Bible

Luke 6 - WEB (Kannada)

1 Now it happened on the second Sabbath after the first, that he was going through the grain fields. His disciples plucked the heads of grain, and ate, rubbing them in their hands.ಇದಾದ ಮೇಲೆ ಮೊದಲನೇ ಸಬ್ಬತ್ತಿನ ತರುವಾಯ ಎರಡನೇ ಸಬ್ಬತ್ತಿನಲ್ಲಿ ಆತನು ಪೈರಿನ ಹೊಲಗಳನ್ನು ದಾಟಿಹೋಗುತ್ತಿದ್ದನು. ಆಗ ಆತನ ಶಿಷ್ಯರು ತೆನೆಗಳನ್ನು ಕಿತ್ತು ತಮ್ಮ ಕೈಗಳಲ್ಲಿ ಹೊಸಗಿಕೊಂಡು ತಿನ್ನುತ್ತಿದ್ದರು.

2 But some of the Pharisees said to them, "Why do you do that which is not lawful to do on the Sabbath day?"ಆದರೆ ಫರಿಸಾಯ ರಲ್ಲಿ ಕೆಲವರು ಅವರಿಗೆ--ಸಬ್ಬತ್‌ ದಿನಗಳಲ್ಲಿ ಮಾಡ ಬಾರದ್ದನ್ನು ನೀವು ಯಾಕೆ ಮಾಡುತ್ತೀರಿ ಅಂದರು.

3 Jesus, answering them, said, "Haven't you read what David did when he was hungry, he, and those who were with him;ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ದಾವೀದನೂ ತನ್ನ ಜೊತೆ ಇದ್ದವರೂ ಹಸಿದಾಗ

4 how he entered into the house of God, and took and ate the show bread, and gave also to those who were with him, which is not lawful to eat except for the priests alone?"ಅವನು ದೇವರ ಮನೆಯೊಳಗೆ ಹೋಗಿ ಯಾಜಕರು ಹೊರತು ಬೇರೆಯವರು ತಿನ್ನುವದು ನ್ಯಾಯವಲ್ಲದ ಸಮ್ಮುಖ ರೊಟ್ಟಿಯನ್ನು ತೆಗೆದುಕೊಂಡು ತಿಂದು ತನ್ನ ಜೊತೆಯಲ್ಲಿದ್ದವರಿಗೆ ಸಹ ಹೇಗೆ ಕೊಟ್ಟನೆಂಬದನು ನೀವು ಓದಲಿಲ್ಲವೇ ಅಂದನು.

5 He said to them, "The Son of Man is lord of the Sabbath."ಆತನು ಅವ ರಿಗೆ--ಮನುಷ್ಯಕುಮಾರನು ಸಬ್ಬತ್ತಿಗೂ ಒಡೆಯನಾಗಿ ದ್ದಾನೆ ಅಂದನು.

6 It also happened on another Sabbath that he entered into the synagogue and taught. There was a man there, and his right hand was withered.ಇದಾದ ಮೇಲೆ ಇನ್ನೊಂದು ಸಬ್ಬತ್ತಿನಲ್ಲಿ ಸಹ ಆತನು ಸಭಾಮಂದಿರದೊಳಕ್ಕೆ ಪ್ರವೇಶಿಸಿ ಬೋಧಿಸಿ ದನು; ಅಲ್ಲಿ ಬಲಗೈ ಬತ್ತಿದ ಒಬ್ಬ ಮನುಷ್ಯನಿದ್ದನು.

7 The scribes and the Pharisees watched him, to see whether he would heal on the Sabbath, that they might find an accusation against him.ಆಗ ಶಾಸ್ತ್ರಿಗಳೂ ಫರಿಸಾಯರೂ ಆತನಿಗೆ ವಿರೋಧ ವಾಗಿ ತಪ್ಪು ಕಂಡುಹಿಡಿಯಬೇಕೆಂದು ಆತನು ಆ ಸಬ್ಬತ್‌ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೇನೋ ಎಂದು ಕಾಯುತ್ತಿದ್ದರು.

8 But he knew their thoughts; and he said to the man who had the withered hand, "Rise up, and stand in the middle." He arose and stood.ಆದರೆ ಆತನು ಅವರ ಆಲೋಚನೆಗಳನ್ನು ತಿಳಿದುಕೊಂಡು ಕೈ ಬತ್ತಿದವನಾದ ಆ ಮನುಷ್ಯನಿಗೆ--ಎದ್ದು ನಡುವೆ ನಿಂತುಕೋ ಅಂದಾಗ ಅವನು ಎದ್ದು ನಿಂತುಕೊಂಡನು.

9 Then Jesus said to them, "I will ask you something: Is it lawful on the Sabbath to do good, or to do harm? To save a life, or to kill?"ತರು ವಾಯ ಯೇಸು ಅವರಿಗೆ--ನಿಮಗೆ ಒಂದು ಸಂಗತಿ ಯನ್ನು ನಾನು ಕೇಳುತ್ತೇನೆ; ಸಬ್ಬತ್‌ ದಿನಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ? ಇಲ್ಲವೆ ಕೆಟ್ಟದ್ದು ಮಾಡುವದೋ? ಪ್ರಾಣವನ್ನು ರಕ್ಷಿಸುವದೋ, ಇಲ್ಲವೆ ಅದನ್ನು ನಾಶಮಾಡುವದೋ ಅಂದನು.

10 He looked around at them all, and said to the man, "Stretch out your hand." He did, and his hand was restored as sound as the other.ಆತನು ಅವರೆಲ್ಲರ ಸುತ್ತಲೂ ನೋಡಿ ಆ ಮನುಷ್ಯನಿಗೆ--ನಿನ್ನ ಕೈ ಮುಂದಕ್ಕೆ ಚಾಚು ಅಂದನು. ಅವನು ಹಾಗೆಯೇ ಮಾಡಿದನು; ಆಗ ಅವನ ಕೈ ಗುಣವಾಗಿ ಮತ್ತೊಂದರಂತೆ ಆಯಿತು.

11 But they were filled with rage, and talked with one another about what they might do to Jesus.ಆಗ ಅವರು ಕೋಪದಿಂದ ತುಂಬಿದವರಾಗಿ ಯೇಸುವಿಗೆ ತಾವು ಏನು ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.

12 It happened in these days, that he went out to the mountain to pray, and he continued all night in prayer to God.ಇದಾದ ಮೇಲೆ ಆತನು ಆ ದಿವಸಗಳಲ್ಲಿ ಪ್ರಾರ್ಥಿಸುವದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ ರಾತ್ರಿ ಯೆಲ್ಲಾ ದೇವರಿಗೆ ಪ್ರಾರ್ಥಿಸಿದನು.

13 When it was day, he called his disciples, and from them he chose twelve, whom he also named apostles:ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡದ್ದಲ್ಲದೆ ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.

14 Simon, whom he also named Peter; Andrew, his brother; James; John; Philip; Bartholomew;ಅವರು (ಆತನು ಪೇತ್ರನೆಂದು ಕರೆದ) ಸೀಮೋನ, ಅವನ ಸಹೋದರನಾದ ಅಂದ್ರೆಯ, ಯಾಕೋಬ,ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,

15 Matthew; Thomas; James, the son of Alphaeus; Simon, who was called the Zealot;ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿಯೆಂದು ಕರೆಯಲ್ಪಟ್ಟ ಸೀಮೋನ,

16 Judas the son of James; and Judas Iscariot, who also became a traitor.ಯಾಕೋಬನ ಸಹೋದರನಾದ ಯೂದ, ಮತ್ತು ದ್ರೋಹಿಯಾದ ಇಸ್ಕರಿಯೋತ ಯೂದ ಎಂಬವರೇ.

17 He came down with them, and stood on a level place, with a crowd of his disciples, and a great number of the people from all Judea and Jerusalem, and the sea coast of Tyre and Sidon, who came to hear him and to be healed of their diseases;ಆತನು ಅವರೊಂದಿಗೆ ಕೆಳಗಿಳಿದು ಸಮ ಭೂಮಿಯ ಮೇಲೆ ನಿಂತಿದ್ದಾಗ ಆತನ ಶಿಷ್ಯರ ಗುಂಪು ಅಲ್ಲದೆ ಯೂದಾಯ ಯೆರೂಸಲೇಮಿನಿಂದಲೂ ತೂರ್‌ ಸೀದೋನಿನ ಸಮುದ್ರತೀರದಿಂದಲೂ ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳಿಂದ ಸ್ವಸ್ಥರಾಗುವದಕ್ಕೂ ಜನರು ದೊಡ್ಡ ಸಮೂಹವಾಗಿ ಬಂ

18 as well as those who were troubled by unclean spirits, and they were being healed.ಅಶುದ್ಧಾತ್ಮಗಳಿಂದ ಪೀಡಿತರಾದವರೂ ಬಂದು ಸ್ವಸ್ಥರಾದರು.

19 All the multitude sought to touch him, for power came out from him and healed them all.ಆಗ ಸಮೂಹವೆಲ್ಲಾ ಆತ ನನ್ನು ಮುಟ್ಟಬೇಕೆಂದು ಪ್ರಯತ್ನಿಸಿದರು; ಯಾಕಂದರೆ ಆತನಿಂದ ಶಕ್ತಿಯು ಹೊರಟು ಅವರೆಲ್ಲರನ್ನು ಸ್ವಸ್ಥ ಮಾಡಿತು.

20 He lifted up his eyes to his disciples, and said, "Blessed are you who are poor, For yours is the Kingdom of God.ಆತನು ತನ್ನ ಕಣ್ಣುಗಳನ್ನೆತ್ತಿ ತನ್ನ ಶಿಷ್ಯರ ಕಡೆಗೆ ನೋಡಿ--ಬಡವರಾದ ನೀವು ಧನ್ಯರು; ಯಾಕಂದರೆ ದೇವರ ರಾಜ್ಯವು ನಿಮ್ಮದೇ.

21 Blessed are you who hunger now, For you will be filled. Blessed are you who weep now, For you will laugh.ಈಗ ಹಸಿದವರಾದ ನೀವು ಧನ್ಯರು; ಯಾಕಂದರೆ ನೀವು ತೃಪ್ತಿ ಹೊಂದುವಿರಿ. ಈಗ ಅಳುವವರಾದ ನೀವು ಧನ್ಯರು; ಯಾಕಂದರೆ ನೀವು ನಗುವಿರಿ.

22 Blessed are you when men shall hate you, and when they shall exclude and mock you, and throw out your name as evil, for the Son of Man's sake.ಮನುಷ್ಯಕುಮಾರನ ನಿಮಿತ್ತ ಜನರು ನಿಮ್ಮನ್ನು ಹಗೆಮಾಡಿ ನಿಮ್ಮನ್ನು ಬಹಿಷ್ಕರಿಸಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದ್ದೆಂದು ತೆಗೆದುಹಾಕಿದರೆ ನೀವು ಧನ್ಯರು.

23 Rejoice in that day, and leap for joy, for behold, your reward is great in heaven, for their fathers did the same thing to the prophets.ಆ ದಿನದಲ್ಲಿ ನೀವು ಸಂತೋಷ ಪಡಿರಿ. ಉಲ್ಲಾಸದಿಂದ ಕುಣಿದಾಡಿರಿ; ಯಾಕಂದರೆ ಇಗೋ, ಪರಲೋಕದಲ್ಲಿ ನಿಮ್ಮ ಬಹುಮಾನವು ದೊಡ್ಡದು; ಅವರ ಪಿತೃಗಳು ಪ್ರವಾದಿಗಳಿಗೆ ಅದೇ ರೀತಿಯಲ್ಲಿ ಮಾಡಿದರು.

24 "But woe to you who are rich! For you have received your consolation.ಆದರೆ ಐಶ್ವರ್ಯವಂತರೇ, ನಿಮಗೆ ಅಯ್ಯೋ! ನೀವು ನಿಮ್ಮ ಆದರಣೆಯನ್ನು ಹೊಂದಿದ್ದೀರಿ.

25 Woe to you, you who are full now! For you will be hungry. Woe to you who laugh now! For you will mourn and weep.ತೃಪ್ತಿಯಿಂದಿರುವವರೇ, ನಿಮಗೆ ಅಯ್ಯೋ! ಯಾಕಂದರೆ ನಿಮಗೆ ಹಸಿವೆಯಾಗುವದು. ಈಗ ನಗುವವರೇ, ನಿಮಗೆ ಅಯ್ಯೋ! ನೀವು ಶೋಕಿಸಿ ಅಳುವಿರಿ.

26 Woe,{TR adds "to you"} when{TR adds "all"} men speak well of you! For their fathers did the same thing to the false prophets.ಎಲ್ಲಾ ಜನರು ನಿಮ್ಮ ವಿಷಯದಲ್ಲಿ ಒಳ್ಳೇದಾಗಿ ಮಾತನಾಡಿದರೆ ನಿಮಗೆ ಅಯ್ಯೋ! ಅವರ ಪಿತೃಗಳು ಸುಳ್ಳು ಪ್ರವಾದಿಗಳಿಗೆ ಹಾಗೆಯೇ ಮಾಡಿದರು.

27 "But I tell you who hear: love your enemies, do good to those who hate you,ಆದರೆ ಕೇಳುವವರಾದ ನಿಮಗೆ ನಾನು ಹೇಳುವ ದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ.

28 bless those who curse you, and pray for those who mistreat you.ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ ಮತ್ತು ನಿಮ್ಮನ್ನು ಅವಮಾನ ಪಡಿಸುವವರಿಗೋಸ್ಕರ ಪ್ರಾರ್ಥಿಸಿರಿ.

29 To him who strikes you on the cheek, offer also the other; and from him who takes away your cloak, don't withhold your coat also.ಒಂದು ಕೆನ್ನೆಯ ಮೇಲೆ ನಿನ್ನನ್ನು ಹೊಡೆಯುವವನಿಗೆ ಮತ್ತೊಂದನ್ನು ಸಹ ಕೊಡು; ನಿನ್ನ ಮೇಲಂಗಿಯನ್ನು ತಕ್ಕೊಳ್ಳುವವನಿಗೆ ನಿನ್ನ ಒಳಂಗಿಯನ್ನು ತಡೆಯಬೇಡ.

30 Give to everyone who asks you, and don't ask him who takes away your goods to give them back again.ನಿನ್ನಿಂದ ಕೇಳುವ ಪ್ರತಿ ಮನುಷ್ಯನಿಗೆ ಕೊಡು; ನಿನ್ನ ಸೊತ್ತನ್ನು ತಕ್ಕೊಳ್ಳುವವನಿಂದ ಅವುಗಳನ್ನು ತಿರಿಗಿ ಕೇಳಬೇಡ.

31 "As you would like people to do to you, do exactly so to them.ಜನರು ನಿಮಗೆ ಏನು ಮಾಡಬೇಕೆಂದು ನೀವು ಕೋರುತ್ತೀರೋ ನೀವು ಸಹ ಅವರಿಗೆ ಅದ ರಂತೆಯೇ ಮಾಡಿರಿ.

32 If you love those who love you, what credit is that to you? For even sinners love those who love them.ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ತಮ್ಮನ್ನು ಪ್ರೀತಿಸುವವ ರನ್ನೇ ಪ್ರೀತಿಸುತ್ತಾರೆ.

33 If you do good to those who do good to you, what credit is that to you? For even sinners do the same.ನಿಮಗೆ ಒಳ್ಳೇದನ್ನು ಮಾಡು ವವರಿಗೆ ನೀವು ಒಳ್ಳೇದನ್ನು ಮಾಡಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಅದರಂತೆಯೇ ಮಾಡುತ್ತಾರೆ.

34 If you lend to those from whom you hope to receive, what credit is that to you? Even sinners lend to sinners, to receive back as much.ಯಾರಿಂದ ತಿರಿಗಿ ಪಡಕೊಳ್ಳಬೇಕೆಂದು ನಿರೀಕ್ಷಿಸುತ್ತಿರೋ ಅಂಥವರಿಗೆ ಸಾಲಕೊಟ್ಟರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಹಾಗೆಯೇ ತಾವು ಕೊಟ್ಟಷ್ಟು ತಿರಿಗಿ ಪಡೆಯುವಂತೆ ಪಾಪಿಗಳಿಗೆ ಸಾಲ ಕೊಡುತ್ತಾರೆ.

35 But love your enemies, and do good, and lend, expecting nothing back; and your reward will be great, and you will be children of the Most High; for he is kind toward the unthankful and evil.ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,

36 Therefore be merciful, Even as your Father is also merciful.ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರ ನೀವೂ ಕರುಣೆಯುಳ್ಳವರಾಗಿರ್ರಿ.

37 Don't judge, And you won't be judged. Don't condemn, And you won't be condemned. Set free, And you will be set free.ತೀರ್ಪು ಮಾಡಬೇಡಿರಿ; ಆಗ ನಿಮಗೂ ತೀರ್ಪಾಗುವದಿಲ್ಲ. ಖಂಡಿಸಬೇಡಿರಿ; ಆಗ ನಿಮಗೂ ಖಂಡನೆಯಾಗುವದಿಲ್ಲ. ಕ್ಷಮಿಸಿರಿ; ಆಗ ನಿಮಗೂ ಕ್ಷಮಿಸಲ್ಪಡುವದು.

38 "Give, and it will be given to you: good measure, pressed down, shaken together, and running over, will be given to you.{literally, into your bosom.} For with the same measure you measure it will be measured back to you."ಕೊಡಿರಿ, ಆಗ ನಿಮಗೂ ಕೊಡ ಲ್ಪಡುವದು. ಒಳ್ಳೆಯ ಅಳತೆ ಒತ್ತಿ ಅಲ್ಲಾಡಿಸಿ ಹೊರಗೆ ಚೆಲ್ಲುವಂತೆ ಮನುಷ್ಯರು ನಿಮ್ಮ ಉಡಿಲಲ್ಲಿ ಹಾಕುವರು; ಯಾಕಂದರೆ ನೀವು ಅಳೆಯುವ ಅಳತೆಯಿಂದಲೇ ನಿಮಗೂ ತಿರಿಗಿ ಅಳೆಯಲ್ಪಡುವದು.

39 He spoke a parable to them. "Can the blind guide the blind? Won't they both fall into a pit?ಆತನು ಒಂದು ಸಾಮ್ಯವನ್ನು ಅವರಿಗೆ ಹೇಳಿ ದನು--ಕುರುಡನು ಕುರುಡನನ್ನು ನಡಿಸಬಲ್ಲನೋ? (ನಡಿಸಿದರೆ) ಅವರಿಬ್ಬರೂ ಕುಣಿಯಲ್ಲಿ ಬೀಳುವದಿ ಲ್ಲವೋ?

40 A disciple is not above his teacher, but everyone when he is fully trained will be like his teacher.ತನ್ನ ಗುರುವಿಗಿಂತ ಶಿಷ್ಯನು ಹೆಚ್ಚಿನವನಲ್ಲ; ಆದರೆ ಪರಿಪೂರ್ಣನಾಗಿರುವ ಪ್ರತಿಯೊಬ್ಬನು ತನ್ನ ಗುರುವಿನಂತೆ ಇರುವನು.

41 Why do you see the speck of chaff that is in your brother's eye, but don't consider the beam that is in your own eye?ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ನೀನು ತಿಳಿದುಕೊಳ್ಳದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ಯಾಕೆ ನೋಡುತ್ತೀ?

42 Or how can you tell your brother, 'Brother, let me remove the speck of chaff that is in your eye,' when you yourself don't see the beam that is in your own eye? You hypocrite! First remove the beam from your own eye, and then you can see clearly to remove the speck of chaff that is in your brother's eye.ಇಲ್ಲವೆ ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನಿಗೆ--ಸಹೋದರನೇ, ನಿನ್ನ ಕಣ್ಣಿನಲ್ಲಿ ರುವ ರವೆಯನ್ನು ತೆಗೆಯುವೆನೆಂದು ನೀನು ಹೇಗೆ ಹೇಳುವದು? ಕಪಟಿಯೇ, ಮೊದಲು ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ತೆಗೆದುಹಾಕು; ಆಮೇಲೆ ನಿನ್ನ ಸಹೊ

43 For there is no good tree that brings forth rotten fruit; nor again a rotten tree that brings forth good fruit.ಒಳ್ಳೇಮರವು ಕೆಟ್ಟ ಫಲವನ್ನು ಫಲಿಸುವದಿಲ್ಲ; ಇಲ್ಲವೆ ಕೆಟ್ಟಮರವು ಒಳ್ಳೇಫಲವನ್ನು ಫಲಿಸುವದಿಲ್ಲ.

44 For each tree is known by its own fruit. For people don't gather figs from thorns, nor do they gather grapes from a bramble bush.ಪ್ರತಿಯೊಂದು ಮರವು ಅದರ ಫಲದಿಂದಲೇ ಗೊತ್ತಾಗುವದು. ಯಾಕಂದರೆ ಮುಳ್ಳುಗಳಲ್ಲಿ ಮನುಷ್ಯರು ಅಂಜೂರ ಗಳನ್ನು ಕೂಡಿಸುವದಿಲ್ಲ; ಇಲ್ಲವೆ ಗಜ್ಜುಗದ ಪೊದೆಯಲ್ಲಿ ದ್ರಾಕ್ಷೇಗಳನ್ನು ಕೂಡಿಸುವದಿಲ್ಲ.

45 The good man out of the good treasure of his heart brings out that which is good, and the evil man out of the evil treasure of his heart brings out that which is evil, for out of the abundance of the heart, his mouth speaks.ಒಳ್ಳೇಮನುಷ್ಯನು ತನ್ನ ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯದನ್ನೇ ಹೊರಗೆ ತರುತ್ತಾನೆ; ಆದರೆ ಕೆಟ್ಟಮನುಷ್ಯನು ತನ್ನ ಹೃದಯದ ಕೆಟ್ಟಬೊಕ್ಕಸದಿಂದ ಕೆಟ್ಟದ್ದನ್ನೇ ಹೊರಗೆ ತರುತ್ತಾನೆ. ಯಾಕಂದರೆ ಹೃದಯದ ಸಮೃದ್ಧಿಯಿಂದ ಅವನ ಬಾಯಿ ಮಾತನಾಡುತ್ತದೆ.

46 "Why do you call me, 'Lord, Lord,' and don't do the things which I say?ನನ್ನನ್ನು ನೀವು--ಕರ್ತನೇ, ಕರ್ತನೇ ಎಂದು ಕರೆದು ನಾನು ಹೇಳುವವುಗಳನ್ನು ನೀವು ಮಾಡದೆ ಇರುವದು ಯಾಕೆ?

47 Everyone who comes to me, and hears my words, and does them, I will show you who he is like.ಯಾವನು ನನ್ನ ಬಳಿಗೆ ಬಂದು ನಾನು ಹೇಳುವವುಗಳನ್ನು ಕೇಳಿ ಅವುಗಳನ್ನು ಮಾಡು ತ್ತಾನೋ ಅವನು ಯಾರಿಗೆ ಸಮಾನನಾಗಿದ್ದಾನೆಂದು ನಾನು ನಿಮಗೆ ತೋರಿಸುತ್ತೇನೆ.

48 He is like a man building a house, who dug and went deep, and laid a foundation on the rock. When a flood arose, the stream broke against that house, and could not shake it, because it was founded on the rock.ಅವನು ಆಳವಾಗಿ ಅಗಿದು ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೆಯನ್ನು ಕಟ್ಟಿದ ಮನುಷ್ಯನಿಗೆ ಸಮಾನನಾಗಿದ್ದಾನೆ; ಪ್ರಳಯವು ಎದ್ದು ಪ್ರವಾಹವು ಆ ಮನೆಗೆ ರಭಸ ವಾಗಿ ಬಡಿದರೂ ಅದನ್ನು ಕದಲಿಸಲಿಕ್ಕಾಗದೆ ಹೋಯಿತು; ಯಾಕಂದರೆ ಅದು ಬಂಡೆಯ ಮೇಲೆ ಕಟ್ಟಲ್ಪಟ್ಟಿತು.

49 But he who hears, and doesn't do, is like a man who built a house on the earth without a foundation, against which the stream broke, and immediately it fell, and the ruin of that house was great."ಆದರೆ (ನನ್ನ ಮಾತುಗಳನ್ನು) ಕೇಳಿ ಅದರಂತೆ ಮಾಡದೆ ಇರುವವನು ಅಸ್ತಿವಾರ ವಿಲ್ಲದೆ ಮಣ್ಣಿನ ಮೇಲೆ ಮನೆಯನ್ನು ಕಟ್ಟಿದ ಮನುಷ್ಯನಿಗೆ ಹೋಲಿಕೆಯಾಗಿದ್ದಾನೆ; ಪ್ರವಾಹವು ಅದಕ್ಕೆ ರಭಸವಾಗಿ ಬಡಿದದ್ದರಿಂದ ಕೂಡಲೆ ಅದು ಬಿತ್ತು; ಇದರಿಂದ ಆ ಮನೆಯ ನಾಶನವು ದೊಡ್ಡದಾಗಿತ್ತು.

Kannada Bible