Bible

Matthew 5 - BBE (Kannada)

1 And seeing great masses of people he went up into the mountain; and when he was seated his disciples came to him.ಮತ್ತು ಆತನು ಜನಸಮೂಹಗಳನ್ನು ನೋಡಿದವನಾಗಿ ಪರ್ವತವನ್ನೇರಿದನು; ಅಲ್ಲಿ ಆತನು ಕೂತುಕೊಂಡಾಗ ಆತನ ಶಿಷ್ಯರು ಆತನ ಬಳಿಗೆ ಬಂದರು.

2 And with these words he gave them teaching, saying,ಆತನು ಬಾಯಿ ತೆರೆದು ಅವರಿಗೆ ಬೋಧಿಸಿ ಹೇಳಿದ್ದೇನಂದರೆ --

3 Happy are the poor in spirit: for the kingdom of heaven is theirs.ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.

4 Happy are those who are sad: for they will be comforted.ದುಃಖಪಡುವವರು ಧನ್ಯರು; ಯಾಕಂದರೆ ಅವರು ಆದರಣೆ ಹೊಂದುವರು.

5 Happy are the gentle: for the earth will be their heritage.ಸಾತ್ವಿಕರು ಧನ್ಯರು; ಯಾಕಂದರೆ ಅವರು ಭೂಮಿಯನ್ನು ಬಾಧ್ಯವಾಗಿ ಹೊಂದುವರು.

6 Happy are those whose heart's desire is for righteousness: for they will have their desire.ನೀತಿಗೋಸ್ಕರ ಹಸಿದು ಬಾಯಾರಿದವರು ಧನ್ಯರು; ಯಾಕಂದರೆ ಅವರು ತೃಪ್ತಿ ಹೊಂದುವರು.

7 Happy are those who have mercy: for they will be given mercy.ಕರುಣೆಯುಳ್ಳವರು ಧನ್ಯರು; ಯಾಕಂದರೆ ಅವರು ಕರುಣೆ ಹೊಂದುವರು.

8 Happy are the clean in heart: for they will see God.ಶುದ್ಧ ಹೃದಯವುಳ್ಳವರು ಧನ್ಯರು; ಯಾಕಂದರೆ ಅವರು ದೇವರನ್ನು ನೋಡುವರು.

9 Happy are the peacemakers: for they will be named sons of God.ಸಮಾಧಾನ ಮಾಡುವವರು ಧನ್ಯರು; ಯಾಕಂದರೆ ಅವರು ದೇವರ ಮಕ್ಕಳೆಂದು ಕರೆಯಲ್ಪಡುವರು.

10 Happy are those who are attacked on account of righteousness: for the kingdom of heaven will be theirs.ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.

11 Happy are you when men give you a bad name, and are cruel to you, and say all evil things against you falsely, because of me.ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು.

12 Be glad and full of joy; for great is your reward in heaven: for so were the prophets attacked who were before you.ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.

13 You are the salt of the earth; but if its taste goes from the salt, how will you make it salt again? it is then good for nothing but to be put out and crushed under foot by men.ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತ ರಿಂದ ರುಚಿ ಬಂದೀತು? ಅಂದಿನಿಂದ ಅದು ನಿಷ್ಪ್ರಯೋಜನವಾದದ್ದಾಗಿ ಹೊರಗೆ ಬಿಸಾಡಲ್ಪಟ್ಟು ಜನರಿಂದ ತುಳಿದಾಡಲ್ಪಡುವದು.

14 You are the light of the world. A town put on a hill may be seen by all.ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಇರುವ ಪಟ್ಟಣವು ಮರೆಯಾಗಿರಲಾರದು.

15 And a burning light is not put under a vessel, but on its table; so that its rays may be shining on all who are in the house.ಇಲ್ಲವೆ ಮನುಷ್ಯರು ದೀಪವನ್ನು ಹೊತ್ತಿಸಿ ಕೊಳಗದೊಳಗೆ ಇಡದೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವದು.

16 Even so let your light be shining before men, so that they may see your good works and give glory to your Father in heaven.ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.

17 Let there be no thought that I have come to put an end to the law or the prophets. I have not come for destruction, but to make complete.ನ್ಯಾಯಪ್ರಮಾಣವನ್ನಾಗಲೀ ಪ್ರವಾದನೆಗಳ ನ್ನಾಗಲೀ ಹಾಳುಮಾಡುವದಕ್ಕಾಗಿ ನಾನು ಬಂದೆ ನೆಂದು ನೆನಸಬೇಡಿರಿ, ಹಾಳುಮಾಡುವದಕ್ಕಾಗಿ ಅಲ್ಲ; ಆದರೆ ನೆರವೇರಿಸುವದಕ್ಕಾಗಿ ಬಂದೆನು.

18 Truly I say to you, Till heaven and earth come to an end, not the smallest letter or part of a letter will in any way be taken from the law, till all things are done.ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

19 Whoever then goes against the smallest of these laws, teaching men to do the same, will be named least in the kingdom of heaven; but he who keeps the laws, teaching others to keep them, will be named great in the kingdom of heaven.ಆದದರಿಂದ ಯಾವನಾದರೂ ಈ ಆಜ್ಞೆಗಳಲ್ಲಿ ಚಿಕ್ಕದಾದ ಒಂದನ್ನು ಮಾರಿ ಹಾಗೆಯೇ ಜನರಿಗೆ ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅಲ್ಪನೆಂದು ಕರೆಯಲ್ಪಡುವನು; ಯಾವನಾದರೂ ಇವುಗಳನ್ನು ಕೈಕೊಂಡು ಬೋಧಿಸಿದರೆ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಕರೆಯಲ್ಪಡು ವನು.

20 For I say to you, If your righteousness is not greater than the righteousness of the scribes and Pharisees, you will never go into the kingdom of heaven.ನಾನು ನಿಮಗೆ ಹೇಳುವದೇನಂದರೆ-- ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ನಿಮ್ಮ ನೀತಿಯು ಹೆಚ್ಚಿನದಾಗಿರದ ಹೊರತು ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವದಕ್ಕಾಗುವದೇ ಇಲ್ಲ.

21 You have knowledge that it was said in old times, You may not put to death; and, Whoever puts to death will be in danger of being judged:ನೀನು ನರಹತ್ಯ ಮಾಡಬಾರದು; ಯಾವನಾ ದರೂ ನರಹತ್ಯಮಾಡಿದರೆ ನ್ಯಾಯತೀರ್ಪಿನ ಅಪಾ ಯಕ್ಕೆ ಒಳಗಾಗುವನು ಎಂದು ಪೂರ್ವಿಕರು ಹೇಳಿರು ವದನ್ನು ನೀವು ಕೇಳಿದ್ದೀರಿ.

22 But I say to you that everyone who is angry with his brother will be in danger of being judged; and he who says to his brother, Raca, will be in danger from the Sanhedrin; and whoever says, You foolish one, will be in danger of the hell of fire.ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು

23 If then you are making an offering at the altar and there it comes to your mind that your brother has something against you,ಆದದರಿಂದ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಬಳಿಗೆ ತಂದಾಗ ನಿನಗೆ ವಿರೋಧ ವಾದದ್ದು ನಿನ್ನ ಸಹೋದರನಿಗೆ ಇದೆಯೆಂದು ನೆನಪಿಗೆ ಬಂದರೆ

24 While your offering is still before the altar, first go and make peace with your brother, then come and make your offering.ನಿನ್ನ ಕಾಣಿಕೆಯನ್ನು ನೀನು ಅಲ್ಲಿಯೇ ಯಜ್ಞವೇದಿಯ ಮುಂದೆ ಬಿಟ್ಟು ಹೊರಟು ಹೋಗಿ ಮೊದಲು ನಿನ್ನ ಸಹೋದರನೊಂದಿಗೆ ಒಂದಾಗು; ತರುವಾಯ ಬಂದು ನಿನ್ನ ಕಾಣಿಕೆಯನ್ನು ಅರ್ಪಿಸು.

25 Come to an agreement quickly with him who has a cause against you at law, while you are with him on the way, for fear that he may give you up to the judge and the judge may give you to the police and you may be put into prison.ನಿನ್ನ ವಿರೋಧಿಯ ಸಂಗಡ ನೀನು ದಾರಿಯ ಲ್ಲಿರುವಾಗಲೇ ತ್ವರೆಯಾಗಿ ಅವನ ಕೂಡ ಒಂದಾಗು; ಇಲ್ಲವಾದರೆ ಯಾವ ಸಮಯದಲ್ಲಿಯಾದರೂ ಆ ವಿರೋಧಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ಮತ್ತು ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು; ಆಗ ನೀನು ಸೆರೆಯಲ್ಲಿ ಹಾಕಲ್ಪಡುವಿ.

26 Truly I say to you, You will not come out from there till you have made payment of the very last farthing.ನಾನು ನಿನಗೆ ನಿಜವಾಗಿ ಹೇಳುವದೇನಂದರೆ--ನೀನು ಕೊನೆಯ ಕಾಸನ್ನು ಸಲ್ಲಿಸುವ ತನಕ ಯಾವ ವಿಧದಿಂದಲೂ ಅಲ್ಲಿಂದ ಹೊರಗೆ ಬರುವದೇ ಇಲ್ಲ.

27 You have knowledge that it was said, You may not have connection with another man's wife:ವ್ಯಭಿಚಾರ ಮಾಡಬಾರದು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ;

28 But I say to you that everyone whose eyes are turned on a woman with desire has had connection with her in his heart.ಆದರೆ ನಾನು ನಿಮಗೆ ಹೇಳುವದೇನಂದರೆ--ಒಬ್ಬ ಸ್ತ್ರೀಯನ್ನು ಮೋಹಿಸುವದಕ್ಕೆ ನೋಡುವ ಪ್ರತಿಯೊಬ್ಬನು ಆಗಲೇ ತನ್ನ ಹೃದಯದಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದ್ದಾನೆ.

29 And if your right eye is a cause of trouble to you, take it out and put it away from you; because it is better to undergo the loss of one part, than for all your body to go into hell.ಆದದರಿಂದ ನಿನ್ನ ಬಲಗಣ್ಣು ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.

30 And if your right hand is a cause of trouble to you, let it be cut off and put it away from you; because it is better to undergo the loss of one part, than for all your body to go into hell.ನಿನ್ನ ಬಲಗೈ ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.

31 Again, it was said, Whoever puts away his wife has to give her a statement in writing for this purpose:ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟುಬಿಡಬೇಕೆಂದಿದ್ದರೆ ಅವನು ಆಕೆಗೆ ತ್ಯಾಗಪತ್ರ ಕೊಡಲಿ ಎಂದು ಹೇಳಿಯದೆ;

32 But I say to you that everyone who puts away his wife for any other cause but the loss of her virtue, makes her false to her husband; and whoever takes her as his wife after she is put away, is no true husband to her.ಆದರೆ ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣ ದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಯು ವ್ಯಭಿಚಾರ ಮಾಡುವಂತೆ ಕಾರಣನಾಗುವನು; ಮತ್ತು ಬಿಡಲ್ಪಟ್ಟವಳನ್ನು ಯಾವನಾದರೂ ಮದುವೆ ಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ.

33 Again, you have knowledge that it was said in old times, Do not take false oaths, but give effect to your oaths to the Lord:ನೀನು ಸುಳ್ಳಾಣೆ ಇಡಬೇಡ; ಆದರೆ ನಿನ್ನ ಪ್ರಮಾಣಗಳನ್ನು ಕರ್ತನಿಗೆ ಸಲ್ಲಿಸಬೇಕು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ.

34 But I say to you, Take no oaths at all: not by the heaven, because it is the seat of God;ಆದರೆ ನಾನು ನಿಮಗೆ ಹೇಳುವದೇನಂದರೆ--ಎಷ್ಟು ಮಾತ್ರಕ್ಕೂ ಅಣೆಯನ್ನು ಇಡಬೇಡ. ಪರಲೋಕದ ಮೇಲೆ ಬೇಡ; ಯಾಕಂದರೆ ಅದು ದೇವರ ಸಿಂಹಾಸನವು.

35 Or by the earth, because it is the resting-place for his foot; or by Jerusalem, because it is the town of the great King.ಭೂಮಿಯ ಮೇಲೆಯೂ ಬೇಡ; ಯಾಕಂದರೆ ಅದು ಆತನ ಪಾದಪೀಠವು; ಯೆರೂಸಲೇಮಿನ ಮೇಲೆಯೂ ಬೇಡ; ಯಾಕಂದರೆ ಅದು ಆ ಮಹಾ ಅರಸನ ಪಟ್ಟಣವಾಗಿದೆ.

36 You may not take an oath by your head, because you are not able to make one hair white or black.ನಿನ್ನ ತಲೆಯ ಮೇಲೆ ಕೂಡ ಆಣೆ ಇಡಬೇಡ; ಯಾಕಂದರೆ ನೀನು ಒಂದು ಕೂದಲನ್ನಾದರೂ ಬಿಳಿ ಅಥವಾ ಕಪ್ಪು ಮಾಡಲಾರಿ.

37 But let your words be simply, Yes or No: and whatever is more than these is of the Evil One.ಆದರೆ ನಿನ್ನ ಮಾತು ಹೌದಾಗಿದ್ದರೆ ಹೌದು, ಅಲ್ಲವಾಗಿದ್ದರೆ ಅಲ್ಲ ಎಂದಿರಲಿ; ಇವುಗಳಿಗಿಂತ ಹೆಚ್ಚಾದದ್ದು ಕೆಟ್ಟದ್ದ ರಿಂದ ಬರುವಂಥದ್ದು.

38 You have knowledge that it was said, An eye for an eye, and a tooth for a tooth:ಇದಲ್ಲದೆ--ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ ತೆಗಿಸು ಎಂದು ಹೇಳಿರುವದನ್ನು ನೀವು ಕೇಳಿದ್ದೀರಿ.

39 But I say to you, Do not make use of force against an evil man; but to him who gives you a blow on the right side of your face let the left be turned.ಆದರೆ ನಾನು ನಿಮಗೆ ಹೇಳುವದೇನಂದರೆ--ನೀವು ಕೆಟ್ಟದ್ದನ್ನು ಎದುರಿಸಬೇಡಿರಿ; ಯಾವನಾದರೂ ನಿನ್ನ ಬಲ ಗೆನ್ನೆಯ ಮೇಲೆ ಹೊಡೆದರೆ ಮತ್ತೊಂದನ್ನು ಸಹ ಅವನಿಗೆ ತಿರುಗಿಸು.

40 And if any man goes to law with you and takes away your coat, do not keep back your robe from him.ಯಾವನಾದರೂ ನಿನ್ನ ಸಂಗಡ ವ್ಯಾಜ್ಯವಾಡಿ ನಿನ್ನ ಮೇಲಂಗಿಯನ್ನು ತಕ್ಕೊಳ್ಳ ಬೇಕೆಂದಿದ್ದರೆ ಒಳಂಗಿಯನ್ನೂ ಕೊಟ್ಟುಬಿಡು.

41 And whoever makes you go one mile, go with him two.ಮತ್ತು ಯಾವನಾದರೂ ಒಂದು ಮೈಲು ಹೋಗುವಂತೆ ನಿನ್ನನ್ನು ಬಲವಂತ ಮಾಡಿದರೆ ಅವನೊಂದಿಗೆ ಎರಡು ಮೈಲು ಹೋಗು.

42 Give to him who comes with a request, and keep not your property from him who would for a time make use of it.ನಿನ್ನನ್ನು ಕೇಳುವವನಿಗೆ ಕೊಡು; ಮತ್ತು ನಿನ್ನಿಂದ ಕಡಾ ತಕ್ಕೊಳ್ಳಬೇಕೆಂದಿರುವವನಿಂದ ನೀನು ತಿರುಗಿಕೊಳ್ಳಬೇಡ.

43 You have knowledge that it was said, Have love for your neighbour, and hate for him who is against you:ನೀನು ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ಹಗೆಮಾಡಬೇಕು ಎಂದು ಹೇಳಿರು ವದನ್ನು ನೀವು ಕೇಳಿದ್ದೀರಿ.

44 But I say to you, Have love for those who are against you, and make prayer for those who are cruel to you;ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.

45 So that you may be the sons of your Father in heaven; for his sun gives light to the evil and to the good, and he sends rain on the upright man and on the sinner.ಇದರಿಂದ ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾ ಗುವಿರಿ; ಯಾಕಂದರೆ ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ; ಮತ್ತು ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.

46 For if you have love for those who have love for you, what credit is it to you? do not the tax-farmers the same?ನಿಮ್ಮನ್ನು ಪ್ರೀತಿಮಾಡುವವರನ್ನೇ ನೀವು ಪ್ರೀತಿಮಾಡಿದರೆ ನಿಮಗೆ ಯಾವ ಪ್ರತಿಫಲ ಸಿಕ್ಕೀತು? ಸುಂಕದವರೂ ಹಾಗೆ ಮಾಡುತ್ತಾರಲ್ಲವೇ?

47 And if you say, Good day, to your brothers only, what do you do more than others? do not even the Gentiles the same?ಇದಲ್ಲದೆ ನೀವು ನಿಮ್ಮ ಸಹೋದರರನ್ನು ಮಾತ್ರ ವಂದಿಸಿದರೆ ಬೇರೆಯವರಿಗಿಂತ ಹೆಚ್ಚೇನು ಮಾಡಿ ದಂತಾಯಿತು? ಸುಂಕದವರು ಸಹ ಹಾಗೆ ಮಾಡುತ್ತಾರಲ್ಲವೇ?

48 Be then complete in righteousness, even as your Father in heaven is complete.ಆದದರಿಂದ ಪರಲೋಕ ದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣ ನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರ್ರಿ.

Kannada Bible