Mark 13 - KJV (Kannada)
1 And as he went out of the temple, one of his disciples saith unto him, Master, see what manner of stones and what buildings are here!ಆತನು ದೇವಾಲಯದೊಳಗಿಂದ ಹೋಗುತ್ತಿದ್ದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ--ಬೋಧಕನೇ, ಇಲ್ಲಿ ಎಂಥಾ ತರವಾದ ಕಲ್ಲುಗಳು ಮತ್ತು ಎಂಥಾ ಕಟ್ಟಡಗಳು ಇವೆ ನೋಡು ಅಂದನು.
2 And Jesus answering said unto him, Seest thou these great buildings? there shall not be left one stone upon another, that shall not be thrown down.ಯೇಸು ಅವನಿಗೆ ಪ್ರತ್ಯುತ್ತರವಾಗಿ-- ನೀನು ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯೋ? ಕೆಳಗೆ ಕೆಡವಲ್ಪಡದೆ ಒಂದರ ಮೇಲೊಂದು ಕಲ್ಲು ಇಲ್ಲಿ ಬಿಡಲ್ಪಡುವದಿಲ್ಲ ಅಂದನು.
3 And as he sat upon the mount of Olives over against the temple, Peter and James and John and Andrew asked him privately,ಆತನು ಎಣ್ಣೇ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕೂತುಕೊಂಡಿದ್ದಾಗ ಪೇತ್ರ ಯಾಕೋಬ ಯೋಹಾನ ಅಂದ್ರೆಯ ಇವರು ಪ್ರತ್ಯೇಕ ವಾಗಿ ಆತನಿಗೆ--
4 Tell us, when shall these things be? and what shall be the sign when all these things shall be fulfilled?ಇವೆಲ್ಲಾ ಯಾವಾಗ ಆಗುವವು? ಮತ್ತು ಇವೆಲ್ಲವುಗಳು ನೆರವೇರುವದಕ್ಕೆ ಯಾವ ಸೂಚನೆ ಇರುವದು? ನಮಗೆ ಹೇಳು ಎಂದು ಕೇಳಿ ದರು.
5 And Jesus answering them began to say, Take heed lest any man deceive you:ಯೇಸು ಪ್ರತ್ಯುತ್ತರವಾಗಿ ಅವರಿಗೆ ಹೇಳಲಾ ರಂಭಿಸಿ-- ಯಾವನಾದರೂ ನಿಮ್ಮನ್ನು ಮೋಸಗೊಳಿಸ ದಂತೆ ಎಚ್ಚರಿಕೆ ತೆಗೆದು ಕೊಳ್ಳಿರಿ;
6 For many shall come in my name, saying, I am Christ; and shall deceive many.ಯಾಕಂದರೆ ಅನೇ ಕರು ನನ್ನ ಹೆಸರಿನಲ್ಲಿ ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
7 And when ye shall hear of wars and rumours of wars, be ye not troubled: for such things must needs be; but the end shall not be yet.ಇದಲ್ಲದೆ ಯುದ್ಧಗಳ ವಿಷಯವಾಗಿಯೂ ಯುದ್ಧಗಳ ಸುದ್ಧಿಯ ವಿಷಯವಾಗಿಯೂ ನೀವು ಕೇಳುವಾಗ ಕಳವಳಪಡ ಬೇಡಿರಿ; ಯಾಕಂದರೆ ಅವುಗಳು ಆಗುವದು ಅಗತ್ಯ; ಆದರೆ ಇನ್ನೂ ಅದು ಅಂತ್ಯವಲ್ಲ.
8 For nation shall rise against nation, and kingdom against kingdom: and there shall be earthquakes in divers places, and there shall be famines and troubles: these are the beginnings of sorrows.ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳಾಗುವವು. ಇದಲ್ಲದೆ ಬರ ಗಾಲಗಳು ಕಳವಳಗಳು ಉಂಟಾಗುವವು; ಇವು ಸಂಕಟಗಳ ಪ್ರಾರಂಭವಾಗಿವೆ.
9 But take heed to yourselves: for they shall deliver you up to councils; and in the synagogues ye shall be beaten: and ye shall be brought before rulers and kings for my sake, for a testimony against them.ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆ ತೆಗೆದುಕೊಳ್ಳಿರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ಅವರಿಗೆ ವಿರೋಧವಾಗಿ ನನ್ನ ನಿಮಿತ್ತ ಅಧಿಕಾರಿಗಳ ಮತ್ತು ಅರಸುಗಳ ಮುಂದೆ ನೀವು ತರಲ್ಪಡುವಿರಿ.
10 And the gospel must first be published among all nations.ಸುವಾರ್ತೆಯು ಮೊದಲು ಎಲ್ಲಾ ಜನಾಂಗಗಳಲ್ಲಿ ಸಾರಲ್ಪಡುವದು ಅಗತ್ಯವಾಗಿದೆ.
11 But when they shall lead you, and deliver you up, take no thought beforehand what ye shall speak, neither do ye premeditate: but whatsoever shall be given you in that hour, that speak ye: for it is not ye that speak, but the Holy Ghost.ಆದರೆ ಅವರು ನಿಮ್ಮನ್ನು ಒಪ್ಪಿಸುವದಕ್ಕಾಗಿ ತಕ್ಕೊಂಡು ಹೋಗುವಾಗ ನೀವು ಏನು ಮಾತನಾಡಬೇಕೆಂಬದನ್ನು ಮುಂಚಿತವಾಗಿ ಚಿಂತಿಸಬೇಡಿರಿ, ಆಲೋಚಿಸಲೂ ಬೇಡಿರಿ; ಆದರೆ ಆ ಗಳಿಗೆಯಲ್ಲಿ ನಿಮಗೆ ಯಾವದು ಕೊಡಲ್ಪಡುವದೋ ಅದನ್ನೇ ಮಾತನಾಡಿರಿ; ಯಾಕಂ ದರೆ ಮಾತನಾಡುವವರು ನೀವಲ್ಲ, ಆದರೆ ಪರಿಶು
12 Now the brother shall betray the brother to death, and the father the son; and children shall rise up against their parents, and shall cause them to be put to death.ಆಗ ಸಹೋದರನು ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವ ರನ್ನು ಕೊಲ್ಲಿಸುವದಕ್ಕೆ ಕಾರಣರಾಗುವರು.
13 And ye shall be hated of all men for my name's sake: but he that shall endure unto the end, the same shall be saved.ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡು ವರು. ಆದರೆ ಕಡೇವರೆಗೂ ತಾಳುವವನೇ ರಕ್ಷಣೆ ಹೊಂದುವನು.
14 But when ye shall see the abomination of desolation, spoken of by Daniel the prophet, standing where it ought not, (let him that readeth understand,) then let them that be in Judaea flee to the mountains:ಇದಲ್ಲದೆ ಪ್ರವಾದಿಯಾದ ದಾನಿಯೇಲನು ಹೇಳಿದಂತೆ ಹಾಳುಮಾಡುವ ಅಸಹ್ಯವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದು ವವನು ತಿಳುಕೊಳ್ಳಲಿ) ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
15 And let him that is on the housetop not go down into the house, neither enter therein, to take any thing out of his house:ಮನೇಮಾಳಿಗೆಯ ಮೇಲಿದ್ದವನು ಕೆಳಗೆ ಇಳಿದು ಮನೆಯೊಳಕ್ಕೆ ಹೋಗದೆ ಯೂ ಇಲ್ಲವೆ ತನ್ನ ಮನೆಯೊಳಗೆ ಪ್ರವೇಶಿಸಿ ಅದರೊ ಳಗಿಂದ ಏನನ್ನೂ ತಕ್ಕೊಳ್ಳದೆಯೂ ಇರಲಿ.
16 And let him that is in the field not turn back again for to take up his garment.ಹೊಲ ದಲ್ಲಿರುವವನು ಮತ್ತೆ ತನ್ನ ಉಡುಪನ್ನು ತಕ್ಕೊಳ್ಳುವದಕ್ಕೆ ಹಿಂದಿರುಗದಿರಲಿ.
17 But woe to them that are with child, and to them that give suck in those days!ಆದರೆ ಆ ದಿವಸಗಳಲ್ಲಿ ಗರ್ಭಿಣಿ ಯರಿಗೂ ಮೊಲೆಕುಡಿಸುವವರಿಗೂ ಅಯ್ಯೋ!
18 And pray ye that your flight be not in the winter.ನಿಮ್ಮ ಪಲಾಯನವು ಚಳಿಗಾಲದಲ್ಲಿ ಆಗದಂತೆ ನೀವು ಪ್ರಾರ್ಥಿಸಿರಿ.
19 For in those days shall be affliction, such as was not from the beginning of the creation which God created unto this time, neither shall be.ಯಾಕಂದರೆ ಆ ದಿವಸಗಳಲ್ಲಿ ಸಂಕಟವಿರುವದು; ಅಂಥದ್ದು ದೇವರು ಸೃಷ್ಟಿಸಿದ ಸೃಷ್ಟಿ ಮೊದಲುಗೊಂಡು ಈ ಸಮಯದವರೆಗೂ ಆಗಲಿಲ್ಲ ಇಲ್ಲವೆ ಆಗುವದೂ ಇಲ್ಲ.
20 And except that the Lord had shortened those days, no flesh should be saved: but for the elect's sake, whom he hath chosen, he hath shortened the days.ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಯಾವನೂ ರಕ್ಷಣೆ ಹೊಂದುವ ದಿಲ್ಲ. ಆದರೆ ಆಯಲ್ಪಟ್ಟವರಿಗಾಗಿ ಅಂದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿ ದ್ದಾನೆ.
21 And then if any man shall say to you, Lo, here is Christ; or, lo, he is there; believe him not:ಆಗ ಯಾವನಾದರೂ ನಿಮಗೆ--ಇಗೋ, ಕ್ರಿಸ್ತನು ಇಲ್ಲಿದ್ದಾನೆ; ಇಲ್ಲವೆ ಅಗೋ, ಆತನು ಅಲ್ಲಿ ದ್ದಾನೆ ಎಂದು ಹೇಳಿದರೆ ಅವನನ್ನು ನಂಬಬೇಡಿರಿ;
22 For false Christs and false prophets shall rise, and shall shew signs and wonders, to seduce, if it were possible, even the elect.ಯಾಕಂದರೆ ಸುಳ್ಳು ಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ಆರಿಸಿಕೊಂಡವರನ್ನೂ ಮೋಸ ಗೊಳಿಸುವದಕ್ಕೊಸ್ಕರ ಸೂಚಕಕಾರ್ಯಗಳನ್ನು ಅದ್ಭುತ ಕಾರ್ಯಗಳನ್ನು ಮಾಡಿ ತೋರಿಸುವರು.
23 But take ye heed: behold, I have foretold you all things.ಆದರೆ ನೀವು ಎಚ್ಚರಿಕೆ ತೆಗೆದುಕೊಳ್ಳಿರಿ; ಇಗೋ, ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿ ಹೇಳಿದ್ದೇನೆ.
24 But in those days, after that tribulation, the sun shall be darkened, and the moon shall not give her light,ಇದಲ್ಲದೆ ಆ ದಿವಸಗಳಲ್ಲಿ ಸಂಕಟವು ತೀರಿದ ನಂತರ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು.
25 And the stars of heaven shall fall, and the powers that are in heaven shall be shaken.ಆಕಾಶದ ನಕ್ಷತ್ರಗಳು ಬೀಳುವವು ಮತ್ತು ಆಕಾಶದಲ್ಲಿರುವ ಶಕ್ತಿಗಳು ಕದಲುವವು.
26 And then shall they see the Son of man coming in the clouds with great power and glory.ಆಗ ಮನುಷ್ಯಕುಮಾರನು ಬಹು ಬಲದಿಂದಲೂ ಮಹಿಮೆಯಿಂದಲೂ ಮೇಘ ಗಳಲ್ಲಿ ಬರುವದನ್ನು ಅವರು ನೋಡುವರು.
27 And then shall he send his angels, and shall gather together his elect from the four winds, from the uttermost part of the earth to the uttermost part of heaven.ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯ ವರೆಗೆ ತಾನು ಆರಿಸಿಕೊಂಡ ವರನ್ನು ನಾಲ್ಕು ದಿಕ್ಕುಗಳಿಂದಲೂ ಒಟ್ಟುಗೂಡಿಸುವನು.
28 Now learn a parable of the fig tree; When her branch is yet tender, and putteth forth leaves, ye know that summer is near:ಇದಲ್ಲದೆ ಅಂಜೂರ ಮರದ ಸಾಮ್ಯವನ್ನು ಕಲಿ ತುಕೊಳ್ಳಿರಿ; ಅದರ ಕೊಂಬೆ ಇನ್ನೂ ಎಳೇದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳುಕೊಳ್ಳುತ್ತೀರಿ;
29 So ye in like manner, when ye shall see these things come to pass, know that it is nigh, even at the doors.ಅದೇ ಪ್ರಕಾರ ಇವುಗಳು ಆಗುವದನ್ನು ನೀವು ನೋಡುವಾಗ ಅದು ಹತ್ತಿರದಲ್ಲಿ ಅಂದರೆ ಬಾಗಲುಗಳಲ್ಲಿಯೇ ಅದೆ ಎಂದು ತಿಳುಕೊಳ್ಳಿರಿ.
30 Verily I say unto you, that this generation shall not pass, till all these things be done.ಇವೆಲ್ಲವುಗಳು ನೆರವೇರುವವರೆಗೆ ಈ ಸಂತತಿಯು ಅಳಿದು ಹೋಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
31 Heaven and earth shall pass away: but my words shall not pass away.ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.
32 But of that day and that hour knoweth no man, no, not the angels which are in heaven, neither the Son, but the Father.ಆದರೆ ಆ ದಿನದ ಮತ್ತು ಆ ಗಳಿಗೆಯ ವಿಷಯ ವಾಗಿ ತಂದೆಗೇ ಹೊರತು ಯಾವ ಮನುಷ್ಯನಿಗೂ ಪರಲೋಕದಲ್ಲಿರುವ ದೂತರಿಗೂ ಮಗನಿಗೂ ತಿಳಿ ಯದು.
33 Take ye heed, watch and pray: for ye know not when the time is.ನೀವು ಎಚ್ಚರವಾಗಿರ್ರಿ, ಜಾಗರೂಕರಾಗಿರ್ರಿ, ಪ್ರಾರ್ಥಿಸಿರಿ. ಯಾಕಂದರೆ ಸಮಯವು ಯಾವಾಗ ಎಂದು ನಿಮಗೆ ತಿಳಿಯದು.
34 For the Son of Man is as a man taking a far journey, who left his house, and gave authority to his servants, and to every man his work, and commanded the porter to watch.ಮನುಷ್ಯಕುಮಾರನು ದೂರದ ಪ್ರಯಾಣವನ್ನು ಕೈಕೊಂಡು ತನ್ನ ಮನೆಯನ್ನು ಬಿಟ್ಟು ತನ್ನ ಸೇವಕರಿಗೆ ಅಧಿಕಾರವನ್ನು ಮತ್ತು ಪ್ರತಿಯೊ ಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಲು ಕಾಯು ವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇದ್ದಾನೆ.
35 Watch ye therefore: for ye know not when the master of the house cometh, at even, or at midnight, or at the cockcrowing, or in the morning:ಆದದರಿಂದ ಜಾಗರೂಕರಾಗಿರ್ರಿ. ಯಾಕಂದರೆ ಮನೇ ಯಜಮಾನನು ಸಂಜೆಯಲ್ಲಿಯೋ ಸರಿಹೊತ್ತಿನಲ್ಲಿಯೋ ಇಲ್ಲವೆ ಹುಂಜ ಕೂಗುವಾ ಗಲೋ ಇಲ್ಲವೆ ಮುಂಜಾನೆಯಲ್ಲಿಯೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ.
36 Lest coming suddenly he find you sleeping.ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುವದನ್ನು ಕಂಡಾನು.
37 And what I say unto you I say unto all, Watch.ನಿಮಗೆ ಹೇಳುವದನ್ನು ನಾನು ಎಲ್ಲರಿಗೂ ಹೇಳು ತ್ತೇನೆ--ಎಚ್ಚರವಾಗಿರ್ರಿ ಅಂದನು.
Kannada Bible