Matthew 25 - BBE (Kannada)
1 Then the kingdom of heaven will be like ten virgins, the friends of the bride, who took their lights, and went out with the purpose of meeting the husband.ಇದಲ್ಲದೆ ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತಕ್ಕೊಂಡು ಮದಲಿಂಗ ನನ್ನು ಎದುರುಗೊಳ್ಳುವದಕ್ಕಾಗಿ ಹೊರಟುಹೋದ ಹತ್ತುಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು.
2 And five of them were foolish, and five were wise.ಅವರಲ್ಲಿ ಐದುಮಂದಿ ಬುದ್ಧಿವಂತೆಯರೂ ಐದು ಮಂದಿ ಬುದ್ಧಿಹೀನರೂ ಇದ್ದರು.
3 For the foolish, when they took their lights, took no oil with them.ಬುದ್ಧಿಹೀನರು ತಮ್ಮ ದೀಪಗಳನ್ನು ತಕ್ಕೊಂಡು ತಮ್ಮೊಂದಿಗೆ ಎಣ್ಣೆಯನ್ನು ತಕ್ಕೊಳ್ಳಲಿಲ್ಲ,
4 But the wise took oil in their vessels with their lights.ಬುದ್ದಿವಂತೆಯರು ತಮ್ಮ ದೀಪಗಳೊ ಂದಿಗೆ ಪಾತ್ರೆಯಲ್ಲಿ ಎಣ್ಣೆಯನ್ನೂ ತಕ್ಕೊಂಡರು.
5 Now the husband was a long time in coming, and they all went to sleep.ಮದಲಿಂಗನು ತಡಮಾಡಿದಾಗ ಅವರೆಲ್ಲರೂ ತೂಕಡಿಸಿ ನಿದ್ರಿಸಿದರು.
6 But in the middle of the night there is a cry, The husband comes! Go out to him.ಮಧ್ಯರಾತ್ರಿಯಲ್ಲಿ--ಇಗೋ, ಮದಲಿಂಗನು ಬರುತ್ತಾನೆ; ಅವನನ್ನು ಎದುರುಗೊಳ್ಳುವದಕ್ಕಾಗಿ ಹೊರಡಿರಿ ಎಂಬ ಕೂಗಾ ಯಿತು.
7 Then all those virgins got up, and made ready their lights.ಆಗ ಆ ಕನ್ಯೆಯರೆಲ್ಲರೂ ಎದ್ದು ತಮ್ಮ ದೀಪಗಳನ್ನು ಸರಿಪಡಿಸಿಕೊಂಡರು;
8 And the foolish said to the wise, Give us of your oil; for our lights are going out.ಬುದ್ಧಿಹೀನರು ಬುದ್ಧಿವಂತೆಯರಿಗೆ-- ನಿಮ್ಮ ಎಣ್ಣೆಯಲ್ಲಿ ನಮಗೆ ಕೊಡಿರಿ; ಯಾಕಂದರೆ ನಮ್ಮ ದೀಪಗಳು ಆರಿಹೋಗಿವೆ ಅಂದರು.
9 But the wise made answer, saying, There may not be enough for us and you; it would be better for you to go to the traders and get oil for yourselves.ಆದರೆ ಬುದ್ಧಿವಂತೆಯರು ಪ್ರತ್ಯುತ್ತರ ವಾಗಿ--ಹಾಗಲ್ಲ, ಅದು ನಮಗೂ ನಿಮಗೂ ಸಾಲದೆ ಹೋದೀತು; ಆದದರಿಂದ ನೀವು ಮಾರು ವವರ ಬಳಿಗೆ ಹೋಗಿ ನಿಮಗೋಸ್ಕರ ಕೊಂಡು ಕೊಳ್ಳಿರಿ ಅಂದರು.
10 And while they went to get oil, the master came; and those who were ready went in with him to the feast: and the door was shut.ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು.
11 After that the other virgins came, saying, Lord, Lord, let us in.ಇದಾದ ಮೇಲೆ ಆ ಬೇರೆ ಕನ್ಯೆಯರು ಸಹ ಬಂದು--ಕರ್ತನೇ, ಕರ್ತನೇ, ನಮಗೆ ಬಾಗಲನ್ನು ತೆರೆ ಅಂದರು.
12 But he made answer and said, Truly I say to you, I have no knowledge of you.ಆದರೆ ಅವನು ಪ್ರತ್ಯುತ್ತರವಾಗಿ--ನಿಮ್ಮನ್ನು ಅರಿ ಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
13 Keep watch, then, because you are not certain of the day or of the hour.ಆದದರಿಂದ ಎಚ್ಚರವಾಗಿರ್ರಿ; ಯಾಕಂದರೆ ಮನುಷ್ಯಕುಮಾರನು ಬರುವ ದಿನ ವನ್ನಾಗಲೀ ಗಳಿಗೆಯನ್ನಾಗಲೀ ನೀವು ಅರಿಯದವರಾ ಗಿದ್ದೀರಿ ಅಂದನು.
14 For it is as when a man, about to take a journey, got his servants together, and gave them his property.ಯಾಕಂದರೆ ಪರಲೋಕರಾಜ್ಯವು ದೂರ ದೇಶಕ್ಕೆ ಪ್ರಯಾಣಮಾಡುವ ಒಬ್ಬ ಮನುಷ್ಯನು ತನ್ನ ಸ್ವಂತ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿದಂತೆ ಇದೆ.
15 And to one he gave five talents, to another two, to another one; to everyone as he was able; and he went on his journey.ಅವನು ಒಬ್ಬನಿಗೆ ಐದು ತಲಾಂತುಗಳನ್ನು ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ತಕ್ಷಣವೇ ಪ್ರಯಾಣ ಮಾಡಿದನು.
16 Straight away he who had been given the five talents went and did trade with them, and made five more.ತರುವಾಯ ಐದು ತಲಾಂತುಗಳನ್ನು ಹೊಂದಿದ ವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ತಲಾಂತುಗಳನ್ನು ಸಂಪಾದಿಸಿದನು.
17 In the same way he who had been given the two got two more.ಅದೇ ಪ್ರಕಾರ ಎರಡು ಹೊಂದಿದವನು ಸಹ ಬೇರೆ ಎರಡನ್ನು ಸಂಪಾದಿಸಿದನು.
18 But he who was given the one went away and put it in a hole in the earth, and kept his lord's money in a secret place.ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂಮಿಯನ್ನು ಅಗೆದು ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು.
19 Now after a long time the lord of those servants comes, and makes up his account with them.ಬಹುಕಾಲವಾದ ಮೇಲೆ ಆ ಸೇವಕರ ಯಜ ಮಾನನು ಬಂದು ಅವರಿಂದ ಲೆಕ್ಕಾ ತೆಗೆದುಕೊಂಡನು.
20 And he who had the five talents came with his other five talents, saying, Lord, you gave into my care five talents: see, I have got five more.ಆಗ ಐದು ತಲಾಂತುಗಳನ್ನು ಹೊಂದಿದ್ದವನು ಬಂದು ಬೇರೆ ಐದು ತಲಾಂತುಗಳನ್ನು ತಂದು--ಒಡೆಯನೇ, ನೀನು ನನಗೆ ಐದು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಬೇರೆ ಐದು ತಲಾಂತುಗಳನ್ನು ನಾನು ಸಂಪಾದಿಸಿದ್ದೇನೆ ಅಂದನು.
21 His lord said to him, Well done, good and true servant: you have been true in a small thing, I will give you control over great things: take your part in the joy of your lord.ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.
22 And he who had the two talents came and said, Lord, you gave into my care two talents: see, I have got two more.ಎರಡು ತಲಾಂತುಗಳನ್ನು ಹೊಂದಿದ್ದವನು ಸಹ ಬಂದು--ಒಡೆಯನೇ, ನೀನು ನನಗೆ ಎರಡು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಇನ್ನೂ ಎರಡು ತಲಾಂತುಗಳನ್ನು ನಾನು ಸಂಪಾದಿಸಿ ದ್ದೇನೆ ಅಂದನು.
23 His lord said to him, Well done, good and true servant: you have been true in a small thing, I will give you control over great things: take your part in the joy of your lord.ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇ ದನ್ನು ಮಾಡಿದ್ದೀ; ಸ್ವಲ್ಪವಾದವುಗಳಲ್ಲಿ ನೀನು ನಂಬಿಗ ಸ್ತನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.
24 And he who had had the one talent came and said, Lord, I had knowledge that you are a hard man, getting in grain where you have not put seed, and making profits for which you have done no work:ಆಗ ಒಂದು ತಲಾಂತು ಹೊಂದಿದ್ದ ವನು ಬಂದು--ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು;
25 And I was in fear, and went away, and put your talent in the earth: here is what is yours.ಅದಕ್ಕೆ ನಾನು ಭಯಪಟ್ಟು ಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು. ಇಗೋ, ನಿನ್ನದು ನಿನಗೆ ಸಲ್ಲಿದೆ ಅಂದನು.
26 But his lord in answer said to him, You are a bad and unready servant; if you had knowledge that I get in grain where I did not put seed, and make profits for which I have done no work,ಅದಕ್ಕೆ ಅವನ ಯಜ ಮಾನನು ಪ್ರತ್ಯುತ್ತರವಾಗಿ--ಮೈಗಳ್ಳನಾದ ಕೆಟ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆ ಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ.
27 Why, then, did you not put my money in the bank, and at my coming I would have got back what is mine with interest?ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗಾಗಿ ಕೊಡತಕ್ಕದ್ದಾಗಿತ್ತು; ನಾನು ಬಂದಾಗ ನನ್ನ ಸ್ವಂತದ್ದನ್ನು ಬಡ್ಡಿ ಸಹಿತವಾಗಿ ಹೊಂದಿ ಕೊಳ್ಳುತ್ತಿದ್ದೆನು.
28 Take away, then, his talent and give it to him who has the ten talents.ಆ ತಲಾಂತನ್ನು ತೆಗೆದುಕೊಂಡು ಹತ್ತು ತಲಾಂತುಗಳುಳ್ಳವನಿಗೆ ಕೊಡಿರಿ.
29 For to everyone who has will be given, and he will have more: but from him who has not, even what he has will be taken away.ಇದ್ದ ಪ್ರತಿ ಯೊಬ್ಬನಿಗೆ ಕೊಡಲ್ಪಡುವದು ಮತ್ತು ಅವನಿಗೆ ಸಮೃದ್ಧಿ ಯಾಗುವದು; ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ತೆಗೆಯಲ್ಪಡುವದು.
30 And put out the servant who is of no profit into the outer dark: there will be weeping and cries of sorrow.ಮತ್ತು ನಿಷ್ಪ್ರಯೋ ಜಕನಾದ ಈ ಸೇವಕನನ್ನು ನೀವು ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಅಂದನು.
31 But when the Son of man comes in his glory, and all the angels with him, then will he be seated in his glory:ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;
32 And before him all the nations will come together; and they will be parted one from another, as the sheep are parted from the goats by the keeper.ಮತ್ತು ಆತನ ಮುಂದೆ ಎಲ್ಲಾ ಜನಾಂಗಗಳವರು ಕೂಡಿಸಲ್ಪ ಡುವರು; ಆಗ ಕುರುಬನು ತನ್ನ ಕುರಿಗಳನ್ನು ಆಡುಗ ಳಿಂದ ಪ್ರತ್ಯೇಕಿಸುವಂತೆಯೇ ಆತನು ಅವರನ್ನು ಪ್ರತ್ಯೇ ಕಿಸುವನು;
33 And he will put the sheep on his right, but the goats on the left.ಆತನು ಕುರಿಗಳನ್ನು ತನ್ನ ಬಲಗಡೆ ಯಲ್ಲಿಯೂ ಆಡುಗಳನ್ನು ತನ್ನ ಎಡಗಡೆಯಲ್ಲಿಯೂ ನಿಲ್ಲಿಸುವನು.
34 Then will the King say to those on his right, Come, you who have the blessing of my Father, into the kingdom made ready for you before the world was:ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
35 For I was in need of food, and you gave it to me: I was in need of drink, and you gave it to me: I was wandering, and you took me in;ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ;
36 I had no clothing, and you gave it to me: when I was ill, or in prison, you came to me.ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು.
37 Then will the upright make answer to him, saying, Lord, when did we see you in need of food, and give it to you? or in need of drink, and give it to you?ಆಗ ಆ ನೀತಿವಂತರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಯಾವಾಗ ನೀನು ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿ ದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವದಕ್ಕೆ ಕೊಟ್ಟೆವು? ಯಾವಾಗ
38 And when did we see you wandering, and take you in? or without clothing, and give it to you?ನೀನು ಪರದೇಶಿಯಾ ಗಿರುವದನ್ನು ನಾವು ನೋಡಿ ನಿನ್ನನ್ನು ಒಳಕ್ಕೆ ಸೇರಿಸಿ ಕೊಂಡೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು?
39 And when did we see you ill, or in prison, and come to you?ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನನ್ನು ನೋಡಿ ನಿನ್ನ ಬಳಿಗೆ ಬಂದೆವು ಎಂದು ಹೇಳುವರು.
40 And the King will make answer and say to them, Truly I say to you, Because you did it to the least of these my brothers, you did it to me.ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
41 Then will he say to those on the left, Go from me, you cursed ones, into the eternal fire which is ready for the Evil One and his angels:ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
42 For I was in need of food, and you gave it not to me; I was in need of drink, and you gave it not to me:ನಾನು ಹಸಿದವನಾಗಿದ್ದೆನು, ನೀವು ನನಗೆ ಊಟಕ್ಕೆ ಕೊಡಲಿಲ್ಲ; ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿ ಯುವದಕ್ಕೆ ಕೊಡಲಿಲ್ಲ.
43 I was wandering, and you took me not in; without clothing, and you gave me no clothing; ill, and in prison, and you came not to me.ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಗೆ ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂಧಿಸಲಿಲ್ಲ ಎಂದು ಹೇಳುವನು.
44 Then will they make answer, saying, Lord, when did we see you in need of food or drink, or wandering, or without clothing, or ill, or in prison, and did not take care of you?ಆಗ ಅವರು ಸಹ ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನು ಯಾವಾಗ ಹಸಿದದ್ದನ್ನೂ ಬಾಯರಿದ್ದನ್ನೂ ಪರದೇಶಿ ಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥ ನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ನೋಡಿ ನಿನಗೆ ಉಪಚಾರ ಮಾಡಲಿಲ್ಲ ಎಂದು ಹೇಳುವರು.
45 Then will he make answer to them, saying, Truly I say to you, Because you did it not to the least of these, you did it not to me.ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.
46 And these will go away into eternal punishment; but the upright into eternal life.ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
Kannada Bible