Bible

Luke 13 - YLT (Kannada)

1 And there were present certain at that time, telling him about the Galileans, whose blood Pilate did mingle with their sacrifices;ಇದಲ್ಲದೆ ಪಿಲಾತನು ಗಲಿಲಾಯದವರ ರಕ್ತವನ್ನು ಅವರ ಬಲಿಗಳೊಂದಿಗೆ ಬೆರಸಿದ ವಿಷಯವನ್ನು ಆತನಿಗೆ ತಿಳಿಸಿದ ಕೆಲವರು ಆ ಸಮಯ ದಲ್ಲಿ ಅಲ್ಲಿದ್ದರು.

2 and Jesus answering said to them, `Think ye that these Galileans became sinners beyond all the Galileans, because they have suffered such things?ಆಗ ಯೇಸು ಅವರಿಗೆ--ಈ ಗಲಿ ಲಾಯದವರು ಇಂಥವುಗಳನ್ನು ಅನುಭವಿಸಿದ ಕಾರಣ ಅವರು ಎಲ್ಲಾ ಗಲಿಲಾಯದವರಿಗಿಂತ ಪಾಪಿಷ್ಠರೆಂದು ನೀವು ಭಾವಿಸುತ್ತೀರೋ?

3 No -- I say to you, but, if ye may not reform, all ye even so shall perish.ಆದರೆ--ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನಸಾಂತರ ಪಡದೆಹೋದರೆ ನೀವೆಲ್ಲರೂ ಅವರಂತೆಯೇ ನಾಶವಾ ಗುವಿರಿ.

4 `Or those eighteen, on whom the tower in Siloam fell, and killed them; think ye that these became debtors beyond all men who are dwelling in Jerusalem?ಇಲ್ಲವೆ ಸಿಲೊವಾಮಿನಲ್ಲಿ ಗೋಪುರವು ಬಿದ್ದು ಸತ್ತ ಆ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಪಾಪಿಷ್ಠ ರೆಂದು ಯೋಚಿಸುತ್ತೀರೋ?

5 No -- I say to you, but, if ye may not reform, all ye in like manner shall perish.'ಆದರೆ--ಹಾಗಲ್ಲ ವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನ ಸಾಂತರಪಡದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ ಅಂದನು.

6 And he spake this simile: `A certain one had a fig-tree planted in his vineyard, and he came seeking fruit in it, and he did not find;ಆತನು ಈ ಸಾಮ್ಯವನ್ನು ಕೂಡ ಹೇಳಿದನು: ಒಬ್ಬಾನೊಬ್ಬ ಮನುಷ್ಯನಿಗೆ ತನ್ನ ದ್ರಾಕ್ಷೇತೋಟದಲ್ಲಿ ನೆಡಲ್ಪಟ್ಟಿದ್ದ ಒಂದು ಅಂಜೂರದ ಮರವಿತ್ತು; ಅವನು ಬಂದು ಅದರಲ್ಲಿ ಫಲವನ್ನು ಹುಡುಕಿದಾಗ ಒಂದೂ ಸಿಕ್ಕಲಿಲ್ಲ.

7 and he said unto the vine-dresser, Lo, three years I come seeking fruit in this fig-tree, and do not find, cut it off, why also the ground doth it render useless?ಆಗ ಅವನು ತನ್ನ ದ್ರಾಕ್ಷೇತೋಟ ಮಾಡು ವವನಿಗೆ--ಇಗೋ, ಈ ಮೂರು ವರುಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕಿದರೂ ಒಂದನ್ನೂ ಕಂಡುಕೊಳ್ಳಲಿಲ್ಲ; ಇದನ್ನು ಕಡಿದುಹಾಕು; ಭೂಮಿಗೆ ಇದು ಯಾಕೆ ಭಾರವಾಗಿರಬೇಕು ಎಂದು ಹೇಳಿದನು.

8 `And he answering saith to him, Sir, suffer it also this year, till that I may dig about it, and cast in dung;ಆದರೆ ಅವನು ಪ್ರತ್ಯುತ್ತರವಾಗಿ ಅವ ನಿಗೆ--ಒಡೆಯನೇ, ನಾನು ಅದರ ಸುತ್ತಲೂ ಅಗೆದು ಗೊಬ್ಬರ ಹಾಕುವ ವರೆಗೆ ಈ ವರುಷವೂ ಇದನ್ನು ಬಿಡು;

9 and if indeed it may bear fruit --; and if not so, thereafter thou shalt cut it off.'ಇದು ಫಲ ಫಲಿಸಿದರೆ ಸರಿ; ಇಲ್ಲವಾದರೆ ನೀನು ಇದನ್ನು ಕಡಿದುಹಾಕಬಹುದು ಅಂದನು.

10 And he was teaching in one of the synagogues on the sabbath,ಆತನು ಸಬ್ಬತ್ತಿನಲ್ಲಿ ಸಭಾಮಂದಿರದಲ್ಲಿ ಬೋಧಿ ಸುತ್ತಾ ಇದ್ದನು.

11 and lo, there was a woman having a spirit of infirmity eighteen years, and she was bowed together, and not able to bend back at all,ಆಗ ಇಗೋ, ಹದಿನೆಂಟು ವರುಷ ಗಳಿಂದಲೂ ದುರಾತ್ಮನಿಂದ ರೋಗ ಪೀಡಿತಳಾಗಿ ನಡುಬೊಗ್ಗಿ ಹೋಗಿದ್ದ ಒಬ್ಬ ಸ್ತ್ರೀಯು ಅಲ್ಲಿ ಇದ್ದಳು; ಅವಳು ಯಾವ ರೀತಿಯಲ್ಲಿಯೂ ತನ್ನಷ್ಟಕ್ಕೆ ತಾನೇ ನೆಟ್ಟಗೆ ನಿಲ್ಲಲಾರದೆ ಇದ್ದಳು.

12 and Jesus having seen her, did call `her' near, and said to her, `Woman, thou hast been loosed from thy infirmity;'ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ--ಸ್ತ್ರೀಯೇ, ನೀನು ಈ ನಿನ್ನ ರೋಗದಿಂದ ಬಿಡುಗಡೆಯಾಗಿದ್ದೀ ಎಂದು ಹೇಳಿ

13 and he laid on her `his' hands, and presently she was set upright, and was glorifying God.ಆತನು ಆಕೆಯ ಮೇಲೆ ತನ್ನ ಕೈಗಳನ್ನು ಇಟ್ಟನು; ಕೂಡಲೆ ಆಕೆಯು ನೆಟ್ಟಗಾಗಿ ದೇವರನ್ನು ಮಹಿಮೆಪಡಿಸಿದಳು.

14 And the chief of the synagogue answering -- much displeased that on the sabbath Jesus healed -- said to the multitude, `Six days there are in which it behoveth `us' to be working; in these, then, coming, be healed, and not on the sabbath-day.'ಯೇಸು ಸಬ್ಬತ್‌ ದಿನದಲ್ಲಿ ಸ್ವಸ್ಥಪಡಿಸಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ--ಆರು ದಿವಸಗಳಲ್ಲಿ ಮನು ಷ್ಯರು ಕೆಲಸ ಮಾಡತಕ್ಕದ್ದು. ಆದದರಿಂದ ಅವುಗಳಲ್ಲಿ ಅವರು ಬಂದು ಸ್ವಸ್ಥತೆ ಹೊಂದಲಿ; ಸಬ್ಬತ್‌ ದಿನದಲ್ಲಿ ಬೇಡ ಅಂದನು.

15 Then the Lord answered him and said, `Hypocrite, doth not each of you on the sabbath loose his ox or ass from the stall, and having led away, doth water `it'?ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ ಅವನಿಗೆ--ಕಪಟಿಯೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ತಿನಲ್ಲಿ ತನ್ನ ಎತ್ತನ್ನಾಗಲಿ ಇಲ್ಲವೆ ಕತ್ತೆಯನ್ನಾಗಲಿ ಕೊಟ್ಟಿಗೆಯಿಂದ ಬಿಡಿಸಿ ನೀರು ಕುಡಿಸುವದಕ್ಕಾಗಿ ಹೋಗುವನಲ್ಲವೇ?

16 and this one, being a daughter of Abraham, whom the Adversary bound, lo, eighteen years, did it not behove to be loosed from this bond on the sabbath-day?'ಹಾಗಾದರೆ ಇಗೋ, ಅಬ್ರ ಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರುಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನ ದಿಂದ ಸಬ್ಬತ್‌ ದಿನದಲ್ಲಿ ಬಿಡಿಸಬಾರದೋ ಅಂದನು.

17 And he saying these things, all who were opposed to him were being ashamed, and all the multitude were rejoicing over all the glorious things that are being done by him.ಆತನು ಇವುಗಳನ್ನು ಹೇಳುತ್ತಿರುವಾಗ ಆತನ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು; ಆದರೆ ಜನರೆಲ್ಲಾ ಆತನಿಂದ ನಡೆದ ಎಲ್ಲಾ ಮಹತ್ತಾದ ಕಾರ್ಯಗಳಿಗಾಗಿ ಸಂತೋಷಪಟ್ಟರು.

18 And he said, `To what is the reign of God like? and to what shall I liken it?ಇದಲ್ಲದೆ ಆತನು--ದೇವರ ರಾಜ್ಯವು ಯಾವ ದಕ್ಕೆ ಹೋಲಿಕೆಯಾಗಿದೆ? ನಾನು ಯಾವದಕ್ಕೆ ಅದನ್ನು ಹೋಲಿಸಲಿ?

19 It is like to a grain of mustard, which a man having taken, did cast into his garden, and it increased, and came to a great tree, and the fowls of the heavens did rest in its branches.'ಅದು ಒಬ್ಬ ಮನುಷ್ಯನು ಸಾಸಿವೆಕಾಳನ್ನು ತೆಗೆದುಕೊಂಡು ಹೋಗಿ ತನ್ನ ತೋಟ ದಲ್ಲಿ ಹಾಕಿದ್ದಕ್ಕೆ ಹೋಲಿಕೆಯಾಗಿದೆ; ಅದು ಬೆಳೆದು ಒಂದು ದೊಡ್ಡ ಮರವಾಯಿತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು.

20 And again he said, `To what shall I liken the reign of God?ಆತನು ತಿರಿಗಿ--ದೇವರ ರಾಜ್ಯವನ್ನು ಯಾವದಕ್ಕೆ ಹೋಲಿಸಲಿ?

21 It is like leaven, which a woman, having taken, did hide in three measures of meal, till that all was leavened.'ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲವೂ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಅದು ಹೋಲಿಕೆ ಯಾಗಿದೆ ಅಂದನು.

22 And he was going through cities and villages, teaching, and making progress toward Jerusalem;ಆತನು ಪಟ್ಟಣಗಳನ್ನೂ ಹಳ್ಳಿಗಳನ್ನೂ ಹಾದು, ಬೋಧಿಸುತ್ತಾ ಯೆರೂಸಲೇಮಿನ ಕಡೆಗೆ ಪ್ರಯಾಣ ಮಾಡಿದನು.

23 and a certain one said to him, `Sir, are those saved few?' and he said unto them,ಆಗ ಒಬ್ಬನು ಆತನಿಗೆ--ಕರ್ತನೇ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ ಎಂದು ಕೇಳಲು ಆತನು ಅವರಿಗೆ--

24 `Be striving to go in through the straight gate, because many, I say to you, will seek to go in, and shall not be able;ಇಕ್ಕಟ್ಟಾದ ಬಾಗಲಿನಿಂದ ಒಳಗೆ ಪ್ರವೇಶಿಸುವದಕ್ಕೆ ಪ್ರಯಾಸಪಡಿರಿ; ಯಾಕಂ ದರೆ ಅನೇಕರು ಒಳಗೆ ಪ್ರವೇಶಿಸುವದಕ್ಕೆ ಪ್ರಯತ್ನಿಸಿ ದರೂ ಆಗುವದಿಲ್ಲ ಎಂದು ನಾನು ನಿಮಗೆ ಹೇಳು ತ್ತೇನೆ.

25 from the time the master of the house may have risen up, and may have shut the door, and ye may begin without to stand, and to knock at the door, saying, Lord, lord, open to us, and he answering shall say to you, I have not known you whence ye are,ಮನೇಯಜಮಾನನು ಒಂದು ಸಾರಿ ಎದ್ದು ಬಾಗಲನ್ನು ಮುಚ್ಚಿಕೊಂಡರೆ ನೀವು ಹೊರಗೆ ನಿಂತು ಕೊಂಡು ಬಾಗಲನ್ನು ತಟ್ಟುತ್ತಾ--ಕರ್ತನೇ, ಕರ್ತನೇ, ನಮಗಾಗಿ ತೆರೆ ಎಂದು ಹೇಳುವದಕ್ಕೆ ಆರಂಭಿಸಿದಾಗ ಆತನು ನಿಮಗೆ ಪ್ರತ್ಯುತ್ತರವಾಗಿ--ನೀವು ಎಲ್ಲಿಯ ವರೋ ನಾನರಿಯೆ ಎಂದು ಹೇಳುವನು.

26 then ye may begin to say, We did eat before thee, and did drink, and in our broad places thou didst teach;ಆಗ ನೀವು--ನಿನ್ನ ಸನ್ನಿಧಿಯಲ್ಲಿ ನಾವು ತಿಂದು ಕುಡಿದೆವು; ಮತ್ತು ನೀನು ನಮ್ಮ ಬೀದಿಗಳಲ್ಲಿ ಬೋಧಿಸಿದಿ ಎಂದು ಹೇಳಲಾರಂಭಿಸುವಿರಿ.

27 and he shall say, I say to you, I have not known you whence ye are; depart from me, all ye workers of the unrighteousness.ಆದರೆ ಆತನು--ನೀವು ಎಲ್ಲಿ ಯವರೋ ನಾನರಿಯೆ; ಅಕ್ರಮ ಮಾಡುವವರಾದ ನೀವೆಲ್ಲರೂ ನನ್ನಿಂದ ಹೊರಟುಹೋಗಿರಿ ಎಂದು ಹೇಳುವನೆಂದು ನಾನು ನಿಮಗೆ ಹೇಳುತ್ತೇನೆ.

28 `There shall be there the weeping and the gnashing of the teeth, when ye may see Abraham, and Isaac, and Jacob, and all the prophets, in the reign of God, and yourselves being cast out without;ಆದರೆ ನೀವು ಅಬ್ರಹಾಮ ಇಸಾಕ ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರರಾಜ್ಯದಲ್ಲಿ ಇರುವದನ್ನೂ ನೀವು ಮಾತ್ರ ಹೊರಗೆ ದೊಬ್ಬಲ್ಪಟ್ಟಿರುವದನ್ನೂ ನೋಡು ವಾಗ ಅಲ್ಲಿ ನಿಮಗೆ ಗೋಳಾಟವೂ ಹಲ್ಲುಕಡಿ ಯೋಣವೂ ಇರುವವು.

29 and they shall come from east and west, and from north and south, and shall recline in the reign of God,ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದ ಅವರು ಬಂದು ದೇವರ ರಾಜ್ಯದಲ್ಲಿ ಕೂತುಕೊಳ್ಳುವರು.

30 and lo, there are last who shall be first, and there are first who shall be last.'ಆಗ ಇಗೋ, ಕೊನೆಯವರು ಮೊದಲನೆಯವರಾಗುವರು; ಮೊದ ಲನೆಯವರು ಕೊನೆಯವರಾಗುವರು ಎಂದು ಹೇಳಿದನು.

31 On that day there came near certain Pharisees, saying to him, `Go forth, and be going on hence, for Herod doth wish to kill thee;'ಅದೇ ದಿನದಲ್ಲಿ ಫರಿಸಾಯರಲ್ಲಿ ಕೆಲವರು ಆತನ ಬಳಿಗೆ ಬಂದು--ನೀನು ಇಲ್ಲಿಂದ ಹೊರಟುಹೋಗು; ಯಾಕಂದರೆ ಹೆರೋದನು ನಿನ್ನನ್ನು ಕೊಲ್ಲುವನು ಎಂದು ಆತನಿಗೆ ಹೇಳಿದರು.

32 and he said to them, `Having gone, say to this fox, Lo, I cast forth demons, and perfect cures to-day and to-morrow, and the third `day' I am being perfected;​ಅದಕ್ಕೆ ಆತನು ಅವರಿಗೆ--ಇಗೋ, ನಾನು ಈ ದಿವಸ ಮತ್ತು ನಾಳೆ ದೆವ್ವಗಳನ್ನು ಬಿಡಿಸಿ ಸ್ವಸ್ಥಮಾಡುತ್ತೇನೆ; ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ ಎಂದು ನೀವು ಹೋಗಿ ಆ ನರಿಗೆ ಹೇಳಿರಿ.

33 but it behoveth me to-day, and to-morrow, and the `day' following, to go on, because it is not possible for a prophet to perish out of Jerusalem.ಆದಾಗ್ಯೂ ಈ ದಿವಸ ನಾಳೆ ಮತ್ತು ನಾಡದ್ದು ನಾನು ಸಂಚರಿಸಲೇಬೇಕು; ಯಾಕಂದರೆ ಒಬ್ಬ ಪ್ರವಾದಿಯು ಯೆರೂಸಲೇಮಿನ ಹೊರಗೆ ಕೊಲ್ಲಲ್ಪಡಲಾರನು.

34 `Jerusalem, Jerusalem, that is killing the prophets, and stoning those sent unto her, how often did I will to gather together thy children, as a hen her brood under the wings, and ye did not will.ಓ ಯೆರೂಸಲೇಮೇ,ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಲ್ಪಟ್ಟವರಿಗೆ ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಎಷ್ಟೋ ಸಾರಿ ಕೂಡಿಸಬೇಕೆಂದಿದ್ದೆನು; ಆದರೆ ನಿನಗೆ ಅದು ಮನಸ್ಸಿ

35 `Lo, your house is being left to you desolate, and verily I say to you -- ye may not see me, till it may come, when ye may say, Blessed `is' he who is coming in the name of the Lord.'ಇಗೋ, ನಿಮ್ಮ ಮನೆಯು ಹಾಳಾಗಿ ನಿಮಗೆ ಬಿಡಲ್ಪಟ್ಟಿದೆ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.

Kannada Bible