Bible

Mark 6 - BBE (Kannada)

1 And he went away from there, and came into his country; and his disciples went with him.ಆತನು ಅಲ್ಲಿಂದ ಹೊರಟು ತನ್ನ ಸ್ವಂತ ಸ್ಥಳಕ್ಕೆ ಬಂದನು; ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.

2 And when the Sabbath day had come, he was teaching in the Synagogue; and a number of people hearing him were surprised, saying, From where did this man get these things? and, What is the wisdom given to this man, and what are these works of power done by his hands?ಸಬ್ಬತ್‌ ದಿನ ಬಂದಾಗ ಆತನು ಸಭಾಮಂದಿರದಲ್ಲಿ ಬೋಧಿಸುವದಕ್ಕೆ ಪ್ರಾರಂಭಿ ಸಿದನು; ಇದನ್ನು ಅನೇಕರು ಕೇಳುತ್ತಾ ಆಶ್ಚರ್ಯ ಪಟ್ಟು--ಇವುಗಳು ಈತನಿಗೆ ಎಲ್ಲಿಂದ ಬಂದಿದ್ದಾವು? ಮತ್ತು ಈತನ ಕೈಗಳಿಂದ ಇಂಥ ಮಹತ್ಕಾರ್ಯಗಳು ಸಹ ಆಗುವಂತೆ ಈತನಿಗೆ ಕೊಡಲ್ಪಟ್ಟ ಜ್ಞಾನವು ಎಂಥದ್ದು?

3 Is not this the woodworker, the son of Mary, and brother of James and Joses and Judas and Simon? and are not his sisters here with us? And they were bitter against him.ಮರಿಯಳ ಮಗನೂ ಯಾಕೋಬ, ಯೋಸೆ ಯೂದ ಸೀಮೋನ ಇವರ ಸಹೋದರನೂ ಆದ ಈತನು ಬಡಗಿಯಲ್ಲವೇ? ಈತನ ಸಹೋದರಿ ಯರು ಇಲ್ಲಿಯೇ ನಮ್ಮ ಜೊತೆಯಲ್ಲಿ ಇದ್ದಾರಲ್ಲವೇ ಎಂದು ಹೇಳಿ ಆತನ ವಿಷಯದಲ್ಲಿ ಅಭ್ಯಂತರಪಟ್ಟರು.

4 And Jesus said to them, A prophet is nowhere without honour, but in his country, and among his relations, and in his family.ಅದಕ್ಕೆ ಯೇಸು ಅವರಿಗೆ--ಪ್ರವಾದಿಗೆ ಬೇರೆ ಎಲ್ಲಿ ಯಾದರೂ ಮರ್ಯಾದೆ ಉಂಟು; ಆದರೆ ಸ್ವದೇಶದಲ್ಲಿಯೂ ಸ್ವಂತ ಜನರಲ್ಲಿಯೂ ಸ್ವಂತ ಮನೆಯಲ್ಲಿಯೂ ಇಲ್ಲ ಎಂದು ಹೇಳಿದನು.

5 And he was unable to do any work of power there, but only to put his hands on one or two persons who were ill, and make them well.ಆತನು ಅಲ್ಲಿ ಕೆಲವು ರೋಗಿಗಳ ಮೇಲೆ ತನ್ನ ಕೈಗಳನ್ನಿಟ್ಟು ಸ್ವಸ್ಥಪಡಿಸಿದನೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವದಕ್ಕಾಗಲಿಲ್ಲ.

6 And he was greatly surprised because they had no faith. And he went about the country places teaching.ಆತನು ಅವರ ಅಪನಂಬಿಕೆ ಯ ದೆಸೆಯಿಂದ ಆಶ್ಚರ್ಯಪಟ್ಟನು; ಮತ್ತು ಸುತ್ತಲಿನ ಹಳ್ಳಿಗಳಿಗೆ ಹೋಗಿ ಬೋಧಿಸುತ್ತಾ ಇದ್ದನು.

7 And he gave orders to the twelve, and sent them out two by two; and he gave them authority over the unclean spirits;ಆತನು ಹನ್ನೆರಡು ಮಂದಿಯನ್ನು ತನ್ನ ಬಳಿಗೆ ಕರೆದು ಅವರಿಗೆ ಅಶುದ್ಧಾತ್ಮಗಳ ಮೇಲೆ ಅಧಿಕಾರ ಕೊಟ್ಟು ಇಬ್ಬಿಬ್ಬರನ್ನು ಕಳುಹಿಸಲಾರಂಭಿಸಿದನು.

8 And he said that they were to take nothing for their journey, but a stick only; no bread, no bag, no money in their pockets;ಅವರು ತಮ್ಮ ಪ್ರಯಾಣಕ್ಕಾಗಿ ಒಂದು ಕೋಲಿನ ಹೊರತು ಚೀಲವನ್ನಾಗಲೀ ರೊಟ್ಟಿಯನ್ನಾಗಲೀ ಹವ್ಮೆಾಣಿಯಲ್ಲಿ ಹಣವನ್ನಾಗಲೀ ತಕ್ಕೊಳ್ಳಬಾರ ದೆಂತಲೂ

9 They were to go with common shoes on their feet, and not to take two coats.ಕೆರಗಳನ್ನು ಮೆಟ್ಟಿಕೊಂಡಿರಬೇಕೆಂದೂ ಎರಡು ಅಂಗಿಗಳನ್ನು ಹಾಕಿಕೊಳ್ಳಬಾರದೆಂದೂ ಆಜ್ಞಾ ಪಿಸಿದನು.

10 And he said to them, Wherever you go into a house, make that your resting-place till you go away.ಇದಲ್ಲದೆ ಆತನು ಅವರಿಗೆ--ಯಾವ ಸ್ಥಳದಲ್ಲಿಯಾದರೂ ಒಂದು ಮನೆಯೊಳಕ್ಕೆ ನೀವು ಪ್ರವೇಶಿಸಿದರೆ ಆ ಸ್ಥಳದಿಂದ ನೀವು ಹೊರಡುವ ತನಕ ಅಲ್ಲೇ ಇಳುಕೊಳ್ಳಿರಿ.

11 And whatever place will not take you in and will not give ear to you, when you go away, put off the dust from your feet as a witness against them.ಯಾರಾದರೂ ನಿಮ್ಮನ್ನು ಅಂಗೀಕರಿಸದೆಯೂ ಇಲ್ಲವೆ ನಿಮ್ಮ ಮಾತನ್ನು ಕೇಳ ದೆಯೂ ಇದ್ದರೆ ನೀವು ಅಲ್ಲಿಂದ ಹೊರಡುವಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಢಿಸಿಬಿಡಿರಿ. ಮತ್ತು ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ

12 And they went out, preaching the need for a change of heart in men.ಅವರು ಹೊರಟು ಹೋಗಿ ಜನರು ಮಾನಸಾಂತರಪಡಬೇಕೆಂದು ಸಾರಿದರು.

13 And they sent out a number of evil spirits, and put oil on a great number who were ill, and made them well.ಅವರು ಅನೇಕ ದೆವ್ವಗಳನ್ನು ಬಿಡಿಸಿ ಬಹಳ ರೋಗಿಗಳಿಗೆ ಎಣ್ಣೆ ಹಚ್ಚಿ ಅವರನ್ನು ಸ್ವಸ್ಥಪಡಿಸಿದರು.

14 And king Herod had news of him, because his name was on the lips of all; and he said, John the Baptist has come back from the dead, and for this reason these powers are working in him.ಅರಸನಾದ ಹೆರೋದನು ಆತನ ವಿಷಯವಾಗಿ ಕೇಳಿದನು. (ಯಾಕಂದರೆ ಆತನ ಹೆಸರು ಎಲ್ಲಾ ಕಡೆಗೂ ಹರಡಿತು); ಮತ್ತು ಅವನು--ಬಾಪ್ತಿಸ್ಮ ಮಾಡಿಸುವ ಯೋಹಾನನು ಸತ್ತವರೊಳಗಿಂದ ಎದ್ದು ಬಂದಿದ್ದಾನೆ; ಆದದರಿಂದ ಮಹತ್ಕಾರ್ಯಗಳು ಅವನಲ್ಲಿ ತೋರಿ ಬರುತ್ತವೆ ಅಂದನು.

15 But others said, It is Elijah. And others said, It is a prophet, even like one of the prophets.ಬೇರೆಯವರು--ಈತನು ಎಲೀಯನು ಅಂದರು; ಇನ್ನು ಕೆಲವರು--ಈತನು ಒಬ್ಬ ಪ್ರವಾದಿಯಾಗಿದ್ದಾನೆ ಇಲ್ಲವೆ ಪ್ರವಾದಿಗಳಲ್ಲಿ ಒಬ್ಬ ನಂತೆ ಇದ್ದಾನೆ ಅಂದರು.

16 But Herod, when he had news of it, said, John, whom I put to death, has come back from the dead.ಹೆರೋದನಾದರೋ ಆತನ ವಿಷಯವಾಗಿ ಕೇಳಿದಾಗ -- ನಾನು ತಲೆ ಹೊಯಿಸಿದ ಯೋಹಾನನು ಇವನೇ; ಇವನು ಸತ್ತವ ರೊಳಗಿಂದ ಎದ್ದು ಬಂದಿದ್ದಾನೆ ಅಂದನು.

17 For Herod himself had sent men out to take John and put him in prison, because of Herodias, his brother Philip's wife, whom he had taken for himself.ಯಾಕಂ ದರೆ ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿ ಹೆರೋದನು ತಾನೇ ಯೋಹಾನನನ್ನು ಕರೇ ಕಳುಹಿಸಿ ಹಿಡಿದು ಕಟ್ಟಿ ಅವನನ್ನು ಸೆರೆಯಲ್ಲಿ ಹಾಕಿದ್ದನು; ಯಾಕಂದರೆ ಅವನು ಅವಳನ್ನು ವಿವಾಹ ಮಾಡಿಕೊಂಡಿದ್ದನು.

18 For John said to Herod, It is wrong for you to have your brother's wife.ಆದರೆ ಯೋಹಾ ನನು ಹೆರೋದನಿಗೆ--ನಿನ್ನ ಸಹೋದರನ ಹೆಂಡತಿ ಯನ್ನು ಇಟ್ಟುಕೊಂಡಿರುವದು ನ್ಯಾಯವಲ್ಲವೆಂದು ಹೇಳಿ ದ್ದನು.

19 And Herodias was bitter against him, desiring to put him to death; but she was not able;ಆದಕಾರಣ ಹೆರೋದ್ಯಳು ಅವನಿಗೆ ವಿರೋ ಧವಾಗಿ ಹಗೆ ಇಟ್ಟುಕೊಂಡು ಅವನನ್ನು ಕೊಲ್ಲಿಸಬೇ ಕೆಂದಿದ್ದಳು; ಆದರೆ ಅವಳಿಗೆ ಆಗಲಿಲ್ಲ.

20 For Herod was in fear of John, being conscious that he was an upright and holy man, and kept him safe. And hearing him, he was much troubled; and he gave ear to him gladly.ಯಾಕಂದರೆ ಯೋಹಾನನು ನೀತಿವಂತನೂ ಪರಿಶುದ್ಧನೂ ಆದ ಮನುಷ್ಯನೆಂದು ಹೆರೋದನು ತಿಳಿದವನಾಗಿ ಅವನಿಗೆ ಭಯಪಟ್ಟು ಅವನನ್ನು ಕಾಪಾಡುತ್ತಿದ್ದನು; ಮತ್ತು ಅವನು ಹೇಳಿದ್ದನ್ನು ಕೇಳಿ ಆನೇಕ ಕಾರ್ಯಗಳನ್ನು ಮಾಡಿದ್ದಲ್ಲದೆ ಅವನು ಹೇಳುವದನ್ನು ಸಂತೋಷದಿಂದ ಕೇಳಿದನು.

21 And the chance came when Herod on his birthday gave a feast to his lords, and the high captains, and the chief men of Galilee;ಹೀಗಿರಲಾಗಿ ಅನುಕೂಲವಾದ ಒಂದು ದಿನವು ಅಂದರೆ ಹೆರೋದನ ಹುಟ್ಟಿದ ದಿನದಲ್ಲಿ ಅವನು ತನ್ನ ಪ್ರಭುಗಳಿಗೂ ಸೈನ್ಯಾಧಿಪತಿಗಳಿಗೂ ಗಲಿಲಾಯದ ಪ್ರಮುಖರಿಗೂ ಔತಣವನ್ನು ಮಾಡಿಸಿದನು;

22 And when the daughter of Herodias herself came in and did a dance, Herod and those who were at table with him were pleased with her; and the king said to the girl, Make a request for anything and I will give it you.ಆಗ ಆ ಹೆರೋದ್ಯಳ ಮಗಳು ಒಳಗೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಕೂತಿದ್ದವರನ್ನೂ ಮೆಚ್ಚಿಸಿದ್ದರಿಂದ ಅರಸನು ಆ ಹುಡುಗಿಗೆ--ನಿನಗೆ ಬೇಕಾದದ್ದನ್ನು ನನ್ನಿಂದ ಕೇಳಿಕೋ; ನಾನು ಅದನ್ನು ನಿನಗೆ ಕೊಡುತ್ತೇನೆ ಎಂದು ಹೇಳಿದನು.

23 And he took an oath, saying to her, Whatever is your desire I will give it to you, even half of my kingdom.ಅವನು--ನೀನು ನನ್ನಿಂದ ಯಾವದನ್ನು ಕೇಳಿಕೊಂಡರೂ ಅಂದರೆ ಅದು ನನ್ನ ರಾಜ್ಯದಲ್ಲಿ ಅರ್ಧವಾಗಿದ್ದರೂ ನಾನು ನಿನಗೆ ಕೊಡುತ್ತೇನೆ ಎಂದು ಅವಳಿಗೆ ಆಣೆಯಿಟ್ಟು ಹೇಳಿದನು.

24 And she went out and said to her mother, What is my request to be? And she said, The head of John the Baptist.ಆಗ ಅವಳು ಹೊರಟುಹೋಗಿ ತನ್ನ ತಾಯಿಗೆ--ನಾನು ಏನು ಕೇಳಿಕೊಳ್ಳಲಿ ಎಂದು ಕೇಳಲು ಅವಳು --ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಕೇಳಿಕೋ ಅಂದಳು.

25 And she came in quickly to the king, and said, My desire is that you give me straight away on a plate the head of John the Baptist.ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು-- ಬಾಪ್ತಿಸ್ಮಮಾಡಿಸುವ ಯೊಹಾನನ ತಲೆಯನ್ನು ನೀನು ಕೂಡಲೆ ಪರಾತಿನಲ್ಲಿ ನನಗೆ ಕೊಡಬೇಕೆಂದು ನಾನು ಕೇಳಿಕೊಳ್ಳುತ್ತೇನೆ ಅಂದಳು.

26 And the king was very sad; but because of his oaths, and those who were with him at table, he would not say 'No' to her.ಆಗ ಅರಸನು ಬಹಳವಾಗಿ ದುಃಖಪಟ್ಟನು; ಆದಾಗ್ಯೂ ತನ್ನ ಆಣೆಯ ನಿಮಿತ್ತವಾಗಿಯೂ ತನ್ನೊಂದಿಗೆ ಕೂತಿದ್ದವರ ನಿಮಿತ್ತವಾಗಿಯೂ ಅವಳನ್ನು ತಿರಸ್ಕರಿಸುವದಕ್ಕೆ ಮನಸ್ಸಿಲ್ಲದವನಾದನು.

27 And straight away the king sent out one of his armed men, and gave him an order to come back with the head: and he went and took off John's head in prison,ಕೂಡಲೆ ಅವನ ತಲೆಯನ್ನು ತರುವದಕ್ಕಾಗಿ ಅರಸನು ಒಬ್ಬ ಕೊಲೆ ಯಾಳಿಗೆ ಅಪ್ಪಣೆಕೊಟ್ಟು ಕಳುಹಿಸಿದನು; ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಹೊಯು

28 And came back with the head on a plate, and gave it to the girl; and the girl gave it to her mother.ಕೂಡಲೆ ಅವನ ತಲೆಯನ್ನು ತರುವದಕ್ಕಾಗಿ ಅರಸನು ಒಬ್ಬ ಕೊಲೆ ಯಾಳಿಗೆ ಅಪ್ಪಣೆಕೊಟ್ಟು ಕಳುಹಿಸಿದನು; ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಹೊಯು

29 And when his disciples had news of it, they came and took up his body, and put it in its last resting-place.ಅವನ ಶಿಷ್ಯರು ಅದನ್ನು ಕೇಳಿದಾಗ ಬಂದು ಅವನ ಶವವನ್ನು ತಕ್ಕೊಂಡು ಸಮಾಧಿಯಲ್ಲಿ ಇಟ್ಟರು.

30 And the twelve came together to Jesus; and they gave him an account of all the things they had done, and all they had been teaching.ಅಪೊಸ್ತಲರು ಯೇಸುವಿನ ಬಳಿಗೆ ಒಟ್ಟಾಗಿ ಕೂಡಿಬಂದು ತಾವು ಮಾಡಿದ್ದ ಮತ್ತು ಬೋಧಿಸಿದ್ದೆಲ್ಲ ವುಗಳನ್ನು ಆತನಿಗೆ ತಿಳಿಸಿದರು.

31 And he said to them, Come away by yourselves to a quiet place, and take a rest for a time. Because there were a great number coming and going, and they had no time even for food.ಆಗ ಆತನು ಅವರಿಗೆ--ನೀವು ಮಾತ್ರ ವಿಂಗಡವಾಗಿ ಅರಣ್ಯ ಸ್ಥಳಕ್ಕೆ ಬಂದು ಸ್ವಲ್ಪ ಸಮಯ ವಿಶ್ರಮಿಸಿಕೊಳ್ಳಿರಿ ಅಂದನು. ಯಾಕಂದರೆ ಅಲ್ಲಿ ಅನೇಕರು ಬರುತ್ತಾ ಹೋಗುತ್ತಾ ಇದ್ದದರಿಂದ ಊಟಮಾಡುವದಕ್ಕೂ ಅವರಿಗೆ ಸಮಯವಿರಲಿಲ್ಲ.

32 And they went away in the boat to a waste place by themselves.ಆಗ ಅವರು ದೋಣಿ ಯಲ್ಲಿ ಏಕಾಂತವಾಗಿ ಅರಣ್ಯಸ್ಥಳಕ್ಕೆ ಹೊರಟು ಹೋದರು.

33 And the people saw them going, and a number of them, having knowledge who they were, went running there together on foot from all the towns, and got there before them.ಅವರು ಹೊರಡುವದನ್ನು ಜನರು ನೋಡಿ ಅನೇಕರು ಆತನ ಗುರುತು ಹಿಡಿದು ಎಲ್ಲಾ ಪಟ್ಟಣಗಳಿಂದ ಕಾಲುನಡಿಗೆಯಾಗಿ ಅಲ್ಲಿಗೆ ಓಡುತ್ತಾ ಅವರಿಗಿಂತಲೂ ಮುಂದಾಗಿ ಆತನ ಬಳಿಗೆ ಸೇರಿಬಂದರು.

34 And he got out, and saw a great mass of people, and he had pity on them, because they were like sheep without a keeper: and he gave them teaching about a number of things.ಯೇಸು ಹೊರಗೆ ಬಂದು ಬಹು ಜನರನ್ನು ನೋಡಿ ಅವರ ಮೇಲೆ ಕನಿಕರ ಪಟ್ಟನು; ಅವರು ಕುರುಬನಿಲ್ಲದ ಕುರಿಗಳಂತೆ ಇದ್ದರು; ಆತನು ಅವರಿಗೆ ಅನೇಕ ವಿಷಯಗಳನ್ನು ಬೋಧಿಸಲಾರಂಭಿಸಿದನು.

35 And at the end of the day, his disciples came to him and said, This place is waste land, and it is late:ಆಗಲೇ ಹಗಲು ಬಹಳ ಮಟ್ಟಿಗೆ ಕಳೆದದ್ದರಿಂದ ಆತನ ಶಿಷ್ಯರು ಆತನ ಬಳಿಗೆ ಬಂದು--ಇದು ಅರಣ್ಯ ಸ್ಥಳ ಮತ್ತು ಈಗ ಸಮಯವು ಬಹಳವಾಗಿ ದಾಟಿದೆ;

36 Send them away, so that they may go into the country and small towns round about, and get some food for themselves.ಇವರು ಸುತ್ತ ಲಿನ ಸೀಮೆಗೂ ಹಳ್ಳಿಗಳಿಗೂ ಹೋಗಿ ತಮಗೋಸ್ಕರ ರೊಟ್ಟಿಯನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿ ಬಿಡು; ಯಾಕಂದರೆ ಅವರಿಗೆ ತಿನ್ನುವದಕ್ಕೆ ಏನೂ ಇಲ್ಲ ಅಂದರು.

37 But he said to them in answer, Give them food yourselves. And they said to him, Are we to go and get bread for two hundred pence, and give it to them?ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವೇ ಅವರಿಗೆ ತಿನ್ನುವದಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು ಆತನಿಗೆ--ನಾವು ಹೋಗಿ ಎರಡು ನೂರು ಹಣದ (ಪೆನ್ನಿ: ಇಂಗ್ಲೀಷ್‌ಹಣ) ರೊಟಿಯನ್ನು ಕೊಂಡುಕೊಂಡು ಅವರಿಗೆ ತಿನ್ನುವದಕ್ಕೆ ಕೊಡೋಣವೋ ಅಂದರು.

38 And he said to them, How much bread have you? go and see. And when they had seen, they said, Five cakes of bread and two fishes.ಆತನು ಅವರಿಗೆ--ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿರಿ ಅನ್ನಲು ಅವರು ತಿಳಿದುಕೊಂಡು--ಐದು ರೊಟ್ಟಿ ಮತ್ತು ಎರಡು ವಿಾನುಗಳು ಇವೆ ಎಂದು ಹೇಳಿದರು.

39 And he made them all be seated in groups on the green grass.ಆಗ ಎಲ್ಲರೂ ಹಸುರು ಹುಲ್ಲಿನ ಮೇಲೆ ಪಂಕ್ತಿ ಪಂಕ್ತಿಗಳಾಗಿ ಕೂತುಕೊಳ್ಳುವಂತೆ ಆತನು ಅವರಿಗೆ ಅಪ್ಪಣೆಕೊಟ್ಟನು.

40 And they were placed in groups, by hundreds and by fifties.ಅವರು ನೂರರಂತೆ ಐವತ್ತರಂತೆ ಸಾಲುಸಾಲಾಗಿ ಕೂತುಕೊಂಡರು.

41 And he took the five cakes of bread and the two fishes and, looking up to heaven, he said words of blessing over them; and when the cakes were broken, he gave them to the disciples to put before the people; and he made division of the two fishes among them all.ಆಗ ಆತನು ಐದು ರೊಟ್ಟಿ ಎರಡು ವಿಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಆ ರೊಟ್ಟಿಗಳನ್ನು ಮುರಿದು, ಅವರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಮತ್ತು ಎರಡು ವಿಾನುಗಳನ್ನು ಆತನು ಅವರೆಲ್ಲರಿಗೂ ಹಂಚಿದನು.

42 And they all took of the food and had enough.ಅವರೆಲ್ಲರೂ ತಿಂದು ತೃಪ್ತರಾದರು.

43 And they took up twelve baskets full of the broken bits and of the fishes.ಆಗ ಅವರು ಹನ್ನೆರಡು ಪುಟ್ಟಿಗಳಲ್ಲಿ ರೊಟ್ಟಿ ಮತ್ತು ವಿಾನಿನ ತುಂಡುಗಳನ್ನು ತುಂಬಿದರು.

44 And those who took of the bread were five thousand men.ಆ ರೊಟ್ಟಿಗಳನ್ನು ತಿಂದವರು ಸುಮಾರು ಐದು ಸಾವಿರ ಗಂಡಸರು.

45 And straight away he made his disciples get into the boat, and go before him to the other side to Beth-saida, while he himself sent the people away.ಆತನು ಜನರನ್ನು ಕಳುಹಿಸುವಷ್ಟರಲ್ಲಿ ತನ್ನ ಶಿಷ್ಯರು ಕೂಡಲೆ ದೋಣಿಯನ್ನು ಹತ್ತಿ ಮುಂದಾಗಿ ಆಚೇ ಕಡೆಯ ಬೇತ್ಸಾಯಿದಕ್ಕೆ ಹೋಗುವಂತೆ ಅವರನ್ನು ಬಲವಂತ ಮಾಡಿದನು.

46 And after he had sent them away, he went up into a mountain for prayer.ಆತನು ಅವರನ್ನು ಕಳುಹಿಸಿದ ನಂತರ ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟಕ್ಕೆ ಹೊರಟು ಹೋದನು.

47 And by evening, the boat was in the middle of the sea, and he by himself on the land.ಸಾಯಂಕಾಲವಾದಾಗ ದೋಣಿಯು ಸಮುದ್ರದ ಮಧ್ಯದಲ್ಲಿತ್ತು; ಆದರೆ ಆತನೊಬ್ಬನೇ ದಡದಲ್ಲಿದ್ದನು.

48 And seeing that they had trouble in getting their boat through the water, because the wind was against them, about the fourth watch of the night he came to them, walking on the sea; and he would have gone past them;ಗಾಳಿಯು ಅವರಿಗೆ ಎದುರಾಗಿ ಇದ್ದದರಿಂದ ಅವರು ಕಷ್ಟಪಟ್ಟು ಹುಟ್ಟು ಹಾಕುತ್ತಿರು ವದನ್ನು ಆತನು ನೋಡಿ ಸುಮಾರು ರಾತ್ರಿಯ ನಾಲ್ಕನೇ ಜಾವದಲ್ಲಿ ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಬಂದು ಅವರನ್ನು ದಾಟಿ ಹೋಗಬೇಕೆಂದಿದ್ದನು.

49 But they, when they saw him walking on the sea, took him for a spirit, and gave a loud cry:ಆದರೆ ಆತನು ಸಮುದ್ರದ ಮೇಲೆ ನಡೆಯುತ್ತಿರು ವದನ್ನು ಅವರು ನೋಡಿದಾಗ ಅದೊಂದು ಭೂತ ವೆಂದು ಭಾವಿಸಿ ಕೂಗಿಕೊಂಡರು.

50 For they all saw him, and were troubled. But straight away he said to them, Take heart, it is I, have no fear.ಯಾಕಂದರೆ ಅವರೆಲ್ಲರು ಆತನನ್ನು ನೋಡಿ ಕಳವಳಗೊಂಡರು. ಆತನು ಕೂಡಲೆ ಅವರ ಕೂಡ ಮಾತನಾಡಿ ಅವರಿಗೆ --ಧೈರ್ಯವಾಗಿರ್ರಿ, ನಾನೇ; ಅಂಜಬೇಡಿರಿ ಅಂದನು.

51 And he went to them into the boat, and the wind went down, and they were full of wonder in themselves;ಆತನು ದೋಣಿಯನ್ನು ಹತ್ತಿ ಅವರ ಬಳಿಗೆ ಬಂದನು; ಆಗ ಗಾಳಿಯು ನಿಂತಿತು; ಅವರು ಅತ್ಯಧಿಕವಾಗಿ ತಮ್ಮೊಳಗೆ ದಿಗ್ಭ್ರಮೆಯುಳ್ಳವರಾಗಿ ಆಶ್ಚರ್ಯಪಟ್ಟರು.

52 For it was not clear to them about the bread; but their hearts were hard.ಅವರ ಹೃದಯವು ಕಠಿಣವಾಗಿ ದ್ದದರಿಂದ ಅವರು ರೊಟ್ಟಿಗಳ ಅದ್ಭುತವನ್ನು ಗ್ರಹಿಸ ಲಿಲ್ಲ.

53 And when they had gone across, they came to Gennesaret, and got their boat to land.ಅವರು ದಾಟಿ ಗೆನೆಜರೇತ್‌ ದೇಶದ ದಡಕ್ಕೆ ಸೇರಿ ದರು.

54 And when they had got out of the boat, the people quickly had news of him,ಅವರು ದೋಣಿಯಿಂದ ಇಳಿದು ಬಂದ ಕೂಡಲೆ ಜನರು ಆತನನ್ನು ಗುರುತಿಸಿ

55 And went running through all the country round about, and took on their beds those who were ill, to where it was said that he was.ಸುತ್ತಲಿನ ಸೀಮೆಯಲ್ಲೆಲ್ಲಾ ಓಡಾಡಿ ಆತನು ಎಲ್ಲಿದ್ದಾನೆಂದು ಕೇಳಿ ಇದ್ದಲ್ಲಿಗೆ ಅಸ್ವಸ್ಥತೆಯುಳ್ಳವರನ್ನು ಹಾಸಿಗೆಗಳೊಂದಿಗೆ ಎತ್ತಿಕೊಂಡು ಹೋಗಲಾರಂಭಿಸಿದರು.

56 And wherever he went, into small towns, or great towns, or into the country, they took those who were ill into the market-places, requesting him that they might put their hands even on the edge of his robe: and all those who did so were made well.ತರುವಾಯ ಆತನು ಯಾವ ಯಾವ ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ, ಸೀಮೆಯಲ್ಲಿ ಪ್ರವೇಶಿಸಿದನೋ ಅಲ್ಲೆಲ್ಲಾ ಅವರು ಅಸ್ವಸ್ಥ ವಾದವರನ್ನು ಬೀದಿಗಳಲ್ಲಿ ಮಲಗಿಸಿ ಆತನ ಉಡುಪಿನ ಅಂಚನ್ನಾದರೂ ಅವರು ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಯಾರಾರು ಆತನನ್ನು ಮುಟ್ಟಿದರೋ ಅವರು ಸ್ವಸ

Kannada Bible