Numbers 9 - WEB (Kannada)
1 Yahweh spoke to Moses in the wilderness of Sinai, in the first month of the second year after they had come out of the land of Egypt, saying,ಅವರು ಐಗುಪ್ತ ದೇಶದಿಂದ ಹೊರಟ ಎರಡನೇ ವರುಷದ ಮೊದಲನೆಯ ತಿಂಗಳಿನಲ್ಲಿ ಕರ್ತನು ಸೀನಾಯಿ ಅರಣ್ಯದಲ್ಲಿ ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ
2 "Moreover let the children of Israel keep the Passover in its appointed season.ಇಸ್ರಾಯೇಲ್ ಮಕ್ಕಳು ಪಸ್ಕವನ್ನು ನೇಮಿಸಿದ ಸಮಯ ದಲ್ಲಿ ಆಚರಿಸಬೇಕು.
3 On the fourteenth day of this month, at evening, you shall keep it in its appointed season-- according to all its statutes, and according to all its ordinances, you shall keep it."ಈ ತಿಂಗಳಿನ ಹದಿನಾಲ್ಕನೇ ದಿವಸದ ಸಾಯಂಕಾಲದಲ್ಲಿ ಅದನ್ನು ಅದರ ಸಮಯ ದಲ್ಲಿ ಆಚರಿಸಬೇಕು. ಅದರ ಆಜ್ಞಾವಿಧಿಗಳ ಪ್ರಕಾರ ವಾಗಿಯೂ ಎಲ್ಲಾ ನಿಯಮಗಳ ಪ್ರಕಾರವಾಗಿಯೂ ಅದನ್ನು ಆಚರಿಸಬೇಕು.
4 Moses spoke to the children of Israel, that they should keep the Passover.ಆಗ ಮೋಶೆಯು ಪಸ್ಕವನ್ನು ಆಚರಿಸುವದಕ್ಕೆ ಇಸ್ರಾಯೇಲ್ ಮಕ್ಕಳ ಸಂಗಡ ಮಾತ ನಾಡಿದನು.
5 They kept the Passover in the first month, on the fourteenth day of the month, at evening, in the wilderness of Sinai. According to all that Yahweh commanded Moses, so the children of Israel did.ಹೀಗೆ ಅವರು ಮೊದಲನೇ ತಿಂಗಳಿನ ಹದಿನಾಲ್ಕನೆಯ ದಿವಸದ ಸಾಯಂಕಾಲ ಸೀನಾಯಿ ಅರಣ್ಯದಲ್ಲಿ ಪಸ್ಕವನ್ನು ಆಚರಿಸಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಇಸ್ರಾಯೇಲ್ ಮಕ್ಕಳು ಮಾಡಿದರು.
6 There were certain men, who were unclean because of the dead body of a man, so that they could not keep the Passover on that day, and they came before Moses and before Aaron on that day.ಆಗ ಶವದ ದೆಸೆಯಿಂದ ಅಶುದ್ಧರಾಗಿ ಪಸ್ಕವನ್ನು ಆ ದಿವಸದಲ್ಲಿ ಆಚರಿಸಲಿಕ್ಕಾಗದ ಕೆಲವು ಮನುಷ್ಯ ರಿದ್ದರು; ಅವರು ಆ ದಿವಸದಲ್ಲಿ ಮೋಶೆ ಆರೋನರ ಮುಂದೆ ಬಂದರು.
7 Those men said to him, "We are unclean because of the dead body of a man. Why are we kept back, that we may not offer the offering of Yahweh in its appointed season among the children of Israel?"ಆ ಮನುಷ್ಯರು ಅವನ ಸಂಗಡ ಮಾತನಾಡಿ--ನಾವು ಸತ್ತ ಮನುಷ್ಯನ ದೇಹವನ್ನು ಮುಟ್ಟಿದ್ದರಿಂದ ಅಶುದ್ಧರಾದೆವು; ಆದದರಿಂದ ನಾವು ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಕರ್ತನ ಅರ್ಪಣೆ ಯನ್ನು ಅದರ ಸಮಯದಲ್ಲಿ ಅರ್ಪಿಸದ ಹಾಗೆ ನಮಗೆ ಯಾಕೆ ಅಡ್ಡಿಯಾಗಬೇಕು ಅಂದರು.
8 Moses answered them, "Wait, that I may hear what Yahweh will command concerning you."ಮೋಶೆ ಅವ ರಿಗೆ--ಸುಮ್ಮನೆ ನಿಲ್ಲಿರಿ, ಕರ್ತನು ನಿಮ್ಮ ವಿಷಯದಲ್ಲಿ ಏನು ಆಜ್ಞಾಪಿಸುವನೋ ನಾನು ವಿಚಾರಿಸುತ್ತೇನೆ ಅಂದನು.
9 Yahweh spoke to Moses, saying,ಕರ್ತನು ಮೋಶೆ ಸಂಗಡ ಮಾತನಾಡಿ ಅವನಿಗೆ
10 "Say to the children of Israel, 'If any man of you or of your generations is unclean by reason of a dead body, or is on a journey far away, he shall still keep the Passover to Yahweh.ಇಸ್ರಾಯೇಲ್ ಮಕ್ಕಳಿಗೆ--ನಿಮ್ಮಲ್ಲಿಯೂ ನಿಮ್ಮ ಸಂತತಿಯಲ್ಲಿಯೂ ಯಾವನಾದರೂ ಹೆಣದಿಂದ ಅಶುದ್ಧನಾಗಿದ್ದರೂ ಇಲ್ಲವೆ ದೂರ ಪ್ರಯಾಣದಲ್ಲಿ ದ್ದರೂ ಕರ್ತನಿಗೆ ಪಸ್ಕವನ್ನು ಆಚರಿಸಬೇಕು.
11 In the second month, on the fourteenth day at evening they shall keep it; they shall eat it with unleavened bread and bitter herbs.ಅವರು ಎರಡನೇ ತಿಂಗಳಿನ ಹದಿನೈದನೇ ದಿವಸದ ಸಾಯಂಕಾಲದಲ್ಲಿ ಆಚರಿಸಲಿ, ಅದನ್ನು ಹುಳಿಯಿಲ್ಲದ ರೊಟ್ಟಿಗಳ ಸಂಗಡಲೂ ಕಹಿಯಾದವುಗಳ ಸಂಗಡಲೂ ಊಟ ಮಾಡಬೇಕು.
12 They shall leave none of it until the morning, nor break a bone of it. According to all the statute of the Passover they shall keep it.ಅವರು ಅದರಿಂದ ಮರು ದಿವಸಕ್ಕೆ ಏನೂ ಉಳಿಸಬಾರದು; ಅದರಲ್ಲಿ ಒಂದು ಎಲುಬನ್ನಾದರೂ ಮುರಿಯಬಾರದು; ಪಸ್ಕದ ಸಮಸ್ತ ಕಟ್ಟಳೆ ಪ್ರಕಾರವಾಗಿ ಅದನ್ನು ಆಚರಿಸಬೇಕು.
13 But the man who is clean, and is not on a journey, and fails to keep the Passover, that soul shall be cut off from his people. Because he didn't offer the offering of Yahweh in its appointed season, that man shall bear his sin.ಆದರೆ ಶುದ್ಧನಾದ ಮನುಷ್ಯನೂ ಪ್ರಯಾಣಮಾಡದವನೂ ಪಸ್ಕವನ್ನು ಆಚರಿಸುವದಕ್ಕೆ ತಪ್ಪಿದರೆ ಅವನನ್ನು ಅವನ ಜನರೊಳಗಿಂದ ತೆಗೆದುಹಾಕಬೇಕು; ಅವನು ಕರ್ತನ ಅರ್ಪಣೆಯನ್ನು ಅದರ ಸಮಯದಲ್ಲಿ ತಾರದಿದ್ದ ಕಾರಣ ಆ ಮನುಷ್ಯನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.
14 If a foreigner lives among you, and desires to keep the Passover to Yahweh; according to the statute of the Passover, and according to its ordinance, so shall he do. You shall have one statute, both for the foreigner, and for him who is born in the land.'"ಪರದೇಶಿಯಾದವನು ನಿಮ್ಮ ಸಂಗಡ ವಾಸಮಾಡಿ ಕರ್ತನಿಗೆ ಹಬ್ಬವನ್ನು ಆಚರಿಸಿದರೆ ಪಸ್ಕದ ಆಜ್ಞಾವಿಧಿಯ ಪ್ರಕಾರವಾಗಿಯೂ ನ್ಯಾಯದ ಪ್ರಕಾರವಾಗಿಯೂ ಮಾಡಬೇಕು; ನಿಮಗೂ ಪರದೇಶಸ್ತನಿಗೂ ಒಂದೇ ಕಟ್ಟಳೆ ಇರಬೇಕು ಎಂದು ಹೇಳಿದನು.
15 On the day that the tabernacle was raised up, the cloud covered the tabernacle, even the Tent of the Testimony: and at evening it was over the tabernacle as it were the appearance of fire, until morning.ಗುಡಾರವನ್ನು ಎತ್ತಿದ ದಿವಸದಲ್ಲಿ ಮೇಘವು ನಿವಾಸದ ಕಡೆಗೆ ಅಂದರೆ, ಸಾಕ್ಷೀ ಗುಡಾರವನ್ನು ಮುಚ್ಚಿತು. ಸಾಯಂಕಾಲದಿಂದ ಉದಯದ ವರೆಗೆ ಅದು ಬೆಂಕಿಯಂತೆ ಗುಡಾರದ ಮೇಲೆ ಇತ್ತು.
16 So it was continually. The cloud covered it, and the appearance of fire by night.ಈ ಪ್ರಕಾರ ಯಾವಾಗಲೂ ಅದು ಇತ್ತು; ಮೇಘವು ರಾತ್ರಿಯಲ್ಲಿ ಬೆಂಕಿಯಂತೆ ಅದನ್ನು ಮುಚ್ಚುತ್ತಿತ್ತು.
17 Whenever the cloud was taken up from over the Tent, then after that the children of Israel traveled; and in the place where the cloud remained, there the children of Israel encamped.ಆ ಮೇಘವು ಗುಡಾರದ ಮೇಲಿನಿಂದ ತೆಗಯಲ್ಪಟ್ಟಾಗ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡುತ್ತಿದ್ದರು; ಮೇಘವು ನೆಲೆಸಿದ ಸ್ಥಳದಲ್ಲಿ ಇಸ್ರಾಯೇಲ್ ಮಕ್ಕಳು ತಮ್ಮ ಗುಡಾರಗಳನ್ನು ಹಾಕಿದರು.
18 At the commandment of Yahweh, the children of Israel traveled, and at the commandment of Yahweh they encamped. As long as the cloud remained on the tabernacle they remained encamped.ಕರ್ತನ ಆಜ್ಞೆಯ ಪ್ರಕಾರ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡಿ ದರು. ಕರ್ತನ ಆಜ್ಞೆಯ ಪ್ರಕಾರ ಗುಡಾರಗಳನ್ನು ಹಾಕಿದರು. ಮೇಘವು ಗುಡಾರದ ಮೇಲೆ ನೆಲೆಸಿರುವ ಕಾಲವೆಲ್ಲಾ ಅವರು ತಮ್ಮ ಗುಡಾರಗಳಲ್ಲಿ ವಾಸಿಸಿದರು.
19 When the cloud stayed on the tabernacle many days, then the children of Israel kept the charge of Yahweh, and didn't travel.ಮೇಘವು ಗುಡಾರದ ಮೇಲೆ ಅನೇಕ ದಿವಸಗಳು ತಡಮಾಡಿದಾಗ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡದೆ ಕರ್ತನ ಅಪ್ಪಣೆಯನ್ನು ಕೈಕೊಳ್ಳುತ್ತಿದ್ದರು.
20 Sometimes the cloud was a few days on the tabernacle; then according to the commandment of Yahweh they remained encamped, and according to the commandment of Yahweh they traveled.ಇದಲ್ಲದೆ ಮೇಘವು ಗುಡಾರದ ಮೇಲೆ ಸ್ವಲ್ಪ ದಿವಸಗಳು ಇರುವಾಗ ಅವರು ಕರ್ತನ ಆಜ್ಞೆಯ ಪ್ರಕಾರ ಇಳುಕೊಂಡು ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಿದ್ದರು.
21 Sometimes the cloud was from evening until morning; and when the cloud was taken up in the morning, they traveled: or by day and by night, when the cloud was taken up, they traveled.ಮೇಘವು ಸಾಯಂಕಾಲ ದಿಂದ ಉದಯದ ವರೆಗೆ ಇದ್ದು ಬೆಳಿಗ್ಗೆ ಮೇಲಕ್ಕೆ ತೆಗೆಯಲ್ಪಟ್ಟರೆ ಆಗ ಅವರು ಪ್ರಯಾಣ ಮಾಡುತ್ತಿದ್ದರು; ಇಲ್ಲವೆ ಹಗಲು ರಾತ್ರಿ ಇದ್ದು ಮೇಘವು ಮೇಲಕ್ಕೆ ಎತ್ತಲ್ಪಟ್ಟರೆ ಅವರು ಪ್ರಯಾಣ ಮಾಡುತ್ತಿದ್ದರು.
22 Whether it was two days, or a month, or a year that the cloud stayed on the tabernacle, remaining on it, the children of Israel remained encamped, and didn't travel; but when it was taken up, they traveled.ಇಲ್ಲವೆ ಆ ಮೇಘವು ಎರಡು ದಿವಸಗಳಾದರೂ ಒಂದು ತಿಂಗಳಾದರೂ ಒಂದು ವರ್ಷವಾದರೂ ಗುಡಾರದ ಮೇಲೆ ನೆಲೆಸಿ ತಡಮಾಡಿದರೆ ಇಸ್ರಾ ಯೇಲ್ ಮಕ್ಕಳು ಪ್ರಯಾಣಮಾಡದೆ ಇಳುಕೊಂಡಿ ದ್ದರು. ಅದು ಮೇಲಕ್ಕೆತ್ತಲ್ಪಟ್ಟಾಗಲೇ ಅವರು ಪ್ರಯಾಣ ಮಾಡುತ್ತಿದ್ದರು.
23 At the commandment of Yahweh they encamped, and at the commandment of Yahweh they traveled. They kept the charge of Yahweh, at the commandment of Yahweh by Moses.ಕರ್ತನ ಆಜ್ಞೆಯ ಪ್ರಕಾರ ಅವರು ಇಳುಕೊಳ್ಳುತ್ತಾ ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಾ ಇದ್ದರು. ಮೋಶೆಗೆ ಕರ್ತನು ಆಜ್ಞಾಪಿಸಿ ದಂತೆ ಕರ್ತನ ಅಪ್ಪಣೆಯನ್ನು ಕಾಪಾಡುತ್ತಿದ್ದರು.
Kannada Bible