Bible

Mark 9 - DBY (Kannada)

1 And he said to them, Verily I say unto you, There are some of those standing here that shall not taste death until they shall have seen the kingdom of God come in power.ಆತನು ಅವರಿಗೆ--ಇಲ್ಲಿ ನಿಂತವರಲ್ಲಿ ಕೆಲವರು ದೇವರ ರಾಜ್ಯವು ಬಲದೊಂದಿಗೆ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.

2 And after six days Jesus takes with [him] Peter and James and John, and takes them up on a high mountain by themselves apart. And he was transfigured before them:ಯೇಸು ಆರು ದಿವಸಗಳಾದ ಮೇಲೆ ಪೇತ್ರ ಯಾಕೋಬ ಮತ್ತು ಯೋಹಾನರನ್ನು ತನ್ನೊಂದಿಗೆ ಕರೆದುಕೊಂಡು ಏಕಾಂತವಾಗಿ ಒಂದು ಎತ್ತರವಾದ ಬೆಟ್ಟಕ್ಕೆ ಹೋದನು; ಆಗ ಆತನು ಅವರ ಮುಂದೆ ರೂಪಾಂತರಗೊಂಡನು.

3 and his garments became shining, exceeding white [as snow], such as fuller on earth could not whiten [them].ಮತ್ತು ಆತನ ಉಡುಪು ಭೂಮಿಯ ಮೇಲಿರುವ ಯಾವ ಅಗಸನೂ ಬಿಳುಪು ಮಾಡಲಾರದಷು ಹಿಮದಂತೆ ಹೆಚ್ಚು ಬೆಳ್ಳಗಾಗಿ ಹೊಳೆಯುತ್ತಿತ್ತು.

4 And there appeared to them Elias with Moses, and they were talking with Jesus.ಆಗ ಅಲ್ಲಿ ಎಲೀಯನು ಮೋಶೆ ಯೊಂದಿಗೆ ಅವರಿಗೆ ಕಾಣಿಸಿಕೊಂಡು ಯೇಸುವಿನೊ ಂದಿಗೆ ಮಾತನಾಡುತ್ತಿದ್ದರು.

5 And Peter answering says to Jesus, Rabbi, it is good that we should be here; and let us make three tabernacles, for thee one, and for Moses one, and for Elias one.ಆಗ ಪೇತ್ರನು ಯೇಸು ವಿಗೆ-- ಬೋಧಕನೇ, ನಾವು ಇಲ್ಲೆ ಇರುವದು ನಮಗೆ ಒಳ್ಳೇದು; ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಮೂರು ಗುಡಾರಗಳನ್ನು ನಾವು ಕಟ್ಟುವೆವು ಎಂದು ಹೇಳಿದನು.

6 For he knew not what he should say, for they were filled with fear.ಅವನು ಏನು ಮಾತನಾಡಬೇಕೋ ಅವನಿಗೆ ತಿಳಿದಿರಲಿಲ್ಲ; ಯಾಕಂ ದರೆ ಅವರು ಬಹಳವಾಗಿ ಹೆದರಿದ್ದರು.

7 And there came a cloud overshadowing them, and there came a voice out of the cloud, *This* is my beloved Son: hear him.ಆಗ ಅಲ್ಲಿ ಮೋಡವು ಅವರ ಮೇಲೆ ಕವಿದುಕೊಂಡಿತು; ಮತ್ತು --ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳಿದ ಧ್ವನಿಯು ಮೋಡದೊಳಗಿಂದ ಬಂತು.

8 And suddenly having looked around, they no longer saw any one, but Jesus alone with themselves.ಕೂಡಲೆ ಅವರು ಸುತ್ತಲೂ ನೋಡಲಾಗಿ ತಮ್ಮೊಂದಿಗೆ ಯೇಸುವನ್ನು ಹೊರತು ಇನ್ನಾರನ್ನೂ ನೋಡಲಿಲ್ಲ.

9 And as they descended from the mountain, he charged them that they should relate to no one what they had seen, unless when the Son of man should be risen from among [the] dead.ಅವರು ಬೆಟ್ಟದಿಂದಿಳಿದು ಬರುವಾಗ ಮನುಷ್ಯ ಕುಮಾರನು ಸತ್ತವರೊಳಗಿಂದ ಎದ್ದು ಬರುವ ವರೆಗೆ ತಾವು ಕಂಡವುಗಳನ್ನು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.

10 And they kept that saying, questioning among themselves, what rising from among [the] dead was.ಮತ್ತು ಸತ್ತವರೊಳಗಿಂದ ಎದ್ದು ಬರುವದರ ಅರ್ಥವೇನೆಂದು ಅವರು ಒಬ್ಬರಿಗೊಬ್ಬರು ಪ್ರಶ್ನಿಸಿಕೊಳ್ಳುತ್ತಾ ಆ ಮಾತನ್ನು ತಮ್ಮೊಳಗೆ ಇಟ್ಟುಕೊಂಡರು.

11 And they asked him saying, Why do the scribes say that Elias must first have come?ಇದಲ್ಲದೆ ಅವರು ಆತನಿಗೆ--ಎಲೀಯನು ಮೊದಲು ಬರುವದು ಅಗತ್ಯವೆಂದು ಶಾಸ್ತ್ರಿಗಳು ಯಾಕೆ ಹೇಳುತ್ತಾರೆ ಎಂದು ಕೇಳಿದರು.

12 And he answering said to them, Elias indeed, having first come, restores all things; and how is it written of the Son of man that he must suffer much, and be set at nought:ಆತನು ಅವರಿಗೆ ಪ್ರತ್ಯುತ್ತರವಾಗಿ-- ನಿಜವಾಗಿಯೂ ಎಲೀಯನು ಮೊದಲು ಬಂದು ಎಲ್ಲವುಗಳನ್ನು ಯಥಾಸ್ಥಾನಪಡಿಸುತ್ತಾನೆ; ಆದರೆ ಮನುಷ್ಯಕುಮಾರನು ಬಹಳ ಶ್ರಮೆಗಳನ್ನನುಭವಿ ಸುವದು ಮತ್ತು ತಿರಸ್ಕರಿಸಲ್ಪಡುವದು ಅಗತ್ಯವೆಂದು ಆತನ ವಿಷಯವಾಗಿ ಬರೆದಿರುವದು ಹೇಗೆ?

13 but I say unto you that Elias also is come, and they have done to him whatever they would, as it is written of him.ಆದರೆ ನಾನು ನಿಮಗೆ ಹೇಳುವದೇನಂದರೆ-- ಎಲೀಯನು ನಿಜವಾಗಿಯೂ ಬಂದನು. ಅವನ ವಿಷಯವಾಗಿ ಬರೆದಿರುವಂತೆ ಅವರು ತಮ್ಮ ಮನಸ್ಸಿಗೆ ಬಂದ ಹಾಗೆ ಅವನಿಗೆ ಮಾಡಿದರು ಅಂದನು.

14 And when he came to the disciples he saw a great crowd around them, and scribes disputing against them.ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರ ಸುತ್ತಲೂ ದೊಡ್ಡ ಸಮೂಹವನ್ನೂ ಶಾಸ್ತ್ರಿಗಳು ಅವರೊಂದಿಗೆ ತರ್ಕಿಸುತ್ತಿರುವದನ್ನೂ ಕಂಡನು.

15 And immediately all the crowd seeing him were amazed, and running to [him], saluted him.ಕೂಡಲೆ ಜನರೆಲ್ಲರೂ ಆತನನ್ನು ನೋಡಿ ಬಹು ಆಶ್ಚರ್ಯಪಟ್ಟು ಓಡುತ್ತಾ ಬಂದು ಆತನನ್ನು ವಂದಿಸಿ ದರು.

16 And he asked them, What do ye question with them about?ಆಗ ಆತನು ಶಾಸ್ತ್ರಿಗಳಿಗೆ-- ಅವರೊಂದಿಗೆ ನೀವು ಏನು ತರ್ಕಮಾಡುತ್ತೀರಿ ಎಂದು ಕೇಳಿದನು.

17 And one out of the crowd answered him, Teacher, I brought to thee my son, who has a dumb spirit;ಆಗ ಸಮೂಹದಲ್ಲಿ ಒಬ್ಬನು ಪ್ರತ್ಯುತ್ತರವಾಗಿ--ಬೋಧಕನೇ, ಮೂಕದೆವ್ವ ಹಿಡಿದ ನನ್ನ ಮಗನನ್ನು ನಿನ್ನ ಬಳಿಗೆ ತಕ್ಕೊಂಡು ಬಂದೆನು.

18 and wheresoever it seizes him it tears him, and he foams and gnashes his teeth, and he is withering away. And I spoke to thy disciples, that they might cast him out, and they could not.ಅದು ಅವನನ್ನು ತೆಗೆದುಕೊಂಡು ಹೋದಲ್ಲೆಲ್ಲಾ ಅವನನ್ನು ಒದ್ದಾಡಿಸುತ್ತದೆ; ಮತ್ತು ಅವನು ನೊರೆ ಸುರಿಸುತ್ತಾ ತನ್ನ ಹಲ್ಲು ಕಡಿಯುತ್ತಾ ಕುಂದಿ ಹೋಗುತ್ತಾನೆ; ಅದನ್ನು (ದೆವ್ವವನ್ನು) ಬಿಡಿಸಬೇಕೆಂದು ನಾನು ನಿನ ಶಿಷ್ಯರಿಗೆ ಹೇಳಿದೆನು; ಆದರೆ ಅವರಿಂದ ಆಗಲಿಲ್ಲ ಎಂದು ಹೇಳಿದನು.

19 But he answering them says, O unbelieving generation! how long shall I be with you? how long shall I bear with you? bring him to me.ಅದಕ್ಕಾತನು--ಓ ನಂಬಿಕೆ ಯಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂ ದಿಗೆ ಇರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.

20 And they brought him to him. And seeing him the spirit immediately tore him; and falling upon the earth he rolled foaming.ಆಗ ಅವರು ಅವನನ್ನು ಆತನ ಬಳಿಗೆ ತಂದರು; ಅವನು ಆತನನ್ನು ನೋಡಿದ ತಕ್ಷಣವೇ ಆ ಆತ್ಮವು ಅವನನ್ನು ಒದ್ದಾಡಿಸಿದ್ದರಿಂದ ಅವನು ನೆಲಕ್ಕೆ ಬಿದ್ದು ನೊರೆ ಸುರಿಸುತ್ತಾ ಹೊರಳಾಡಿದನು.

21 And he asked his father, How long a time is it that it has been like this with him? And he said, From childhood;ಆತನು ಅವನ ತಂದೆಗೆ--ಇದು ಅವನನ್ನು ಹಿಡಿದು ಎಷ್ಟು ಕಾಲವಾಯಿತು ಎಂದು ಕೇಳಲು ಅವನು-- ಬಾಲ್ಯದಿಂದಲೇ;

22 and often it has cast him both into fire and into waters that it might destroy him: but if thou couldst [do] anything, be moved with pity on us, and help us.ಅದು ಅವನನ್ನು ನಾಶಪಡಿಸಲು ಅನೇಕ ಸಾರಿ ಬೆಂಕಿಯೊಳಗೂ ನೀರಿನೊಳಗೂ ಹಾಕಿತು; ಆದರೆ ನೀನು ಏನಾದರೂ ಮಾಡಲು ಸಾಧ್ಯ ವಿದ್ದರೆ ನಮ್ಮ ಮೇಲೆ ಕರುಣೆಯಿಟ್ಟು ನಮಗೆ ಸಹಾಯ ಮಾಡು ಅಂದನು.

23 And Jesus said to him, The 'if thou couldst' is [if thou couldst] believe: all things are possible to him that believes.ಆಗ ಯೇಸು ಅವನಿಗೆ--ನೀನು ನಂಬುವದಾದರೆ ಆಗುವದು; ನಂಬುವವನಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.

24 And immediately the father of the young child crying out said [with tears], I believe, help mine unbelief.ತಕ್ಷಣವೇ ಮಗುವಿನ ತಂದೆಯು--ಕರ್ತನೇ, ನಾನು ನಂಬು ತ್ತೇನೆ; ನನಗೆ ಅಪನಂಬಿಕೆ ಇಲ್ಲದಂತೆ ನೀನು ಸಹಾಯ ಮಾಡು ಎಂದು ಕಣ್ಣೀರಿನಿಂದ ಕೂಗಿ ಹೇಳಿದನು.

25 But Jesus, seeing that [the] crowd was running up together, rebuked the unclean spirit, saying to him, Thou dumb and deaf spirit, *I* command thee, come out of him, and enter no more into him.ಆಗ ಜನರು ಕೂಡಿಕೊಂಡು ಓಡಿ ಬರುವದನ್ನು ಯೇಸು ನೋಡಿ ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ --ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ; ಇನ್ನೆಂದಿಗೂ ಅವ ನೊಳಗೆ ಸೇರದಿರು ಎಂದು ನಾನು ನಿನಗೆ ಖಂಡಿತವಾಗಿ ಹೇಳುತ್ತೇನೆ ಅಂದನು.

26 And having cried out and torn [him] much, he came out; and he became as if dead, so that the most said, He is dead.ಆಗ ಅದು ಕೂಗಿ ಅವನನ್ನು ಬಹಳವಾಗಿ ಒದ್ದಾಡಿಸಿ ಅವನೊಳಗಿಂದ ಹೊರಗೆ ಬಂತು; ಮತ್ತು ಅವನು ಸತ್ತವನ ಹಾಗೆ ಬಿದ್ದದರಿಂದ ಅನೇಕರು--ಅವನು ಸತ್ತಿದ್ದಾನೆ ಅಂದರು.

27 But Jesus, having taken hold of him by the hand, lifted him up, and he arose.ಆದರೆ ಯೇಸು ಕೈ ಹಿಡಿದು ಅವನನ್ನು ಮೇಲಕ್ಕೆತ್ತಲು ಅವನು ಎದ್ದನು.

28 And when he was entered into the house, his disciples asked him privately, Wherefore could not *we* cast him out?ಆತನು ಮನೆಯೊಳಕ್ಕೆ ಬಂದಾಗ ಆತನ ಶಿಷ್ಯರು ಆತನಿಗೆ ಪ್ರತ್ಯೇಕವಾಗಿ--ಆ ಅಶುದ್ಧಾತ್ಮವನ್ನು ಹೊರಗೆ ಹಾಕುವದಕ್ಕೆ ನಮ್ಮಿಂದ ಯಾಕೆ ಆಗಲಿಲ್ಲ ಎಂದು ಕೇಳಿದರು.

29 And he said to them, This kind can go out by nothing but by prayer and fasting.ಆತನು ಅವರಿಗೆ--ಈ ತರವಾ ದದ್ದು ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವದರಿಂದಲೂ ಹೊರಗೆ ಬರಲಾರದು ಅಂದನು.

30 And going forth from thence they went through Galilee; and he would not that any one knew it;ಅವರು ಅಲ್ಲಿಂದ ಹೊರಟು ಗಲಿಲಾಯವನ್ನು ಹಾದುಹೋಗುತ್ತಿದ್ದರು. ಇದು ಯಾರಿಗೂ ತಿಳಿಯಬಾರದೆಂದು ಆತನಿಗೆ ಮನಸ್ಸಿತ್ತು.

31 for he taught his disciples and said to them, The Son of man is delivered into men's hands, and they shall kill him; and having been killed, after three days he shall rise again.ಯಾಕಂದರೆ ಆತನು ತನ್ನ ಶಿಷ್ಯರಿಗೆ ಬೋಧಿಸುತ್ತಾ-- ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಆತನು ಕೊಲ್ಲಲ್ಪಟ್ಟ ತರುವಾಯ ಮೂರನೆಯ ದಿನದಲ್ಲಿ ಏಳುವನು ಅಂದನು.

32 But they understood not the saying, and feared to ask him.ಆದರೆ ಅವರು ಆ ಮಾತನ್ನು ಗ್ರಹಿಸ ಲಿಲ್ಲ, ಮತ್ತು ಆತನನ್ನು ಕೇಳುವದಕ್ಕೂ ಭಯಪಟ್ಟರು.

33 And he came to Capernaum, and being in the house, he asked them, Of what were ye reasoning by the way?ಆತನು ಕಪೆರ್ನೌಮಿಗೆ ಬಂದು ಮನೆಯಲ್ಲಿದ್ದಾಗ ಅವರಿಗೆ--ದಾರಿಯಲ್ಲಿ ನಿಮ್ಮೊಳಗೆ ನೀವು ಏನು ವಾಗ್ವಾದ ಮಾಡಿದಿರಿ ಎಂದು ಕೇಳಿದನು.

34 And they remained silent, for by the way they had been reasoning with one another who [was] greatest.ಆದರೆ ಅವರು ಸುಮ್ಮನಿದ್ದರು; ಯಾಕಂದರೆ ಅವರು ತಮ್ಮೊಳಗೆ ಯಾವನು ಅತಿ ದೊಡ್ಡವನಾಗಿರಬೇಕೆಂದು ದಾರಿ ಯಲ್ಲಿ ವಾಗ್ವಾದ ಮಾಡಿದ್ದರು.

35 And sitting down he called the twelve; and he says to them, If any one would be first, he shall be last of all, and minister of all.ಆಗ ಆತನು ಕೂತುಕೊಂಡು ಹನ್ನೆರಡು ಮಂದಿಯನ್ನು ಕರೆದು ಅವರಿಗೆ--ಯಾವನಾದರೂ ಮೊದಲಿನವನಾಗಬೇ ಕೆಂದು ಇಷ್ಟಪಟ್ಟರೆ ಅವನು ಎಲ್ಲರಿಗಿಂತ ಕಡೆಯ ವನೂ ಎಲ್ಲರ ಸೇವಕನೂ ಆಗಿರಬೇಕು ಅಂದನು.

36 And taking a little child he set it in their midst, and having taken it in his arms he said to them,ಆತನು ಒಂದು ಮಗುವನ್ನು ತಕ್ಕೊಂಡು ಅದನ್ನು ಅವರ ಮಧ್ಯದಲ್ಲಿ ನಿಲ್ಲಿಸಿ ತನ್ನ ಕೈಗಳಲ್ಲಿ ಅದನ್ನು ಎತ್ತಿಕೊಂಡು ಅವರಿಗೆ--

37 Whosoever shall receive one of such little children in my name, receives me; and whosoever shall receive me, does not receive me, but him who sent me.ಯಾವನಾದರೂ ಇಂಥ ಮಕ್ಕಳಲ್ಲಿ ಒಂದನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿದರೆ ನನ್ನನ್ನು ಅಂಗೀಕರಿಸುತ್ತಾನೆ; ಮತ್ತು ಯಾವನು ನನ್ನನ್ನು ಅಂಗೀಕರಿಸುವನೋ ಅವನು ನನ್ನನ್ನಲ್ಲದೆ ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿಸುತ್ತಾನೆ ಅಂದನು.

38 And John answered him saying, Teacher, we saw some one casting out demons in thy name, who does not follow us, and we forbad him, because he does not follow us.ಯೋಹಾನನು ಆತನಿಗೆ -- ಬೋಧಕನೇ, ನಮ್ಮನ್ನು ಹಿಂಬಾಲಿಸದವನೊಬ್ಬನು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವದನ್ನು ನಾವು ನೋಡಿ ಅವನು ನಮ್ಮನ್ನು ಹಿಂಬಾಲಿಸುವವನಲ್ಲವಾದ್ದರಿಂದ ನಾವು ಅವನಿಗೆ ಅಡ್ಡಿಮಾಡಿದೆವು ಎಂದು ಹೇಳಿದನು.

39 But Jesus said, Forbid him not; for there is no one who shall do a miracle in my name, and be able soon [after] to speak ill of me;ಆದರೆ ಯೇಸು--ಅವನಿಗೆ ಅಡ್ಡಿಮಾಡಬೇಡಿರಿ; ಯಾಕಂದರೆ ನನ್ನ ಹೆಸರಿನಲ್ಲಿ ಅದ್ಭುತಕಾರ್ಯವನ್ನು ಮಾಡಿ ನನ್ನ ವಿಷಯದಲ್ಲಿ ಹಗುರಾಗಿ ಕೆಟ್ಟದ್ದನ್ನು ಮಾತನಾಡುವ ಒಬ್ಬನಾದರೂ ಇಲ್ಲ.

40 for he who is not against us is for us.ಯಾಕಂದರೆ ನಮಗೆ ವಿರೋಧಿಯಾಗಿರದವನು ನಮ್ಮ ಪಕ್ಷದವ ನಾಗಿದ್ದಾನೆ.

41 For whosoever shall give you a cup of water to drink in [my] name, because ye are Christ's, verily I say unto you, he shall in no wise lose his reward.ಇದಲ್ಲದೆ ನೀವು ಕ್ರಿಸ್ತನಿಗೆ ಸೇರಿದವ ರಾದದರಿಂದ ಯಾವನಾದರೂ ನನ್ನ ಹೆಸರಿನಲ್ಲಿ ನಿಮಗೆ ಒಂದು ತಂಬಿಗೆ ನೀರನ್ನು ಕೊಟ್ಟರೆ ಅವನು ತನ್ನ ಪ್ರತಿ ಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

42 And whosoever shall be a snare to one of the little ones who believe [in me], it were better for him if a millstone were hung about his neck, and he cast into the sea.ನನ್ನನ್ನು ನಂಬುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ತೂಗಹಾಕಿ ಅವ ನನ್ನು ಸಮುದ್ರದಲ್ಲಿ ಬಿಸಾಡಿಬಿಡುವದು ಅವನಿಗೆ ಒಳ್ಳೇದು.

43 And if thy hand serve as a snare to thee, cut it off: it is better for thee to enter into life maimed, than having thy two hands to go away into hell, into the fire unquenchable;ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು;

44 [where their worm dies not, and the fire is not quenched].ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ.

45 And if thy foot serve as a snare to thee, cut it off: it is better for thee to enter into life lame, than having thy two feet to be cast into hell, into the fire unquenchable;ನಿನ್ನ ಕಾಲು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದು ಹಾಕು; ಯಾಕಂದರೆ ನೀನು ಎರಡು ಕಾಲುಗಳುಳ್ಳವ ನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹಾಕ ಲ್ಪಡುವದಕ್ಕಿಂತ ಕುಂಟನಾಗಿ ಜೀವದಲ್ಲಿ ಸೇರುವದು ನಿನಗೆ ಒಳ್ಳೇದು.

46 [where their worm dies not, and the fire is not quenched].ಅಲ್ಲಿ ಅವರ ಹುಳವು ಸಾಯುವ ದಿಲ್ಲ ಮತ್ತು ಬೆಂಕಿಯು ಆರುವದಿಲ್ಲ.

47 And if thine eye serve as a snare to thee, cast it out: it is better for thee to enter into the kingdom of God with one eye, rather than having two eyes to be cast into the hell of fire,ನಿನ್ನ ಕಣ್ಣು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಿತ್ತುಬಿಡು; ಎರಡು ಕಣ್ಣುಗಳುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕ ಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯ ದಲ್ಲಿ ಸೇರುವದು ನಿನಗೆ ಒಳ್ಳೇದು.

48 where their worm dies not, and the fire is not quenched.ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ.

49 For every one shall be salted with fire, and every sacrifice shall be salted with salt.ಯಾಕಂದರೆ ಪ್ರತಿಯೊಬ್ಬನಿಗೂ ಬೆಂಕಿಯಿಂದ ಸಾರವಾಗಬೇಕು; ಮತ್ತು ಪ್ರತಿಯೊಂದು ಯಜ್ಞಕ್ಕೆ ಉಪ್ಪಿ ನಿಂದ ಸಾರವಾಗಬೇಕು.

50 Salt [is] good, but if the salt is become saltless, wherewith will ye season it? Have salt in yourselves, and be at peace with one another.ಉಪ್ಪು ಒಳ್ಳೆಯದು; ಆದರೆ ಉಪ್ಪು ತನ್ನ ಸಾರವನ್ನು ಕಳೆದುಕೊಂಡರೆ ಇನ್ನಾತರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ; ಮತ್ತು ಒಬ್ಬರ ಸಂಗಡಲೊಬ್ಬರು ಸಮಾಧಾನ ವಾಗಿರ್ರಿ ಅಂದನು.

Kannada Bible