Numbers 19 - ASV (Kannada)
1 And Jehovah spake unto Moses and unto Aaron, saying,ಕರ್ತನು ಮೋಶೆಯ ಸಂಗಡಲೂ ಆರೋನನ ಸಂಗಡಲೂ ಮಾತನಾಡುತ್ತಾ
2 This is the statute of the law which Jehovah hath commanded, saying, Speak unto the children of Israel, that they bring thee a red heifer without spot, wherein is no blemish, `and' upon which never came yoke.ಕರ್ತನು ಆಜ್ಞಾಪಿಸಿದ ನ್ಯಾಯಪ್ರಮಾಣದ ಕಟ್ಟಳೆ ಏನಂದರೆ--ಇಸ್ರಾಯೇಲ್ ಮಕ್ಕಳು ನಿನಗೆ ಮಚ್ಚೆ ಇಲ್ಲದಂಥ ನೊಗವನ್ನು ಎಂದೂ ಹೊರದಂಥ ಪೂರ್ಣಾಂಗವಾದ ಕೆಂದಹಸುವನ್ನು ತಂದುಕೊಡುವ ಹಾಗೆ ನೀನು ಅವರ ಸಂಗಡ ಮಾತನಾಡು.
3 And ye shall give her unto Eleazar the priest, and he shall bring her forth without the camp, and one shall slay her before his face:ನೀವು ಅದನ್ನು ಯಾಜಕನಾದ ಎಲ್ಲಾಜಾರನಿಗೆ ಕೊಡಬೇಕು. ಅವನು ಅದನ್ನು ಪಾಳೆಯದ ಹೊರಗೆ ತಕ್ಕೊಂಡು ಹೋಗಿ ತನ್ನ ಮುಂದೆ ವಧೆಮಾಡಿಸಬೇಕು.
4 and Eleazar the priest shall take of her blood with his finger, and sprinkle her blood toward the front of the tent of meeting seven times.ಯಾಜಕ ನಾದ ಎಲ್ಲಾಜಾರನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು ಅದನ್ನು ಏಳುಸಾರಿ ಸಭೆಯ ಗುಡಾರದ ಮುಂಭಾಗಕ್ಕೆ ನೇರವಾಗಿ ಚಿಮುಕಿಸಬೇಕು.
5 And one shall burn the heifer in his sight; her skin, and her flesh, and her blood, with her dung, shall he burn:ಹಸುವನ್ನು ಅದರ ಚರ್ಮ ಮಾಂಸ ರಕ್ತ ಸಗಣಿಯ ಸಹಿತವಾಗಿ ಅವನ ಕಣ್ಣುಗಳಿಗೆದುರಾಗಿ ಸುಡಿಸಬೇಕು.
6 and the priest shall take cedar-wood, and hyssop, and scarlet, and cast it into the midst of the burning of the heifer.ಯಾಜ ಕನು ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವನ್ನೂ ತಕ್ಕೊಂಡು ಹಸುವಿನ ದಹನದಲ್ಲಿ ಹಾಕಬೇಕು.
7 Then the priest shall wash his clothes, and he shall bathe his flesh in water, and afterward he shall come into the camp, and the priest shall be unclean until the even.ಆಗ ಯಾಜಕನು ತನ್ನ ವಸ್ತ್ರಗಳನ್ನು ಒಗೆದುಕೊಂಡು ತನ್ನ ಶರೀರವನ್ನು ನೀರಿನಲ್ಲಿ ತೊಳೆಯ ಬೇಕು; ಆಮೇಲೆ ಪಾಳೆಯದೊಳಗೆ ಬರಬೇಕು. ಯಾಜ ಕನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
8 And he that burneth her shall wash his clothes in water, and bathe his flesh in water, and shall be unclean until the even.ಅದನ್ನು ಸುಟ್ಟವನೂ ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಂಡು ವಸ್ತ್ರಗಳನ್ನು ಒಗೆದುಕೊಳ್ಳಬೇಕು. ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
9 And a man that is clean shall gather up the ashes of the heifer, and lay them up without the camp in a clean place; and it shall be kept for the congregation of the children of Israel for a water for impurity: it is a sin-offering.ಶುದ್ಧ ನಾದವನೊಬ್ಬನು ಹಸುವಿನ ಬೂದಿಯನ್ನು ಕೂಡಿಸಿ ಕೊಂಡು ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಹಾಕಬೇಕು; ಅದು ಅಲ್ಲಿ ಇಸ್ರಾಯೇಲ್ ಮಕ್ಕಳ ಸಭೆಗೆ ಹೊಲೆಗಳೆವ ನೀರಾಗಿ ಇಡಲ್ಪಡಬೇಕು; ಇದು ಪಾಪದ ಶುದ್ಧೀಕರಣವಾಗಿರುವದು.
10 And he that gathereth the ashes of the heifer shall wash his clothes, and be unclean until the even: and it shall be unto the children of Israel, and unto the stranger that sojourneth among them, for a statute for ever.ಹಸುವಿನ ಬೂದಿಯನ್ನು ಕೂಡಿಸಿದವನು ತನ್ನ ವಸ್ತ್ರಗಳನ್ನು ತೊಳೆದುಕೊಳ್ಳಬೇಕು. ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಇಸ್ರಾಯೇಲ್ ಮಕ್ಕಳಿಗೂ ಅವರ ಮಧ್ಯದಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ಇದು ಶಾಶ್ವತ ಕಟ್ಟಳೆಯಾಗಿರಬೇಕು.
11 He that toucheth the dead body of any man shall be unclean seven days:ಮನುಷ್ಯನ ಹೆಣವನ್ನು ಮುಟ್ಟಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.
12 the same shall purify himself therewith on the third day, and on the seventh day he shall be clean: but if he purify not himself the third day, then the seventh day he shall not be clean.ಅವನು ಇದ ರಿಂದ ಮೂರನೇ ದಿವಸದಲ್ಲಿ ತನ್ನನ್ನು ಶುದ್ಧೀಕರಿಸಿ ಕೊಂಡು ಏಳನೇ ದಿವಸದಲ್ಲಿ ಶುದ್ಧನಾಗಬೇಕು; ಆದರೆ ಅವನು ಮೂರನೇ ದಿವಸದಲ್ಲಿ ತನ್ನನ್ನು ಶುದ್ಧಮಾಡಿ ಕೊಳ್ಳದಿದ್ದರೆ ಏಳನೇ ದಿವಸದಲ್ಲಿ ಶುದ್ಧನಾಗಲಾರನು.
13 Whosoever toucheth a dead person, the body of a man that hath died, and purifieth not himself, defileth the tabernacle of Jehovah; and that soul shall be cut off from Israel: because the water for impurity was not sprinkled upon him, he shall be unclean; his uncleanness is yet upon him.ಸತ್ತ ಮನುಷ್ಯನ ಹೆಣವನ್ನು ಮುಟ್ಟಿ ಶುದ್ಧಮಾಡಿ ಕೊಳ್ಳದ ಯಾವನಾದರೂ ಕರ್ತನ ಗುಡಾರವನ್ನು ಹೊಲೆಮಾಡುತ್ತಾನೆ; ಅವನು ಇಸ್ರಾಯೇಲಿನವರೊ ಳಗಿಂದ ತೆಗೆದುಹಾಕಲ್ಪಡಲಿ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚೆಲ್ಲಲ್ಪಡದ ಕಾರಣ ಅಶುದ್ಧನಾಗಿದ್ದಾನೆ; ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇದೆ.
14 This is the law when a man dieth in a tent: every one that cometh into the tent, and every one that is in the tent, shall be unclean seven days.ಒಬ್ಬ ಮನುಷ್ಯನು ಡೇರೆಯಲ್ಲಿ ಸತ್ತಾಗ ಅವನ ವಿಷಯವಾದ ಆಜ್ಞೆ ಏನಂದರೆ--ಆ ಡೇರೆಯೊಳಗೆ ಪ್ರವೇಶಿಸುವವರೆಲ್ಲರೂ ಡೇರೆಯಲ್ಲಿರುವವರೆ ಲ್ಲರೂ ಏಳು ದಿವಸಗಳ ವರೆಗೆ ಅಶುದ್ಧರಾಗಿರಬೇಕು.
15 And every open vessel, which hath no covering bound upon it, is unclean.ಮುಚ್ಚಳ ಹಾಕದೆ ತೆರೆದಿರುವ ಸಾಮಾನುಗಳೆಲ್ಲಾ ಅಶುದ್ಧವಾಗಿರಬೇಕು.
16 And whosoever in the open field toucheth one that is slain with a sword, or a dead body, or a bone of a man, or a grave, shall be unclean seven days.ಇದಲ್ಲದೆ ಹೊಲದಲ್ಲಿ ಕತ್ತಿ ಯಿಂದ ಕೊಲ್ಲಲ್ಪಟ್ಟವನನ್ನಾದರೂ ಮನುಷ್ಯನ ಎಲುಬ ನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವರೆಲ್ಲರು ಏಳು ದಿವಸ ಅಪವಿತ್ರರಾಗಿರಬೇಕು.
17 And for the unclean they shall take of the ashes of the burning of the sin-offering; and running water shall be put thereto in a vessel:ಅಪವಿತ್ರನಾದವನಿಗೋಸ್ಕರ ಸುಡಲ್ಪಟ್ಟ ಪಾಪ ಕಳೆಯುವ ಹಸುವಿನ ಬೂದಿಯನ್ನು ತಕ್ಕೊಂಡು ಒಂದು ಪಾತ್ರೆಯೊಳಗಿಟ್ಟು ಅದರ ಮೇಲೆ ಹರಿಯುವ ನೀರನ್ನು ಹಾಕಬೇಕು
18 and a clean person shall take hyssop, and dip it in the water, and sprinkle it upon the tent, and upon all the vessels, and upon the persons that were there, and upon him that touched the bone, or the slain, or the dead, or the grave:ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಆ ಡೇರೆಯ ಮೇಲೆಯೂ ಸಮಸ್ತ ಸಾಮಾನುಗಳ ಮೇಲೆಯೂ ಅದರಲ್ಲಿರುವ ಮನುಷ್ಯರ ಮೇಲೆಯೂ ಎಲುಬನ್ನಾದರೂ ಕೊಲ್ಲಲ್ಪಟ್ಟ ವನನ್ನಾದರೂ ಸತ್ತವನನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವನ ಮೇಲೆ ಚಿಮುಕಿಸಬೇಕು.
19 and the clean person shall sprinkle upon the unclean on the third day, and on the seventh day: and on the seventh day he shall purify him; and he shall wash his clothes, and bathe himself in water, and shall be clean at even.ಪವಿತ್ರನಾ ದವನು ಅಪವಿತ್ರನಾದವನ ಮೇಲೆ ಮೂರನೇ ದಿವಸ ದಲ್ಲಿಯೂ ಏಳನೇ ದಿವಸದಲ್ಲಿಯೂ ಚಿಮುಕಿಸಲಿ. ಏಳನೇ ದಿವಸದಲ್ಲಿ ಅವನು ತನ್ನನ್ನು ಪವಿತ್ರಮಾಡಿ ಕೊಂಡು ತನ್ನ ವಸ್ತ್ರಗಳನ್ನು ಒಗೆದುಕೊಂಡು ಅವನು ಸ್ನಾನಮಾಡಿ ಸಾಯಂಕಾಲದಲ್ಲಿ ಪವಿತ್ರನಾಗುವನು.
20 But the man that shall be unclean, and shall not purify himself, that soul shall be cut off from the midst of the assembly, because he hath defiled the sanctuary of Jehovah: the water for impurity hath not been sprinkled upon him; he is unclean.ಆದರೆ ಅಪವಿತ್ರನಾಗಿದ್ದು ತನ್ನನ್ನು ಶುದ್ಧಪಡಿಸಿ ಕೊಳ್ಳದವನು ಸಭೆಯ ಮಧ್ಯದಿಂದ ತೆಗೆದು ಹಾಕಲ್ಪ ಡಲಿ; ಅವನು ಕರ್ತನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿದ್ದಾನೆ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚಿಮುಕಿಸಲ್ಪಡಲಿಲ್ಲ; ಅವನು ಅಪವಿತ್ರನೇ.
21 And it shall be a perpetual statute unto them: and he that sprinkleth the water for impurity shall wash his clothes, and he that toucheth the water for impurity shall be unclean until even.ಇದು ಅವರಿಗೆ ನಿತ್ಯ ಕಟ್ಟಳೆಯಾಗಿರಬೇಕು; ಪ್ರತ್ಯೇಕಿಸಲ್ಪಟ್ಟ ನೀರನ್ನು ಚಿಮುಕಿಸುವವನು ತನ್ನ ವಸ್ತ್ರ ಗಳನ್ನು ಒಗೆಯಬೇಕು; ಪ್ರತ್ಯೇಕಿಸಲ್ಪಟ್ಟ ನೀರನ್ನು ಮುಟ್ಟಿದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರ ಬೇಕು.
22 And whatsoever the unclean person toucheth shall be unclean; and the soul that toucheth it shall be unclean until even.ಇದಲ್ಲದೆ ಅಪವಿತ್ರನಾದವನು ಮುಟ್ಟು ವಂಥದ್ದೆಲ್ಲಾ ಅಪವಿತ್ರವಾಗುವದು; ಅವನನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರಬೇಕು ಎಂದು ಹೇಳಿದನು.
Kannada Bible