Bible

Philemon 1 - WEB (Kannada)

1 Paul, a prisoner of Christ Jesus, and Timothy our brother, to Philemon, our beloved fellow worker,ಯೇಸು ಕ್ರಿಸ್ತನ ಸೆರೆಯವನಾಗಿರುವ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ ನಮಗೆ ಅತಿ ಪ್ರಿಯನೂ ಜೊತೆಗೆಲಸದವನೂ ಆಗಿರುವ ಫಿಲೆ ಮೋನನಿಗೂ

2 to the beloved Apphia, to Archippus, our fellow soldier, and to the assembly in your house:ನಮ್ಮ ಪ್ರಿಯ ಅಪ್ಫಿಯಳಿಗೂ ನಮ್ಮ ಸಹಭಟನಾದ ಅರ್ಖಿಪ್ಪನಿಗೂ ನಿನ್ನ ಮನೆಯಲ್ಲಿ ಕೂಡುವ ಸಭೆಯವರಿಗೂ ಬರೆಯುವದೇನಂದರೆ--

3 Grace to you and peace from God our Father and the Lord Jesus Christ.ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

4 I thank my God always, making mention of you in my prayers,ನನ್ನ ಪ್ರಾರ್ಥನೆಗಳಲ್ಲಿ ಯಾವಾಗಲೂ ನಿನ್ನನ್ನು ಜ್ಞಾಪಕಮಾಡಿಕೊಂಡು ನನ್ನ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.

5 hearing of your love, and of the faith which you have toward the Lord Jesus, and toward all the saints;ಕರ್ತನಾದ ಯೇಸುವಿನ ಮೇಲೆಯೂ ಪರಿಶುದ್ಧರೆಲ್ಲರ ಮೇಲೆಯೂ ನಿನಗಿರುವ ಪ್ರೀತಿಯನೂ ನಂಬಿಕೆಯನ್ನೂ ಕುರಿತು ಕೇಳಿದ್ದೇನೆ.

6 that the fellowship of your faith may become effective, in the knowledge of every good thing which is in us in Christ Jesus.ಹೀಗೆ ನಿನ್ನ ವಿಶ್ವಾಸದ ಅನ್ಯೋನ್ಯತೆಯು ಕ್ರಿಸ್ತ ಯೇಸುವಿನಲ್ಲಿ ಮತ್ತು ನಿನ್ನಲ್ಲಿರುವ ಎಲ್ಲಾ ಒಳ್ಳೇದರ ತಿಳುವಳಿಕೆಯಲ್ಲಿ ಬಲ ವಾಗಿರುವದು.

7 For we have much joy and comfort in your love, because the hearts of the saints have been refreshed through you, brother.ಸಹೋದರನೇ, ನಿನ್ನ ಮೂಲಕ ಪರಿಶುದ್ಧರ ಹೃದಯಗಳಿಗೆ ಉತ್ತೇಜನವಾದದರಿಂದ ನಿನ್ನ ಪ್ರೀತಿಯ ನಿಮಿತ್ತ ನನಗೆ ಬಹಳ ಸಂತೋಷವೂ ಆದರಣೆಯೂ ಉಂಟಾದವು.

8 Therefore, though I have all boldness in Christ to command you that which is appropriate,ಆದಕಾರಣ ನಿನಗೆ ಯುಕ್ತವಾದದ್ದನ್ನು ಆಜ್ಞಾಪಿಸು ವದಕ್ಕೆ ಕ್ರಿಸ್ತನಲ್ಲಿ ನನಗೆ ಬಹು ಧೈರ್ಯವಿದ್ದರೂ ಹಾಗೆ ಆಜ್ಞಾಪಿಸದೆ

9 yet for love's sake I rather beg, being such a one as Paul, the aged, but also a prisoner of Jesus Christ.ಮುದುಕನೂ ಈಗ ಯೇಸು ಕ್ರಿಸ್ತನ ಸೆರೆಯವನೂ ಆಗಿರುವ ಪೌಲನೆಂಬ ನಾನು ಪ್ರೀತಿಯ ನಿಮಿತ್ತವೇ ನಿನ್ನನ್ನು ಬೇಡಿಕೊಳ್ಳುತ್ತೇನೆ.

10 I beg you for my child, whom I have become the father of in my chains, Onesimus,{Onesimus means "useful."}ನಾನು ಸೆರೆಯಲ್ಲಿ ಪಡೆದಿರುವ ನನ್ನ ಮಗನಾದ ಓನೇಸಿಮನ ವಿಷಯದಲ್ಲಿ ನಿನ್ನನ್ನು ಬೇಡಿಕೊಳ್ಳುತ್ತೇನೆ.

11 who once was useless to you, but now is useful to you and to me.ಅವನು ಕಳೆದುಹೋದ ಸಮಯದಲ್ಲಿ ನಿನಗೆ ಅಪ್ರಯೋಜಕ ನಾಗಿದ್ದನು. ಈಗ ನಿನಗೂ ನನಗೂ ಪ್ರಯೋಜನ ವಾಗಿದ್ದಾನೆ.

12 I am sending him back. Therefore receive him, that is, my own heart,ಅವನು ನನಗೆ ಪ್ರಾಣದಂತಿದ್ದರೂ ಅವನನ್ನು ನಿನ್ನ ಬಳಿಗೆ ಹಿಂದಕ್ಕೆ ಕಳುಹಿಸಿಕೊಟ್ಟಿದ್ದೇನೆ; ಅದದ ರಿಂದ ನೀನು ಅವನನ್ನು ಸೇರಿಸಿಕೋ.

13 whom I desired to keep with me, that on your behalf he might serve me in my chains for the Gospel.ನಾನು ಸುವಾರ್ತೆಯ ನಿಮಿತ್ತ ಸೆರೆಯಲ್ಲಿರಲಾಗಿ ನಿನಗೆ ಬದಲಾಗಿ ಅವನು ನನಗೆ ಉಪಚಾರ ಮಾಡುವಂತೆ ಅವನನ್ನು ನನ್ನ ಬಳಿಯಲ್ಲೇ ಇಟ್ಟುಕೊಳ್ಳಬೇಕೆಂದು ಅಪೇಕ್ಷಿಸಿದ್ದೆನು.

14 But I was willing to do nothing without your consent, that your goodness would not be as of necessity, but of free will.ಆದರೆ ನಿನ್ನ ಉಪಕಾರವು ಬಲಾತ್ಕಾರದಿಂದಾಗದೆ ಮನಃ ಪೂರ್ವಕವಾಗಿಯೇ ಇರಬೇಕೆಂದು ಯೋಚಿಸಿ ನಿನ್ನ ಸಮ್ಮತಿಯಿಲ್ಲದೆ ಏನು ಮಾಡುವದಕ್ಕೂ ನನಗೆ ಇಷ್ಟವಿರಲಿಲ್ಲ.

15 For perhaps he was therefore separated from you for a while, that you would have him forever,ಅವನು ಸ್ವಲ್ಪಕಾಲ ನಿನ್ನಿಂದ ಅಗಲಿಸ ಲ್ಪಟ್ಟದ್ದು ನೀನು ಅವನನ್ನು ನಿರಂತರಕ್ಕೂ ಸೇರಿಸಿಕೊಳ್ಳುವ ದಕ್ಕೋ ಏನೋ.

16 no longer as a slave, but more than a slave, a beloved brother, especially to me, but how much rather to you, both in the flesh and in the Lord.ಇನ್ನು ಮೇಲೆ ಅವನು ಸೇವಕನಾಗದೆ ಸೇವಕನಿಗಿಂತ ಉತ್ತಮನಾಗಿ ಪ್ರಿಯ ಸಹೋದರ ನಂತಾಗಬೇಕು; ಅವನು ನನಗೆ ಬಹಳ ಪ್ರಿಯನಾಗಿ ರುವಲ್ಲಿ ನಿನಗೆ ಶರೀರಸಂಬಂಧದಲ್ಲಿಯೂ ಕರ್ತನ ಸಂಬಂಧದಲ್ಲಿಯೂ ಇನ್ನು ಎಷ್ಟೋ ಪ್ರಿಯನಾಗಿರು ವನು.

17 If then you count me a partner, receive him as you would receive me.ಹಾಗಾದರೆ ನೀನು ನನ್ನನ್ನು ಜೊತೆಗಾರನೆಂದು ಎಣಿಸಿ ನನ್ನನ್ನು ಸೇರಿಸಿಕೊಳ್ಳುವ ಪ್ರಕಾರವೇ ಅವನನ್ನು ಸೇರಿಸಿಕೋ.

18 But if he has wronged you at all, or owes you anything, put that to my account.ಅವನಿಂದ ನೀನು ಏನಾದರೂ ನಷ್ಟಪಟ್ಟಿ ದ್ದರೆ ಅಥವಾ ಅವನು ಸಾಲವೇನಾದರೂ ತೀರಿಸಬೇಕಾ ಗಿದ್ದರೆ ಅದನ್ನು ನನ್ನ ಲೆಕ್ಕಕ್ಕೆ ಹಾಕು;

19 I, Paul, write this with my own hand: I will repay it (not to mention to you that you owe to me even your own self besides).ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ; ನಿನ್ನ ವಿಷಯದಲ್ಲಿ ನೀನೇ ನನ್ನ ಸಾಲ ದಲ್ಲಿದ್ದಿ ಎಂದು ನಾನು ಬೇರೆ ಹೇಳಬೇಕೇ?

20 Yes, brother, let me have joy from you in the Lord. Refresh my heart in the Lord.ಸಹೋದ ರನೇ, ಹೌದು, ಕರ್ತನಲ್ಲಿ ನಿನ್ನಿಂದ ನನಗೆ ಸಂತೋಷ ಉಂಟಾಗಲಿ; ಕರ್ತನಲ್ಲಿ ನನ್ನ ಹೃದಯವನ್ನು ಉತ್ತೇಜನ ಗೊಳಿಸು.

21 Having confidence in your obedience, I write to you, knowing that you will do even beyond what I say.ನನ್ನ ಮಾತನ್ನು ಕೇಳುವಿ ಎಂಬ ಭರವಸ ವುಳ್ಳವನಾಗಿ ನಿನಗೆ ಬರೆದಿದ್ದೇನೆ; ನಾನು ಹೇಳಿದ್ದ ಕ್ಕಿಂತಲೂ ಹೆಚ್ಚಾಗಿ ಮಾಡುವಿಯೆಂದು ನನಗೆ ಗೊತ್ತುಂಟು.

22 Also, prepare a guest room for me, for I hope that through your prayers I will be restored to you.ಇದಲ್ಲದೆ ನಿಮ್ಮ ಪ್ರಾರ್ಥನೆಗಳ ಮುಖಾಂತರ ನಾನು ನಿಮ್ಮ ಬಳಿಗೆ ಬರುವದಕ್ಕೆ ಅನುಗ್ರಹವಾಗುವ ದೆಂದು ನನಗೆ ನಿರೀಕ್ಷೆ ಉಂಟು; ಆದಕಾರಣ ನನ ಗೋಸ್ಕರ ಇಳುಕೊಳ್ಳುವ ಸ್ಥಳವನ್ನು ಸಿದ್ಧಮಾಡು.

23 Epaphras, my fellow prisoner in Christ Jesus, greets you,ಕ್ರಿಸ್ತ ಯೇಸುವಿನಲ್ಲಿ ನನ್ನ ಜೊತೆ ಸೆರೆಯ ವನಾದ ಎಪಫ್ರನು ನಿನಗೆ ವಂದನೆ ತಿಳಿಸುತ್ತಾನೆ.

24 as do Mark, Aristarchus, Demas, and Luke, my fellow workers.ನನ್ನ ಜೊತೆಗೆಲಸದವರಾದ ಮಾರ್ಕ ಅರಿಸ್ತಾರ್ಕ ದೇಮಲೂ ಕರೂ ನಿನ್ನನ್ನು ವಂದಿಸುತ್ತಾರೆ.

25 The grace of our Lord Jesus Christ be with your spirit. Amen.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್‌.

Kannada Bible