Mark 16 - BBE (Kannada)
1 And when the Sabbath was past, Mary Magdalene and Mary, the mother of James, and Salome, got spices, so that they might come and put them on him.ಸಬ್ಬತ್ತು ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಯಾದ ಮರಿಯಳೂ ಮತ್ತು ಸಲೋಮೆಯೂ ಆತನಿಗೆ ಹಚ್ಚುವದಕ್ಕಾಗಿ ಸುಗಂಧದ್ರವ್ಯಗಳನ್ನು ಕೊಂಡು ಕೊಂಡು ಬಂದರು.
2 And very early after dawn on the first day of the week, they came at the time of the coming up of the sun to the place where the body had been put.ವಾರದ ಮೊದಲನೆಯ ದಿನ ನಸುಕಿನಲ್ಲಿ ಸೂರ್ಯನು ಉದಯಿಸುವಾಗ ಅವರು ಸಮಾಧಿಯ ಬಳಿಗೆ ಬಂದರು,
3 And they were saying among themselves, Who will get the stone rolled away from the door for us?ಅವರು--ಸಮಾಧಿಯ ಬಾಗಲಿನಿಂದ ಆ ಕಲ್ಲನ್ನು ನಮಗೋಸ್ಕರ ಯಾರು ಉರುಳಿಸುವರು ಎಂದು ತಮ್ಮತಮ್ಮೊಳಗೆ ಮಾತನಾಡಿ ಕೊಂಡರು.
4 And looking up, they saw that the stone was rolled back; and it was of great size.ಯಾಕಂದರೆ ಅದು ಬಹಳ ದೊಡ್ಡದಾ ಗಿತ್ತು. ಆದರೆ ಅವರು ನೋಡಿ ಆ ಕಲ್ಲು ಉರುಳಿಸ ಲ್ಪಟ್ಟದ್ದನ್ನು ಕಂಡರು.
5 And when they went in, they saw a young man seated on the right side, dressed in a white robe; and they were full of wonder.ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದವರಾಗಿ ಉದ್ದವಾದ ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯೌವನಸ್ಥನು ಬಲಗಡೆಯಲ್ಲಿ ಕೂತಿರುವದನ್ನು ಕಂಡು ಭಯಭ್ರಾಂತರಾದರು.
6 And he said to them, Do not be troubled: you are looking for Jesus, the Nazarene, who has been put to death on the cross; he has come back from the dead; he is not here: see, the place where they put him!ಆದರೆ ಅವನು ಅವರಿಗೆ--ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟ ನಜರೇತಿನ ಯೇಸುವನ್ನು ಹುಡುಕುತ್ತಿದ್ದೀರಿ; ಆತನು ಎದ್ದಿದ್ದಾನೆ; ಇಲ್ಲಿ ಇಲ್ಲ, ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿರಿ;
7 But go, say to his disciples and to Peter, He goes before you into Galilee: there you will see him, as he said to you.ಆದರೆ ನೀವು ಹೊರಟುಹೋಗಿ ಆತನು ನಿಮಗೆ ಹೇಳಿದಂತೆ ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ; ಅಲ್ಲಿ ನೀವು ಆತನನ್ನು ಕಾಣುವಿರಿ ಎಂದು ಆತನ ಶಿಷ್ಯರಿಗೆ ಮತ್ತು ಪೇತ್ರನಿಗೆ ಹೇಳಿರಿ ಅಂದನು.
8 And they went out quickly from the place, because fear and great wonder had come on them: and they said nothing to anyone, because they were full of fear that ...ಆಗ ಅವರು ಬೇಗನೆ ಹೊರಟು ಸಮಾಧಿಯ ಬಳಿಯಿಂದ ಓಡಿಹೋದರು; ಯಾಕಂದರೆ ಅವರು ಆಶ್ಚರ್ಯದಿಂದ ನಡುಗುತ್ತಿದ್ದರು; ಇದಲ್ಲದೆ ಅವರು ಹೆದರಿದವರಾದದರಿಂದ ಯಾರಿಗೂ ಏನೂ ಹೇಳಲಿಲ್ಲ.
9 Now when he came back from the dead early on the first day of the week, he went first to Mary Magdalene, from whom he had sent out seven evil spirits.ಹೀಗಿರಲಾಗಿ ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದಮೇಲೆ ಆತನು ಮೊದಲು ತಾನು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು.
10 She went and gave news of it to those who had been with him, while they were sorrowing and weeping.ಆತನ ಸಂಗಡ ಇದ್ದವರು ಶೋಕಿಸಿ ಅಳುತ್ತಿರುವಾಗ ಆಕೆಯು ಹೋಗಿ ಅವರಿಗೆ ಹೇಳಿದಳು.
11 And they, when it came to their ears that he was living, and had been seen by her, had no belief in it.ಆದರೆ ಆತನು ಬದುಕಿದ್ದಾನೆಂದೂ ಆಕೆಯು ಆತನನ್ನು ನೋಡಿದ್ದಾಳೆಂದೂ ಅವರು ಕೇಳಿದರು; ಆದರೂ ನಂಬಲಿಲ್ಲ.
12 And after these things he was seen in another form by two of them, while they were walking on their way into the country.ಇದಾದ ಮೇಲೆ ಅವರಲ್ಲಿ ಇಬ್ಬರು ಒಂದು ಗ್ರಾಮಕ್ಕೆ ನಡೆದು ಹೋಗುತ್ತಿದ್ದಾಗ ಆತನು ಅವರಿಗೆ ಬೇರೊಂದು ರೂಪದಲ್ಲಿ ಕಾಣಿಸಿಕೊಂಡನು.
13 And they went away and gave news of it to the rest; and they had no belief in what was said.ಅವರು ಹೋಗಿ ಉಳಿದವರಿಗೆ ತಿಳಿಸಿದರು; ಆದರೆ ಅವರನ್ನೂ ಅವರು ನಂಬಲಿಲ್ಲ.
14 And later he was seen by the eleven themselves while they were taking food; and he said sharp words to them because they had no faith and their hearts were hard, and because they had no belief in those who had seen him after he had come back from the dead.ತರುವಾಯ ಊಟಕ್ಕೆ ಕೂತಿದ್ದ ಹನ್ನೊಂದು ಮಂದಿಗೆ ಆತನು ಕಾಣಿಸಿಕೊಂಡು ತಾನು ಎದ್ದು ಬಂದಮೇಲೆ ತನ್ನನ್ನು ನೋಡಿದವರನ್ನು ನಂಬಲಿಲ್ಲ ವಾದ ಕಾರಣ ಅವರ ಅಪನಂಬಿಕೆಗೂ ಹೃದಯದ ಕಾಠಿಣ್ಯಕ್ಕೂ ಆತನು ಅವರನ್ನು ಗದರಿಸಿದನು.
15 And he said to them, Go into all the world, and give the good news to everyone.ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.
16 He who has faith and is given baptism will get salvation; but he who has not faith will be judged.ನಂಬಿ ಬಾಪ್ತಿಸ್ಮ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.
17 And these signs will be with those who have faith: in my name they will send out evil spirits; and they will make use of new languages;ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು;
18 They will take up snakes, and if there is poison in their drink, it will do them no evil; they will put their hands on those who are ill, and they will get well.ಅವರು ಸರ್ಪಗಳನ್ನು ಎತ್ತುವರು; ಮರಣಕರವಾದದ್ದೇ ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವದಿಲ್ಲ; ಅವರು ರೋಗಿಗಳ ಮೇಲೆ ಕೈಗಳನ್ನಿಡು ವಾಗ ಅವರು ಸ್ವಸ್ಥರಾಗುವರು ಎಂದು ಹೇಳಿದನು.
19 So then the Lord Jesus, after he had said these words to them, was taken up into heaven and took his seat at the right hand of God.ಹೀಗೆ ಕರ್ತನು ಅವರೊಂದಿಗೆ ಮಾತನಾಡಿದ ನಂತರ ಆತನು ಮೇಲಕ್ಕೆ ಪರಲೋಕದಲ್ಲಿ ಸ್ವೀಕರಿ ಸಲ್ಪಟ್ಟು ದೇವರ ಬಲಪಾರ್ಶ್ವದಲ್ಲಿ ಕೂತುಕೊಂಡನು.
20 And they went out, preaching everywhere, the Lord working with them, and giving witness to the word by the signs which came after. So be it.ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್.
Kannada Bible