Luke 13 - WEB (Kannada)
1 Now there were some present at the same time who told him about the Galileans, whose blood Pilate had mixed with their sacrifices.ಇದಲ್ಲದೆ ಪಿಲಾತನು ಗಲಿಲಾಯದವರ ರಕ್ತವನ್ನು ಅವರ ಬಲಿಗಳೊಂದಿಗೆ ಬೆರಸಿದ ವಿಷಯವನ್ನು ಆತನಿಗೆ ತಿಳಿಸಿದ ಕೆಲವರು ಆ ಸಮಯ ದಲ್ಲಿ ಅಲ್ಲಿದ್ದರು.
2 Jesus answered them, "Do you think that these Galileans were worse sinners than all the other Galileans, because they suffered such things?ಆಗ ಯೇಸು ಅವರಿಗೆ--ಈ ಗಲಿ ಲಾಯದವರು ಇಂಥವುಗಳನ್ನು ಅನುಭವಿಸಿದ ಕಾರಣ ಅವರು ಎಲ್ಲಾ ಗಲಿಲಾಯದವರಿಗಿಂತ ಪಾಪಿಷ್ಠರೆಂದು ನೀವು ಭಾವಿಸುತ್ತೀರೋ?
3 I tell you, no, but, unless you repent, you will all perish in the same way.ಆದರೆ--ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನಸಾಂತರ ಪಡದೆಹೋದರೆ ನೀವೆಲ್ಲರೂ ಅವರಂತೆಯೇ ನಾಶವಾ ಗುವಿರಿ.
4 Or those eighteen, on whom the tower in Siloam fell, and killed them; do you think that they were worse offenders than all the men who dwell in Jerusalem?ಇಲ್ಲವೆ ಸಿಲೊವಾಮಿನಲ್ಲಿ ಗೋಪುರವು ಬಿದ್ದು ಸತ್ತ ಆ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಪಾಪಿಷ್ಠ ರೆಂದು ಯೋಚಿಸುತ್ತೀರೋ?
5 I tell you, no, but, unless you repent, you will all perish in the same way."ಆದರೆ--ಹಾಗಲ್ಲ ವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನ ಸಾಂತರಪಡದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ ಅಂದನು.
6 He spoke this parable. "A certain man had a fig tree planted in his vineyard, and he came seeking fruit on it, and found none.ಆತನು ಈ ಸಾಮ್ಯವನ್ನು ಕೂಡ ಹೇಳಿದನು: ಒಬ್ಬಾನೊಬ್ಬ ಮನುಷ್ಯನಿಗೆ ತನ್ನ ದ್ರಾಕ್ಷೇತೋಟದಲ್ಲಿ ನೆಡಲ್ಪಟ್ಟಿದ್ದ ಒಂದು ಅಂಜೂರದ ಮರವಿತ್ತು; ಅವನು ಬಂದು ಅದರಲ್ಲಿ ಫಲವನ್ನು ಹುಡುಕಿದಾಗ ಒಂದೂ ಸಿಕ್ಕಲಿಲ್ಲ.
7 He said to the vine dresser, 'Behold, these three years I have come looking for fruit on this fig tree, and found none. Cut it down. Why does it waste the soil?'ಆಗ ಅವನು ತನ್ನ ದ್ರಾಕ್ಷೇತೋಟ ಮಾಡು ವವನಿಗೆ--ಇಗೋ, ಈ ಮೂರು ವರುಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕಿದರೂ ಒಂದನ್ನೂ ಕಂಡುಕೊಳ್ಳಲಿಲ್ಲ; ಇದನ್ನು ಕಡಿದುಹಾಕು; ಭೂಮಿಗೆ ಇದು ಯಾಕೆ ಭಾರವಾಗಿರಬೇಕು ಎಂದು ಹೇಳಿದನು.
8 He answered, 'Lord, leave it alone this year also, until I dig around it, and fertilize it.ಆದರೆ ಅವನು ಪ್ರತ್ಯುತ್ತರವಾಗಿ ಅವ ನಿಗೆ--ಒಡೆಯನೇ, ನಾನು ಅದರ ಸುತ್ತಲೂ ಅಗೆದು ಗೊಬ್ಬರ ಹಾಕುವ ವರೆಗೆ ಈ ವರುಷವೂ ಇದನ್ನು ಬಿಡು;
9 If it bears fruit, fine; but if not, after that, you can cut it down.'"ಇದು ಫಲ ಫಲಿಸಿದರೆ ಸರಿ; ಇಲ್ಲವಾದರೆ ನೀನು ಇದನ್ನು ಕಡಿದುಹಾಕಬಹುದು ಅಂದನು.
10 He was teaching in one of the synagogues on the Sabbath day.ಆತನು ಸಬ್ಬತ್ತಿನಲ್ಲಿ ಸಭಾಮಂದಿರದಲ್ಲಿ ಬೋಧಿ ಸುತ್ತಾ ಇದ್ದನು.
11 Behold, there was a woman who had a spirit of infirmity eighteen years, and she was bent over, and could in no way straighten herself up.ಆಗ ಇಗೋ, ಹದಿನೆಂಟು ವರುಷ ಗಳಿಂದಲೂ ದುರಾತ್ಮನಿಂದ ರೋಗ ಪೀಡಿತಳಾಗಿ ನಡುಬೊಗ್ಗಿ ಹೋಗಿದ್ದ ಒಬ್ಬ ಸ್ತ್ರೀಯು ಅಲ್ಲಿ ಇದ್ದಳು; ಅವಳು ಯಾವ ರೀತಿಯಲ್ಲಿಯೂ ತನ್ನಷ್ಟಕ್ಕೆ ತಾನೇ ನೆಟ್ಟಗೆ ನಿಲ್ಲಲಾರದೆ ಇದ್ದಳು.
12 When Jesus saw her, he called her, and said to her, "Woman, you are freed from your infirmity."ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ--ಸ್ತ್ರೀಯೇ, ನೀನು ಈ ನಿನ್ನ ರೋಗದಿಂದ ಬಿಡುಗಡೆಯಾಗಿದ್ದೀ ಎಂದು ಹೇಳಿ
13 He laid his hands on her, and immediately she stood up straight, and glorified God.ಆತನು ಆಕೆಯ ಮೇಲೆ ತನ್ನ ಕೈಗಳನ್ನು ಇಟ್ಟನು; ಕೂಡಲೆ ಆಕೆಯು ನೆಟ್ಟಗಾಗಿ ದೇವರನ್ನು ಮಹಿಮೆಪಡಿಸಿದಳು.
14 The ruler of the synagogue, being indignant because Jesus had healed on the Sabbath, said to the multitude, "There are six days in which men ought to work. Therefore come on those days and be healed, and not on the Sabbath day!"ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಪಡಿಸಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ--ಆರು ದಿವಸಗಳಲ್ಲಿ ಮನು ಷ್ಯರು ಕೆಲಸ ಮಾಡತಕ್ಕದ್ದು. ಆದದರಿಂದ ಅವುಗಳಲ್ಲಿ ಅವರು ಬಂದು ಸ್ವಸ್ಥತೆ ಹೊಂದಲಿ; ಸಬ್ಬತ್ ದಿನದಲ್ಲಿ ಬೇಡ ಅಂದನು.
15 Therefore the Lord answered him, "You hypocrites! Doesn't each one of you free his ox or his donkey from the stall on the Sabbath, and lead him away to water?ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ ಅವನಿಗೆ--ಕಪಟಿಯೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ತಿನಲ್ಲಿ ತನ್ನ ಎತ್ತನ್ನಾಗಲಿ ಇಲ್ಲವೆ ಕತ್ತೆಯನ್ನಾಗಲಿ ಕೊಟ್ಟಿಗೆಯಿಂದ ಬಿಡಿಸಿ ನೀರು ಕುಡಿಸುವದಕ್ಕಾಗಿ ಹೋಗುವನಲ್ಲವೇ?
16 Ought not this woman, being a daughter of Abraham, whom Satan had bound eighteen long years, be freed from this bondage on the Sabbath day?"ಹಾಗಾದರೆ ಇಗೋ, ಅಬ್ರ ಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರುಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನ ದಿಂದ ಸಬ್ಬತ್ ದಿನದಲ್ಲಿ ಬಿಡಿಸಬಾರದೋ ಅಂದನು.
17 As he said these things, all his adversaries were disappointed, and all the multitude rejoiced for all the glorious things that were done by him.ಆತನು ಇವುಗಳನ್ನು ಹೇಳುತ್ತಿರುವಾಗ ಆತನ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು; ಆದರೆ ಜನರೆಲ್ಲಾ ಆತನಿಂದ ನಡೆದ ಎಲ್ಲಾ ಮಹತ್ತಾದ ಕಾರ್ಯಗಳಿಗಾಗಿ ಸಂತೋಷಪಟ್ಟರು.
18 He said, "What is the Kingdom of God like? To what shall I compare it?ಇದಲ್ಲದೆ ಆತನು--ದೇವರ ರಾಜ್ಯವು ಯಾವ ದಕ್ಕೆ ಹೋಲಿಕೆಯಾಗಿದೆ? ನಾನು ಯಾವದಕ್ಕೆ ಅದನ್ನು ಹೋಲಿಸಲಿ?
19 It is like a grain of mustard seed, which a man took, and put in his own garden. It grew, and became a large tree, and the birds of the sky lodged in its branches."ಅದು ಒಬ್ಬ ಮನುಷ್ಯನು ಸಾಸಿವೆಕಾಳನ್ನು ತೆಗೆದುಕೊಂಡು ಹೋಗಿ ತನ್ನ ತೋಟ ದಲ್ಲಿ ಹಾಕಿದ್ದಕ್ಕೆ ಹೋಲಿಕೆಯಾಗಿದೆ; ಅದು ಬೆಳೆದು ಒಂದು ದೊಡ್ಡ ಮರವಾಯಿತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು.
20 Again he said, "To what shall I compare the Kingdom of God?ಆತನು ತಿರಿಗಿ--ದೇವರ ರಾಜ್ಯವನ್ನು ಯಾವದಕ್ಕೆ ಹೋಲಿಸಲಿ?
21 It is like yeast, which a woman took and hid in three measures{literally, three sata. 3 sata is about 39 litres or a bit more than a bushel} of flour, until it was all leavened."ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲವೂ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಅದು ಹೋಲಿಕೆ ಯಾಗಿದೆ ಅಂದನು.
22 He went on his way through cities and villages, teaching, and traveling on to Jerusalem.ಆತನು ಪಟ್ಟಣಗಳನ್ನೂ ಹಳ್ಳಿಗಳನ್ನೂ ಹಾದು, ಬೋಧಿಸುತ್ತಾ ಯೆರೂಸಲೇಮಿನ ಕಡೆಗೆ ಪ್ರಯಾಣ ಮಾಡಿದನು.
23 One said to him, "Lord, are they few who are saved?" He said to them,ಆಗ ಒಬ್ಬನು ಆತನಿಗೆ--ಕರ್ತನೇ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ ಎಂದು ಕೇಳಲು ಆತನು ಅವರಿಗೆ--
24 "Strive to enter in by the narrow door, for many, I tell you, will seek to enter in, and will not be able.ಇಕ್ಕಟ್ಟಾದ ಬಾಗಲಿನಿಂದ ಒಳಗೆ ಪ್ರವೇಶಿಸುವದಕ್ಕೆ ಪ್ರಯಾಸಪಡಿರಿ; ಯಾಕಂ ದರೆ ಅನೇಕರು ಒಳಗೆ ಪ್ರವೇಶಿಸುವದಕ್ಕೆ ಪ್ರಯತ್ನಿಸಿ ದರೂ ಆಗುವದಿಲ್ಲ ಎಂದು ನಾನು ನಿಮಗೆ ಹೇಳು ತ್ತೇನೆ.
25 When once the master of the house has risen up, and has shut the door, and you begin to stand outside, and to knock at the door, saying, 'Lord, Lord, open to us!' then he will answer and tell you, 'I don't know you or where you come from.'ಮನೇಯಜಮಾನನು ಒಂದು ಸಾರಿ ಎದ್ದು ಬಾಗಲನ್ನು ಮುಚ್ಚಿಕೊಂಡರೆ ನೀವು ಹೊರಗೆ ನಿಂತು ಕೊಂಡು ಬಾಗಲನ್ನು ತಟ್ಟುತ್ತಾ--ಕರ್ತನೇ, ಕರ್ತನೇ, ನಮಗಾಗಿ ತೆರೆ ಎಂದು ಹೇಳುವದಕ್ಕೆ ಆರಂಭಿಸಿದಾಗ ಆತನು ನಿಮಗೆ ಪ್ರತ್ಯುತ್ತರವಾಗಿ--ನೀವು ಎಲ್ಲಿಯ ವರೋ ನಾನರಿಯೆ ಎಂದು ಹೇಳುವನು.
26 Then you will begin to say, 'We ate and drink in your presence, and you taught in our streets.'ಆಗ ನೀವು--ನಿನ್ನ ಸನ್ನಿಧಿಯಲ್ಲಿ ನಾವು ತಿಂದು ಕುಡಿದೆವು; ಮತ್ತು ನೀನು ನಮ್ಮ ಬೀದಿಗಳಲ್ಲಿ ಬೋಧಿಸಿದಿ ಎಂದು ಹೇಳಲಾರಂಭಿಸುವಿರಿ.
27 He will say, 'I tell you, I don't know where you come from. Depart from me, all you workers of iniquity.'ಆದರೆ ಆತನು--ನೀವು ಎಲ್ಲಿ ಯವರೋ ನಾನರಿಯೆ; ಅಕ್ರಮ ಮಾಡುವವರಾದ ನೀವೆಲ್ಲರೂ ನನ್ನಿಂದ ಹೊರಟುಹೋಗಿರಿ ಎಂದು ಹೇಳುವನೆಂದು ನಾನು ನಿಮಗೆ ಹೇಳುತ್ತೇನೆ.
28 There will be weeping and gnashing of teeth, when you see Abraham, Isaac, Jacob, and all the prophets, in the Kingdom of God, and yourselves being thrown outside.ಆದರೆ ನೀವು ಅಬ್ರಹಾಮ ಇಸಾಕ ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರರಾಜ್ಯದಲ್ಲಿ ಇರುವದನ್ನೂ ನೀವು ಮಾತ್ರ ಹೊರಗೆ ದೊಬ್ಬಲ್ಪಟ್ಟಿರುವದನ್ನೂ ನೋಡು ವಾಗ ಅಲ್ಲಿ ನಿಮಗೆ ಗೋಳಾಟವೂ ಹಲ್ಲುಕಡಿ ಯೋಣವೂ ಇರುವವು.
29 They will come from the east, west, north, and south, and will sit down in the Kingdom of God.ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದ ಅವರು ಬಂದು ದೇವರ ರಾಜ್ಯದಲ್ಲಿ ಕೂತುಕೊಳ್ಳುವರು.
30 Behold, there are some who are last who will be first, and there are some who are first who will be last."ಆಗ ಇಗೋ, ಕೊನೆಯವರು ಮೊದಲನೆಯವರಾಗುವರು; ಮೊದ ಲನೆಯವರು ಕೊನೆಯವರಾಗುವರು ಎಂದು ಹೇಳಿದನು.
31 On that same day, some Pharisees came, saying to him, "Get out of here, and go away, for Herod wants to kill you."ಅದೇ ದಿನದಲ್ಲಿ ಫರಿಸಾಯರಲ್ಲಿ ಕೆಲವರು ಆತನ ಬಳಿಗೆ ಬಂದು--ನೀನು ಇಲ್ಲಿಂದ ಹೊರಟುಹೋಗು; ಯಾಕಂದರೆ ಹೆರೋದನು ನಿನ್ನನ್ನು ಕೊಲ್ಲುವನು ಎಂದು ಆತನಿಗೆ ಹೇಳಿದರು.
32 He said to them, "Go and tell that fox, 'Behold, I cast out demons and perform cures today and tomorrow, and the third day I complete my mission.ಅದಕ್ಕೆ ಆತನು ಅವರಿಗೆ--ಇಗೋ, ನಾನು ಈ ದಿವಸ ಮತ್ತು ನಾಳೆ ದೆವ್ವಗಳನ್ನು ಬಿಡಿಸಿ ಸ್ವಸ್ಥಮಾಡುತ್ತೇನೆ; ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ ಎಂದು ನೀವು ಹೋಗಿ ಆ ನರಿಗೆ ಹೇಳಿರಿ.
33 Nevertheless I must go on my way today and tomorrow and the next day, for it can't be that a prophet perish outside of Jerusalem.'ಆದಾಗ್ಯೂ ಈ ದಿವಸ ನಾಳೆ ಮತ್ತು ನಾಡದ್ದು ನಾನು ಸಂಚರಿಸಲೇಬೇಕು; ಯಾಕಂದರೆ ಒಬ್ಬ ಪ್ರವಾದಿಯು ಯೆರೂಸಲೇಮಿನ ಹೊರಗೆ ಕೊಲ್ಲಲ್ಪಡಲಾರನು.
34 "Jerusalem, Jerusalem, that kills the prophets, and stones those who are sent to her! How often I wanted to gather your children together, like a hen gathers her own brood under her wings, and you refused!ಓ ಯೆರೂಸಲೇಮೇ,ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಲ್ಪಟ್ಟವರಿಗೆ ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಎಷ್ಟೋ ಸಾರಿ ಕೂಡಿಸಬೇಕೆಂದಿದ್ದೆನು; ಆದರೆ ನಿನಗೆ ಅದು ಮನಸ್ಸಿ
35 Behold, your house is left to you desolate. I tell you, you will not see me, until you say, 'Blessed is he who comes in the name of the Lord!'"ಇಗೋ, ನಿಮ್ಮ ಮನೆಯು ಹಾಳಾಗಿ ನಿಮಗೆ ಬಿಡಲ್ಪಟ್ಟಿದೆ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
Kannada Bible