Luke 16 - DBY (Kannada)
1 And he said also to [his] disciples, There was a certain rich man who had a steward, and *he* was accused to him as wasting his goods.ತರುವಾಯ ಆತನು ತನ್ನ ಶಿಷ್ಯರಿಗೂ
2 And having called him, he said to him, What [is] this that I hear of thee? give the reckoning of thy stewardship, for thou canst be no longer steward.ಆಗ ಅವನು ಆ ಮನೆವಾರ್ತೆ ಯವನನ್ನು ಕರೆದು ಅವನಿಗೆ--ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವದು? ಮನೆವಾರ್ತೆಯ ನಿನ್ನ ಲೆಕ್ಕವನ್ನು ಒಪ್ಪಿಸು; ಯಾಕಂದರೆ ನೀನು ಇನ್ನು ಮೇಲೆ ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಅಂದನು.
3 And the steward said within himself, What shall I do; for my lord is taking the stewardship from me? I am not able to dig; I am ashamed to beg.ಆಗ ಆ ಮನೆವಾರ್ತೆಯವನು ತನ್ನೊಳಗೆ--ನಾನೇನು ಮಾಡಲಿ? ಯಾಕಂದರೆ ನನ್ನ ಯಜಮಾನನು ನನ್ನನ್ನು ಮನೆವಾರ್ತೆಯ ಕೆಲಸದಿಂದ ತೆಗೆದುಬಿಡು ತ್ತಾನೆ; ನಾನು ಅಗೆಯಲಾರೆನು, ಭಿಕ್ಷೆ ಬೇಡುವದಕ್ಕೆ ನಾನು ನಾಚಿಕೊಳ್ಳುತ್ತೇನೆ.
4 I know what I will do, that when I shall have been removed from the stewardship I may be received into their houses.ಮನೆವಾರ್ತೆಯ ಕೆಲಸ ದಿಂದ ನನ್ನನ್ನು ತೆಗೆದ ಮೇಲೆ ಅವರು ನನ್ನನ್ನು ತಮ್ಮ ಮನೆಗಳಲ್ಲಿ ಸೇರಿಸಿಕೊಳ್ಳುವಂತೆ ನಾನು ಮಾಡಬೇಕಾ ದದ್ದನ್ನು ನಿರ್ಧರಿಸಿದ್ದೇನೆ ಎಂದು ಅಂದುಕೊಂಡನು.
5 And having called to [him] each one of the debtors of his own lord, he said to the first, How much owest thou to my lord?ಹೀಗೆ ಅವನು ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನು ಕರೆದು ಮೊದಲನೆಯವನಿಗೆ--ನೀನು ನನ್ನ ಯಜಮಾನನಿಗೆ ಸಲ್ಲಿಸಬೇಕಾದದ್ದು ಎಷ್ಟು ಎಂದು ಕೇಳಲು
6 And he said, A hundred baths of oil. And he said to him, Take thy writing and sit down quickly and write fifty.ಅವನು--ಒಂದು ನೂರು ಅಳತೆ ಎಣ್ಣೆ ಅಂದನು. ಆಗ ಅವನು--ನಿನ್ನ ಬೆಲೆ ಪಟ್ಟಿಯನ್ನು ತೆಗೆದುಕೋ, ಮತ್ತು ಬೇಗ ಕೂತುಕೊಂಡು ಐವತ್ತು ಎಂದು ಬರೆ ಎಂದು ಅವನಿಗೆ ಹೇಳಿದನು.
7 Then he said to another, And thou, how much dost thou owe? And he said, A hundred cors of wheat. And he says to him, Take thy writing and write eighty.ಇದಲ್ಲದೆ ಅವನು ಮತ್ತೊಬ್ಬನಿಗೆ--ನೀನು ಸಲ್ಲಿಸಬೇಕಾದದ್ದು ಎಷ್ಟು? ಅನ್ನಲು ಅವನು--ಒಂದು ನೂರು ಅಳತೆ ಗೋಧಿ ಅಂದನು. ಆಗ ಅವನು--ನಿನ್ನ ಬೆಲೆ ಪಟ್ಟಿ ಯನ್ನು ತೆಗೆದುಕೊಂಡು ಎಂಭತ್ತು ಎಂದು ಬರೆ ಅಂದನು.
8 And the lord praised the unrighteous steward because he had done prudently. For the sons of this world are, for their own generation, more prudent than the sons of light.ಆಗ ಯಜಮಾನನು ಅನ್ಯಾಯಗಾರನಾದ ಆ ಮನೆವಾರ್ತೆಯವನು ಜಾಣತನ ಮಾಡಿದನೆಂದು ಅವನನ್ನು ಹೊಗಳಿದನು; ಯಾಕಂದರೆ ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಜಾಣರಾಗಿದ್ದಾರೆ.
9 And *I* say to you, Make to yourselves friends with the mammon of unrighteousness, that when it fails ye may be received into the eternal tabernacles.ನಾನು ನಿಮಗೆ ಹೇಳುವದೇ ನಂದರೆ--ಅನ್ಯಾಯದ ಧನದಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಅದು ನಿಮ್ಮನ್ನು ಬಿಟ್ಟು ಹೋದಾಗ ಅವರು ನಿಮ್ಮನ್ನು ನಿತ್ಯವಾದ ನಿವಾಸಗಳಲ್ಲಿ ಸೇರಿಸಿ ಕೊಳ್ಳುವರು.
10 He that is faithful in the least is faithful also in much; and he that is unrighteous in the least is unrighteous also in much.ಯಾವನು ಸ್ವಲ್ಪವಾದದ್ದರಲ್ಲಿ ನಂಬಿಗಸ್ತ ನಾಗಿರುವನೋ ಅವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗಿದ್ದಾನೆ; ಯಾವನು ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾಗಿರುವನೋ ಅವನು ಬಹಳವಾದದ್ದ ರಲ್ಲಿಯೂ ಅನ್ಯಾಯಗಾರನಾಗಿದ್ದಾನೆ.
11 If therefore ye have not been faithful in the unrighteous mammon, who shall entrust to you the true?ಆದದರಿಂದ ಅನ್ಯಾಯವಾದ ಧನದಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸುವರು?
12 and if ye have not been faithful in that which is another's, who shall give to you your own?ಇದಲ್ಲದೆ ಮತ್ತೊಬ್ಬನದರಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಮ್ಮ ಸ್ವಂತದ್ದನ್ನು ನಿಮಗೆ ಯಾರು ಕೊಡುವರು?
13 No servant can serve two masters, for either he will hate the one and will love the other, or he will cleave to the one and despise the other. Ye cannot serve God and mammon.ಯಾವ ಸೇವಕನೂ ಇಬ್ಬರು ಯಜಮಾನರನ್ನು ಸೇವಿಸಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಮತ್ತೊಬ್ಬನನ್ನು ಪ್ರೀತಿ ಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು; ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ ಅಂದನು.
14 And the Pharisees also, who were covetous, heard all these things, and mocked him.ಆಗ ಲೋಭಿ ಗಳಾದ ಫರಿಸಾಯರು ಸಹ ಇವೆಲ್ಲವುಗಳನ್ನು ಕೇಳಿ ಆತನಿಗೆ ಪರಿಹಾಸ್ಯ ಮಾಡಿದರು.
15 And he said to them, *Ye* are they who justify themselves before men, but God knows your hearts; for what amongst men is highly thought of is an abomination before God.ಆಗ ಆತನು ಅವರಿಗೆ--ಮನುಷ್ಯರ ಮುಂದೆ ನೀತಿವಂತರಾಗಿ ಮಾಡಿ ಕೊಳ್ಳುವವರು ನೀವೇ; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾನೆ; ಯಾಕಂದರೆ ಮನುಷ್ಯರಲ್ಲಿ ಯಾವದು ಶ್ರೇಷ್ಠವೆಂದು ಎಣಿಸಲ್ಪ ಡುತ್ತದೋ ಅದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.
16 The law and the prophets [were] until John: from that time the glad tidings of the kingdom of God are announced, and every one forces his way into it.ನ್ಯಾಯ ಪ್ರಮಾಣವೂ ಪ್ರವಾದನೆಗಳೂ ಯೋಹಾ ನನವರೆಗೆ ಇದ್ದವು; ದೇವರ ರಾಜ್ಯವು ಅಂದಿನಿಂದ ಸಾರಲ್ಪಡುತ್ತಾ ಇದೆ, ಪ್ರತಿಯೊಬ್ಬನು ಬಲವಂತದಿಂದ ಅದರೊಳಗೆ ನುಗ್ಗುತ್ತಾನೆ.
17 But it is easier that the heaven and the earth should pass away than that one tittle of the law should fail.ನ್ಯಾಯಪ್ರಮಾಣದ ಒಂದು ಗುಡುಸಾದರೂ ಬಿದ್ದು ಹೋಗುವದಕ್ಕಿಂತ ಆಕಾಶವೂ ಭೂಮಿಯೂ ಅಳಿದು ಹೋಗುವದು ಸುಲಭ.
18 Every one who puts away his wife and marries another commits adultery; and every one that marries one put away from a husband commits adultery.ಯಾವನು ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುತ್ತಾನೆ; ಯಾವನು ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರಮಾಡುತ್ತಾನೆ.
19 Now there was a rich man and he was clothed in purple and fine linen, making good cheer in splendour every day.ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು.
20 And [there was] a poor man, by name Lazarus, [who] was laid at his gateway full of sores,ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು.
21 and desiring to be filled with the crumbs which fell from the table of the rich man; but the dogs also coming licked his sores.ಐಶ್ವರ್ಯವಂತನ ಮೇಜಿ ನಿಂದ ಬೀಳುವ (ರೊಟ್ಟಿ) ತುಂಡುಗಳನ್ನು ತಿನ್ನುವದಕ್ಕೆ ಅವನು ಆಶೆಪಡುತ್ತಿದ್ದನು; ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.
22 And it came to pass that the poor man died, and that he was carried away by the angels into the bosom of Abraham. And the rich man also died and was buried.ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು.
23 And in hades lifting up his eyes, being in torments, he sees Abraham afar off, and Lazarus in his bosom.ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು.
24 And he crying out said, Father Abraham, have compassion on me, and send Lazarus that he may dip the tip of his finger in water and cool my tongue, for I am suffering in this flame.ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು.
25 But Abraham said, Child, recollect that *thou* hast fully received thy good things in thy lifetime, and likewise Lazarus evil things. But now he is comforted here, and *thou* art in suffering.ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.
26 And besides all this, between us and you a great chasm is fixed, so that those who desire to pass hence to you cannot, nor do they who [desire to cross] from there pass over unto us.ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟ ಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಗಾಧ ಸ್ಥಾಪಿಸಿಯದೆ ಅಂದನು.
27 And he said, I beseech thee then, father, that thou wouldest send him to the house of my father,ಆಗ ಅವನು--ಅಪ್ಪಾ, ಹಾಗಾದರೆ ನೀನು ಅವನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ.
28 for I have five brothers, so that he may earnestly testify to them, that they also may not come to this place of torment.ನನಗೆ ಐದುಮಂದಿ ಸಹೋದರರಿದ್ದಾರೆ; ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದ ಹಾಗೆ ಇವನು ಅವರಿಗೆ ಸಾಕ್ಷಿ ಕೊಡಲಿ ಅಂದನು.
29 But Abraham says to him, They have Moses and the prophets: let them hear them.ಅದಕ್ಕೆ ಅಬ್ರಹಾಮನು ಅವನಿಗೆ--ಅವರಿಗೆ ಮೋಶೆಯೂ ಪ್ರವಾದಿಗಳೂ ಇದ್ದಾರೆ. ಅವರು ಹೇಳಿದ್ದನ್ನು ಅವರು ಕೇಳಲಿ ಅಂದನು.
30 But he said, Nay, father Abraham, but if one from the dead should go to them, they will repent.ಆಗ ಅವನು--ಹಾಗಲ್ಲ, ತಂದೆ ಯಾದ ಅಬ್ರಹಾಮನೇ, ಸತ್ತವರೊಳಗಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಮಾನಸಾಂತರ ಪಡುವರು ಅಂದನು.
31 And he said to him, If they hear not Moses and the prophets, not even if one rise from among [the] dead will they be persuaded.ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.
Kannada Bible