Luke 6 - BBE (Kannada)
1 Now it came about that on the Sabbath he was going through the fields of grain, and his disciples took the heads of the grain for food, crushing them in their hands.ಇದಾದ ಮೇಲೆ ಮೊದಲನೇ ಸಬ್ಬತ್ತಿನ ತರುವಾಯ ಎರಡನೇ ಸಬ್ಬತ್ತಿನಲ್ಲಿ ಆತನು ಪೈರಿನ ಹೊಲಗಳನ್ನು ದಾಟಿಹೋಗುತ್ತಿದ್ದನು. ಆಗ ಆತನ ಶಿಷ್ಯರು ತೆನೆಗಳನ್ನು ಕಿತ್ತು ತಮ್ಮ ಕೈಗಳಲ್ಲಿ ಹೊಸಗಿಕೊಂಡು ತಿನ್ನುತ್ತಿದ್ದರು.
2 But some of the Pharisees said, Why do you do what it is not right to do on the Sabbath?ಆದರೆ ಫರಿಸಾಯ ರಲ್ಲಿ ಕೆಲವರು ಅವರಿಗೆ--ಸಬ್ಬತ್ ದಿನಗಳಲ್ಲಿ ಮಾಡ ಬಾರದ್ದನ್ನು ನೀವು ಯಾಕೆ ಮಾಡುತ್ತೀರಿ ಅಂದರು.
3 And Jesus said, Have you not seen in the Writings what David did when he was in need of food, he, and those who were with him;ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ದಾವೀದನೂ ತನ್ನ ಜೊತೆ ಇದ್ದವರೂ ಹಸಿದಾಗ
4 How he went into the house of God and took for food the holy bread, which only the priests may take, and gave it to those who were with him?ಅವನು ದೇವರ ಮನೆಯೊಳಗೆ ಹೋಗಿ ಯಾಜಕರು ಹೊರತು ಬೇರೆಯವರು ತಿನ್ನುವದು ನ್ಯಾಯವಲ್ಲದ ಸಮ್ಮುಖ ರೊಟ್ಟಿಯನ್ನು ತೆಗೆದುಕೊಂಡು ತಿಂದು ತನ್ನ ಜೊತೆಯಲ್ಲಿದ್ದವರಿಗೆ ಸಹ ಹೇಗೆ ಕೊಟ್ಟನೆಂಬದನು ನೀವು ಓದಲಿಲ್ಲವೇ ಅಂದನು.
5 And he said, The Son of man is lord even of the Sabbath.ಆತನು ಅವ ರಿಗೆ--ಮನುಷ್ಯಕುಮಾರನು ಸಬ್ಬತ್ತಿಗೂ ಒಡೆಯನಾಗಿ ದ್ದಾನೆ ಅಂದನು.
6 And it came about, on another Sabbath, that he went into the Synagogue and was teaching there. And a man was there whose right hand was dead.ಇದಾದ ಮೇಲೆ ಇನ್ನೊಂದು ಸಬ್ಬತ್ತಿನಲ್ಲಿ ಸಹ ಆತನು ಸಭಾಮಂದಿರದೊಳಕ್ಕೆ ಪ್ರವೇಶಿಸಿ ಬೋಧಿಸಿ ದನು; ಅಲ್ಲಿ ಬಲಗೈ ಬತ್ತಿದ ಒಬ್ಬ ಮನುಷ್ಯನಿದ್ದನು.
7 And the scribes and Pharisees were watching him to see if he would make him well on the Sabbath, so that they might be able to say something against him.ಆಗ ಶಾಸ್ತ್ರಿಗಳೂ ಫರಿಸಾಯರೂ ಆತನಿಗೆ ವಿರೋಧ ವಾಗಿ ತಪ್ಪು ಕಂಡುಹಿಡಿಯಬೇಕೆಂದು ಆತನು ಆ ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೇನೋ ಎಂದು ಕಾಯುತ್ತಿದ್ದರು.
8 But he had knowledge of their thoughts; and he said to the man whose hand was dead, Get up and come into the middle. And he got up and came forward.ಆದರೆ ಆತನು ಅವರ ಆಲೋಚನೆಗಳನ್ನು ತಿಳಿದುಕೊಂಡು ಕೈ ಬತ್ತಿದವನಾದ ಆ ಮನುಷ್ಯನಿಗೆ--ಎದ್ದು ನಡುವೆ ನಿಂತುಕೋ ಅಂದಾಗ ಅವನು ಎದ್ದು ನಿಂತುಕೊಂಡನು.
9 And Jesus said, I put the question to you, Is it right to do good on the Sabbath or to do evil? to give life or to take it away?ತರು ವಾಯ ಯೇಸು ಅವರಿಗೆ--ನಿಮಗೆ ಒಂದು ಸಂಗತಿ ಯನ್ನು ನಾನು ಕೇಳುತ್ತೇನೆ; ಸಬ್ಬತ್ ದಿನಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ? ಇಲ್ಲವೆ ಕೆಟ್ಟದ್ದು ಮಾಡುವದೋ? ಪ್ರಾಣವನ್ನು ರಕ್ಷಿಸುವದೋ, ಇಲ್ಲವೆ ಅದನ್ನು ನಾಶಮಾಡುವದೋ ಅಂದನು.
10 And looking round on all of them, he said to him, Put out your hand. And he did so: and his hand was made well.ಆತನು ಅವರೆಲ್ಲರ ಸುತ್ತಲೂ ನೋಡಿ ಆ ಮನುಷ್ಯನಿಗೆ--ನಿನ್ನ ಕೈ ಮುಂದಕ್ಕೆ ಚಾಚು ಅಂದನು. ಅವನು ಹಾಗೆಯೇ ಮಾಡಿದನು; ಆಗ ಅವನ ಕೈ ಗುಣವಾಗಿ ಮತ್ತೊಂದರಂತೆ ಆಯಿತು.
11 But they were full of wrath, and were talking together about what they might do to Jesus.ಆಗ ಅವರು ಕೋಪದಿಂದ ತುಂಬಿದವರಾಗಿ ಯೇಸುವಿಗೆ ತಾವು ಏನು ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
12 And it came about in those days that he went out to the mountain for prayer; and he was all night in prayer to God.ಇದಾದ ಮೇಲೆ ಆತನು ಆ ದಿವಸಗಳಲ್ಲಿ ಪ್ರಾರ್ಥಿಸುವದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ ರಾತ್ರಿ ಯೆಲ್ಲಾ ದೇವರಿಗೆ ಪ್ರಾರ್ಥಿಸಿದನು.
13 And the day came and, turning to his disciples, he made a selection from among them of twelve, to whom he gave the name of Apostles;ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡದ್ದಲ್ಲದೆ ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.
14 Simon, to whom he gave the name of Peter, and Andrew, his brother, and James and John and Philip and Bartholomewಅವರು (ಆತನು ಪೇತ್ರನೆಂದು ಕರೆದ) ಸೀಮೋನ, ಅವನ ಸಹೋದರನಾದ ಅಂದ್ರೆಯ, ಯಾಕೋಬ,ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,
15 And Matthew and Thomas and James, the son of Alphaeus, and Simon, who was named the Zealot,ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿಯೆಂದು ಕರೆಯಲ್ಪಟ್ಟ ಸೀಮೋನ,
16 And Judas, the son of James, and Judas Iscariot, he who was false to him.ಯಾಕೋಬನ ಸಹೋದರನಾದ ಯೂದ, ಮತ್ತು ದ್ರೋಹಿಯಾದ ಇಸ್ಕರಿಯೋತ ಯೂದ ಎಂಬವರೇ.
17 And he came down with them to a level place, and a great band of his disciples, and a very great number of people from all Judaea and Jerusalem and from the parts of Tyre and Sidon by the sea, came to give hearing to him, and to be made well from their diseases;ಆತನು ಅವರೊಂದಿಗೆ ಕೆಳಗಿಳಿದು ಸಮ ಭೂಮಿಯ ಮೇಲೆ ನಿಂತಿದ್ದಾಗ ಆತನ ಶಿಷ್ಯರ ಗುಂಪು ಅಲ್ಲದೆ ಯೂದಾಯ ಯೆರೂಸಲೇಮಿನಿಂದಲೂ ತೂರ್ ಸೀದೋನಿನ ಸಮುದ್ರತೀರದಿಂದಲೂ ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳಿಂದ ಸ್ವಸ್ಥರಾಗುವದಕ್ಕೂ ಜನರು ದೊಡ್ಡ ಸಮೂಹವಾಗಿ ಬಂ
18 And those who were troubled with unclean spirits were made well.ಅಶುದ್ಧಾತ್ಮಗಳಿಂದ ಪೀಡಿತರಾದವರೂ ಬಂದು ಸ್ವಸ್ಥರಾದರು.
19 And all the people were desiring to be touched by him, for power came from him and made them all well.ಆಗ ಸಮೂಹವೆಲ್ಲಾ ಆತ ನನ್ನು ಮುಟ್ಟಬೇಕೆಂದು ಪ್ರಯತ್ನಿಸಿದರು; ಯಾಕಂದರೆ ಆತನಿಂದ ಶಕ್ತಿಯು ಹೊರಟು ಅವರೆಲ್ಲರನ್ನು ಸ್ವಸ್ಥ ಮಾಡಿತು.
20 And turning his eyes to his disciples he said, Happy are you who are poor: for the kingdom of God is yours.ಆತನು ತನ್ನ ಕಣ್ಣುಗಳನ್ನೆತ್ತಿ ತನ್ನ ಶಿಷ್ಯರ ಕಡೆಗೆ ನೋಡಿ--ಬಡವರಾದ ನೀವು ಧನ್ಯರು; ಯಾಕಂದರೆ ದೇವರ ರಾಜ್ಯವು ನಿಮ್ಮದೇ.
21 Happy are you who are in need of food now: for you will be made full. Happy are you who are weeping now; for you will be glad.ಈಗ ಹಸಿದವರಾದ ನೀವು ಧನ್ಯರು; ಯಾಕಂದರೆ ನೀವು ತೃಪ್ತಿ ಹೊಂದುವಿರಿ. ಈಗ ಅಳುವವರಾದ ನೀವು ಧನ್ಯರು; ಯಾಕಂದರೆ ನೀವು ನಗುವಿರಿ.
22 Happy are you, when men have hate for you, and put you away from among them and say angry words to you, turning away in disgust at your name, because of the Son of man.ಮನುಷ್ಯಕುಮಾರನ ನಿಮಿತ್ತ ಜನರು ನಿಮ್ಮನ್ನು ಹಗೆಮಾಡಿ ನಿಮ್ಮನ್ನು ಬಹಿಷ್ಕರಿಸಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದ್ದೆಂದು ತೆಗೆದುಹಾಕಿದರೆ ನೀವು ಧನ್ಯರು.
23 Be glad in that day, and be lifted up for joy, for your reward in heaven will be great: for their fathers did these same things to the prophets.ಆ ದಿನದಲ್ಲಿ ನೀವು ಸಂತೋಷ ಪಡಿರಿ. ಉಲ್ಲಾಸದಿಂದ ಕುಣಿದಾಡಿರಿ; ಯಾಕಂದರೆ ಇಗೋ, ಪರಲೋಕದಲ್ಲಿ ನಿಮ್ಮ ಬಹುಮಾನವು ದೊಡ್ಡದು; ಅವರ ಪಿತೃಗಳು ಪ್ರವಾದಿಗಳಿಗೆ ಅದೇ ರೀತಿಯಲ್ಲಿ ಮಾಡಿದರು.
24 But unhappy are you who have wealth: for you have been comforted now.ಆದರೆ ಐಶ್ವರ್ಯವಂತರೇ, ನಿಮಗೆ ಅಯ್ಯೋ! ನೀವು ನಿಮ್ಮ ಆದರಣೆಯನ್ನು ಹೊಂದಿದ್ದೀರಿ.
25 Unhappy are you who are full of food now: for you will be in need. Unhappy are you who are laughing now: for you will be crying in sorrow.ತೃಪ್ತಿಯಿಂದಿರುವವರೇ, ನಿಮಗೆ ಅಯ್ಯೋ! ಯಾಕಂದರೆ ನಿಮಗೆ ಹಸಿವೆಯಾಗುವದು. ಈಗ ನಗುವವರೇ, ನಿಮಗೆ ಅಯ್ಯೋ! ನೀವು ಶೋಕಿಸಿ ಅಳುವಿರಿ.
26 Unhappy are you when all men give you their approval: for so their fathers did to the false prophets.ಎಲ್ಲಾ ಜನರು ನಿಮ್ಮ ವಿಷಯದಲ್ಲಿ ಒಳ್ಳೇದಾಗಿ ಮಾತನಾಡಿದರೆ ನಿಮಗೆ ಅಯ್ಯೋ! ಅವರ ಪಿತೃಗಳು ಸುಳ್ಳು ಪ್ರವಾದಿಗಳಿಗೆ ಹಾಗೆಯೇ ಮಾಡಿದರು.
27 But I say to you who give ear to me, Have love for those who are against you, do good to those who have hate for you,ಆದರೆ ಕೇಳುವವರಾದ ನಿಮಗೆ ನಾನು ಹೇಳುವ ದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ.
28 Give blessing to those who give you curses, say prayers for those who are cruel to you.ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ ಮತ್ತು ನಿಮ್ಮನ್ನು ಅವಮಾನ ಪಡಿಸುವವರಿಗೋಸ್ಕರ ಪ್ರಾರ್ಥಿಸಿರಿ.
29 If a man gives you a blow on one side of your face, then let the other side be turned to him; from him who takes away your coat, do not keep back your robe.ಒಂದು ಕೆನ್ನೆಯ ಮೇಲೆ ನಿನ್ನನ್ನು ಹೊಡೆಯುವವನಿಗೆ ಮತ್ತೊಂದನ್ನು ಸಹ ಕೊಡು; ನಿನ್ನ ಮೇಲಂಗಿಯನ್ನು ತಕ್ಕೊಳ್ಳುವವನಿಗೆ ನಿನ್ನ ಒಳಂಗಿಯನ್ನು ತಡೆಯಬೇಡ.
30 Give to everyone who comes with a request, and if a man takes away your property, make no attempt to get it back again.ನಿನ್ನಿಂದ ಕೇಳುವ ಪ್ರತಿ ಮನುಷ್ಯನಿಗೆ ಕೊಡು; ನಿನ್ನ ಸೊತ್ತನ್ನು ತಕ್ಕೊಳ್ಳುವವನಿಂದ ಅವುಗಳನ್ನು ತಿರಿಗಿ ಕೇಳಬೇಡ.
31 Do to others as you would have them do to you.ಜನರು ನಿಮಗೆ ಏನು ಮಾಡಬೇಕೆಂದು ನೀವು ಕೋರುತ್ತೀರೋ ನೀವು ಸಹ ಅವರಿಗೆ ಅದ ರಂತೆಯೇ ಮಾಡಿರಿ.
32 If you have love for those who have love for you, what credit is it to you? for even sinners have love for those who have love for them.ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ತಮ್ಮನ್ನು ಪ್ರೀತಿಸುವವ ರನ್ನೇ ಪ್ರೀತಿಸುತ್ತಾರೆ.
33 And if you do good to those who do good to you, what credit is it to you? for even sinners do the same.ನಿಮಗೆ ಒಳ್ಳೇದನ್ನು ಮಾಡು ವವರಿಗೆ ನೀವು ಒಳ್ಳೇದನ್ನು ಮಾಡಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಅದರಂತೆಯೇ ಮಾಡುತ್ತಾರೆ.
34 And if you let those have the use of your money, from whom you are hoping to get it back, what credit is it to you? even sinners do so to sinners, hoping to get back as much as they gave.ಯಾರಿಂದ ತಿರಿಗಿ ಪಡಕೊಳ್ಳಬೇಕೆಂದು ನಿರೀಕ್ಷಿಸುತ್ತಿರೋ ಅಂಥವರಿಗೆ ಸಾಲಕೊಟ್ಟರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಹಾಗೆಯೇ ತಾವು ಕೊಟ್ಟಷ್ಟು ತಿರಿಗಿ ಪಡೆಯುವಂತೆ ಪಾಪಿಗಳಿಗೆ ಸಾಲ ಕೊಡುತ್ತಾರೆ.
35 But be loving to those who are against you and do them good, and give them your money, not giving up hope, and your reward will be great and you will be the sons of the Most High: for he is kind to evil men, and to those who have hard hearts.ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,
36 Be full of pity, even as your Father is full of pity.ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರ ನೀವೂ ಕರುಣೆಯುಳ್ಳವರಾಗಿರ್ರಿ.
37 Be not judges of others, and you will not be judged: do not give punishment to others, and you will not get punishment yourselves: make others free, and you will be made free:ತೀರ್ಪು ಮಾಡಬೇಡಿರಿ; ಆಗ ನಿಮಗೂ ತೀರ್ಪಾಗುವದಿಲ್ಲ. ಖಂಡಿಸಬೇಡಿರಿ; ಆಗ ನಿಮಗೂ ಖಂಡನೆಯಾಗುವದಿಲ್ಲ. ಕ್ಷಮಿಸಿರಿ; ಆಗ ನಿಮಗೂ ಕ್ಷಮಿಸಲ್ಪಡುವದು.
38 Give, and it will be given to you; good measure, crushed down, full and running over, they will give to you. For in the same measure as you give, it will be given to you again.ಕೊಡಿರಿ, ಆಗ ನಿಮಗೂ ಕೊಡ ಲ್ಪಡುವದು. ಒಳ್ಳೆಯ ಅಳತೆ ಒತ್ತಿ ಅಲ್ಲಾಡಿಸಿ ಹೊರಗೆ ಚೆಲ್ಲುವಂತೆ ಮನುಷ್ಯರು ನಿಮ್ಮ ಉಡಿಲಲ್ಲಿ ಹಾಕುವರು; ಯಾಕಂದರೆ ನೀವು ಅಳೆಯುವ ಅಳತೆಯಿಂದಲೇ ನಿಮಗೂ ತಿರಿಗಿ ಅಳೆಯಲ್ಪಡುವದು.
39 And he gave them teaching in the form of a story, saying, Is it possible for one blind man to be guide to another? will they not go falling together into a hole?ಆತನು ಒಂದು ಸಾಮ್ಯವನ್ನು ಅವರಿಗೆ ಹೇಳಿ ದನು--ಕುರುಡನು ಕುರುಡನನ್ನು ನಡಿಸಬಲ್ಲನೋ? (ನಡಿಸಿದರೆ) ಅವರಿಬ್ಬರೂ ಕುಣಿಯಲ್ಲಿ ಬೀಳುವದಿ ಲ್ಲವೋ?
40 The disciple is not greater than his master, but everyone whose learning is complete will be like his master.ತನ್ನ ಗುರುವಿಗಿಂತ ಶಿಷ್ಯನು ಹೆಚ್ಚಿನವನಲ್ಲ; ಆದರೆ ಪರಿಪೂರ್ಣನಾಗಿರುವ ಪ್ರತಿಯೊಬ್ಬನು ತನ್ನ ಗುರುವಿನಂತೆ ಇರುವನು.
41 And why do you take note of the grain of dust in your brother's eye, but take no note of the bit of wood which is in your eye?ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ನೀನು ತಿಳಿದುಕೊಳ್ಳದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ಯಾಕೆ ನೋಡುತ್ತೀ?
42 How will you say to your brother, Brother, let me take the grain of dust out of your eye, when you yourself do not see the bit of wood in your eye? O false one! first take the wood out of your eye and then you will see clearly to take the dust out of your brother's eye.ಇಲ್ಲವೆ ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನಿಗೆ--ಸಹೋದರನೇ, ನಿನ್ನ ಕಣ್ಣಿನಲ್ಲಿ ರುವ ರವೆಯನ್ನು ತೆಗೆಯುವೆನೆಂದು ನೀನು ಹೇಗೆ ಹೇಳುವದು? ಕಪಟಿಯೇ, ಮೊದಲು ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ತೆಗೆದುಹಾಕು; ಆಮೇಲೆ ನಿನ್ನ ಸಹೊ
43 For no good tree gives bad fruit, and no bad tree gives good fruit.ಒಳ್ಳೇಮರವು ಕೆಟ್ಟ ಫಲವನ್ನು ಫಲಿಸುವದಿಲ್ಲ; ಇಲ್ಲವೆ ಕೆಟ್ಟಮರವು ಒಳ್ಳೇಫಲವನ್ನು ಫಲಿಸುವದಿಲ್ಲ.
44 For every tree is judged by its fruit. Men do not get figs from thorns, or grapes from blackberry plants.ಪ್ರತಿಯೊಂದು ಮರವು ಅದರ ಫಲದಿಂದಲೇ ಗೊತ್ತಾಗುವದು. ಯಾಕಂದರೆ ಮುಳ್ಳುಗಳಲ್ಲಿ ಮನುಷ್ಯರು ಅಂಜೂರ ಗಳನ್ನು ಕೂಡಿಸುವದಿಲ್ಲ; ಇಲ್ಲವೆ ಗಜ್ಜುಗದ ಪೊದೆಯಲ್ಲಿ ದ್ರಾಕ್ಷೇಗಳನ್ನು ಕೂಡಿಸುವದಿಲ್ಲ.
45 The good man, out of the good store of his heart, gives good things; and the evil man, out of his evil store, gives evil: for out of the full store of the heart come the words of the mouth.ಒಳ್ಳೇಮನುಷ್ಯನು ತನ್ನ ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯದನ್ನೇ ಹೊರಗೆ ತರುತ್ತಾನೆ; ಆದರೆ ಕೆಟ್ಟಮನುಷ್ಯನು ತನ್ನ ಹೃದಯದ ಕೆಟ್ಟಬೊಕ್ಕಸದಿಂದ ಕೆಟ್ಟದ್ದನ್ನೇ ಹೊರಗೆ ತರುತ್ತಾನೆ. ಯಾಕಂದರೆ ಹೃದಯದ ಸಮೃದ್ಧಿಯಿಂದ ಅವನ ಬಾಯಿ ಮಾತನಾಡುತ್ತದೆ.
46 Why do you say to me, Lord, Lord, and do not the things which I say?ನನ್ನನ್ನು ನೀವು--ಕರ್ತನೇ, ಕರ್ತನೇ ಎಂದು ಕರೆದು ನಾನು ಹೇಳುವವುಗಳನ್ನು ನೀವು ಮಾಡದೆ ಇರುವದು ಯಾಕೆ?
47 Everyone who comes to me and gives ear to my words and does them, I will make clear to you what he is like:ಯಾವನು ನನ್ನ ಬಳಿಗೆ ಬಂದು ನಾನು ಹೇಳುವವುಗಳನ್ನು ಕೇಳಿ ಅವುಗಳನ್ನು ಮಾಡು ತ್ತಾನೋ ಅವನು ಯಾರಿಗೆ ಸಮಾನನಾಗಿದ್ದಾನೆಂದು ನಾನು ನಿಮಗೆ ತೋರಿಸುತ್ತೇನೆ.
48 He is like a man building a house, who went deep and put the base of it on a rock; and when the water came up and the river was driving against that house, it was not moved, because the building was good.ಅವನು ಆಳವಾಗಿ ಅಗಿದು ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೆಯನ್ನು ಕಟ್ಟಿದ ಮನುಷ್ಯನಿಗೆ ಸಮಾನನಾಗಿದ್ದಾನೆ; ಪ್ರಳಯವು ಎದ್ದು ಪ್ರವಾಹವು ಆ ಮನೆಗೆ ರಭಸ ವಾಗಿ ಬಡಿದರೂ ಅದನ್ನು ಕದಲಿಸಲಿಕ್ಕಾಗದೆ ಹೋಯಿತು; ಯಾಕಂದರೆ ಅದು ಬಂಡೆಯ ಮೇಲೆ ಕಟ್ಟಲ್ಪಟ್ಟಿತು.
49 But he who gives hearing, without doing, is like a man building a house on the earth without a base for it; and when the force of the river came against it, straight away it came down; and the destruction of that house was great.ಆದರೆ (ನನ್ನ ಮಾತುಗಳನ್ನು) ಕೇಳಿ ಅದರಂತೆ ಮಾಡದೆ ಇರುವವನು ಅಸ್ತಿವಾರ ವಿಲ್ಲದೆ ಮಣ್ಣಿನ ಮೇಲೆ ಮನೆಯನ್ನು ಕಟ್ಟಿದ ಮನುಷ್ಯನಿಗೆ ಹೋಲಿಕೆಯಾಗಿದ್ದಾನೆ; ಪ್ರವಾಹವು ಅದಕ್ಕೆ ರಭಸವಾಗಿ ಬಡಿದದ್ದರಿಂದ ಕೂಡಲೆ ಅದು ಬಿತ್ತು; ಇದರಿಂದ ಆ ಮನೆಯ ನಾಶನವು ದೊಡ್ಡದಾಗಿತ್ತು.
Kannada Bible