Cross Reference
Psalm 98:3
ತನ್ನ ಕರುಣೆ ಯನ್ನೂ ಸತ್ಯತೆಯನ್ನೂ ಇಸ್ರಾಯೇಲಿನ ಮನೆಗೋಸ್ಕರ ಜ್ಞಾಪಕ ಮಾಡಿಕೊಂಡಿದ್ದಾನೆ; ಭೂಮಿಯ ಕೊನೆಗಳೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡಿವೆ.
Micah 7:20
ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
Isaiah 44:21
ಓ ಯಾಕೋಬೇ, ಇಸ್ರಾಯೇಲೇ, ಈ ವಿಷಯ ಗಳನ್ನು ಜ್ಞಾಪಕದಲ್ಲಿಟ್ಟುಕೋ. ನೀನು ನನ್ನ ಸೇವಕ ನಾಗಿದ್ದೀ; ನಾನು ನಿನ್ನನ್ನು ನಿರ್ಮಿಸಿದೆನು. ನೀನು ನನ್ನ ಸೇವಕನು; ಓ ಇಸ್ರಾಯೇಲೇ, ನಾನು ನಿನ್ನನ್ನು ಮರೆತುಬಿಡೆನು.
Jeremiah 31:20
ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ.
Luke 1:70
ಲೋಕಾದಿಯಿಂದ ಆತನು ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ
Zechariah 9:9
ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
Zephaniah 3:14
ಓ ಚೀಯೋನಿನ ಕುಮಾರ್ತೆಯೇ, ಹಾಡು; ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಕುಮಾರ್ತೆಯೇ, ಪೂರ್ಣಹೃದಯ ದಿಂದ ಸಂಭ್ರಮಿಸಿ ಉಲ್ಲಾಸಪಡು.
Jeremiah 33:24
ಈ ಜನರು ಮಾತನಾಡುವದನ್ನು ನೀನು ನೋಡಲಿಲ್ಲವೊ? ಕರ್ತನು ಆದುಕೊಂಡ ಎರಡು ಗೋತ್ರಗಳನ್ನು ಬೇಡವೆಂದಿದ್ದಾನೆಂದು ಹೇಳಿ ನನ್ನ ಜನರನ್ನು ಇನ್ನು ಅವರ ಮುಂದೆ ಜನಾಂಗವಲ್ಲದ ಹಾಗೆ ಅಸಡ್ಡೆ ಮಾಡಿದ್ದಾರೆ.
Jeremiah 31:3
ಹಿಂದಿನಂತೆ ಕರ್ತನು ಬಂದು ನನಗೆ ಕಾಣಿಸಿಕೊಂಡು--ಹೌದು, ಶಾಶ್ವತವಾದ ಪ್ರೀತಿ ಯಿಂದ ನಿನ್ನನ್ನು ಪ್ರೀತಿ ಮಾಡಿದ್ದೇನೆ; ಆದದರಿಂದ ಪ್ರೀತಿ ದಯೆಗಳಿಂದ ನಿನ್ನನ್ನು ಎಳೆದಿದ್ದೇನೆ.
Isaiah 63:7
ಕರ್ತನು ನಮಗೆ ಮಾಡಿದ್ದೆಲ್ಲಾದರ ಪ್ರಕಾರ, ಕರ್ತನ ಪ್ರೀತಿ ಕೃಪೆಗಳನ್ನೂ ಕರ್ತನ ಸ್ತೋತ್ರಗಳನ್ನೂ ಜ್ಞಾಪಕಪಡಿಸುವೆನು; ಆತನು ತನ್ನ ಅಂತಃಕರುಣೆಯ ಪ್ರಕಾರವೂ ತನ್ನ ಕೃಪೆಯ ಮಹಾ ಒಳ್ಳೇತನದ ಪ್ರಕಾರವೂ ಇಸ್ರಾಯೇಲಿನ ಮನೆಯವರಿಗೆ ದೊಡ್ಡ ಉಪಕಾರ ಮಾಡಿದನಲ್ಲಾ.
Isaiah 49:14
ಆದರೆ ಚೀಯೋನು--ಕರ್ತನು ನನ್ನನ್ನು ತಳ್ಳಿ ಬಿಟ್ಟಿದ್ದಾನೆ ಮತ್ತು ನನ್ನ ಕರ್ತನು ನನ್ನನ್ನು ಮರೆತು ಬಿಟ್ಟಿದ್ದಾನಲ್ಲಾ ಎಂದು ಅಂದುಕೊಂಡಳು.
Isaiah 46:3
ಓ ಯಾಕೋಬನ ಮನೆತನದವರೇ, ಇಸ್ರಾ ಯೇಲ್ ಮನೆತನದಲ್ಲಿ ಉಳಿದಿರುವವರೆಲ್ಲರೇ, ನಿಮ್ಮನ್ನು ಗರ್ಭದಲ್ಲಿ ಹೊತ್ತು, ಹುಟ್ಟಿದಂದಿನಿಂದ ವಹಿಸುತ್ತಿದ್ದಾತನ ಮಾತನ್ನು ಕೇಳಿರಿ--
Isaiah 54:6
ನೀನು ಬಿಡಲ್ಪಟ್ಟು ಆತ್ಮದಲ್ಲಿ ವ್ಯಥೆಪಟ್ಟ ಹೆಂಗಸು, ತ್ಯಜಿಸಲ್ಪಟ್ಟವಳಾದ ಯೌವನದ ಪತ್ನಿಯ ಹಾಗೆ ಇದ್ದಾಗ ಕರ್ತನು ನಿನ್ನನ್ನು ಕರೆದಿದ್ದಾನೆ ಎಂದು ನಿನ್ನ ದೇವರು ಹೇಳುತ್ತಾನೆ.