Numbers 4:29-33 in Kannada
Numbers 4:29
ಮೆರಾರೀಯ ಕುಮಾರರನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ಎಣಿಸಬೇಕು.
Numbers 4:30
ಮೂವತ್ತು ವರುಷವು ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರನ್ನು ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದ ಸೇವೆಮಾಡುವ ದಕ್ಕಾಗಿ ಒಳಗೆ ಪ್ರವೇಶಿಸುವವರನ್ನೆಲ್ಲಾ ಎಣಿಸಬೇಕು.
Numbers 4:31
ಸಭೆಯ ಗುಡಾರದಲ್ಲಿ ಅವರು ಮಾಡತಕ್ಕ ಸಮಸ್ತ ಸೇವೆಯ ಪ್ರಕಾರ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯು ಏನಂದರೆ, ಗುಡಾರದ ಹಲಿಗೆಗಳೂ ಅದರ ಅಡ್ಡ ತೊಲೆಗಳೂ ಕಂಬಗಳೂ ಕುಣಿಕೆಗಳೂ.
Numbers 4:32
ಸುತ್ತಲಿರುವ ಅಂಗಳದ ಕಂಬಗಳೂ ಕುಣಿಕೆಗಳೂ ಗೂಟಗಳೂ ಅವುಗಳ ಹಗ್ಗಗಳೂ ಎಲ್ಲಾ ವಸ್ತುಗಳ ಪ್ರಕಾರವಾಗಿಯೂ ಅವುಗಳ ಸಮಸ್ತ ಸೇವೆಯ ಪ್ರಕಾರವಾಗಿಯೂ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯ ವಸ್ತುಗಳನ್ನು ನೀವು ಹೆಸರೆಸರಾಗಿ ಎಣಿಸ ಬೇಕು.
Numbers 4:33
ಮೆರಾರೀಯ ಕುಮಾರರ ಕುಟುಂಬಗಳ ಸೇವೆಯೂ ಗುಡಾರದಲ್ಲಿ ಅವರು ಮಾಡುವ ಸಮಸ್ತ ಸೇವೆಯೂ ಇದೇ. ಅದು ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರಬೇಕು.
Kannada Bible