Proverbs 4 - ASV (Kannada)
1 Hear, `my' sons, the instruction of a father, And attend to know understanding:ಮಕ್ಕಳಿರಾ, ತಂದೆಯ ಶಿಕ್ಷಣವನ್ನು ನೀವು ಕೇಳಿರಿ. ವಿವೇಕವನ್ನು ಗ್ರಹಿಸುವಂತೆ ನೋಡಿರಿ.
2 For I give you good doctrine; Forsake ye not my law.ನಾನು ನಿಮಗೆ ಸುಬೋಧನೆಯನ್ನು ಮಾಡುವೆನು; ನೀವು ನನ್ನ ಕಟ್ಟಳೆಯನ್ನು ಬಿಡಬೇಡಿರಿ.
3 For I was a son unto my father, Tender and only beloved in the sight of my mother.ನಾನು ಕೋಮಲನೂ ನನ್ನ ತಾಯಿಯ ದೃಷ್ಟಿಯಲ್ಲಿ ಪ್ರಿಯನಾಗಿ ಒಬ್ಬನೇ ಆಗಿದ್ದು ನನ್ನ ತಂದೆಯ ಮಗ ನಾಗಿದ್ದೇನೆ.
4 And he taught me, and said unto me: Let thy heart retain my words; Keep my commandments, and live;ಅವನು ಬೋಧಿಸಿ ನನಗೆ ಹೇಳಿದ್ದೇ ನಂದರೆ--ನನ್ನ ಮಾತುಗಳನ್ನು ನಿನ್ನ ಹೃದಯವು ಹಿಡಿದುಕೊಳ್ಳಲಿ; ನನ್ನ ಆಜ್ಞೆಗಳನ್ನು ಕೈಕೊಂಡು ಜೀವಿಸು.
5 Get wisdom, get understanding; Forget not, neither decline from the words of my mouth;ಜ್ಞಾನವನ್ನೂ ವಿವೇಕವನ್ನೂ ಸಂಪಾದಿಸು; ಅವುಗಳನ್ನು ಮರೆಯದಿರು, ಅಲ್ಲದೆ ನನ್ನ ಬಾಯಿಯ ಮಾತುಗಳನ್ನು ನಿರಾಕರಿಸಬೇಡ.
6 Forsake her not, and she will preserve thee; Love her, and she will keep thee.ಅವುಗಳನ್ನು ತ್ಯಜಿಸ ದಿದ್ದರೆ ಅವು ನಿನ್ನನ್ನು ಕಾಯುವವು, ಅವುಗಳನ್ನು ಪ್ರೀತಿಸಿದರೆ ಅವು ನಿನ್ನನ್ನು ಕಾಪಾಡುವವು.
7 Wisdom `is' the principal thing; `therefore' get wisdom; Yea, with all thy getting get understanding.ಜ್ಞಾನವೇ ಮುಖ್ಯವಾದದ್ದು; ಆದದರಿಂದ ಜ್ಞಾನವನ್ನು ಸಂಪಾ ದಿಸು, ನಿನ್ನ ಎಲ್ಲಾ ಸಂಪತ್ತಿನಿಂದ ವಿವೇಕವನ್ನು ಪಡೆ ದುಕೋ.
8 Exalt her, and she will promote thee; She will bring thee to honor, when thou dost embrace her.ಆಕೆಯನ್ನು ನೀನು ಮೇಲೆತ್ತಿದರೆ ಆಕೆಯು ನಿನ್ನನ್ನು ಮೇಲೆತ್ತುವಳು; ಆಕೆಯನ್ನು ನೀನು ಅಪ್ಪಿ ಕೊಂಡರೆ ಆಕೆಯು ನಿನ್ನನ್ನು ಘನತೆಗೆ ತರುವಳು.
9 She will give to thy head a chaplet of grace; A crown of beauty will she deliver to thee.ಆಕೆಯು ನಿನ್ನ ತಲೆಗೆ ಕೃಪೆಯ ಆಭರಣವಾಗಿರುವಳು; ಆಕೆಯು ನಿನಗೆ ಘನತೆಯ ಕಿರೀಟವನ್ನು ಒಪ್ಪಿಸುವಳು.
10 Hear, O my son, and receive my sayings; And the years of thy life shall be many.ಓ ನನ್ನ ಮಗನೇ, ಆಲಿಸಿ ನನ್ನ ಮಾತುಗಳನ್ನು ಅಂಗೀಕರಿಸು; ಆಗ ನಿನ್ನ ಜೀವಿತದ ವರುಷಗಳು ಹೆಚ್ಚಾಗುವವು.
11 I have taught thee in the way of wisdom; I have led thee in paths of uprightness.ಜ್ಞಾನದ ಮಾರ್ಗದಲ್ಲಿ ನಾನು ನಿನಗೆ ಬೋಧಿಸಿದೆನು; ಸರಿಯಾದ ದಾರಿಗಳಲ್ಲಿ ನಾನು ನಿನ್ನನ್ನು ನಡಿಸಿದೆನು.
12 When thou goest, thy steps shall not be straitened; And if thou runnest, thou shalt not stumble.ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಇಕ್ಕಟ್ಟಾಗದು; ನೀನು ಓಡುವಾಗ ಮುಗ್ಗರಿಸುವದಿಲ್ಲ.
13 Take fast hold of instruction; let her not go: Keep her; for she is thy life.ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ. ಅದನ್ನು ಕಾಪಾಡು. ಅದು ನಿನ್ನ ಜೀವವಾಗಿದೆ.
14 Enter not into the path of the wicked, And walk not in the way of evil men.ದುಷ್ಟರ ದಾರಿಯೊಳಗೆ ಪ್ರವೇಶಿಸದಿರು, ಕೆಟ್ಟವರ ಮಾರ್ಗದಲ್ಲಿ ಹೋಗಬೇಡ.
15 Avoid it, pass not by it; Turn from it, and pass on.ಅದನ್ನು ತಪ್ಪಿಸು, ಅದರ ಪಕ್ಕದಲ್ಲಿ ಹಾದು ಹೋಗ ಬೇಡ, ಅದರಿಂದ ಹಿಂತಿರುಗಿ ಮುಂದೆ ನಡೆ.
16 For they sleep not, except they do evil; And their sleep is taken away, unless they cause some to fall.ಕೇಡು ಮಾಡದಿದ್ದರೆ ಅವರು ನಿದ್ರೆಹೋಗುವದಿಲ್ಲ; ಯಾರ ನ್ನಾದರೂ ಬೀಳಿಸದೆ ಇದ್ದರೆ ಅವರ ನಿದ್ರೆಗೆ ಭಂಗ ವಾಗುವದು.
17 For they eat the bread of wickedness, And drink the wine of violence.ಅವರು ದುಷ್ಟತನದ ರೊಟ್ಟಿಯನ್ನು ತಿಂದು ಬಲಾತ್ಕಾರದ ದ್ರಾಕ್ಷಾರಸವನ್ನು ಕುಡಿಯು ತ್ತಾರೆ.
18 But the path of the righteous is as the dawning light, That shineth more and more unto the perfect day.ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು.
19 The way of the wicked is as darkness: They know not at what they stumble.ದುಷ್ಟರ ಮಾರ್ಗವು ಕತ್ತಲೆ ಯಂತಿದೆ. ಅವರು ಯಾವದಕ್ಕೆ ಎಡವಿ ಬೀಳುತ್ತಾರೋ ಅದು ಅವರಿಗೆ ಗೊತ್ತಾಗದು.
20 My son, attend to my words; Incline thine ear unto my sayings.ನನ್ನ ಮಗನೇ, ನನ್ನ ಮಾತುಗಳನ್ನು ಆಲಿಸು; ನನ್ನ ನುಡಿಗಳಿಗೆ ಕಿವಿಗೊಡು.
21 Let them not depart from thine eyes; Keep them in the midst of thy heart.ಅವುಗಳು ನಿನ್ನ ಕಣ್ಣುಗಳಿಗೆ ತಪ್ಪಿಹೋಗದೆ ಇರಲಿ; ಅವುಗಳನ್ನು ನಿನ್ನ ಹೃದಯದ ಮಧ್ಯದಲ್ಲಿ ಇಟ್ಟುಕೋ.
22 For they are life unto those that find them, And health to all their flesh.ಅವುಗಳನ್ನು ಕಂಡುಕೊಳ್ಳುವವರಿಗೆ ಅವು ಜೀವವೂ ಅವರ ದೇಹ ಕ್ಕೆಲ್ಲಾ ಆರೋಗ್ಯವೂ ಆಗಿವೆ.
23 Keep thy heart with all diligence; For out of it are the issues of life.ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಜೀವಧಾರೆಗಳು ಅದರೊಳಗಿಂದ ಹೊರಡುವವು.
24 Put away from thee a wayward mouth, And perverse lips put far from thee.ವಕ್ರಬಾಯಿ ಯನ್ನು ನಿನ್ನಿಂದ ತೆಗೆದುಬಿಡು; ಕೆಟ್ಟ ತುಟಿಗಳನ್ನು ನಿನ್ನಿಂದ ದೂರ ಇಡು.
25 Let thine eyes look right on, And let thine eyelids look straight before thee.ನಿನ್ನ ಕಣ್ಣುಗಳು ಮುಂದೆಯೇ ನೋಡಲಿ. ನಿನ್ನ ಕಣ್ಣು ರೆಪ್ಪೆಗಳು ನೆಟ್ಟಗೆ ನಿನ್ನ ಮುಂದೆಯೇ ನೋಡಲಿ.
26 Make level the path of thy feet, And let all thy ways be established.ನೀನು ನಡೆಯುವ ದಾರಿ ಯನ್ನು ವಿಮರ್ಶಿಸಿ ನೋಡು; ನಿನ್ನ ಎಲ್ಲಾ ಮಾರ್ಗ ಗಳು ಸ್ಥಿರವಾಗಿರಲಿ.
27 Turn not to the right hand nor to the left: Remove thy foot from evil.ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು.
Kannada Bible