Bible

Micah 7 - YLT (Kannada)

1 My wo `is' to me, for I have been As gatherings of summer-fruit, As gleanings of harvest, There is no cluster to eat, The first-ripe fruit desired hath my soul.ನನಗೆ ಅಯ್ಯೋ, ಯಾಕಂದರೆ ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವ ವರ ಹಾಗೆಯೂ ದ್ರಾಕ್ಷೇ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ; ತಿನ್ನುವದಕ್ಕೆ ಗೊನೆ ಇಲ್ಲ. ನನ್ನ ಪ್ರಾಣವು ಮೊದಲು ಹಣ್ಣಾದ ಅಂಜೂರ ವನ್ನು ಅಪೇಕ್ಷಿಸಿಯದೆ.

2 Perished hath the kind out of the land, And upright among men -- there are none, All of them for blood lie in wait, Each his brother they hunt `with' a net.ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.

3 On the evil `are' both hands to do `it' well, The prince is asking -- also the judge -- for recompence, And the great -- he is speaking the mischief of his soul, And they wrap it up.ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.

4 Their best one `is' as a brier, The upright one -- than a thorn-hedge, The day of thy watchmen -- Thy visitation -- hath come. Now is their perplexity.ಅವರಲ್ಲಿ ಉತ್ತಮನು ದತ್ತೂರಿಯ ಹಾಗೆಯೂ ಬಹು ಯಥಾರ್ಥನು ಮುಳ್ಳಿನ ಬೇಲಿಯ ಹಾಗೆಯೂ ಇದ್ದಾನೆ; ನಿನ್ನ ಕಾವಲುಗಾರರ ದಿವಸವೂ ನಿನ್ನ ವಿಚಾರಣೆಯೂ ಬರುತ್ತದೆ, ಈಗಲೇ ಅವರಿಗೆ ಗಾಬರಿಯಾಗುವದು.

5 Believe not in a friend, trust not in a leader, From her who is lying in thy bosom keep the openings of thy mouth.ಸ್ನೇಹಿತನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸವಿಡಬೇಡಿರಿ; ನಿನ್ನ ಎದೆಯ ಮೇಲೆ ಮಲಗುವವಳಿಗೆ ನಿನ್ನ ಬಾಯಿಯ ಬಾಗಲುಗಳನ್ನು ಕಾಯಿ.

6 For a son is dishonouring a father, A daughter hath stood against her mother, A daughter-in-law against her mother-in-law, The enemies of each `are' the men of his house.ಮಗನು ತನ್ನ ತಂದೆಯನ್ನು ಅವಮಾನ ಮಾಡುತ್ತಾನೆ; ಮಗಳು ತನ್ನ ತಾಯಿಗೂ ಸೊಸೆಯು ತನ್ನ ಅತ್ತೆಗೂ ವಿರೋಧವಾಗಿ ಏಳುತ್ತಾರೆ; ಒಬ್ಬ ಮನುಷ್ಯನಿಗೆ ಸ್ವಂತ ಮನೆಯವರೇ ಶತ್ರುಗಳು.

7 And I -- in Jehovah I do watch, I do wait for the God of my salvation, Hear me doth my God.ಆದರೆ ನಾನು ಕರ್ತನನ್ನು ಎದುರು ನೋಡುವೆನು; ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು; ನನ್ನ ದೇವರು ನನ್ನನ್ನು ಕೇಳುವನು.

8 Thou dost not rejoice over me, O mine enemy, When I have fallen, I have risen, When I sit in darkness Jehovah is a light to me.ನನ್ನ ಶತ್ರುವೇ, ನನ್ನ ಮೇಲೆ ಸಂತೋಷಪಡಬೇಡ; ನಾನು ಬಿದ್ದಿದ್ದರೂ ತಿರುಗಿ ಏಳುವೆನು; ಕತ್ತಲೆಯಲ್ಲಿ ಕೂತುಕೊಂಡರೂ ನನಗೆ ಬೆಳಕು ಕರ್ತನೇ.

9 The indignation of Jehovah I do bear, For I have sinned against Him, Till that He doth plead my cause, And hath executed my judgment, He doth bring me forth to the light, I look on His righteousness.ನಾನು ಕರ್ತನಿಗೆ ವಿರೋಧ ವಾಗಿ ಪಾಪ ಮಾಡಿದ್ದರಿಂದ ಆತನು ತನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡಿಸುವ ತನಕ ಆತನ ಕೋಪವನ್ನು ತಾಳುವೆನು; ಆತನು ನನ್ನನ್ನು ಬೆಳಕಿಗೆ ತರುವನು, ಆತನ ನೀತಿಯನ್ನು ನೋಡುವೆನು.

10 And see doth mine enemy, And cover her doth shame, Who saith unto me, `Where `is' Jehovah thy God?' Mine eyes do look on her, Now she is for a treading-place, As mire of the out-places.ನನ್ನ ಶತ್ರುಗಳು ಸಹ ಅದನ್ನು ನೋಡುವರು; ನಿನ್ನ ದೇವರಾದ ಕರ್ತನು ಎಲ್ಲಿ ಎಂದು ನನಗೆ ಹೇಳಿದವಳನ್ನು ನಾಚಿಕೆಯು ಮುಚ್ಚುವದು; ನನ್ನ ಕಣ್ಣುಗಳು ಅವಳನ್ನು ನೋಡುವವು, ಈಗಲೇ ಬೀದಿಗಳಲ್ಲಿರುವ ಕೆಸರಿನಂತೆ ತುಳಿಯಲ್ಪಡು ವಳು.

11 The day to build thy walls! That day -- removed is the limit.ನಿನ್ನ ಗೋಡೆಗಳು ತಿರುಗಿ ಕಟ್ಟಲ್ಪಡುವ ಆ ದಿನದಲ್ಲಿ ನಿರ್ಣಯವು ದೂರವಾಗಿ ಹೋಗುವದು.

12 That day -- even unto thee it doth come in, From Asshur and the cities of the fortress, And from the fortress even unto the river, And from sea to sea, and mount to mount.ಆ ದಿನದಲ್ಲಿ ಅಶ್ಶೂರಿನಿಂದಲೂ ಕೋಟೆಯುಳ್ಳ ಪಟ್ಟಣಗಳಿಂದಲೂ ಕೋಟೆಯಿಂದ ನದಿಯವರೆಗೂ ಸಮುದ್ರದಿಂದ ಸಮುದ್ರದ ವರೆಗೂ ಬೆಟ್ಟದಿಂದ ಬೆಟ್ಟದ ವರೆಗೂ ನಿನ್ನ ಬಳಿಗೆ ಬರುವರು.

13 And the land hath been for a desolation, Because of its inhabitants, Because of the fruit of their doings.ಆದರೂ ದೇಶವು ಅದರ ನಿವಾಸಿಗಳ ನಿಮಿತ್ತ ಅವರ ದುಷ್ಕ್ರಿಯೆಗಳ ಫಲದಿಂದ ಹಾಳಾಗುವದು.

14 Rule Thou Thy people with Thy rod, The flock of Thine inheritance, Dwelling alone `in' a forest in the midst of Carmel, They enjoy Bashan and Gilead as in days of old.ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆ ಯನ್ನೂ ನಿನ್ನ ಕೋಲಿನಿಂದ ಮೇಯಿಸು; ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.

15 According to the days of thy coming forth out of the land of Egypt, I do shew it wonderful things.ನೀನು ಐಗುಪ್ತ ದೇಶದೊಳಗಿಂದ ಹೊರಡುವ ದಿವಸಗಳ ಹಾಗೆ ಅವನಿಗೆ ಆಶ್ಚರ್ಯವಾದವುಗಳನ್ನು ತೋರಿಸುವೆನು.

16 See do nations, and they are ashamed of all their might, They lay a hand on the mouth, their ears are deaf.ಜನಾಂಗಗಳು ನೋಡಿ ತಮ್ಮ ತ್ರಾಣಕ್ಕೆಲ್ಲಾ ನಾಚಿಕೆ ಪಡುವರು; ತಮ್ಮ ಕೈಗಳನ್ನು ಬಾಯಿಯ ಮೇಲೆ ಇಡುವರು; ಅವರ ಕಿವಿಗಳು ಕಿವುಡಾಗಿ ಹೋಗುವವು.

17 They lick dust as a serpent, as fearful things of earth, They tremble from their enclosures, Of Jehovah our God they are afraid, Yea, they are afraid of Thee.ಅವರು ಸರ್ಪದಂತೆ ಧೂಳನ್ನು ನೆಕ್ಕುವರು; ಭೂಮಿಯ ಕ್ರಿಮಿಗಳಂತೆ ತಾವು ರಂಧ್ರಗಳಿಂದ ಹೊರಗೆ ಬರುವರು; ನಮ್ಮ ದೇವರಾದ ಕರ್ತನಿಗೆ ಅವರು ಹೆದರುವರು; ನಿನಗೆ ಭಯಪಡುವರು.

18 Who `is' a God like Thee? taking away iniquity, And passing by the transgression of the remnant of His inheritance, He hath not retained for ever His anger, Because He -- He delighteth `in' kindness.ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.

19 He doth turn back, He pitieth us, He doth subdue our iniquities, And Thou castest into the depths of the sea all their sins.ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ಅವರ ಪಾಪಗಳ ನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವಿ.

20 Thou givest truth to Jacob, kindness to Abraham, That thou hast sworn to our fathers, from the days of antiquity!ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.

Kannada Bible