Bible

Luke 13 - ASV (Kannada)

1 Now there were some present at that very season who told him of the Galilaeans, whose blood Pilate had mingled with their sacrifices.ಇದಲ್ಲದೆ ಪಿಲಾತನು ಗಲಿಲಾಯದವರ ರಕ್ತವನ್ನು ಅವರ ಬಲಿಗಳೊಂದಿಗೆ ಬೆರಸಿದ ವಿಷಯವನ್ನು ಆತನಿಗೆ ತಿಳಿಸಿದ ಕೆಲವರು ಆ ಸಮಯ ದಲ್ಲಿ ಅಲ್ಲಿದ್ದರು.

2 And he answered and said unto them, Think ye that these Galilaeans were sinners above all the Galilaeans, because they have suffered these things?ಆಗ ಯೇಸು ಅವರಿಗೆ--ಈ ಗಲಿ ಲಾಯದವರು ಇಂಥವುಗಳನ್ನು ಅನುಭವಿಸಿದ ಕಾರಣ ಅವರು ಎಲ್ಲಾ ಗಲಿಲಾಯದವರಿಗಿಂತ ಪಾಪಿಷ್ಠರೆಂದು ನೀವು ಭಾವಿಸುತ್ತೀರೋ?

3 I tell you, Nay: but, except ye repent, ye shall all in like manner perish.ಆದರೆ--ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನಸಾಂತರ ಪಡದೆಹೋದರೆ ನೀವೆಲ್ಲರೂ ಅವರಂತೆಯೇ ನಾಶವಾ ಗುವಿರಿ.

4 Or those eighteen, upon whom the tower in Siloam fell, and killed them, think ye that they were offenders above all the men that dwell in Jerusalem?ಇಲ್ಲವೆ ಸಿಲೊವಾಮಿನಲ್ಲಿ ಗೋಪುರವು ಬಿದ್ದು ಸತ್ತ ಆ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಪಾಪಿಷ್ಠ ರೆಂದು ಯೋಚಿಸುತ್ತೀರೋ?

5 I tell you, Nay: but, except ye repent, ye shall all likewise perish.ಆದರೆ--ಹಾಗಲ್ಲ ವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನ ಸಾಂತರಪಡದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ ಅಂದನು.

6 And he spake this parable; A certain man had a fig tree planted in his vineyard; and he came seeking fruit thereon, and found none.ಆತನು ಈ ಸಾಮ್ಯವನ್ನು ಕೂಡ ಹೇಳಿದನು: ಒಬ್ಬಾನೊಬ್ಬ ಮನುಷ್ಯನಿಗೆ ತನ್ನ ದ್ರಾಕ್ಷೇತೋಟದಲ್ಲಿ ನೆಡಲ್ಪಟ್ಟಿದ್ದ ಒಂದು ಅಂಜೂರದ ಮರವಿತ್ತು; ಅವನು ಬಂದು ಅದರಲ್ಲಿ ಫಲವನ್ನು ಹುಡುಕಿದಾಗ ಒಂದೂ ಸಿಕ್ಕಲಿಲ್ಲ.

7 And he said unto the vinedresser, Behold, these three years I come seeking fruit on this fig tree, and find none: cut it down; why doth it also cumber the ground?ಆಗ ಅವನು ತನ್ನ ದ್ರಾಕ್ಷೇತೋಟ ಮಾಡು ವವನಿಗೆ--ಇಗೋ, ಈ ಮೂರು ವರುಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕಿದರೂ ಒಂದನ್ನೂ ಕಂಡುಕೊಳ್ಳಲಿಲ್ಲ; ಇದನ್ನು ಕಡಿದುಹಾಕು; ಭೂಮಿಗೆ ಇದು ಯಾಕೆ ಭಾರವಾಗಿರಬೇಕು ಎಂದು ಹೇಳಿದನು.

8 And he answering saith unto him, Lord, let it alone this year also, till I shall dig about it, and dung it:ಆದರೆ ಅವನು ಪ್ರತ್ಯುತ್ತರವಾಗಿ ಅವ ನಿಗೆ--ಒಡೆಯನೇ, ನಾನು ಅದರ ಸುತ್ತಲೂ ಅಗೆದು ಗೊಬ್ಬರ ಹಾಕುವ ವರೆಗೆ ಈ ವರುಷವೂ ಇದನ್ನು ಬಿಡು;

9 and if it bear fruit thenceforth, `well'; but if not, thou shalt cut it down.ಇದು ಫಲ ಫಲಿಸಿದರೆ ಸರಿ; ಇಲ್ಲವಾದರೆ ನೀನು ಇದನ್ನು ಕಡಿದುಹಾಕಬಹುದು ಅಂದನು.

10 And he was teaching in one of the synagogues on the sabbath day.ಆತನು ಸಬ್ಬತ್ತಿನಲ್ಲಿ ಸಭಾಮಂದಿರದಲ್ಲಿ ಬೋಧಿ ಸುತ್ತಾ ಇದ್ದನು.

11 And behold, a woman that had a spirit of infirmity eighteen years; and she was bowed together, and could in no wise lift herself up.ಆಗ ಇಗೋ, ಹದಿನೆಂಟು ವರುಷ ಗಳಿಂದಲೂ ದುರಾತ್ಮನಿಂದ ರೋಗ ಪೀಡಿತಳಾಗಿ ನಡುಬೊಗ್ಗಿ ಹೋಗಿದ್ದ ಒಬ್ಬ ಸ್ತ್ರೀಯು ಅಲ್ಲಿ ಇದ್ದಳು; ಅವಳು ಯಾವ ರೀತಿಯಲ್ಲಿಯೂ ತನ್ನಷ್ಟಕ್ಕೆ ತಾನೇ ನೆಟ್ಟಗೆ ನಿಲ್ಲಲಾರದೆ ಇದ್ದಳು.

12 And when Jesus saw her, he called her, and said to her, Woman, thou art loosed from thine infirmity.ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ--ಸ್ತ್ರೀಯೇ, ನೀನು ಈ ನಿನ್ನ ರೋಗದಿಂದ ಬಿಡುಗಡೆಯಾಗಿದ್ದೀ ಎಂದು ಹೇಳಿ

13 And he laid his hands upon her: and immediately she was made straight, and glorified God.ಆತನು ಆಕೆಯ ಮೇಲೆ ತನ್ನ ಕೈಗಳನ್ನು ಇಟ್ಟನು; ಕೂಡಲೆ ಆಕೆಯು ನೆಟ್ಟಗಾಗಿ ದೇವರನ್ನು ಮಹಿಮೆಪಡಿಸಿದಳು.

14 And the ruler of the synagogue, being moved with indignation because Jesus had healed on the sabbath, answered and said to the multitude, There are six days in which men ought to work: in them therefore come and be healed, and not on the day of the sabbath.ಯೇಸು ಸಬ್ಬತ್‌ ದಿನದಲ್ಲಿ ಸ್ವಸ್ಥಪಡಿಸಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ--ಆರು ದಿವಸಗಳಲ್ಲಿ ಮನು ಷ್ಯರು ಕೆಲಸ ಮಾಡತಕ್ಕದ್ದು. ಆದದರಿಂದ ಅವುಗಳಲ್ಲಿ ಅವರು ಬಂದು ಸ್ವಸ್ಥತೆ ಹೊಂದಲಿ; ಸಬ್ಬತ್‌ ದಿನದಲ್ಲಿ ಬೇಡ ಅಂದನು.

15 But the Lord answered him, and said, Ye hypocrites, doth not each one of you on the sabbath loose his ox or his ass from the stall, and lead him away to watering?ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ ಅವನಿಗೆ--ಕಪಟಿಯೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ತಿನಲ್ಲಿ ತನ್ನ ಎತ್ತನ್ನಾಗಲಿ ಇಲ್ಲವೆ ಕತ್ತೆಯನ್ನಾಗಲಿ ಕೊಟ್ಟಿಗೆಯಿಂದ ಬಿಡಿಸಿ ನೀರು ಕುಡಿಸುವದಕ್ಕಾಗಿ ಹೋಗುವನಲ್ಲವೇ?

16 And ought not this woman, being a daughter of Abraham, whom Satan had bound, lo, `these' eighteen years, to have been loosed from this bond on the day of the sabbath?ಹಾಗಾದರೆ ಇಗೋ, ಅಬ್ರ ಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರುಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನ ದಿಂದ ಸಬ್ಬತ್‌ ದಿನದಲ್ಲಿ ಬಿಡಿಸಬಾರದೋ ಅಂದನು.

17 And as he said these things, all his adversaries were put to shame: and all the multitude rejoiced for all the glorious things that were done by him.ಆತನು ಇವುಗಳನ್ನು ಹೇಳುತ್ತಿರುವಾಗ ಆತನ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು; ಆದರೆ ಜನರೆಲ್ಲಾ ಆತನಿಂದ ನಡೆದ ಎಲ್ಲಾ ಮಹತ್ತಾದ ಕಾರ್ಯಗಳಿಗಾಗಿ ಸಂತೋಷಪಟ್ಟರು.

18 He said therefore, Unto what is the kingdom of God like? and whereunto shall I liken it?ಇದಲ್ಲದೆ ಆತನು--ದೇವರ ರಾಜ್ಯವು ಯಾವ ದಕ್ಕೆ ಹೋಲಿಕೆಯಾಗಿದೆ? ನಾನು ಯಾವದಕ್ಕೆ ಅದನ್ನು ಹೋಲಿಸಲಿ?

19 It is like unto a grain of mustard seed, which a man took, and cast into his own garden; and it grew, and became a tree; and the birds of the heaven lodged in the branches thereof.ಅದು ಒಬ್ಬ ಮನುಷ್ಯನು ಸಾಸಿವೆಕಾಳನ್ನು ತೆಗೆದುಕೊಂಡು ಹೋಗಿ ತನ್ನ ತೋಟ ದಲ್ಲಿ ಹಾಕಿದ್ದಕ್ಕೆ ಹೋಲಿಕೆಯಾಗಿದೆ; ಅದು ಬೆಳೆದು ಒಂದು ದೊಡ್ಡ ಮರವಾಯಿತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು.

20 And again he said, Whereunto shall I liken the kingdom of God?ಆತನು ತಿರಿಗಿ--ದೇವರ ರಾಜ್ಯವನ್ನು ಯಾವದಕ್ಕೆ ಹೋಲಿಸಲಿ?

21 It is like unto leaven, which a woman took and hid in three measures of meal, till it was all leavened.ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲವೂ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಅದು ಹೋಲಿಕೆ ಯಾಗಿದೆ ಅಂದನು.

22 And he went on his way through cities and villages, teaching, and journeying on unto Jerusalem.ಆತನು ಪಟ್ಟಣಗಳನ್ನೂ ಹಳ್ಳಿಗಳನ್ನೂ ಹಾದು, ಬೋಧಿಸುತ್ತಾ ಯೆರೂಸಲೇಮಿನ ಕಡೆಗೆ ಪ್ರಯಾಣ ಮಾಡಿದನು.

23 And one said unto him, Lord, are they few that are saved? And he said unto them,ಆಗ ಒಬ್ಬನು ಆತನಿಗೆ--ಕರ್ತನೇ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ ಎಂದು ಕೇಳಲು ಆತನು ಅವರಿಗೆ--

24 Strive to enter in by the narrow door: for many, I say unto you, shall seek to enter in, and shall not be able.ಇಕ್ಕಟ್ಟಾದ ಬಾಗಲಿನಿಂದ ಒಳಗೆ ಪ್ರವೇಶಿಸುವದಕ್ಕೆ ಪ್ರಯಾಸಪಡಿರಿ; ಯಾಕಂ ದರೆ ಅನೇಕರು ಒಳಗೆ ಪ್ರವೇಶಿಸುವದಕ್ಕೆ ಪ್ರಯತ್ನಿಸಿ ದರೂ ಆಗುವದಿಲ್ಲ ಎಂದು ನಾನು ನಿಮಗೆ ಹೇಳು ತ್ತೇನೆ.

25 When once the master of the house is risen up, and hath shut to the door, and ye begin to stand without, and to knock at the door, saying, Lord, open to us; and he shall answer and say to you, I know you not whence ye are;ಮನೇಯಜಮಾನನು ಒಂದು ಸಾರಿ ಎದ್ದು ಬಾಗಲನ್ನು ಮುಚ್ಚಿಕೊಂಡರೆ ನೀವು ಹೊರಗೆ ನಿಂತು ಕೊಂಡು ಬಾಗಲನ್ನು ತಟ್ಟುತ್ತಾ--ಕರ್ತನೇ, ಕರ್ತನೇ, ನಮಗಾಗಿ ತೆರೆ ಎಂದು ಹೇಳುವದಕ್ಕೆ ಆರಂಭಿಸಿದಾಗ ಆತನು ನಿಮಗೆ ಪ್ರತ್ಯುತ್ತರವಾಗಿ--ನೀವು ಎಲ್ಲಿಯ ವರೋ ನಾನರಿಯೆ ಎಂದು ಹೇಳುವನು.

26 then shall ye begin to say, We did eat and drink in thy presence, and thou didst teach in our streets;ಆಗ ನೀವು--ನಿನ್ನ ಸನ್ನಿಧಿಯಲ್ಲಿ ನಾವು ತಿಂದು ಕುಡಿದೆವು; ಮತ್ತು ನೀನು ನಮ್ಮ ಬೀದಿಗಳಲ್ಲಿ ಬೋಧಿಸಿದಿ ಎಂದು ಹೇಳಲಾರಂಭಿಸುವಿರಿ.

27 and he shall say, I tell you, I know not whence ye are; depart from me, all ye workers of iniquity.ಆದರೆ ಆತನು--ನೀವು ಎಲ್ಲಿ ಯವರೋ ನಾನರಿಯೆ; ಅಕ್ರಮ ಮಾಡುವವರಾದ ನೀವೆಲ್ಲರೂ ನನ್ನಿಂದ ಹೊರಟುಹೋಗಿರಿ ಎಂದು ಹೇಳುವನೆಂದು ನಾನು ನಿಮಗೆ ಹೇಳುತ್ತೇನೆ.

28 There shall be the weeping and the gnashing of teeth, when ye shall see Abraham, and Isaac, and Jacob, and all the prophets, in the kingdom of God, and yourselves cast forth without.ಆದರೆ ನೀವು ಅಬ್ರಹಾಮ ಇಸಾಕ ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರರಾಜ್ಯದಲ್ಲಿ ಇರುವದನ್ನೂ ನೀವು ಮಾತ್ರ ಹೊರಗೆ ದೊಬ್ಬಲ್ಪಟ್ಟಿರುವದನ್ನೂ ನೋಡು ವಾಗ ಅಲ್ಲಿ ನಿಮಗೆ ಗೋಳಾಟವೂ ಹಲ್ಲುಕಡಿ ಯೋಣವೂ ಇರುವವು.

29 And they shall come from the east and west, and from the north and south, and shall sit down in the kingdom of God.ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದ ಅವರು ಬಂದು ದೇವರ ರಾಜ್ಯದಲ್ಲಿ ಕೂತುಕೊಳ್ಳುವರು.

30 And behold, there are last who shall be first, and there are first who shall be last.ಆಗ ಇಗೋ, ಕೊನೆಯವರು ಮೊದಲನೆಯವರಾಗುವರು; ಮೊದ ಲನೆಯವರು ಕೊನೆಯವರಾಗುವರು ಎಂದು ಹೇಳಿದನು.

31 In that very hour there came certain Pharisees, saying to him, Get thee out, and go hence: for Herod would fain kill thee.ಅದೇ ದಿನದಲ್ಲಿ ಫರಿಸಾಯರಲ್ಲಿ ಕೆಲವರು ಆತನ ಬಳಿಗೆ ಬಂದು--ನೀನು ಇಲ್ಲಿಂದ ಹೊರಟುಹೋಗು; ಯಾಕಂದರೆ ಹೆರೋದನು ನಿನ್ನನ್ನು ಕೊಲ್ಲುವನು ಎಂದು ಆತನಿಗೆ ಹೇಳಿದರು.

32 And he said unto them, Go and say to that fox, Behold, I cast out demons and perform cures to-day and to-morrow, and the third `day' I am perfected.​ಅದಕ್ಕೆ ಆತನು ಅವರಿಗೆ--ಇಗೋ, ನಾನು ಈ ದಿವಸ ಮತ್ತು ನಾಳೆ ದೆವ್ವಗಳನ್ನು ಬಿಡಿಸಿ ಸ್ವಸ್ಥಮಾಡುತ್ತೇನೆ; ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ ಎಂದು ನೀವು ಹೋಗಿ ಆ ನರಿಗೆ ಹೇಳಿರಿ.

33 Nevertheless I must go on my way to-day and to-morrow and the `day' following: for it cannot be that a prophet perish out of Jerusalem.ಆದಾಗ್ಯೂ ಈ ದಿವಸ ನಾಳೆ ಮತ್ತು ನಾಡದ್ದು ನಾನು ಸಂಚರಿಸಲೇಬೇಕು; ಯಾಕಂದರೆ ಒಬ್ಬ ಪ್ರವಾದಿಯು ಯೆರೂಸಲೇಮಿನ ಹೊರಗೆ ಕೊಲ್ಲಲ್ಪಡಲಾರನು.

34 O Jerusalem, Jerusalem, that killeth the prophets, and stoneth them that are sent unto her! how often would I have gathered thy children together, even as a hen `gathereth' her own brood under her wings, and ye would not!ಓ ಯೆರೂಸಲೇಮೇ,ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಲ್ಪಟ್ಟವರಿಗೆ ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಎಷ್ಟೋ ಸಾರಿ ಕೂಡಿಸಬೇಕೆಂದಿದ್ದೆನು; ಆದರೆ ನಿನಗೆ ಅದು ಮನಸ್ಸಿ

35 Behold, your house is left unto you `desolate': and I say unto you, Ye shall not see me, until ye shall say, Blessed is he that cometh in the name of the Lord.ಇಗೋ, ನಿಮ್ಮ ಮನೆಯು ಹಾಳಾಗಿ ನಿಮಗೆ ಬಿಡಲ್ಪಟ್ಟಿದೆ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.

Kannada Bible