Bible

Mark 16 - YLT (Kannada)

1 And the sabbath having past, Mary the Magdalene, and Mary of James, and Salome, bought spices, that having come, they may anoint him,ಸಬ್ಬತ್ತು ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಯಾದ ಮರಿಯಳೂ ಮತ್ತು ಸಲೋಮೆಯೂ ಆತನಿಗೆ ಹಚ್ಚುವದಕ್ಕಾಗಿ ಸುಗಂಧದ್ರವ್ಯಗಳನ್ನು ಕೊಂಡು ಕೊಂಡು ಬಂದರು.

2 and early in the morning of the first of the sabbaths, they come unto the sepulchre, at the rising of the sun,ವಾರದ ಮೊದಲನೆಯ ದಿನ ನಸುಕಿನಲ್ಲಿ ಸೂರ್ಯನು ಉದಯಿಸುವಾಗ ಅವರು ಸಮಾಧಿಯ ಬಳಿಗೆ ಬಂದರು,

3 and they said among themselves, `Who shall roll away for us the stone out of the door of the sepulchre?'ಅವರು--ಸಮಾಧಿಯ ಬಾಗಲಿನಿಂದ ಆ ಕಲ್ಲನ್ನು ನಮಗೋಸ್ಕರ ಯಾರು ಉರುಳಿಸುವರು ಎಂದು ತಮ್ಮತಮ್ಮೊಳಗೆ ಮಾತನಾಡಿ ಕೊಂಡರು.

4 And having looked, they see that the stone hath been rolled away -- for it was very great,ಯಾಕಂದರೆ ಅದು ಬಹಳ ದೊಡ್ಡದಾ ಗಿತ್ತು. ಆದರೆ ಅವರು ನೋಡಿ ಆ ಕಲ್ಲು ಉರುಳಿಸ ಲ್ಪಟ್ಟದ್ದನ್ನು ಕಂಡರು.

5 and having entered into the sepulchre, they saw a young man sitting on the right hand, arrayed in a long white robe, and they were amazed.ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದವರಾಗಿ ಉದ್ದವಾದ ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯೌವನಸ್ಥನು ಬಲಗಡೆಯಲ್ಲಿ ಕೂತಿರುವದನ್ನು ಕಂಡು ಭಯಭ್ರಾಂತರಾದರು.

6 And he saith to them, `Be not amazed, ye seek Jesus the Nazarene, the crucified: he did rise -- he is not here; lo, the place where they laid him!ಆದರೆ ಅವನು ಅವರಿಗೆ--ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟ ನಜರೇತಿನ ಯೇಸುವನ್ನು ಹುಡುಕುತ್ತಿದ್ದೀರಿ; ಆತನು ಎದ್ದಿದ್ದಾನೆ; ಇಲ್ಲಿ ಇಲ್ಲ, ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿರಿ;

7 and go, say to his disciples, and Peter, that he doth go before you to Galilee; there ye shall see him, as he said to you.'ಆದರೆ ನೀವು ಹೊರಟುಹೋಗಿ ಆತನು ನಿಮಗೆ ಹೇಳಿದಂತೆ ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ; ಅಲ್ಲಿ ನೀವು ಆತನನ್ನು ಕಾಣುವಿರಿ ಎಂದು ಆತನ ಶಿಷ್ಯರಿಗೆ ಮತ್ತು ಪೇತ್ರನಿಗೆ ಹೇಳಿರಿ ಅಂದನು.

8 And, having come forth quickly, they fled from the sepulchre, and trembling and amazement had seized them, and to no one said they anything, for they were afraid.ಆಗ ಅವರು ಬೇಗನೆ ಹೊರಟು ಸಮಾಧಿಯ ಬಳಿಯಿಂದ ಓಡಿಹೋದರು; ಯಾಕಂದರೆ ಅವರು ಆಶ್ಚರ್ಯದಿಂದ ನಡುಗುತ್ತಿದ್ದರು; ಇದಲ್ಲದೆ ಅವರು ಹೆದರಿದವರಾದದರಿಂದ ಯಾರಿಗೂ ಏನೂ ಹೇಳಲಿಲ್ಲ.

9 And he, having risen in the morning of the first of the sabbaths, did appear first to Mary the Magdalene, out of whom he had cast seven demons;ಹೀಗಿರಲಾಗಿ ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದಮೇಲೆ ಆತನು ಮೊದಲು ತಾನು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು.

10 she having gone, told those who had been with him, mourning and weeping;ಆತನ ಸಂಗಡ ಇದ್ದವರು ಶೋಕಿಸಿ ಅಳುತ್ತಿರುವಾಗ ಆಕೆಯು ಹೋಗಿ ಅವರಿಗೆ ಹೇಳಿದಳು.

11 and they, having heard that he is alive, and was seen by her, did not believe.ಆದರೆ ಆತನು ಬದುಕಿದ್ದಾನೆಂದೂ ಆಕೆಯು ಆತನನ್ನು ನೋಡಿದ್ದಾಳೆಂದೂ ಅವರು ಕೇಳಿದರು; ಆದರೂ ನಂಬಲಿಲ್ಲ.

12 And after these things, to two of them, as they are going into a field, walking, he was manifested in another form,ಇದಾದ ಮೇಲೆ ಅವರಲ್ಲಿ ಇಬ್ಬರು ಒಂದು ಗ್ರಾಮಕ್ಕೆ ನಡೆದು ಹೋಗುತ್ತಿದ್ದಾಗ ಆತನು ಅವರಿಗೆ ಬೇರೊಂದು ರೂಪದಲ್ಲಿ ಕಾಣಿಸಿಕೊಂಡನು.

13 and they having gone, told to the rest; not even them did they believe.ಅವರು ಹೋಗಿ ಉಳಿದವರಿಗೆ ತಿಳಿಸಿದರು; ಆದರೆ ಅವರನ್ನೂ ಅವರು ನಂಬಲಿಲ್ಲ.

14 Afterwards, as they are reclining (at meat), he was manifested to the eleven, and did reproach their unbelief and stiffness of heart, because they believed not those having seen him being raised;ತರುವಾಯ ಊಟಕ್ಕೆ ಕೂತಿದ್ದ ಹನ್ನೊಂದು ಮಂದಿಗೆ ಆತನು ಕಾಣಿಸಿಕೊಂಡು ತಾನು ಎದ್ದು ಬಂದಮೇಲೆ ತನ್ನನ್ನು ನೋಡಿದವರನ್ನು ನಂಬಲಿಲ್ಲ ವಾದ ಕಾರಣ ಅವರ ಅಪನಂಬಿಕೆಗೂ ಹೃದಯದ ಕಾಠಿಣ್ಯಕ್ಕೂ ಆತನು ಅವರನ್ನು ಗದರಿಸಿದನು.

15 and he said to them, `Having gone to all the world, proclaim the good news to all the creation;ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.

16 he who hath believed, and hath been baptized, shall be saved; and he who hath not believed, shall be condemned.ನಂಬಿ ಬಾಪ್ತಿಸ್ಮ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.

17 `And signs shall accompany those believing these things; in my name demons they shall cast out; with new tongues they shall speak;ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು;

18 serpents they shall take up; and if any deadly thing they may drink, it shall not hurt them; on the ailing they shall lay hands, and they shall be well.'ಅವರು ಸರ್ಪಗಳನ್ನು ಎತ್ತುವರು; ಮರಣಕರವಾದದ್ದೇ ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವದಿಲ್ಲ; ಅವರು ರೋಗಿಗಳ ಮೇಲೆ ಕೈಗಳನ್ನಿಡು ವಾಗ ಅವರು ಸ್ವಸ್ಥರಾಗುವರು ಎಂದು ಹೇಳಿದನು.

19 The Lord, then, indeed, after speaking to them, was received up to the heaven, and sat on the right hand of God;ಹೀಗೆ ಕರ್ತನು ಅವರೊಂದಿಗೆ ಮಾತನಾಡಿದ ನಂತರ ಆತನು ಮೇಲಕ್ಕೆ ಪರಲೋಕದಲ್ಲಿ ಸ್ವೀಕರಿ ಸಲ್ಪಟ್ಟು ದೇವರ ಬಲಪಾರ್ಶ್ವದಲ್ಲಿ ಕೂತುಕೊಂಡನು.

20 and they, having gone forth, did preach everywhere, the Lord working with `them', and confirming the word, through the signs following. Amen.ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್‌.

Kannada Bible