್ಲಿ ಮರಿ ಯನ್ನೂ ದಹನಬಲಿಗಾಗಿ ದೋಷವಿಲ್ಲದ ಒಂದು ವರ್ಷದ ಕರುವನ್ನೂ ಒಂದು ವರ್ಷದ ಕುರಿಮರಿ ಯನ್ನೂ ತೆಗೆದುಕೊಳ್ಳಬೇಕು.

4 and a bullock and a ram for peace-offerings, to sacrifice before Jehovah, and a present mixed with oil; for to-day Jehovah hath appeared unto you.'ಕರ್ತನ ಮುಂದೆ ಯಜ್ಞಕ್ಕೆ ಸಮಾಧಾನ ಬಲಿಗಳಿಗಾಗಿ ಹೋರಿಯನ್ನೂ ಟಗರನ್ನೂ ಸಹ ತೆಗೆದುಕೊಳ್ಳಬೇಕು; ಆಹಾರದ ಅರ್ಪಣೆಯು ಎಣ್ಣೆಯೊಂದಿಗೆ ಬೆರೆತಿರಬೇಕು; ಈ ದಿನವೇ ಕರ್ತನು ನಿಮಗೆ ಕಾಣಿಸಿಕೊಳ್ಳುವನು.

5 And they take that which Moses hath commanded unto the front of the tent of meeting, and all the company draw near and stand before Jehovah;ಮೋಶೆಯು ಆಜ್ಞಾಪಿಸಿದವುಗಳನ್ನು ಅವರು ಸಭೆಯ ಗುಡಾರದ ಮುಂದೆ ತಂದರು; ಸಭೆಯೆಲ್ಲವೂ ಹತ್ತಿರ ಬಂದು ಕರ್ತನ ಮುಂದೆ ನಿಂತಿತು.

6 and Moses saith, `This `is' the thing which Jehovah hath commanded; do `it', and the honour of Jehovah doth appear unto you.'ಆಗ ಮೋಶೆಯು--ಕರ್ತನು ಆಜ್ಞಾಪಿಸಿದ್ದು ಇದೇ, ನೀವು ಇದನ್ನು ಮಾಡಿರಿ; ಕರ್ತನ ಮಹಿಮೆಯು ನಿಮಗೆ ಕಾಣಿಸಿಕೊಳ್ಳುವದು ಅಂದನು.

7 And Moses saith unto Aaron, `Draw near unto the altar, and make thy sin-offering, and thy burnt-offering, and make atonement for thyself, and for the people, and make the offering of the people, and make atonement for them, as Jehovah hath commanded.'ಮೋಶೆಯು ಆರೋನನಿಗೆ--ಯಜ್ಞವೇದಿಯ ಹತ್ತಿರಕ್ಕೆ ಹೋಗಿ ಕರ್ತನು ಆಜ್ಞಾಪಿಸಿದಂತೆಯೇ ನಿನ್ನ ಪಾಪದಬಲಿಯನ್ನೂ ದಹನಬಲಿಯನ್ನೂ ಅರ್ಪಿಸಿ, ನಿನಗಾಗಿಯೂ ಜನರಿಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು; ಜನರ ಸಮರ್ಪಣೆಗಳನ್ನು ಸಮರ್ಪಿಸಿ ಅವರಿ ಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು ಅಂದನು.

8 And Aaron draweth near unto the altar, and slaughtereth the calf of the sin-offering, which `is' for himself;ಆದದರಿಂದ ಆರೋನನು ಯಜ್ಞವೇದಿಯ ಕಡೆಗೆ ಹೋಗಿ ತನಗಾಗಿ ಪಾಪದ ಬಲಿಯ ಕರುವನ್ನು ವಧಿಸಿದನು.

9 and the sons of Aaron bring the blood near unto him, and he dippeth his finger in the blood, and putteth `it' on the horns of the altar, and the blood he hath poured out at the foundation of the altar;ಆಗ ಆರೋನನ ಕುಮಾರರು ಅವನ ಬಳಿಗೆ ರಕ್ತವನ್ನು ತಂದರು; ಅವನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ ಅದನ್ನು ಯಜ್ಞವೇದಿಯ ಕೊಂಬು ಗಳಿಗೆ ಹಚ್ಚಿದನು; ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು.

10 and the fat, and the kidneys, and the redundance of the liver, of the sin-offering, he hath made a perfume on the altar, as Jehovah hath commanded Moses;ಆದರೆ ಪಾಪದ ಬಲಿಯ ಕೊಬ್ಬು, ಮೂತ್ರಜನಕಾಂಗಗಳು ಕಲಿಜದ ಮೇಲಿನ ಪೊರೆ ಇವುಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿ ದ್ದಂತೆಯೇ ಅವನು ಯಜ್ಞವೇದಿಯ ಮೇಲೆ ಸುಟ್ಟನು.

11 and the flesh and the skin he hath burnt with fire, at the outside of the camp.ಮಾಂಸವನ್ನೂ ಚರ್ಮವನ್ನೂ ಅವನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು.

12 And he slaughtereth the burnt-offering, and the sons of Aaron have presented unto him the blood, and he sprinkleth it on the altar round about;ಅವನು ದಹನ ಬಲಿಯನ್ನು ವಧಿಸಿದಾಗ ಆರೋನನ ಕುಮಾರರು ಅವನಿಗೆ ರಕ್ತವನ್ನು ತಂದು ಕೊಟ್ಟರು, ಅದನ್ನು ಅವನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.

13 and the burnt-offering they have presented unto him, by its pieces, and the head, and he maketh perfume on the altar;ಅವರು ಅವನಿಗೆ ದಹನಬಲಿಯನ್ನೂ ಅವುಗಳ ತುಂಡುಗಳೊಂದಿಗೆ ತಲೆಯನ್ನೂ ತಂದುಕೊಡಲು ಅವನು ಅವುಗಳನ್ನು ಯಜ್ಞವೇದಿಯ ಮೇಲೆ ಸುಟ್ಟನು.

14 and he washeth the inwards and the legs, and maketh perfume for the burnt-offering on the altar.ಅವನು ಕರುಳುಗಳನ್ನೂ ಕಾಲುಗಳನ್ನೂ ತೊಳೆದು ಅವುಗಳನ್ನು ಯಜ್ಞವೇದಿಯ ಮೇಲಿನ ದಹನಬಲಿಯ ಮೇಲೆ ಸುಟ್ಟನು.

15 And he bringeth near the offering of the people, and taketh the goat of the sin-offering which `is' for the people, and slaughtered it, and maketh it a sin-offering, like the first;ಅವನು ಜನರ ಬಲಿಯನ್ನು ತಂದು, ಮೇಕೆಯನ್ನು ತೆಗೆದುಕೊಂಡು, ಜನರಿಗಾಗಿ ಪಾಪ ಬಲಿಯಾಗಿರು ವದನ್ನು ವಧಿಸಿ, ಮೊದಲನೆಯದರ ಹಾಗೆ ಪಾಪಕ್ಕಾಗಿ ಅದನ್ನು ಸಮರ್ಪಿಸಿದನು.

16 and he bringeth near the burnt-offering, and maketh it, according to the ordinance;ಅವನು ದಹನಬಲಿ ಯನ್ನು ತಂದು ಕ್ರಮದ ಪ್ರಕಾರವೇ ಅದನ್ನು ಸಮರ್ಪಿಸಿದನು.

17 and he bringeth near the present, and filleth his palm with it, and maketh perfume on the altar, apart from the burnt-offering of the morning.ಅವನು ಆಹಾರ ಸಮರ್ಪಣೆ ಯನ್ನು ತಂದು ಅದರಲ್ಲಿ ಒಂದು ಹಿಡಿ ತೆಗೆದುಕೊಂಡು ಯಜ್ಞವೇದಿಯ ಮೇಲೆ ಬೆಳಗಿನ ದಹನಬಲಿಯ ಪಕ್ಕದಲ್ಲಿ ಅದನ್ನು ಸುಟ್ಟನು.

18 And he slaughtereth the bullock and the ram, a sacrifice of the peace-offerings, which `are' for the people, and sons of Aaron present the blood unto him (and he sprinkleth it on the altar round about),ಅವನು ಜನರಿಗಾಗಿ ಹೋರಿಯನ್ನೂ ಟಗರನ್ನೂ ಸಮಾಧಾನ ಬಲಿಗಳ ಯಜ್ಞಕ್ಕಾಗಿ ವಧಿಸಿದನು; ಆರೋನನ ಕುಮಾರರು ರಕ್ತವನ್ನು ಅವನ ಬಳಿಗೆ ತರಲು ಅವನು ಅದನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.

19 and the fat of the bullock, and of the ram, the fat tail, and the covering `of the inwards', and the kidneys, and the redundance above the liver,ಹೋರಿ ಟಗರಿನ ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳನ್ನು ಮುಚ್ಚುವ ಮೂತ್ರಜನಕಾಂಗಗಳನ್ನೂ ಕಲಿಜದ ಮೇಲಿರುವ ಪೊರೆಯನ್ನೂ

20 and they set the fat on the breasts, and he maketh perfume with the fat on the altar;ಅವರು ಎದೆ ಭಾಗಗಳ ಮೇಲೆ ಕೊಬ್ಬನ್ನು ಇಟ್ಟಾಗ ಅವನು ಯಜ್ಞ ವೇದಿಯ ಮೇಲೆ ಸುಟ್ಟನು.

21 and the breasts, and the right leg hath Aaron waved -- a wave-offering before Jehovah, as He hath commanded Moses.ಮೋಶೆಯು ಆಜ್ಞಾಪಿಸಿ ದಂತೆ ಆರೋನನು ಎದೆಯ ಭಾಗಗಳನ್ನು ಬಲಭುಜ ವನ್ನು ಆಡಿಸಿ ಕರ್ತನ ಮುಂದೆ ಸಮರ್ಪಣೆಗಾಗಿ ಆಡಿಸಿದನು.

22 And Aaron lifteth up his hand towards the people, and blesseth them, and cometh down from making the sin-offering, and the burnt-offering, and the peace-offerings.ಆರೋನನು ಜನರ ಕಡೆಗೆ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿ ಪಾಪದ ಬಲಿಯನ್ನೂ ದಹನಬಲಿಯನ್ನೂ ಸಮಾಧಾನದ ಬಲಿಗಳನ್ನೂ ಸಮರ್ಪಿಸಿದ ಮೇಲೆ ಇಳಿದು ಬಂದನು.

23 And Moses goeth in -- Aaron also -- unto the tent of meeting, and they come out, and bless the people, and the honour of Jehovah appeareth unto all the people;ಮೋಶೆಯೂ ಆರೋನನೂ ಸಭೆಯ ಗುಡಾರದ ಒಳಗೆ ಹೋಗಿ ಹೊರಗೆ ಬಂದು ಜನರನ್ನು ಆಶೀರ್ವ ದಿಸಿದರು; ಆಗ ಕರ್ತನ ಮಹಿಮೆಯು ಜನರೆಲ್ಲರಿಗೂ ಕಾಣಿಸಿತು.

24 and fire cometh out from before Jehovah, and consumeth on the altar the burnt-offering, and the fat; and all the people see, and cry aloud, and fall on their faces.ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.

Kannada Bible