Matthew 7 - ASV (Kannada)
1 Judge not, that ye be not judged.ನಿಮಗೆ ತೀರ್ಪು ಆಗದಂತೆ ನೀವೂ ತೀರ್ಪು ಮಾಡಬೇಡಿರಿ.
2 For with what judgment ye judge, ye shall be judged: and with what measure ye mete, it shall be measured unto you.ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.
3 And why beholdest thou the mote that is in thy brother's eye, but considerest not the beam that is in thine own eye?ಮತ್ತು ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ನೀನು ಯಾಕೆ ನೋಡುತ್ತೀ?
4 Or how wilt thou say to thy brother, Let me cast out the mote out of thine eye; and lo, the beam is in thine own eye?ಇಲ್ಲವೆ ನೀನು ನಿನ್ನ ಸಹೋದರನಿಗೆ--ನಿನ್ನ ಕಣ್ಣಿ ನೊಳಗಿಂದ ರವೆಯನ್ನು ತೆಗೆಯುತ್ತೇನೆ ಎಂದು ಹೇಗೆ ಹೇಳುತ್ತೀ? ಆದರೆ ಇಗೋ, ನಿನ್ನ ಸ್ವಂತ ಕಣ್ಣಿನಲ್ಲಿ ತೊಲೆ ಇದೆಯಲ್ಲಾ?
5 Thou hypocrite, cast out first the beam out of thine own eye; and then shalt thou see clearly to cast out the mote out of thy brother's eye.ಕಪಟಿ ನೀನು, ಮೊದಲು ನಿನ್ನ ಸ್ವಂತ ಕಣ್ಣಿನೊಳಗಿರುವ ತೊಲೆ ಯನ್ನು ತೆಗೆದು ಹಾಕು; ಆಗ ನಿನ್ನ ಸಹೋದರನ ಕಣ್ಣಿನೊಳಗಿರುವ ರವೆಯನ್ನು ತೆಗೆದು ಹಾಕುವದಕ್ಕೆ ನಿನಗೆ ಚೆನ್ನಾಗಿ ಕಾಣಿಸುವದು.
6 Give not that which is holy unto the dogs, neither cast your pearls before the swine, lest haply they trample them under their feet, and turn and rend you.ನಾಯಿಗಳಿಗೆ ಪವಿತ್ರವಾದದ್ದನ್ನು ಕೊಡಬೇಡಿರಿ ಇಲ್ಲವೆ ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಹಾಕಬೇಡಿರಿ. ಹಾಕಿದರೆ ಅವುಗಳನ್ನು ತುಳಿದು ಬಿಟ್ಟು ಮತ್ತೆ ತಿರುಗಿಕೊಂಡು ನಿಮ್ಮನ್ನು ಹರಿದು ಬಿಟ್ಟಾವು.
7 Ask, and it shall be given you; seek, and ye shall find; knock, and it shall be opened unto you:ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು.
8 for every one that asketh receiveth; and he that seeketh findeth; and to him that knocketh it shall be opened.ಯಾಕಂದರೆ ಬೇಡಿ ಕೊಳ್ಳುವ ಪ್ರತಿಯೊಬ್ಬನು ಹೊಂದಿಕೊಳ್ಳುವನು; ಮತ್ತು ಹುಡುಕುವವನಿಗೆ ಸಿಕ್ಕುವದು; ಇದಲ್ಲದೆ ತಟ್ಟುವವನಿಗೆ ತೆರೆಯಲ್ಪಡುವದು.
9 Or what man is there of you, who, if his son shall ask him for a loaf, will give him a stone;ಇಲ್ಲವೆ ತನ್ನ ಮಗನು ರೊಟ್ಟಿಯನ್ನು ಕೇಳಿದರೆ ನಿಮ್ಮಲ್ಲಿ ಯಾವ ನಾದರೂ ಅವನಿಗೆ ಕಲ್ಲನ್ನು ಕೊಡುವನೇ?
10 or if he shall ask for a fish, will give him a serpent?ಇಲ್ಲವೆ ಅವನು ಮಾನನ್ನು ಕೇಳಿದರೆ ತಂದೆಯು ಅವನಿಗೆ ಹಾವನ್ನು ಕೊಡುವನೇ?
11 If ye then, being evil, know how to give good gifts unto your children, how much more shall your Father who is in heaven give good things to them that ask him?ಕೆಟ್ಟವರಾದ ನೀವು ಒಳ್ಳೇ ದಾನಗಳನ್ನು ನಿಮ್ಮ ಮಕ್ಕಳಿಗೆ ಕೊಡುವದು ಹೇಗೆ ಎಂಬದನ್ನು ತಿಳಿದವರಾಗಿದ್ದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳು ವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುತ್ತಾನಲ್ಲವೇ?
12 All things therefore whatsoever ye would that men should do unto you, even so do ye also unto them: for this is the law and the prophets.ಆದದರಿಂದ ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಇಚ್ಛೈಸುವಿರೋ ಅವುಗಳನ್ನು ನೀವು ಸಹ ಅವರಿಗೆ ಹಾಗೆಯೇ ಮಾಡಿರಿ; ಯಾಕಂದರೆ ಇದೇ ನ್ಯಾಯಪ್ರಮಾಣದ ಮತ್ತು ಪ್ರವಾದಿಗಳ ತಾತ್ಪರ್ಯ.
13 Enter ye in by the narrow gate: for wide is the gate, and broad is the way, that leadeth to destruction, and many are they that enter in thereby.ಇಕ್ಕಟ್ಟಾದ ದ್ವಾರದೊಳಗೆ ನೀವು ಪ್ರವೇಶಿಸಿರಿ; ಯಾಕಂದರೆ ನಾಶನಕ್ಕೆ ನಡಿಸುವ ದ್ವಾರವು ಅಗಲವೂ ಮಾರ್ಗವು ವಿಶಾಲವೂ ಆಗಿದೆ. ಅದರೊಳಗೆ ಪ್ರವೇಶಿಸುವವರು ಬಹು ಜನ.
14 For narrow is the gate, and straitened the way, that leadeth unto life, and few are they that find it.ಜೀವಕ್ಕೆ ನಡಿಸುವ ದ್ವಾರವು ಇಕ್ಕಟ್ಟಾದದ್ದೂ ದಾರಿಯು ಬಿಕ್ಕಟ್ಟಾದದ್ದೂ ಆಗಿದೆ; ಆದದರಿಂದ ಅದನ್ನು ಕಂಡುಕೊಳ್ಳುವವರು ಸ್ವಲ್ಪ ಜನ.
15 Beware of false prophets, who come to you in sheep's clothing, but inwardly are ravening wolves.ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.
16 By their fruits ye shall know them. Do `men' gather grapes of thorns, or figs of thistles?ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಜನರು ಮುಳ್ಳುಗಳಲ್ಲಿ ದ್ರಾಕ್ಷೆಯನ್ನೂ ಮದ್ದುಗುಣಿಕೇಗಿಡಗಳಲ್ಲಿ ಅಂಜೂರ ಗಳನ್ನೂ ಕೂಡಿಸುವರೋ?
17 Even so every good tree bringeth forth good fruit; but the corrupt tree bringeth forth evil fruit.ಅದರಂತೆಯೇ ಪ್ರತಿ ಯೊಂದು ಒಳ್ಳೆ ಮರವು ಒಳ್ಳೇ ಫಲವನ್ನು ಕೊಡುತ್ತದೆ; ಮತ್ತು ಕೆಟ್ಟ ಮರವು ಕೆಟ್ಟ ಫಲವನ್ನು ಕೊಡುತ್ತದೆ;
18 A good tree cannot bring forth evil fruit, neither can a corrupt tree bring forth good fruit.ಒಳ್ಳೆ ಮರವು ಕೆಟ್ಟ ಫಲವನ್ನು ಕೊಡಲಾರದು; ಇಲ್ಲವೆ ಕೆಟ್ಟ ಮರವು ಒಳ್ಳೇ ಫಲವನ್ನು ಕೊಡಲಾರದು.
19 Every tree that bringeth not forth good fruit is hewn down, and cast into the fire.ಒಳ್ಳೇ ಫಲವನ್ನು ಕೊಡದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುತ್ತದೆ.
20 Therefore by their fruits ye shall know them.ಆದದರಿಂದ ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ.
21 Not every one that saith unto me, Lord, Lord, shall enter into the kingdom of heaven; but he that doeth the will of my Father who is in heaven.ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು.
22 Many will say to me in that day, Lord, Lord, did we not prophesy by thy name, and by thy name cast out demons, and by thy name do many mighty works?ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು.
23 And then will I profess unto them, I never knew you: depart from me, ye that work iniquity.ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು.
24 Every one therefore that heareth these words of mine, and doeth them, shall be likened unto a wise man, who built his house upon the rock:ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.
25 and the rain descended, and the floods came, and the winds blew, and beat upon that house; and if fell not: for it was founded upon the rock.ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು.
26 And every one that heareth these words of mine, and doeth them not, shall be likened unto a foolish man, who built his house upon the sand:ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು.
27 and the rain descended, and the floods came, and the winds blew, and smote upon that house; and it fell: and great was the fall thereof.ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.
28 And it came to pass, when Jesus had finished these words, the multitudes were astonished at his teaching:ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ತರುವಾಯ ಜನರು ಆತನ ಬೋಧನೆಗೆ ಆಶ್ಚರ್ಯ ಪಟ್ಟರು.
29 for he taught them as `one' having authority, and not as their scribes.ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
Kannada Bible