Matthew 28 - YLT (Kannada)
1 And on the eve of the sabbaths, at the dawn, toward the first of the sabbaths, came Mary the Magdalene, and the other Mary, to see the sepulchre,ಸಬ್ಬತ್ತಿನ ಕೊನೆಯಲ್ಲಿ ವಾರದ ಮೊದಲ ನೆಯ ದಿನವು ಉದಯವಾಗುತ್ತಿದ್ದಾಗಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಬಂದರು.
2 and lo, there came a great earthquake, for a messenger of the Lord, having come down out of heaven, having come, did roll away the stone from the door, and was sitting upon it,ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು.
3 and his countenance was as lightning, and his clothing white as snow,ಅವನ ಮುಖವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು.
4 and from the fear of him did the keepers shake, and they became as dead men.ಕಾವಲುಗಾರರು ಅವನಿಗೆ ಭಯಪಟ್ಟು ನಡುಗುತ್ತಾ ಸತ್ತವರ ಹಾಗಾದರು.
5 And the messenger answering said to the women, `Fear not ye, for I have known that Jesus, who hath been crucified, ye seek;ಆ ದೂತನು ಸ್ತ್ರೀಯರಿಗೆ-- ನೀವು ಭಯಪಡಬೇಡಿರಿ; ಯಾಕಂದರೆ ಶಿಲುಬೆಗೆ ಹಾಕಲ್ಪಟ್ಟವನಾದ ಯೇಸುವನ್ನು ನೀವು ಹುಡುಕುತ್ತೀರೆಂದು ನಾನು ಬಲ್ಲೆನು.
6 he is not here, for he rose, as he said; come, see the place where the Lord was lying;ಆತನು ಇಲ್ಲಿ ಇಲ್ಲ; ಯಾಕಂದರೆ ಆತನು ಹೇಳಿರುವ ಪ್ರಕಾರ ಆತನು ಎದ್ದಿದ್ದಾನೆ; ಕರ್ತನು ಮಲಗಿದ್ದ ಸ್ಥಳವನ್ನು ಬಂದು ನೋಡಿರಿ.
7 and having gone quickly, say ye to his disciples, that he rose from the dead; and lo, he doth go before you to Galilee, there ye shall see him; lo, I have told you.'ಬೇಗನೆ ಹೋಗಿ ಆತನು ಸತ್ತವರೊಳಗಿಂದ ಎದ್ದಿದ್ದಾನೆ ಎಂದು ಆತನ ಶಿಷ್ಯರಿಗೆ ಹೇಳಿರಿ; ಮತ್ತು ಇಗೋ, ನಿಮಗೆ ಮುಂದಾಗಿ ಆತನು ಗಲಿಲಾಯಕ್ಕೆ ಹೋಗುತ್ತಾನೆ. ನೀವು ಆತನನ್ನು ಅಲ್ಲಿ ಕಾಣುವಿರಿ; ಇಗೋ, ನಾನು ನಿಮಗೆ ಹೇಳಿದ್ದೇನೆ ಅಂದನು.
8 And having gone forth quickly from the tomb, with fear and great joy, they ran to tell to his disciples;ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಸಮಾಧಿಯಿಂದ ಬೇಗನೆ ಹೊರಟು ಆತನ ಶಿಷ್ಯರಿಗೆ ತಿಳಿಸುವದಕ್ಕಾಗಿ ಓಡಿಹೋದರು.
9 and as they were going to tell to his disciples, then lo, Jesus met them, saying, `Hail!' and they having come near, laid hold of his feet, and did bow to him.ಅವರು ಆತನ ಶಿಷ್ಯರಿಗೆ ತಿಳಿಸು ವದಕ್ಕೆ ಹೋಗುತ್ತಿದ್ದಾಗ ಇಗೋ, ಯೇಸು ಅವರನ್ನು ಸಂಧಿಸಿ--ಶುಭವಾಗಲಿ ಅಂದನು. ಆಗ ಅವರು ಬಂದು ಆತನ ಪಾದಗಳನ್ನು ಹಿಡಿದು ಆತನನ್ನು ಆರಾಧಿಸಿದರು.
10 Then saith Jesus to them, `Fear ye not, go away, tell to my brethren that they may go away to Galilee, and there they shall see me.'ಆಗ ಯೇಸು ಅವರಿಗೆ-- ಭಯ ಪಡಬೇಡಿರಿ; ನನ್ನ ಸಹೋದರರು ಗಲಿಲಾಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವ ರೆಂದೂ ಹೋಗಿ ಅವರಿಗೆ ಹೇಳಿರಿ ಅಂದನು.
11 And while they are going on, lo, certain of the watch having come to the city, told to the chief priests all the things that happened,ಅವರು ಹೋಗುತ್ತಿರುವಾಗ ಇಗೋ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ಪ್ರಧಾನ ಯಾಜಕರಿಗೆ ನಡೆದ ಸಂಗತಿಗಳನ್ನೆಲ್ಲಾ ಹೇಳಿದರು.
12 and having been gathered together with the elders, counsel also having taken, they gave much money to the soldiers,ಮತ್ತು ಇವರು ಹಿರಿಯರೊಂದಿಗೆ ಕೂಡಿಬಂದು ಆಲೋಚನೆ ಮಾಡಿ ಸೈನಿಕರಿಗೆ ಬಹಳ ಹಣಕೊಟ್ಟು --
13 saying, `Say ye, that his disciples having come by night, stole him -- we being asleep;ನಾವು ನಿದ್ರೆ ಮಾಡುತ್ತಿರುವಾಗ ಆತನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದು ಕೊಂಡುಹೋದ ರೆಂದು ನೀವು ಹೇಳಿರಿ;
14 and if this be heard by the governor, we will persuade him, and you keep free from anxiety.'ಇದನ್ನು ಅಧಿಪತಿಯು ಕೇಳಿಸಿಕೊಂಡರೆ ನಿಮ್ಮನ್ನು ತಪ್ಪಿಸುವ ಹಾಗೆ ನಾವು ಅವನನ್ನು ಒಡಂಬಡಿಸುವೆವು ಅಂದರು.
15 And they, having received the money, did as they were taught, and this account was spread abroad among Jews till this day.ಹೀಗೆ ಅವರು ಆ ಹಣವನ್ನು ತಕ್ಕೊಂಡು ತಮಗೆ ಕಲಿಸಿದ ಹಾಗೆ ಮಾಡಿದರು. ಈ ಮಾತು ಸಾಧಾರಣವಾಗಿ ಈ ದಿನದ ವರೆಗೂ ಯೆಹೂದ್ಯರ ಮಧ್ಯದಲ್ಲಿ ಹರಡಿ ಕೊಂಡಿದೆ.
16 And the eleven disciples went to Galilee, to the mount where Jesus appointed them,ಆಗ ಯೇಸು ತಮಗೆ ನೇಮಿಸಿದ ಗಲಿಲಾಯ ದಲ್ಲಿರುವ ಬೆಟ್ಟಕ್ಕೆ ಹನ್ನೊಂದು ಮಂದಿ ಶಿಷ್ಯರು ಹೋದರು.
17 and having seen him, they bowed to him, but some did waver.ಅವರು ಆತನನ್ನು ನೋಡಿ ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹ ಪಟ್ಟರು.
18 And having come near, Jesus spake to them, saying, `Given to me was all authority in heaven and on earth;ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
19 having gone, then, disciple all the nations, (baptizing them -- to the name of the Father, and of the Son, and of the Holy Spirit,ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;
20 teaching them to observe all, whatever I did command you,) and lo, I am with you all the days -- till the full end of the age.'ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
Kannada Bible