Bible

Matthew 25 - WEB (Kannada)

1 "Then the Kingdom of Heaven will be like ten virgins, who took their lamps, and went out to meet the bridegroom.ಇದಲ್ಲದೆ ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತಕ್ಕೊಂಡು ಮದಲಿಂಗ ನನ್ನು ಎದುರುಗೊಳ್ಳುವದಕ್ಕಾಗಿ ಹೊರಟುಹೋದ ಹತ್ತುಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು.

2 Five of them were foolish, and five were wise.ಅವರಲ್ಲಿ ಐದುಮಂದಿ ಬುದ್ಧಿವಂತೆಯರೂ ಐದು ಮಂದಿ ಬುದ್ಧಿಹೀನರೂ ಇದ್ದರು.

3 Those who were foolish, when they took their lamps, took no oil with them,ಬುದ್ಧಿಹೀನರು ತಮ್ಮ ದೀಪಗಳನ್ನು ತಕ್ಕೊಂಡು ತಮ್ಮೊಂದಿಗೆ ಎಣ್ಣೆಯನ್ನು ತಕ್ಕೊಳ್ಳಲಿಲ್ಲ,

4 but the wise took oil in their vessels with their lamps.ಬುದ್ದಿವಂತೆಯರು ತಮ್ಮ ದೀಪಗಳೊ ಂದಿಗೆ ಪಾತ್ರೆಯಲ್ಲಿ ಎಣ್ಣೆಯನ್ನೂ ತಕ್ಕೊಂಡರು.

5 Now while the bridegroom delayed, they all slumbered and slept.ಮದಲಿಂಗನು ತಡಮಾಡಿದಾಗ ಅವರೆಲ್ಲರೂ ತೂಕಡಿಸಿ ನಿದ್ರಿಸಿದರು.

6 But at midnight there was a cry, 'Behold! The bridegroom is coming! Come out to meet him!'ಮಧ್ಯರಾತ್ರಿಯಲ್ಲಿ--ಇಗೋ, ಮದಲಿಂಗನು ಬರುತ್ತಾನೆ; ಅವನನ್ನು ಎದುರುಗೊಳ್ಳುವದಕ್ಕಾಗಿ ಹೊರಡಿರಿ ಎಂಬ ಕೂಗಾ ಯಿತು.

7 Then all those virgins arose, and trimmed their lamps.ಆಗ ಆ ಕನ್ಯೆಯರೆಲ್ಲರೂ ಎದ್ದು ತಮ್ಮ ದೀಪಗಳನ್ನು ಸರಿಪಡಿಸಿಕೊಂಡರು;

8 The foolish said to the wise, 'Give us some of your oil, for our lamps are going out.'ಬುದ್ಧಿಹೀನರು ಬುದ್ಧಿವಂತೆಯರಿಗೆ-- ನಿಮ್ಮ ಎಣ್ಣೆಯಲ್ಲಿ ನಮಗೆ ಕೊಡಿರಿ; ಯಾಕಂದರೆ ನಮ್ಮ ದೀಪಗಳು ಆರಿಹೋಗಿವೆ ಅಂದರು.

9 But the wise answered, saying, 'What if there isn't enough for us and you? You go rather to those who sell, and buy for yourselves.'ಆದರೆ ಬುದ್ಧಿವಂತೆಯರು ಪ್ರತ್ಯುತ್ತರ ವಾಗಿ--ಹಾಗಲ್ಲ, ಅದು ನಮಗೂ ನಿಮಗೂ ಸಾಲದೆ ಹೋದೀತು; ಆದದರಿಂದ ನೀವು ಮಾರು ವವರ ಬಳಿಗೆ ಹೋಗಿ ನಿಮಗೋಸ್ಕರ ಕೊಂಡು ಕೊಳ್ಳಿರಿ ಅಂದರು.

10 While they went away to buy, the bridegroom came, and those who were ready went in with him to the marriage feast, and the door was shut.ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು.

11 Afterward the other virgins also came, saying, 'Lord, Lord, open to us.'ಇದಾದ ಮೇಲೆ ಆ ಬೇರೆ ಕನ್ಯೆಯರು ಸಹ ಬಂದು--ಕರ್ತನೇ, ಕರ್ತನೇ, ನಮಗೆ ಬಾಗಲನ್ನು ತೆರೆ ಅಂದರು.

12 But he answered, 'Most assuredly I tell you, I don't know you.'ಆದರೆ ಅವನು ಪ್ರತ್ಯುತ್ತರವಾಗಿ--ನಿಮ್ಮನ್ನು ಅರಿ ಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.

13 Watch therefore, for you don't know the day nor the hour in which the Son of Man is coming.ಆದದರಿಂದ ಎಚ್ಚರವಾಗಿರ್ರಿ; ಯಾಕಂದರೆ ಮನುಷ್ಯಕುಮಾರನು ಬರುವ ದಿನ ವನ್ನಾಗಲೀ ಗಳಿಗೆಯನ್ನಾಗಲೀ ನೀವು ಅರಿಯದವರಾ ಗಿದ್ದೀರಿ ಅಂದನು.

14 "For it is like a man, going into another country, who called his own servants, and entrusted his goods to them.ಯಾಕಂದರೆ ಪರಲೋಕರಾಜ್ಯವು ದೂರ ದೇಶಕ್ಕೆ ಪ್ರಯಾಣಮಾಡುವ ಒಬ್ಬ ಮನುಷ್ಯನು ತನ್ನ ಸ್ವಂತ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿದಂತೆ ಇದೆ.

15 To one he gave five talents, to another two, to another one; to each according to his own ability. Then he went on his journey.ಅವನು ಒಬ್ಬನಿಗೆ ಐದು ತಲಾಂತುಗಳನ್ನು ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ತಕ್ಷಣವೇ ಪ್ರಯಾಣ ಮಾಡಿದನು.

16 Immediately he who received the five talents went and traded with them, and made another five talents.ತರುವಾಯ ಐದು ತಲಾಂತುಗಳನ್ನು ಹೊಂದಿದ ವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ತಲಾಂತುಗಳನ್ನು ಸಂಪಾದಿಸಿದನು.

17 In like manner he also who got the two gained another two.ಅದೇ ಪ್ರಕಾರ ಎರಡು ಹೊಂದಿದವನು ಸಹ ಬೇರೆ ಎರಡನ್ನು ಸಂಪಾದಿಸಿದನು.

18 But he who received the one went away and dug in the earth, and hid his lord's money.ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂಮಿಯನ್ನು ಅಗೆದು ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು.

19 "Now after a long time the lord of those servants came, and reconciled accounts with them.ಬಹುಕಾಲವಾದ ಮೇಲೆ ಆ ಸೇವಕರ ಯಜ ಮಾನನು ಬಂದು ಅವರಿಂದ ಲೆಕ್ಕಾ ತೆಗೆದುಕೊಂಡನು.

20 He who received the five talents came and brought another five talents, saying, 'Lord, you delivered to me five talents. Behold, I have gained another five talents besides them.'ಆಗ ಐದು ತಲಾಂತುಗಳನ್ನು ಹೊಂದಿದ್ದವನು ಬಂದು ಬೇರೆ ಐದು ತಲಾಂತುಗಳನ್ನು ತಂದು--ಒಡೆಯನೇ, ನೀನು ನನಗೆ ಐದು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಬೇರೆ ಐದು ತಲಾಂತುಗಳನ್ನು ನಾನು ಸಂಪಾದಿಸಿದ್ದೇನೆ ಅಂದನು.

21 "His lord said to him, 'Well done, good and faithful servant. You have been faithful over a few things, I will set you over many things. Enter into the joy of your lord.'ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.

22 "He also who got the two talents came and said, 'Lord, you delivered to me two talents. Behold, I have gained another two talents besides them.'ಎರಡು ತಲಾಂತುಗಳನ್ನು ಹೊಂದಿದ್ದವನು ಸಹ ಬಂದು--ಒಡೆಯನೇ, ನೀನು ನನಗೆ ಎರಡು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಇನ್ನೂ ಎರಡು ತಲಾಂತುಗಳನ್ನು ನಾನು ಸಂಪಾದಿಸಿ ದ್ದೇನೆ ಅಂದನು.

23 "His lord said to him, 'Well done, good and faithful servant. You have been faithful over a few things, I will set you over many things. Enter into the joy of your lord.'ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇ ದನ್ನು ಮಾಡಿದ್ದೀ; ಸ್ವಲ್ಪವಾದವುಗಳಲ್ಲಿ ನೀನು ನಂಬಿಗ ಸ್ತನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.

24 "He also who had received the one talent came and said, 'Lord, I knew you that you are a hard man, reaping where you did not sow, and gathering where you did not scatter.ಆಗ ಒಂದು ತಲಾಂತು ಹೊಂದಿದ್ದ ವನು ಬಂದು--ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು;

25 I was afraid, and went away and hid your talent in the earth. Behold, you have what is yours.'ಅದಕ್ಕೆ ನಾನು ಭಯಪಟ್ಟು ಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು. ಇಗೋ, ನಿನ್ನದು ನಿನಗೆ ಸಲ್ಲಿದೆ ಅಂದನು.

26 "But his lord answered him, 'You wicked and slothful servant. You knew that I reap where I didn't sow, and gather where I didn't scatter.ಅದಕ್ಕೆ ಅವನ ಯಜ ಮಾನನು ಪ್ರತ್ಯುತ್ತರವಾಗಿ--ಮೈಗಳ್ಳನಾದ ಕೆಟ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆ ಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ.

27 You ought therefore to have deposited my money with the bankers, and at my coming I should have received back my own with interest.ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗಾಗಿ ಕೊಡತಕ್ಕದ್ದಾಗಿತ್ತು; ನಾನು ಬಂದಾಗ ನನ್ನ ಸ್ವಂತದ್ದನ್ನು ಬಡ್ಡಿ ಸಹಿತವಾಗಿ ಹೊಂದಿ ಕೊಳ್ಳುತ್ತಿದ್ದೆನು.

28 Take away therefore the talent from him, and give it to him who has the ten talents.ಆ ತಲಾಂತನ್ನು ತೆಗೆದುಕೊಂಡು ಹತ್ತು ತಲಾಂತುಗಳುಳ್ಳವನಿಗೆ ಕೊಡಿರಿ.

29 For to everyone who has will be given, and he will have abundance, but from him who has not, even that which he has will be taken away.ಇದ್ದ ಪ್ರತಿ ಯೊಬ್ಬನಿಗೆ ಕೊಡಲ್ಪಡುವದು ಮತ್ತು ಅವನಿಗೆ ಸಮೃದ್ಧಿ ಯಾಗುವದು; ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ತೆಗೆಯಲ್ಪಡುವದು.

30 Throw out the unprofitable servant into the outer darkness, where there will be weeping and gnashing of teeth.'ಮತ್ತು ನಿಷ್ಪ್ರಯೋ ಜಕನಾದ ಈ ಸೇವಕನನ್ನು ನೀವು ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಅಂದನು.

31 "But when the Son of Man comes in his glory, and all the holy angels with him, then he will sit on the throne of his glory.ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;

32 Before him all the nations will be gathered, and he will separate them one from another, as a shepherd separates the sheep from the goats.ಮತ್ತು ಆತನ ಮುಂದೆ ಎಲ್ಲಾ ಜನಾಂಗಗಳವರು ಕೂಡಿಸಲ್ಪ ಡುವರು; ಆಗ ಕುರುಬನು ತನ್ನ ಕುರಿಗಳನ್ನು ಆಡುಗ ಳಿಂದ ಪ್ರತ್ಯೇಕಿಸುವಂತೆಯೇ ಆತನು ಅವರನ್ನು ಪ್ರತ್ಯೇ ಕಿಸುವನು;

33 He will set the sheep on his right hand, but the goats on the left.ಆತನು ಕುರಿಗಳನ್ನು ತನ್ನ ಬಲಗಡೆ ಯಲ್ಲಿಯೂ ಆಡುಗಳನ್ನು ತನ್ನ ಎಡಗಡೆಯಲ್ಲಿಯೂ ನಿಲ್ಲಿಸುವನು.

34 Then the King will tell those on his right hand, 'Come, blessed of my Father, inherit the Kingdom prepared for you from the foundation of the world;ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;

35 for I was hungry, and you gave me food to eat; I was thirsty, and you gave me drink; I was a stranger, and you took me in;ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ;

36 naked, and you clothed me; I was sick, and you visited me; I was in prison, and you came to me.'ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು.

37 "Then the righteous will answer him, saying, 'Lord, when did we see you hungry, and feed you; or thirsty, and give you a drink?ಆಗ ಆ ನೀತಿವಂತರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಯಾವಾಗ ನೀನು ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿ ದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವದಕ್ಕೆ ಕೊಟ್ಟೆವು? ಯಾವಾಗ

38 When did we see you as a stranger, and take you in; or naked, and clothe you?ನೀನು ಪರದೇಶಿಯಾ ಗಿರುವದನ್ನು ನಾವು ನೋಡಿ ನಿನ್ನನ್ನು ಒಳಕ್ಕೆ ಸೇರಿಸಿ ಕೊಂಡೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು?

39 When did we see you sick, or in prison, and come to you?'ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನನ್ನು ನೋಡಿ ನಿನ್ನ ಬಳಿಗೆ ಬಂದೆವು ಎಂದು ಹೇಳುವರು.

40 "The King will answer them, 'Most assuredly I tell you, inasmuch as you did it to one of the least of these my brothers{The word for "brothers" here may be also correctly translated "brothers and sisters" or "siblings."}, you did it to me.'ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.

41 Then he will say also to those on the left hand, 'Depart from me, you cursed, into the eternal fire which is prepared for the devil and his angels;ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.

42 for I was hungry, and you didn't give me food to eat; I was thirsty, and you gave me no drink;ನಾನು ಹಸಿದವನಾಗಿದ್ದೆನು, ನೀವು ನನಗೆ ಊಟಕ್ಕೆ ಕೊಡಲಿಲ್ಲ; ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿ ಯುವದಕ್ಕೆ ಕೊಡಲಿಲ್ಲ.

43 I was a stranger, and you didn't take me in; naked, and you didn't clothe me; sick, and in prison, and you didn't visit me.'ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಗೆ ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂಧಿಸಲಿಲ್ಲ ಎಂದು ಹೇಳುವನು.

44 "Then they will also answer, saying, 'Lord, when did we see you hungry, or thirsty, or a stranger, or naked, or sick, or in prison, and didn't help you?'ಆಗ ಅವರು ಸಹ ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನು ಯಾವಾಗ ಹಸಿದದ್ದನ್ನೂ ಬಾಯರಿದ್ದನ್ನೂ ಪರದೇಶಿ ಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥ ನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ನೋಡಿ ನಿನಗೆ ಉಪಚಾರ ಮಾಡಲಿಲ್ಲ ಎಂದು ಹೇಳುವರು.

45 "Then he will answer them, saying, 'Most assuredly I tell you, inasmuch as you didn't do it to one of the least of these, you didn't do it to me.'ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.

46 These will go away into eternal punishment, but the righteous into eternal life."ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.

Kannada Bible