Matthew 19:7
ಅದಕ್ಕೆ ಅವರು ಆತನಿಗೆ--ಹೀಗಾದರೆ ತ್ಯಾಗ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಯಾಕೆ ಅಪ್ಪಣೆಕೊಟ್ಟನು ಎಂದು ಕೇಳಿದರು.
They say | λέγουσιν | legousin | LAY-goo-seen |
unto him, | αὐτῷ | autō | af-TOH |
Why | Τί | ti | tee |
Moses did | οὖν | oun | oon |
then | Μωσῆς | mōsēs | moh-SASE |
command | ἐνετείλατο | eneteilato | ane-ay-TEE-la-toh |
give to | δοῦναι | dounai | THOO-nay |
a writing | βιβλίον | biblion | vee-VLEE-one |
of divorcement, | ἀποστασίου | apostasiou | ah-poh-sta-SEE-oo |
and | καὶ | kai | kay |
to put away? | ἀπολῦσαι | apolysai | ah-poh-LYOO-say |
her | αὐτήν | autēn | af-TANE |
Cross Reference
Deuteronomy 24:1
ಒಬ್ಬನು ಹೆಂಡತಿಯನ್ನು ತಕ್ಕೊಂಡು ಅವಳಿಗೆ ಗಂಡನಾದ ಮೇಲೆ ಅವಳಲ್ಲಿ ಅಶುದ್ಧ ವಾದದ್ದನ್ನು ನೋಡುವದರಿಂದ ಅವಳಿಗೆ ಅವನಿಂದ ಕಟಾಕ್ಷವಾಗದಿದ್ದರೆ ಅವಳಿಗೆ ತ್ಯಾಗಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು ಅವಳನ್ನು ತನ್ನ ಮನೆಯಿಂದ ಕಳುಹಿಸಿಬಿಡಬೇಕು.
Matthew 5:31
ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟುಬಿಡಬೇಕೆಂದಿದ್ದರೆ ಅವನು ಆಕೆಗೆ ತ್ಯಾಗಪತ್ರ ಕೊಡಲಿ ಎಂದು ಹೇಳಿಯದೆ;
Isaiah 50:1
ಕರ್ತನು ಹೀಗನ್ನುತ್ತಾನೆ--ನಾನು ಬಿಟ್ಟು ಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ಇಲ್ಲವೆ ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೇನು? ಇಗೋ, ನಿಮ್ಮ ಅಕ್ರಮ ಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ; ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.
Jeremiah 3:8
ಆಗ ನಾನು ನೋಡಿದ್ದೇ ನಂದರೆ, ಹಿಂದಿರುಗಿದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು ತ್ಯಾಗಪತ್ರವನ್ನು ಕೊಟ್ಟಿದ್ದಾಗ್ಯೂ ವಂಚನೆ ಯುಳ್ಳ ಅವಳ ಸಹೋದರಿಯಾದ ಯೆಹೂದಳು ಭಯಪಡದೆ ತಾನು ಕೂಡ ಹೋಗಿ ಸೂಳೆತನವನ್ನು ಮಾಡಿದಳು.
Malachi 2:16
ಇಸ್ರಾಯೇಲಿನ ದೇವರಾದ ಕರ್ತನು--ನಾನು ತಳ್ಳಿಬಿಡುವದನ್ನೂ ಒಬ್ಬನು ತನ್ನ ವಸ್ತ್ರವನ್ನು ಬಲಾತ್ಕಾರದಿಂದ ಮುಚ್ಚುವದನ್ನೂ ಹಗೆಮಾಡುತ್ತೇನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಹೀಗಿರುವದರಿಂದ ನೀವು ವಂಚಿಸದ ಹಾಗೆ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ.
Matthew 1:19
ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದು ಆಕೆಯನ್ನು ಬೈಲಿಗೆ ತರುವದಕ್ಕೆ ಮನಸ್ಸಿಲ್ಲದೆ ರಹಸ್ಯವಾಗಿ ಆಕೆಯನ್ನು ಬಿಟ್ಟುಬಿಡಬೇಕೆಂದು ಆಲೋಚಿಸುತ್ತಿದ್ದನು.
Mark 10:4
ಅದಕ್ಕೆ ಅವರು--ತ್ಯಾಗಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಅಪ್ಪಣೆಕೊಟ್ಟನು ಅಂದರು.