Bible

Numbers 19 - YLT (Kannada)

1 And Jehovah speaketh unto Moses, and unto Aaron, saying,ಕರ್ತನು ಮೋಶೆಯ ಸಂಗಡಲೂ ಆರೋನನ ಸಂಗಡಲೂ ಮಾತನಾಡುತ್ತಾ

2 `This `is' a statute of the law which Jehovah hath commanded, saying, Speak unto the sons of Israel, and they bring unto thee a red cow, a perfect one, in which there is no blemish, on which no yoke hath gone up;ಕರ್ತನು ಆಜ್ಞಾಪಿಸಿದ ನ್ಯಾಯಪ್ರಮಾಣದ ಕಟ್ಟಳೆ ಏನಂದರೆ--ಇಸ್ರಾಯೇಲ್‌ ಮಕ್ಕಳು ನಿನಗೆ ಮಚ್ಚೆ ಇಲ್ಲದಂಥ ನೊಗವನ್ನು ಎಂದೂ ಹೊರದಂಥ ಪೂರ್ಣಾಂಗವಾದ ಕೆಂದಹಸುವನ್ನು ತಂದುಕೊಡುವ ಹಾಗೆ ನೀನು ಅವರ ಸಂಗಡ ಮಾತನಾಡು.

3 and ye have given it unto Eleazar the priest, and he hath brought it out unto the outside of the camp, and hath slaughtered it before him.ನೀವು ಅದನ್ನು ಯಾಜಕನಾದ ಎಲ್ಲಾಜಾರನಿಗೆ ಕೊಡಬೇಕು. ಅವನು ಅದನ್ನು ಪಾಳೆಯದ ಹೊರಗೆ ತಕ್ಕೊಂಡು ಹೋಗಿ ತನ್ನ ಮುಂದೆ ವಧೆಮಾಡಿಸಬೇಕು.

4 `And Eleazar the priest hath taken of its blood with his finger, and hath sprinkled over-against the front of the tent of meeting of her blood seven times;ಯಾಜಕ ನಾದ ಎಲ್ಲಾಜಾರನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು ಅದನ್ನು ಏಳುಸಾರಿ ಸಭೆಯ ಗುಡಾರದ ಮುಂಭಾಗಕ್ಕೆ ನೇರವಾಗಿ ಚಿಮುಕಿಸಬೇಕು.

5 and `one' hath burnt the cow before his eyes; her skin, and her flesh, and her blood, besides her dung, he doth burn;ಹಸುವನ್ನು ಅದರ ಚರ್ಮ ಮಾಂಸ ರಕ್ತ ಸಗಣಿಯ ಸಹಿತವಾಗಿ ಅವನ ಕಣ್ಣುಗಳಿಗೆದುರಾಗಿ ಸುಡಿಸಬೇಕು.

6 and the priest hath taken cedar wood, and hyssop, and scarlet, and hath cast unto the midst of the burning of the cow;ಯಾಜ ಕನು ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವನ್ನೂ ತಕ್ಕೊಂಡು ಹಸುವಿನ ದಹನದಲ್ಲಿ ಹಾಕಬೇಕು.

7 and the priest hath washed his garments, and hath bathed his flesh with water, and afterwards doth come in unto the camp, and the priest is unclean till the evening;ಆಗ ಯಾಜಕನು ತನ್ನ ವಸ್ತ್ರಗಳನ್ನು ಒಗೆದುಕೊಂಡು ತನ್ನ ಶರೀರವನ್ನು ನೀರಿನಲ್ಲಿ ತೊಳೆಯ ಬೇಕು; ಆಮೇಲೆ ಪಾಳೆಯದೊಳಗೆ ಬರಬೇಕು. ಯಾಜ ಕನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.

8 and he who is burning it doth wash his garments with water, and hath bathed his flesh with water, and is unclean till the evening.ಅದನ್ನು ಸುಟ್ಟವನೂ ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಂಡು ವಸ್ತ್ರಗಳನ್ನು ಒಗೆದುಕೊಳ್ಳಬೇಕು. ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.

9 `And a clean man hath gathered the ashes of the cow, and hath placed at the outside of the camp, in a clean place, and it hath become to the company of the sons of Israel a charge for waters of separation -- it `is' a `cleansing';ಶುದ್ಧ ನಾದವನೊಬ್ಬನು ಹಸುವಿನ ಬೂದಿಯನ್ನು ಕೂಡಿಸಿ ಕೊಂಡು ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಹಾಕಬೇಕು; ಅದು ಅಲ್ಲಿ ಇಸ್ರಾಯೇಲ್‌ ಮಕ್ಕಳ ಸಭೆಗೆ ಹೊಲೆಗಳೆವ ನೀರಾಗಿ ಇಡಲ್ಪಡಬೇಕು; ಇದು ಪಾಪದ ಶುದ್ಧೀಕರಣವಾಗಿರುವದು.

10 and he who is gathering the ashes of the heifer hath washed his garments, and is unclean till the evening; and it hath been to the sons of Israel, and to the sojourner who is sojourning in their midst, for a statute age-during.ಹಸುವಿನ ಬೂದಿಯನ್ನು ಕೂಡಿಸಿದವನು ತನ್ನ ವಸ್ತ್ರಗಳನ್ನು ತೊಳೆದುಕೊಳ್ಳಬೇಕು. ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಇಸ್ರಾಯೇಲ್‌ ಮಕ್ಕಳಿಗೂ ಅವರ ಮಧ್ಯದಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ಇದು ಶಾಶ್ವತ ಕಟ್ಟಳೆಯಾಗಿರಬೇಕು.

11 `He who is coming against the dead body of any man -- is unclean seven days;ಮನುಷ್ಯನ ಹೆಣವನ್ನು ಮುಟ್ಟಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.

12 he doth cleanse himself for it on the third day, and on the seventh day he is clean; and if he cleanse not himself on the third day, then on the seventh day he is not clean.ಅವನು ಇದ ರಿಂದ ಮೂರನೇ ದಿವಸದಲ್ಲಿ ತನ್ನನ್ನು ಶುದ್ಧೀಕರಿಸಿ ಕೊಂಡು ಏಳನೇ ದಿವಸದಲ್ಲಿ ಶುದ್ಧನಾಗಬೇಕು; ಆದರೆ ಅವನು ಮೂರನೇ ದಿವಸದಲ್ಲಿ ತನ್ನನ್ನು ಶುದ್ಧಮಾಡಿ ಕೊಳ್ಳದಿದ್ದರೆ ಏಳನೇ ದಿವಸದಲ್ಲಿ ಶುದ್ಧನಾಗಲಾರನು.

13 Any one who is coming against the dead, against the body of man who dieth, and cleanseth not himself -- the tabernacle of Jehovah he hath defiled, and that person hath been cut off from Israel, for water of separation is not sprinkled upon him; he is unclean; his uncleanness `is' still upon him.ಸತ್ತ ಮನುಷ್ಯನ ಹೆಣವನ್ನು ಮುಟ್ಟಿ ಶುದ್ಧಮಾಡಿ ಕೊಳ್ಳದ ಯಾವನಾದರೂ ಕರ್ತನ ಗುಡಾರವನ್ನು ಹೊಲೆಮಾಡುತ್ತಾನೆ; ಅವನು ಇಸ್ರಾಯೇಲಿನವರೊ ಳಗಿಂದ ತೆಗೆದುಹಾಕಲ್ಪಡಲಿ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚೆಲ್ಲಲ್ಪಡದ ಕಾರಣ ಅಶುದ್ಧನಾಗಿದ್ದಾನೆ; ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇದೆ.

14 `This `is' the law, when a man dieth in a tent: every one who is coming in unto the tent, and all that `is' in the tent, is unclean seven days;ಒಬ್ಬ ಮನುಷ್ಯನು ಡೇರೆಯಲ್ಲಿ ಸತ್ತಾಗ ಅವನ ವಿಷಯವಾದ ಆಜ್ಞೆ ಏನಂದರೆ--ಆ ಡೇರೆಯೊಳಗೆ ಪ್ರವೇಶಿಸುವವರೆಲ್ಲರೂ ಡೇರೆಯಲ್ಲಿರುವವರೆ ಲ್ಲರೂ ಏಳು ದಿವಸಗಳ ವರೆಗೆ ಅಶುದ್ಧರಾಗಿರಬೇಕು.

15 and every open vessel which hath no covering of thread upon it is unclean.ಮುಚ್ಚಳ ಹಾಕದೆ ತೆರೆದಿರುವ ಸಾಮಾನುಗಳೆಲ್ಲಾ ಅಶುದ್ಧವಾಗಿರಬೇಕು.

16 `And every one who cometh, on the face of the field, against the pierced of a sword, or against the dead, or against a bone of man, or against a grave, is unclean seven days;ಇದಲ್ಲದೆ ಹೊಲದಲ್ಲಿ ಕತ್ತಿ ಯಿಂದ ಕೊಲ್ಲಲ್ಪಟ್ಟವನನ್ನಾದರೂ ಮನುಷ್ಯನ ಎಲುಬ ನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವರೆಲ್ಲರು ಏಳು ದಿವಸ ಅಪವಿತ್ರರಾಗಿರಬೇಕು.

17 and they have taken for the unclean person of the ashes of the burning of the `cleansing', and he hath put upon it running water unto a vessel;ಅಪವಿತ್ರನಾದವನಿಗೋಸ್ಕರ ಸುಡಲ್ಪಟ್ಟ ಪಾಪ ಕಳೆಯುವ ಹಸುವಿನ ಬೂದಿಯನ್ನು ತಕ್ಕೊಂಡು ಒಂದು ಪಾತ್ರೆಯೊಳಗಿಟ್ಟು ಅದರ ಮೇಲೆ ಹರಿಯುವ ನೀರನ್ನು ಹಾಕಬೇಕು

18 and a clean person hath taken hyssop, and hath dipped `it' in water, and hath sprinkled on the tent, and on all the vessels, and on the persons who have been there, and on him who is coming against a bone, or against one pierced, or against the dead, or against a grave.ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಆ ಡೇರೆಯ ಮೇಲೆಯೂ ಸಮಸ್ತ ಸಾಮಾನುಗಳ ಮೇಲೆಯೂ ಅದರಲ್ಲಿರುವ ಮನುಷ್ಯರ ಮೇಲೆಯೂ ಎಲುಬನ್ನಾದರೂ ಕೊಲ್ಲಲ್ಪಟ್ಟ ವನನ್ನಾದರೂ ಸತ್ತವನನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವನ ಮೇಲೆ ಚಿಮುಕಿಸಬೇಕು.

19 `And the clean hath sprinkled `it' on the unclean on the third day, and on the seventh day, and hath cleansed him on the seventh day, and he hath washed his garments, and hath bathed with water, and hath been clean in the evening.ಪವಿತ್ರನಾ ದವನು ಅಪವಿತ್ರನಾದವನ ಮೇಲೆ ಮೂರನೇ ದಿವಸ ದಲ್ಲಿಯೂ ಏಳನೇ ದಿವಸದಲ್ಲಿಯೂ ಚಿಮುಕಿಸಲಿ. ಏಳನೇ ದಿವಸದಲ್ಲಿ ಅವನು ತನ್ನನ್ನು ಪವಿತ್ರಮಾಡಿ ಕೊಂಡು ತನ್ನ ವಸ್ತ್ರಗಳನ್ನು ಒಗೆದುಕೊಂಡು ಅವನು ಸ್ನಾನಮಾಡಿ ಸಾಯಂಕಾಲದಲ್ಲಿ ಪವಿತ್ರನಾಗುವನು.

20 `And the man who is unclean, and doth not cleanse himself, even that person hath been cut off from the midst of the assembly; for the sanctuary of Jehovah he hath defiled; water of separation is not sprinkled upon him; he `is' unclean.ಆದರೆ ಅಪವಿತ್ರನಾಗಿದ್ದು ತನ್ನನ್ನು ಶುದ್ಧಪಡಿಸಿ ಕೊಳ್ಳದವನು ಸಭೆಯ ಮಧ್ಯದಿಂದ ತೆಗೆದು ಹಾಕಲ್ಪ ಡಲಿ; ಅವನು ಕರ್ತನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿದ್ದಾನೆ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚಿಮುಕಿಸಲ್ಪಡಲಿಲ್ಲ; ಅವನು ಅಪವಿತ್ರನೇ.

21 `And it hath been to them for a statute age-during, that he who is sprinkling the water of separation doth wash his garments, and he who is coming against the water of separation is unclean till the evening,ಇದು ಅವರಿಗೆ ನಿತ್ಯ ಕಟ್ಟಳೆಯಾಗಿರಬೇಕು; ಪ್ರತ್ಯೇಕಿಸಲ್ಪಟ್ಟ ನೀರನ್ನು ಚಿಮುಕಿಸುವವನು ತನ್ನ ವಸ್ತ್ರ ಗಳನ್ನು ಒಗೆಯಬೇಕು; ಪ್ರತ್ಯೇಕಿಸಲ್ಪಟ್ಟ ನೀರನ್ನು ಮುಟ್ಟಿದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರ ಬೇಕು.

22 and all against which the unclean person cometh is unclean, and the person who is coming against `it' is unclean till the evening.'ಇದಲ್ಲದೆ ಅಪವಿತ್ರನಾದವನು ಮುಟ್ಟು ವಂಥದ್ದೆಲ್ಲಾ ಅಪವಿತ್ರವಾಗುವದು; ಅವನನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರಬೇಕು ಎಂದು ಹೇಳಿದನು.

Kannada Bible