Luke 18 - DBY (Kannada)
1 And he spoke also a parable to them to the purport that they should always pray and not faint,ಜನರು ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥಿಸತಕ್ಕದ್ದೆಂದು ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು--
2 saying, There was a judge in a city, not fearing God and not respecting man:ಒಂದಾನೊಂದು ಪಟ್ಟಣದಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಭಯಪಡದವನೂ ಮನುಷ್ಯರನ್ನು ಲಕ್ಷ್ಯ ಮಾಡದವನೂ ಆಗಿದ್ದನು.
3 and there was a widow in that city, and she came to him, saying, Avenge me of mine adverse party.ಆ ಪಟ್ಟಣದಲ್ಲಿದ್ದ ಒಬ್ಬ ವಿಧವೆಯು ಅವನ ಬಳಿಗೆ ಬಂದು--ನನ್ನ ಪ್ರತಿ ವಾದಿಗೂ ನನಗೂ ನ್ಯಾಯತೀರಿಸು ಎಂದು ಹೇಳಿ ಕೊಳ್ಳುತ್ತಿದ್ದಳು.
4 And he would not for a time; but afterwards he said within himself, If even I fear not God and respect not man,ಅವನು ಸ್ವಲ್ಪಕಾಲದವರೆಗೆ ಮನಸ್ಸಿಲ್ಲ ದವನಾಗಿದ್ದನು; ತರುವಾಯ ಅವನು ತನ್ನೊಳಗೆ--ನಾನು ದೇವರಿಗೆ ಭಯಪಡುವದಿಲ್ಲ, ಮನುಷ್ಯರನ್ನು ಲಕ್ಷ್ಯಮಾಡುವದೂ ಇಲ್ಲ.
5 at any rate because this widow annoys me I will avenge her, that she may not by perpetually coming completely harass me.ಅದಾಗ್ಯೂ ಈ ವಿಧವೆಯು ನನಗೆ ತೊಂದರೆ ಕೊಟ್ಟು ಪದೇ ಪದೇ ನನ್ನ ಬಳಿಗೆ ಬಂದು ನನ್ನನ್ನು ದಣಿಸದಂತೆ ನಾನು ಅವಳಿಗೆ ನ್ಯಾಯತೀರಿಸುವೆನು ಎಂದು ಅಂದುಕೊಂಡನು.
6 And the Lord said, Hear what the unjust judge says.ಕರ್ತನು--ಈ ಅನ್ಯಾಯಗಾರನಾದ ನ್ಯಾಯಾಧಿ ಪತಿಯು ಅಂದುಕೊಂಡದ್ದನ್ನು ಕೇಳಿರಿ.
7 And shall not God at all avenge his elect, who cry to him day and night, and he bears long as to them?ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ?
8 I say unto you that he will avenge them speedily. But when the Son of man comes, shall he indeed find faith on the earth?ಆತನು ಬೇಗನೆ ಅವರಿಗೆ ನ್ಯಾಯ ತೀರಿಸುವನೆಂದು ನಾನು ನಿಮಗೆ ಹೇಳುತ್ತೇನೆ. ಆದಾಗ್ಯೂ ಮನುಷ್ಯಕುಮಾರನು ಬಂದಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣುವನೋ ಅಂದನು.
9 And he spoke also to some, who trusted in themselves that they were righteous and made nothing of all the rest [of men], this parable:ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸ ವನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ ಈ ಸಾಮ್ಯವನ್ನು ಹೇಳಿದನು.
10 Two men went up into the temple to pray; the one a Pharisee, and the other a tax-gatherer.ಇಬ್ಬರು ಪ್ರಾರ್ಥನೆ ಮಾಡುವದಕ್ಕೆ ದೇವಾಲಯದೊಳಗೆ ಹೋದರು; ಒಬ್ಬನು ಫರಿಸಾಯನು, ಮತ್ತೊಬ್ಬನು ಸುಂಕದವನು.
11 The Pharisee, standing, prayed thus to himself: God, I thank thee that I am not as the rest of men, rapacious, unjust, adulterers, or even as this tax-gatherer.ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.
12 I fast twice in the week, I tithe everything I gain.ನಾನು ವಾರದಲ್ಲಿ ಎರಡು ಸಾರಿ ಉಪವಾಸ ಮಾಡುತ್ತೇನೆ; ನನಗಿರುವದೆ ಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ ಎಂದು ಹೇಳಿದನು.
13 And the tax-gatherer, standing afar off, would not lift up even his eyes to heaven, but smote upon his breast, saying, O God, have compassion on me, the sinner.ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು.
14 I say unto you, This [man] went down to his house justified rather than that [other]. For every one who exalts himself shall be humbled, and he that humbles himself shall be exalted.ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
15 And they brought to him also infants that he might touch them, but the disciples when they saw [it] rebuked them.ತರುವಾಯ ಚಿಕ್ಕಮಕ್ಕಳನ್ನು ಸಹ ಯೇಸು ಮುಟ್ಟುವಂತೆ ಜನರು ಅವುಗಳನ್ನು ಆತನ ಬಳಿಗೆ ತಂದಾಗ ಆತನ ಶಿಷ್ಯರು ಇದನ್ನು ನೋಡಿ ಅವರನು ಗದರಿಸಿದರು.
16 But Jesus calling them to [him] said, Suffer little children to come to me, and do not forbid them, for of such is the kingdom of God.ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು--ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರುವಂತೆ ಬಿಡಿರಿ; ಅವುಗಳಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ದೇವರ ರಾಜ್ಯವು ಅಂಥವರದೇ.
17 Verily I say to you, Whosoever shall not receive the kingdom of God as a little child shall in no wise enter therein.ಯಾವನಾದರೂ ಈ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿರುವನೋ ಅವನು ಅದರೊಳಗೆ ಸೇರುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
18 And a certain ruler asked him saying, Good teacher, having done what, shall I inherit eternal life?ಆಗ ಒಬ್ಬಾನೊಬ್ಬ ಅಧಿಕಾರಿಯು ಆತನಿಗೆ--ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.
19 But Jesus said to him, Why callest thou me good? There is none good but one, God.ಅದಕ್ಕೆ ಯೇಸು ಅವನಿಗೆ--ನೀನು ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಒಳ್ಳೆಯವನು ಯಾವನೂ ಇಲ್ಲ.
20 Thou knowest the commandments: Do not commit adultery, Do not kill, Do not steal, Do not bear false witness, Honour thy father and thy mother.ವ್ಯಭಿಚಾರ ಮಾಡಬೇಡ, ನರಹತ್ಯ ಮಾಡ ಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ನಿನ್ನ ತಂದೆಯನ್ನು ಮತ್ತು ನಿನ್ನ ತಾಯಿಯನ್ನು ಸನ್ಮಾನಿಸಬೇಕು ಎಂಬ ಆಜ್ಞೆಗಳನ್ನು ನೀನು ಬಲ್ಲವನಾಗಿದ್ದೀ ಅಂದನು.
21 And he said, All these things have I kept from my youth.ಅದಕ್ಕವನು--ನನ್ನ ಬಾಲ್ಯದಿಂದ ನಾನು ಇವೆಲ್ಲವು ಗಳನ್ನು ಕೈಕೊಂಡಿದ್ದೇನೆ ಎಂದು ಹೇಳಿದನು.
22 And when Jesus had heard this, he said to him, One thing is lacking to thee yet: Sell all that thou hast and distribute to the poor, and thou shalt have treasure in the heavens, and come, follow me.ಆಗ ಯೇಸು ಇವುಗಳನ್ನು ಕೇಳಿ ಅವನಿಗೆ--ಆದಾಗ್ಯೂ ನಿನಗೆ ಒಂದು ಕೊರತೆ ಇದೆ; ನಿನಗೆ ಇರುವದೆಲ್ಲವನ್ನು ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತು ಇರುವದು; ಬಂದು ನನ್ನನ್ನು ಹಿಂಬಾ ಲಿಸು ಅಂದನು.
23 But when he heard this he became very sorrowful, for he was very rich.ಅವನು ಇದನ್ನು ಕೇಳಿ ಬಹಳ ದುಃಖವುಳ್ಳವನಾದನು; ಯಾಕಂದರೆ ಅವನು ಬಹಳ ಐಶ್ವರ್ಯವಂತನಾಗಿದ್ದನು.
24 But when Jesus saw that he became very sorrowful, he said, How difficultly shall those who have riches enter into the kingdom of God;ಅವನು ಬಹಳ ವ್ಯಥೆಗೊಂಡದ್ದನ್ನು ಯೇಸು ನೋಡಿ--ಐಶ್ವರ್ಯ ವಂತರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ.
25 for it is easier for a camel to enter through a needle's eye than for a rich man to enter into the kingdom of God.ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ತೂರುವದು ಸುಲಭ ಎಂದು ಹೇಳಿದನು.
26 And those who heard it said, And who can be saved?ಇದನ್ನು ಕೇಳಿದವರು--ಹಾಗಾದರೆ ರಕ್ಷಣೆ ಹೊಂದುವವರು ಯಾರು? ಅಂದರು.
27 But he said, The things that are impossible with men are possible with God.ಅದಕ್ಕೆ ಆತನು--ಮನುಷ್ಯರಿಗೆ ಅಸಾಧ್ಯವಾದವುಗಳು ದೇವರಿಗೆ ಸಾಧ್ಯವಾಗಿವೆ ಎಂದು ಹೇಳಿದನು.
28 And Peter said, Behold, *we* have left all things and have followed thee.ಆಗ ಪೇತ್ರನು--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ ಎಂದು ಹೇಳಿದ್ದಕ್ಕೆ
29 And he said to them, Verily I say to you, There is no one who has left home, or parents, or brethren, or wife, or children, for the kingdom of God's sake,ಆತನು ಅವರಿಗೆ--ಒಬ್ಬನು ಮನೆ ಯನ್ನಾದರೂ ತಂದೆತಾಯಿಗಳನ್ನಾದರೂ ಸಹೋದರರನ್ನಾದರೂ ಹೆಂಡತಿಯನ್ನಾದರೂ ಇಲ್ಲವೆ ಮಕ್ಕಳ ನ್ನಾದರೂ ದೇವರ ರಾಜ್ಯಕ್ಕೋಸ್ಕರ ಬಿಟ್ಟುಬಿಡುವವನು
30 who shall not receive manifold more at this time, and in the coming age life eternal.ಈ ಕಾಲದಲ್ಲಿ ಅತ್ಯಧಿಕವಾದವುಗಳನ್ನೂ ಬರುವ ಲೋಕದಲ್ಲಿ ನಿತ್ಯಜೀವವನ್ನೂ ಹೊಂದಿಯೇ ಹೊಂದು ವನು ಎಂದು ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ ಅಂದನು.
31 And he took the twelve to [him] and said to them, Behold, we go up to Jerusalem, and all things that are written of the Son of man by the prophets shall be accomplished;ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.
32 for he shall be delivered up to the nations, and shall be mocked, and insulted, and spit upon.ಆತನು ಅನ್ಯಜನಗಳಿಗೆ ಒಪ್ಪಿಸಲ್ಪ ಡುವನು; ಅವರು ಆತನನ್ನು ಹಾಸ್ಯಮಾಡುವವರಾಗಿ ಅವಮಾನ ಮಾಡುತ್ತಾ ಆತನ ಮೇಲೆ ಉಗುಳುವರು.
33 And when they have scourged [him] they will kill him; and on the third day he will rise again.ಇದಲ್ಲದೆ ಅವರು ಆತನನ್ನು ಕೊರಡೆಗಳಿಂದ ಹೊಡೆದು ಕೊಲ್ಲುವರು. ಮೂರನೆಯ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.
34 And they understood nothing of these things. And this word was hidden from them, and they did not know what was said.ಆದರೆ ಶಿಷ್ಯರು ಇವುಗಳಲ್ಲಿ ಒಂದನ್ನೂ ಗ್ರಹಿಸಲಿಲ್ಲ; ಈ ಮಾತು ಅವರಿಗೆ ಮರೆಯಾಗಿದ್ದದರಿಂದ ಆತನು ಹೇಳಿದವು ಗಳನ್ನು ಅವರು ತಿಳಿಯಲಿಲ್ಲ.
35 And it came to pass when he came into the neighbourhood of Jericho, a certain blind man sat by the wayside begging.ಇದಾದ ಮೇಲೆ ಆತನು ಯೆರಿಕೋವಿನ ಸವಿಾಪಕ್ಕೆ ಬಂದಾಗ ಒಬ್ಬಾನೊಬ್ಬ ಕುರುಡನು ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆ ಬೇಡು ತ್ತಿದ್ದನು;
36 And when he heard the crowd passing, he inquired what this might be.ಜನಸಮೂಹವು ಹಾದುಹೋಗುವದನ್ನು ಇವನು ಕೇಳಿಸಿಕೊಂಡು ಅದೇನೆಂದು ವಿಚಾರಿಸಿದನು.
37 And they told him that Jesus the Nazaraean was passing by.ನಜರೇತಿನವನಾದ ಯೇಸು ಹಾದು ಹೋಗುತ್ತಿದ್ದಾ ನೆಂದು ಅವರು ಅವನಿಗೆ ಹೇಳಿದರು.
38 And he called out saying, Jesus, Son of David, have mercy on me.ಆಗ ಅವನು--ಯೇಸುವೇ, ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಕೂಗಿಕೊಂಡನು.
39 And those [who were] going before rebuked him that he might be silent; but *he* cried out so much the more, Son of David, have mercy on me.ಮುಂದೆ ಹೋಗುತ್ತಿದ್ದವರು ಅವನು ಸುಮ್ಮನಿರು ವಂತೆ ಅವನನ್ನು ಗದರಿಸಿದರು. ಆದರೂ ಅವನು--ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.
40 And Jesus stood still, and commanded him to be led to him. And when he drew nigh he asked him [saying],ಆಗ ಯೇಸು ನಿಂತುಕೊಂಡು ಅವನನ್ನು ತನ್ನ ಬಳಿಗೆ ಕರತರುವಂತೆ ಅಪ್ಪಣೆಕೊಟ್ಟನು; ಅವನು ಆತನ ಬಳಿಗೆ ಬಂದಾಗ ಆತನು ಅವನಿಗೆ--
41 What wilt thou that I shall do to thee? And he said, Lord, that I may see.ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ ಎಂದು ಕೇಳಿದನು. ಅದಕ್ಕವನು--ಕರ್ತನೇ, ನಾನು ದೃಷ್ಟಿಹೊಂದುವಂತೆ ಮಾಡು ಅಂದನು.
42 And Jesus said to him, See: thy faith has healed thee.ಆಗ ಯೇಸು ಅವನಿಗೆ-- ನೀನು ದೃಷ್ಟಿ ಹೊಂದಿದವನಾಗು; ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿಯದೆ ಅಂದನು.
43 And immediately he saw, and followed him, glorifying God. And all the people when they saw [it] gave praise to God.ಕೂಡಲೆ ಅವನು ತನ್ನ ದೃಷ್ಟಿಹೊಂದಿದನು. ಆಗ ಅವನು ದೇವರನ್ನು ಮಹಿಮೆಪಡಿಸುತ್ತಾ ಆತನನ್ನು ಹಿಂಬಾಲಿಸಿದನು; ಎಲ್ಲಾ ಜನರು ಅದನ್ನು ನೋಡಿ ದೇವರಿಗೆ ಕೊಂಡಾಟ ಸಲ್ಲಿಸಿದರು.
Kannada Bible