Mark 12 - ASV (Kannada)
1 And he began to speak unto them in parables. A man planted a vineyard, and set a hedge about it, and digged a pit for the winepress, and built a tower, and let it out to husbandmen, and went into another country.ಇದಾದ ಮೇಲೆ ಆತನು ಸಾಮ್ಯಗಳಿಂದ ಮಾತನಾಡಲು ಪ್ರಾರಂಭಿಸಿದನು. ಒಬ್ಬಾ ನೊಬ್ಬ ಮನುಷ್ಯನು ಒಂದು ದ್ರಾಕ್ಷೇತೋಟವನ್ನು ಮಾಡಿ ಸುತ್ತಲೂ ಬೇಲಿಹಾಕಿ ದ್ರಾಕ್ಷೆಯ ಅಲೆಗಾಗಿ ಅಗೆದು ಗೋಪುರ ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೊರಟುಹೋದನು.
2 And at the season he sent to the husbandmen a servant, that he might receive from the husbandmen of the fruits of the vineyard.ಫಲದ ಕಾಲ ದಲ್ಲಿ ಅವನು ದ್ರಾಕ್ಷೇ ತೋಟದ ಫಲವನ್ನು ಒಕ್ಕಲಿಗ ರಿಂದ ಪಡೆಯುವದಕ್ಕಾಗಿ ಅವರ ಬಳಿಗೆ ಒಬ್ಬ ಸೇವಕ ನನ್ನು ಕಳುಹಿಸಿದನು.
3 And they took him, and beat him, and sent him away empty.ಆದರೆ ಅವರು ಅವನನ್ನು ಹಿಡಿದು ಹೊಡೆದು ಬರಿದಾಗಿ ಕಳುಹಿಸಿಬಿಟ್ಟರು.
4 And again he sent unto them another servant; and him they wounded in the head, and handled shamefully.ತಿರಿಗಿ ಅವನು ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಿದಾಗ ಅವರು ಅವನ ಮೇಲೆ ಕಲ್ಲುಗಳನ್ನು ಎಸೆದು ತಲೆಯನ್ನು ಗಾಯಪಡಿಸಿ ಅವಮಾನದಿಂದ ವರ್ತಿಸಿ ಅವನನ್ನು ಕಳುಹಿಸಿಬಿಟ್ಟರು.
5 And he sent another; and him they killed: and many others; beating some, and killing some.ಅವನು ಮತ್ತೆ ಇನ್ನೊಬ್ಬನನ್ನು ಕಳುಹಿಸಿದಾಗ ಅವನನ್ನೂ ಕೊಂದರು. ಇನ್ನೂ ಆನೇಕರನ್ನು ಕಳುಹಿಸಿದನು. ಅವರಲ್ಲಿ ಕೆಲವ ರನ್ನು ಹೊಡೆದರು; ಕೆಲವರನ್ನು ಕೊಂದು ಹಾಕಿದರು.
6 He had yet one, a beloved son: he sent him last unto them, saying, They will reverence my son.ಕಡೆಯದಾಗಿ ತನಗೆ ಇನ್ನು ಅತಿ ಪ್ರಿಯನಾಗಿದ್ದ ಒಬ್ಬನೇ ಮಗನಿರಲಾಗಿ--ಅವರು ನನ್ನ ಮಗನಿಗಾದರೂ ಗೌರವ ಸಲ್ಲಿಸಾರು ಎಂದು ಅಂದುಕೊಂಡು ಅವನನ್ನು ಸಹ ಅವರ ಬಳಿಗೆ ಕಳುಹಿಸಿದನು.
7 But those husbandmen said among themselves, This is the heir; come, let us kill him, and the inheritance shall be ours.ಆದರೆ ಆ ಒಕ್ಕಲಿಗರು--ಇವನೇ ಬಾದ್ಯಸ್ಥನು; ಬನ್ನಿರಿ, ಇವನನ್ನು ನಾವು ಕೊಂದುಹಾಕೋಣ; ಆಗ ಸ್ವಾಸ್ಥ್ಯವು ನಮ್ಮದಾ ಗುವದು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
8 And they took him, and killed him, and cast him forth out of the vineyard.ಅವರು ಅವನನ್ನು ಹಿಡಿದು ಕೊಂದು ಹಾಕಿ ದ್ರಾಕ್ಷೇತೋಟದ ಹೊರಗೆ ಬಿಸಾಡಿದರು.
9 What therefore will the lord of the vineyard do? he will come and destroy the husbandmen, and will give the vineyard unto others.ಹಾಗಾದರೆ ದ್ರಾಕ್ಷೇತೋಟದ ದಣಿಯು ಏನು ಮಾಡಿಯಾನು? ಅವನು ಬಂದು ಆ ಒಕ್ಕಲಿಗರನ್ನು ಸಂಹಾರಮಾಡಿ ದ್ರಾಕ್ಷೇತೋಟವನ್ನು ಬೇರೆಯವರಿಗೆ ಕೊಡುವನು.
10 Have ye not read even this scripture: The stone which the builders rejected, The same was made the head of the corner;ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
11 This was from the Lord, And it is marvellous in our eyes?ಇದು ಕರ್ತನ ಕೆಲಸವೇ ಆಗಿತ್ತು. ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆಯಲ್ಲಾ ಎಂಬ ಈ ಬರಹವನ್ನು ನೀವು ಓದಲಿಲ್ಲವೋ ಎಂದು ಹೇಳಿದನು.
12 And they sought to lay hold on him; and they feared the multitude; for they perceived that he spake the parable against them: and they left him, and went away.ಆಗ ಆತನು ತಮಗೆ ವಿರೋಧವಾಗಿ ಈ ಸಾಮ್ಯವನ್ನು ಹೇಳಿದನೆಂದು ಅವರು ತಿಳಿದು ಆತನನ್ನು ಹಿಡಿಯುವದಕ್ಕೆ ಸಂದರ್ಭ ನೋಡಿದರು. ಆದರೆ ಅವರು ಜನರಿಗೆ ಹೆದರಿದರು. ಅವರು ಆತನನ್ನು ಬಿಟ್ಟು ಹೊರಟು ಹೋದರು.
13 And they send unto him certain of the Pharisees and of the Herodians, that they might catch him in talk.ಅವರು ಆತನನ್ನು ಆತನ ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ ಹೆರೋದ್ಯ ರಲ್ಲಿಯೂ ಕೆಲವರನ್ನು ಆತನ ಬಳಿಗೆ ಕಳುಹಿಸಿದರು.
14 And when they were come, they say unto him, Teacher, we know that thou art true, and carest not for any one; for thou regardest not the person of men, but of a truth teachest the way of God: Is it lawful to give tribute unto Caesar, or not?ಅವರು ಬಂದು ಆತನಿಗೆ--ಬೋಧಕನೇ, ನೀನು ಸತ್ಯವಂತನೂ ಯಾವ ಮನುಷ್ಯನನ್ನು ಲಕ್ಷಿಸದವನೂ ಎಂದು ನಮಗೆ ತಿಳಿದದೆ; ಯಾಕಂದರೆ ನೀನು ಮನುಷ್ಯರ ಮುಖದಾಕ್ಷಿಣ್ಯ ಮಾಡದೆ ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುತ್ತೀ; ಕೈಸರನಿಗೆ ಕಪ್ಪಕೊಡುವದು ನ್ಯಾಯವೋ, ನ್ಯಾಯವಲ್ಲವೋ?
15 Shall we give, or shall we not give? But he, knowing their hypocrisy, said unto them, Why make ye trial of me? bring me a denarius, that I may see it.ನಾವು ಕೊಡಬೇಕೋ ಇಲ್ಲವೆ ಕೊಡಬಾರದೋ ಎಂದು ಕೇಳಿದರು. ಆದರೆ ಆತನು ಅವರ ಕಪಟವನ್ನು ತಿಳಿದು ಅವರಿಗೆ--ನೀವು ನನ್ನನ್ನು ಯಾಕೆ ಶೋಧಿ ಸುತ್ತೀರಿ? ಒಂದು ನಾಣ್ಯವನ್ನು ತಂದು ನನಗೆ ತೋರಿಸಿರಿ ಎಂದು ಹೇಳಿದನು.
16 And they brought it. And he saith unto them, Whose is this image and superscription? And they said unto him, Caesar's.ಅವರು ಅದನ್ನು ತಂದಾಗ ಆತನು ಅವರಿಗೆ--ಇದರ ರೂಪವು ಮತ್ತು ಮೇಲ್ಬರಹವು ಯಾರದು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ಕೈಸರನದು ಎಂದು ಉತ್ತರ ಕೊಟ್ಟರು.
17 And Jesus said unto them, Render unto Caesar the things that are Caesar's, and unto God the things that are God's. And they marvelled greatly at him.ಆಗ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ ಎಂದು ಹೇಳಿದನು. ಇದಕ್ಕೆ ಅವರು ಆತನ ವಿಷಯದಲ್ಲಿ ಆಶ್ಚರ್ಯಪಟ್ಟರು.
18 And there come unto him Sadducees, who say that there is no resurrection; and they asked him, saying,ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಆತನ ಬಳಿಗೆ ಬಂದು ಆತನನ್ನು ಕೇಳಿದ್ದೇನಂದರೆ--
19 Teacher, Moses wrote unto us, If a man's brother die, and leave a wife behind him, and leave no child, that his brother should take his wife, and raise up seed unto his brother.ಬೋಧಕನೇ, ಒಬ್ಬ ಮನುಷ್ಯನ ಸಹೋದರನು ಮಕ್ಕಳಿಲ್ಲದೆ ಹೆಂಡತಿಯನ್ನು ಬಿಟ್ಟು ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ತಕ್ಕೊಂಡು ತನ್ನ ಸಹೋದರನಿಗಾಗಿ ಸಂತಾನವನ್ನು ಪಡೆಯಬೇಕು ಎಂದು ಮೋಶೆಯು ನಮಗೆ ಬರೆದಿರು ತ್ತಾನಷ್ಟೆ.
20 There were seven brethren: and the first took a wife, and dying left no seed;ಈಗ ಏಳು ಮಂದಿ ಸಹೋದರರಿದ್ದರು; ಮೊದಲನೆಯವನು ಮದುವೆಯಾಗಿ ಸಂತಾನವಿಲ್ಲದೆ ಸತ್ತನು.
21 and the second took her, and died, leaving no seed behind him; and the third likewise:ಮತ್ತು ಎರಡನೆಯವನೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದೆ ಸತ್ತನು; ಅದರಂತೆಯೇ ಮೂರನೆಯವನೂ ಆದನು.
22 and the seven left no seed. Last of all the woman also died.ಹೀಗೆ ಏಳು ಮಂದಿಯೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದವ ರಾದರು; ಕೊನೆಯಲ್ಲಿ ಆ ಸ್ತ್ರೀಯೂ ಸತ್ತಳು.
23 In the resurrection whose wife shall she be of them? for the seven had her to wife.ಆದದ ರಿಂದ ಪುನರುತ್ಥಾನದಲ್ಲಿ ಅವರು ಎದ್ದಾಗ ಅವರಲ್ಲಿ ಆಕೆಯು ಯಾರ ಹೆಂಡತಿಯಾಗಿರುವಳು? ಆ ಏಳು ಮಂದಿಗೂ ಆಕೆಯು ಹೆಂಡತಿಯಾಗಿದ್ದಳಲ್ಲಾ ಅಂದರು.
24 Jesus said unto them, Is it not for this cause that ye err, that ye know not the scriptures, nor the power of God?ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾದರೂ ದೇವರಶಕ್ತಿಯನ್ನಾದರೂ ತಿಳಿಯದೆ ಇರುವದರಿಂದ ತಪ್ಪು ಮಾಡುತ್ತೀರಲ್ಲವೋ?
25 For when they shall rise from the dead, they neither marry, nor are given in marriage; but are as angels in heaven.ಯಾಕಂ ದರೆ ಅವರು ಸತ್ತವರೊಳಗಿಂದ ಎದ್ದ ಮೇಲೆ ಮದುವೆ ಮಾಡಿಕೊಳ್ಳುವದೂ ಇಲ್ಲ, ಮದುವೆ ಮಾಡಿಕೊಡು ವದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೂತರಂತೆ ಇರುತ್ತಾರೆ.
26 But as touching the dead, that they are raised; have ye not read in the book of Moses, in `the place concerning' the Bush, how God spake unto him, saying, I `am' the God of Abraham, and the God of Isaac, and the God of Jacob?ಸತ್ತವರು ಎದ್ದು ಬರುವದರ ವಿಷಯವಾಗಿ--ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಹೇಗೆ ಮಾತನಾಡಿದನೆಂದು ಮೋಶೆಯ ಗ್ರಂಥದಲ್ಲಿ ನೀವು ಓದಲಿಲ್ಲವೋ?
27 He is not the God of the dead, but of the living: ye do greatly err.ಯಾಕಂದರೆ ಆತನು ಸತ್ತವರಿಗಲ್ಲ, ಆದರೆ ಜೀವಿತರಿಗೆ ದೇವರಾಗಿದ್ದಾನೆ; ಆದದರಿಂದ ಈ ವಿಷಯದಲ್ಲಿ ನೀವು ಬಹಳವಾಗಿ ತಪ್ಪು ಮಾಡುತ್ತೀರಿ ಎಂದು ಹೇಳಿದನು.
28 And one of the scribes came, and heard them questioning together, and knowing that he had answered them well, asked him, What commandment is the first of all?ಆಗ ಶಾಸ್ತ್ರಿಗಳಲ್ಲಿ ಒಬ್ಬನು ಬಂದು ಅವರು ಕೂಡಿ ಕೊಂಡು ತರ್ಕಿಸುತ್ತಿರುವದನ್ನು ಕೇಳಿ ಆತನು ಅವರಿಗೆ ಸರಿಯಾಗಿ ಉತ್ತರವನ್ನು ಕೊಟ್ಟನೆಂದು ತಿಳಿದು ಆತನಿಗೆ --ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು ಯಾವದು ಎಂದು ಕೇಳಿದನು.
29 Jesus answered, The first is, Hear, O Israel; The Lord our God, the Lord is one:ಯೇಸು ಪ್ರತ್ಯುತ್ತರವಾಗಿ ಅವನಿಗೆ--ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು -- ಓ ಇಸ್ರಾಯೇಲೇ, ಕೇಳು; ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನಾಗಿದ್ದಾನೆ.
30 and thou shalt love the Lord thy God with all thy heart, and with all thy soul, and with all thy mind, and with all thy strength.ನೀನು ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು; ಇದು ಮೊದ ಲನೆಯ ದೈವಾಜ್ಞೆಯಾಗಿದೆ.
31 The second is this, Thou shalt love thy neighbor as thyself. There is none other commandment greater than these.ನೀನು ನಿನ್ನ ನೆರೆಯ ವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬದು ಅದರಂ ತೆಯೇ ಇರುವ ಎರಡನೆಯ ಆಜ್ಞೆಯಾಗಿದೆ. ಇವುಗಳಿ ಗಿಂತ ಹೆಚ್ಚಿನ ದೈವಾಜ್ಞೆಯು ಮತ್ತೊಂದಿಲ್ಲ ಎಂದು ಹೇಳಿದನು.
32 And the scribe said unto him, Of a truth, Teacher, thou hast well said that he is one; and there is none other but he:ಅದಕ್ಕೆ ಆ ಶಾಸ್ತ್ರಿಯು ಆತನಿಗೆ --ಬೋಧಕನೇ, ಒಳ್ಳೇದು. ನೀನು ಸತ್ಯವನ್ನೇ ಹೇಳಿದ್ದೀ; ಯಾಕಂದರೆ ದೇವರು ಒಬ್ಬನೇ; ಆತನ ಹೊರತು ಬೇರೊಬ್ಬನು ಇಲ್ಲವೇ ಇಲ್ಲ.
33 and to love him with all the heart, and with all the understanding, and with all the strength, and to love his neighbor as himself, is much more than all whole burnt-offerings and sacrifices.ಆತನನ್ನು ಪೂರ್ಣ ಹೃದಯದಿಂದಲೂ ಪೂರ್ಣಗ್ರಹಿಕೆಯಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಿ ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸು ವದು ಸಕಲ ದಹನ ಬಲಿಗಳಿಗಿಂತಲೂ ಯಜ್ಞಗಳಿಗಿಂತ ಲೂ ಹೆಚ್ಚಿನದಾಗಿದೆ ಅಂದನು.
34 And when Jesus saw that he answered discreetly, he said unto him, Thou art not far from the kingdom of God. And no man after that durst ask him any question.ಅವನು ಬುದ್ಧಿ ಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು ಅವನಿಗೆ --ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ ಅಂದನು. ಅಂದಿನಿಂದ ಆತನನ್ನು ಪ್ರಶ್ನೆ ಮಾಡುವದಕ್ಕೆ ಯಾವ ಮನುಷ್ಯನಿಗಾದರೂ ಧೈರ್ಯವಿರಲಿಲ್ಲ.
35 And Jesus answered and said, as he taught in the temple, How say the scribes that the Christ is the son of David?ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ-- ಕ್ರಿಸ್ತನು ದಾವೀದನಕುಮಾರನು ಎಂದು ಶಾಸ್ತ್ರಿಗಳು ಹೇಳುವದು ಹೇಗೆ?
36 David himself said in the Holy Spirit, The Lord said unto my Lord, Sit thou on my right hand, Till I make thine enemies the footstool of thy feet.ಯಾಕಂದರೆ ದಾವೀದನು ತಾನೇ ಪರಿಶುದ್ಧಾತ್ಮನಿಂದ -- ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಕರ್ತನಿಗೆ ಹೇಳಿದನಲ್ಲಾ ಎಂದು ನುಡಿದಿದ್ದಾನೆ.
37 David himself calleth him Lord; and whence is he his son? And the common people heard him gladly.ಆದದರಿಂದ ದಾವೀದನು ತಾನೇ ಆತನನ್ನು ಕರ್ತ ನೆಂದು ಕರೆಯುವಾಗ ಆತನು ಅವನ ಮಗನಾಗುವದು ಹೇಗೆ ಎಂದು ಹೇಳಿದನು. ಸಾಮಾನ್ಯ ಜನರು ಸಂತೋ ಷದಿಂದ ಆತನ ಮಾತುಗಳನ್ನು ಕೇಳಿದರು.
38 And in his teaching he said, Beware of the scribes, who desire to walk in long robes, and `to have' salutations in the marketplaces,ತರುವಾಯ ಆತನು ಬೋಧನೆಯಲ್ಲಿ ಅವರಿಗೆ --ಉದ್ದವಾದ ಅಂಗಿಯನ್ನು ತೊಟ್ಟುಕೊಂಡು ಸಂತೆಯ ಸ್ಥಳಗಳಲ್ಲಿ ವಂದನೆಗಳನ್ನೂ
39 and chief seats in the synagogues, and chief places at feasts:ಸಭಾಮಂದಿರಗಳಲ್ಲಿ ಮುಖ್ಯಪೀಠಗಳನ್ನೂ ಔತಣಗಳಲ್ಲಿ ಅತ್ಯುನ್ನತವಾದ ಸ್ಥಳಗಳನ್ನೂ ಪ್ರೀತಿಸುವವರಾದ ಶಾಸ್ತ್ರಿಗಳ ವಿಷಯವಾಗಿ ಎಚ್ಚರವಾಗಿರ್ರಿ;
40 they that devour widows' houses, and for a pretence make long prayers; these shall receive greater condemnation.ಇವರು ವಿಧವೆಯರ ಮನೆಗಳನ್ನು ನುಂಗಿ ನಟನೆಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.
41 And he sat down over against the treasury, and beheld how the multitude cast money into the treasury: and many that were rich cast in much.ಯೇಸು ಬೊಕ್ಕಸದ ಎದುರಾಗಿ ಕೂತುಕೊಂಡು ಜನರು ಹೇಗೆ ಬೊಕ್ಕಸದಲ್ಲಿ ಹಣ ಹಾಕುತ್ತಿದ್ದಾ ರೆಂಬದನ್ನು ನೋಡುತ್ತಿದ್ದನು; ಅನೇಕ ಐಶ್ವರ್ಯವಂತರು ಹೆಚ್ಚೆಚ್ಚಾಗಿ ಹಾಕಿದರು.
42 And there came a poor widow, and she cast in two mites, which make a farthing.ಆಗ ಅಲ್ಲಿ ಒಬ್ಬ ಬಡ ವಿಧವೆಯು ಬಂದು ಒಂದು ಫಾರ್ದಿಂಗದಷ್ಟು ಎರಡು ನಾಣ್ಯಗಳನ್ನು ಹಾಕಿದಳು.
43 And he called unto him his disciples, and said unto them, Verily I say unto you, This poor widow cast in more than all they that are casting into the treasury:ಆಗ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ-- ಈ ಬೊಕ್ಕಸದಲ್ಲಿ ಹಾಕಿದವರೆಲ್ಲರಿಗಿಂತ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
44 for they all did cast in of their superfluity; but she of her want did cast in all that she had, `even' all her living.ಯಾಕಂದರೆ ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು; ಆದರೆ ಈಕೆಯು ತನ್ನ ಕೊರತೆಯಲ್ಲಿ ತನಗಿದ್ದದ್ದನ್ನೆಲ್ಲಾ ಅಂದರೆ ತನ್ನ ಜೀವನವನ್ನೆಲ್ಲಾ ಹಾಕಿದ್ದಾಳೆ ಅಂದನು.
Kannada Bible