Numbers 34 - WBT (Kannada)
1 And the LORD spoke to Moses, saying,ಕರ್ತನು ಮೋಶೆಯ ಸಂಗಡ ಮಾತನಾಡಿ--
2 Command the children of Israel, and say to them, When ye come into the land of Canaan; (this is the land that shall fall to you for an inheritance, even the land of Canaan with its borders.)ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ--ನೀವು ಕಾನಾನ್ ದೇಶದೊಳಗೆ ಬರುವಾಗ ನಿಮಗೆ ಸ್ವಾಸ್ತ್ಯಕ್ಕಾಗಿ ಬರುವ ಕಾನಾನ್ ದೇಶವು ಅದರ ಮೇರೆಗಳ ಪ್ರಕಾರ ಹೀಗಿರಬೇಕು.
3 Then your south quarter shall be from the wilderness of Zin along by the border of Edom, and your south border shall be the outmost coast of the salt sea eastward:ಹೇಗೆ ಅಂದರೆ ನಿಮ್ಮ ದಕ್ಷಿಣ ಕಡೆಯು ಜಿನ್ ಅರಣ್ಯದಿಂದ ಎದೋಮಿಗೆ ಅನುಸಾರವಾಗಿರಬೇಕು; ನಿಮ್ಮ ದಕ್ಷಿಣ ಮೇರೆಯು ಉಪ್ಪಿನ ಸಮುದ್ರದ ಪೂರ್ವದ ಕಡೆಯಿಂದ ಆರಂಭಿಸಬೇಕು.
4 And your border shall turn from the south to the ascent of Akrabbim, and pass on to Zin: its limit shall be from the south to Kadesh-barnea, and shall go on to Hazar-addar, and pass on to Azmon:ನಿಮ್ಮ ಮೇರೆಯು ದಕ್ಷಿಣದಿಂದ ಅಕ್ರಬ್ಬೀಮ್ ದಿನ್ನೆಗೆ ತಿರುಗಿ ಜಿನ್‌ಗೆ ಹಾದು ಕಾದೇಶ್‌ಬರ್ನೇಯಕ್ಕೆ ದಕ್ಷಿಣದಲ್ಲಿ ಮುಗಿದು ಅಲ್ಲಿಂದ ಹಚರದ್ದಾರಿಗೆ ಹೊರಟು ಅಚ್ಮೋನಿಗೆ ಹಾದು ಹೋಗಬೇಕು.
5 And the border shall form a circuit from Azmon to the river of Egypt, and the limits of it shall be at the sea.ಮೇರೆ ಅಚ್ಮೋನಿನಿಂದ ಐಗುಪ್ತದ ಹಳ್ಳಕ್ಕೆ ತಿರುಗಿ ಸಮುದ್ರ ತೀರದಲ್ಲಿ ಮುಗಿಯಬೇಕು.
6 And as for the western border, ye shall even have the great sea for a border: this shall be your west border.ಪಶ್ಚಿಮದ ಮೇರೆಯಾದರೆ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು; ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವದು.
7 And this shall be your north border: from the great sea ye shall designate for you mount Hor:ನಿಮ್ಮ ಉತ್ತರ ಮೇರೆ ಯಾವದಂದರೆ--ನೀವು ದೊಡ್ಡ ಸಮುದ್ರದಿಂದ ಹೋರ್ ಪರ್ವತದ ವರೆಗೂ
8 From mount Hor ye shall designate your border to the entrance of Hamath; and the limits of the border shall be at Zedad:ಸಾಲು ಮಾಡಿಕೊಂಡು ಹೋರ್ ಪರ್ವತದಿಂದ ಹಮಾತಿನ ಪ್ರದೇಶದ ವರೆಗೆ ಸಾಲು ಮಾಡಿರಿ; ಮೇರೆಯು ಚೆದಾದಿಗೆ ಹೊರಟು
9 And the border shall go on to Ziphron, and the limits of it shall be at Hazar-enan: this shall be your north border.ಜಿಫ್ರೋನಿಗೆ ಹೋಗಿ ಹಚರೇನಾನಿನಲ್ಲಿ ಮುಗಿಯಲಿ; ಇದು ನಿಮ್ಮ ಉತ್ತರ ಮೇರೆ.
10 And ye shall designate your east border from Hazar-enan to Shepham:ಪೂರ್ವದ ಮೇರೆಗೋಸ್ಕರ ಹಚರೇನಾನಿನಿಂದ ಶೆಫಾಮಿಗೆ ಸಾಲು ಮಾಡಿಕೊಳ್ಳಿರಿ.
11 And the limit shall go down from Shepham to Riblah, on the east side of Ain; and the border shall descend, and shall reach to the side of the sea of Chinnereth eastward:ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ.
12 And the border shall go down to Jordan, and the limits of it shall be at the salt sea: This shall be your land with its limits on all sides.ಅಲ್ಲಿಂದ ಮೇರೆಯು ಯೊರ್ದನ್ ನದಿಗೆ ಅನುಸಾರ ವಾಗಿ ಇಳಿದು ಉಪ್ಪಿನ ಸಮುದ್ರದಲ್ಲಿ ಮುಗಿಯುವದು; ಇದು ಅದರ ಸುತ್ತಮುತ್ತಲ ಮೇರೆಗಳ ಪ್ರಕಾರ ನಿಮ್ಮ ದೇಶವಾಗಿರಬೇಕು.
13 And Moses commanded the children of Israel, saying, This is the land which ye shall inherit by lot, which the LORD commanded to give to the nine tribes, and to the half tribe:ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾ ಪಿಸಿ--ನೀವು ಚೀಟಿನಿಂದ ಸ್ವಾಧೀನಪಡಿಸಿಕೊಳ್ಳ ಬೇಕಾದ ದೇಶವು ಒಂಭತ್ತುವರೆ ಗೋತ್ರಗಳಿಗೆ ಕೊಡ ಬೇಕೆಂದು ಕರ್ತನು ಆಜ್ಞಾಪಿಸಿದ ದೇಶವು ಇದೇ.
14 For the tribe of the children of Reuben, according to the house of their fathers, and the tribe of the children of Gad according to the house of their fathers, have received their inheritance; and half the tribe of Manasseh have received their inheritance:ರೂಬೇನನ ಮಕ್ಕಳ ಗೋತ್ರವೂ ಗಾದನ ಮಕ್ಕಳ ಗೋತ್ರವೂ ಮನಸ್ಸೆಯ ಅರ್ಧ ಗೋತ್ರವೂ ತಮ್ಮ ಪಿತೃಗಳ ಮನೆಯ ಪ್ರಕಾರವಾಗಿ ತಮ್ಮ ಸ್ವಾಸ್ತ್ಯವನ್ನು ಪಡೆದುಕೊಂಡಿದ್ದಾರೆ.
15 The two tribes and the half tribe have received their inheritance on this side of Jordan near Jericho eastward, towards the sun-rising.ಎರಡೂವರೆ ಗೋತ್ರಗಳು ತಮ್ಮ ಸ್ವಾಸ್ತ್ಯವನ್ನು ಯೊರ್ದನಿನ ಈಚೆಯಲ್ಲಿ ಯೆರಿ ಕೋವಿಗೆ ಸೂರ್ಯನು ಉದಯಿಸುವ ಪೂರ್ವ ದಿಕ್ಕಿನಲ್ಲಿ ಪಡೆದುಕೊಂಡಿದ್ದಾರೆ ಎಂದು ಹೇಳಿದನು.
16 And the LORD spoke to Moses, saying,ಕರ್ತನು ಮೋಶೆಯ ಸಂಗಡ ಮಾತನಾಡಿ
17 These are the names of the men who shall divide the land to you: Eleazar the priest, and Joshua the son of Nun.ದೇಶವನ್ನು ನಿಮಗೆ ಹಂಚಬೇಕಾದ ಮನುಷ್ಯರ ಹೆಸರುಗಳು ಇವೇ: ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ
18 And ye shall take one prince of every tribe, to divide the land by inheritance.ದೇಶದ ಸ್ವಾಸ್ತ್ಯವನ್ನು ಹಂಚುವದಕ್ಕೆ ನೀವು ಒಂದೊಂದು ಗೋತ್ರದಿಂದ ಒಬ್ಬೊಬ್ಬ ಪ್ರಧಾನನನ್ನು ತಕ್ಕೊಳ್ಳಿರಿ.
19 And the names of the men are these: of the tribe of Judah, Caleb the son of Jephunneh.ಈ ಮನುಷ್ಯರ ಹೆಸರುಗಳು ಇವೇ: ಯೆಹೂದನ ಕುಟುಂಬದಿಂದ ಯೆಪುನ್ನೆಯ ಮಗನಾದ ಕಾಲೇಬನೂ
20 And of the tribe of the children of Simeon, Shemuel the son of Ammihud.ಸಿಮೆಯೋನನ ಮಕ್ಕಳ ಗೋತ್ರದಿಂದ ಅವ್ಮೆಾಹೂ ದನ ಮಗನಾದ ಶೆಮೂವೇಲನೂ
21 Of the tribe of Benjamin, Elidad the son of Chislon.ಬೆನ್ಯಾವಿಾನನ ಗೋತ್ರದಿಂದ ಕಿಸ್ಲೋನನ ಮಗನಾದ ಎಲೀದಾದನೂ
22 And the prince of the tribe of the children of Dan, Bukki the son of Jogli.ದಾನನ ಮಕ್ಕಳ ಗೋತ್ರದ ಪ್ರಧಾನನು ಯೊಗ್ಲೀಯ ಮಗನಾದ ಬುಕ್ಕೀಯೂ
23 The prince of the children of Joseph, for the tribe of the children of Manasseh, Hanniel the son of Ephod.ಯೋಸೇಫನ ಮಕ್ಕಳಾದ ಮನಸ್ಸೆಯ ಗೋತ್ರದ ಪ್ರಧಾನನು ಎಫೋದನ ಮಗನಾದ ಹನ್ನೀಯೇಲನೂ
24 And the prince of the tribe of the children of Ephraim, Kemuel the son of Shiphtan.ಎಫ್ರಾಯಾಮ್ ಮಕ್ಕಳ ಗೋತ್ರದ ಪ್ರಧಾನನು ಶಿಫ್ಟಾನನ ಮಗನಾದ ಕೆಮೂವೇಲನೂ
25 And the prince of the tribe of the children of Zebulun, Elizaphan the son of Parnach.ಜೆಬುಲೂನನ ಮಕ್ಕಳ ಗೋತ್ರದ ಪ್ರಧಾನನು ಪರ್ನಾಕನ ಮಗನಾದ ಎಲೀಚಾಫಾನನೂ
26 And the prince of the tribe of the children of Issachar, Paltiel the son of Azzan.ಇಸ್ಸಾಕಾರನ ಮಕ್ಕಳ ಗೋತ್ರದ ಪ್ರಧಾನನು ಅಜ್ಜಾನನ ಮಗನಾದ ಪಲ್ಟೀಯೇಲನೂ
27 And the prince of the tribe of the children of Asher, Ahihud the son of Shelomi.ಆಶೇರನ ಮಕ್ಕಳ ಗೋತ್ರದ ಪ್ರಧಾನನು ಶೆಲೋಮಿಯ ಮಗನಾದ ಅಹೀಹೂದನೂ
28 And the prince of the tribe of the children of Naphtali, Pedahel the son of Ammihud.ನಫ್ತಾಲಿಯ ಮಕ್ಕಳ ಗೋತ್ರದ ಪ್ರಧಾನನು ಅವ್ಮೆಾಹೂದನ ಮಗನಾದ ಪೆದಹೇಲನೂ.
29 These are they whom the LORD commanded to divide the inheritance to the children of Israel in the land of Canaan.ಕಾನಾನ್ ದೇಶದಲ್ಲಿ ಇಸ್ರಾಯೇಲ್ ಮಕ್ಕಳಿಗೆ ಸ್ವಾಸ್ತ್ಯವನ್ನು ಹಂಚುವದಕ್ಕೆ ಕರ್ತನು ನೇಮಿಸಿದ ಮನುಷ್ಯರು ಇವರೇ.
Kannada Bible