Bible

Philippians 4 - WEB (Kannada)

1 Therefore, my brothers, beloved and longed for, my joy and crown, so stand firm in the Lord, my beloved.ಆದದರಿಂದ ಅತಿಪ್ರಿಯರೂ ಇಷ್ಟವಾದ ವರೂ ಆದ ನನ್ನ ಸಹೋದರರೇ, ನನ್ನ ಸಂತೋಷವೂ ಕಿರೀಟವೂ ಆಗಿರುವ ನನ್ನ ಅತಿ ಪ್ರಿಯರೇ, ಕರ್ತನಲ್ಲಿ ದೃಢವಾಗಿ ನಿಲ್ಲಿರಿ.

2 I exhort Euodia, and I exhort Syntyche, to think the same way in the Lord.ಕರ್ತನಲ್ಲಿ ಒಂದೇ ಮನಸ್ಸುಳ್ಳವರಾಗಿರಬೇಕೆಂದು ಯುವೊದ್ಯಳನ್ನೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ.

3 Yes, I beg you also, true yoke-fellow, help these women, for they labored with me in the Gospel, with Clement also, and the rest of my fellow workers, whose names are in the book of life.ನಿಜ ಜೊತೆಗಾರನೇ, ನೀನು ಆ ಸ್ತ್ರೀಯರಿಗೆ ಸಹಾಯಕ ನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್‌ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಕೂಡ ಸುವಾರ್ತೆಗೋಸ್ಕರ ಪ್ರಯಾಸ ಪಟ್ಟವರು. ಅವರ ಹೆಸರುಗಳು ಜೀವಗ್ರಂಥದಲ್ಲಿ ಬರೆದವೆ.

4 Rejoice in the Lord always! Again I will say, Rejoice!ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ನಾನು ತಿರಿಗಿ ಹೇಳುತ್ತೇನೆ.

5 Let your gentleness be known to all men. The Lord is at hand.ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ; ಕರ್ತನು ಹತ್ತಿರವಾಗಿದ್ದಾನೆ.

6 In nothing be anxious, but in everything, by prayer and petition with thanksgiving, let your requests be made known to God.ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.

7 And the peace of God, which surpasses all understanding, will guard your hearts and your thoughts in Christ Jesus.ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು.

8 Finally, brothers, whatever things are true, whatever things are honorable, whatever things are just, whatever things are pure, whatever things are lovely, whatever things are of good report; if there is any virtue, and if there is any praise, think about these things.ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ

9 The things which you learned, received, heard, and saw in me: do these things, and the God of peace will be with you.ನೀವು ಯಾವದನ್ನು ನನ್ನಿಂದ ಕಲಿತು ಹೊಂದಿದಿರೋ ಮತ್ತು ಯಾವದನ್ನು ನನ್ನಲ್ಲಿ ಕೇಳಿಕಂಡಿರೋ ಅದನ್ನೇ ಮಾಡುತ್ತಾ ಬನ್ನಿರಿ. ಆಗ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.

10 But I rejoice in the Lord greatly, that now at length you have revived your thought for me; in which you did indeed take thought, but you lacked opportunity.ಈಗಲಾದರೋ ನನ್ನ ವಿಷಯವಾದ ನಿಮ್ಮ ಯೋಚನೆಯು ನಿಮ್ಮಲ್ಲಿ ಪುನಃ ಚಿಗುರಿದ್ದಕ್ಕೆ ನಾನು ಕರ್ತನಲ್ಲಿ ಬಹಳವಾಗಿ ಸಂತೋಷಪಟ್ಟೆನು. ಈ ವಿಷಯ ದಲ್ಲಿ ನೀವು ಯೋಚನೆಯುಳ್ಳವರಾಗಿದ್ದರೂ ನಿಮಗೆ ಸಂದರ್ಭ ಸಿಕ್ಕಲಿಲ್ಲವೇನೋ.

11 Not that I speak in respect to lack, for I have learned in whatever state I am, to be content in it.ಕೊರತೆಯಲ್ಲಿದ್ದೇ ನೆಂದು ನಾನು ಇದನ್ನು ಹೇಳುವದಿಲ್ಲ; ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತುಷ್ಟನಾಗಿರುವದನ್ನು ಕಲಿತು ಕೊಂಡಿದ್ದೇನೆ.

12 I know how to be humbled, and I know also how to abound. In everything and in all things I have learned the secret both to be filled and to be hungry, both to abound and to be in need.ನಾನು ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು, ನಾನು ತೃಪ್ತನಾಗಿ ದ್ದರೂ ಹಸಿದವನಾಗಿದ್ದರೂ ಸಮೃದ್ಧಿಯುಳ್ಳವನಾದರೂ ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲಿರುವವನಾದರೂ ಅವೆಲ್ಲವುಗಳನ್ನು ನಾನು ಕಲಿತು ಕೊಂಡಿದ್ದೇನೆ.

13 I can do all things through Christ, who strengthens me.ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.

14 However you did well that you shared in my affliction.ಹೀಗಿದ್ದರೂ ನೀವು ನನ್ನ ಸಂಕಟದಲ್ಲಿ ಪಾಲುಗಾರ ರಾಗಿದ್ದದ್ದು ಒಳ್ಳೇದಾಯಿತು.

15 You yourselves also know, you Philippians, that in the beginning of the Gospel, when I departed from Macedonia, no assembly shared with me in the matter of giving and receiving but you only.ಇದಲ್ಲದೆ ಫಿಲಿಪ್ಪಿ ಯವರೇ, ಸುವಾರ್ತೆಯ ಪ್ರಾರಂಭದಲ್ಲಿ ನಾನು ಮಕೆದೋನ್ಯದಿಂದ ಹೊರಟಾಗ ಕೊಡುವದರ ಮತ್ತು ತೆಗೆದುಕೊಳ್ಳುವದರ ವಿಷಯದಲ್ಲಿ ನಿಮ್ಮ ಹೊರತು ಬೇರೆ ಸಭೆಯು ನನ್ನೊಂದಿಗೆ ಭಾಗವಹಿಸಲಿಲ್ಲವೆಂದು ನೀವು ಸಹ ಬಲ್ಲಿರಿ.

16 For even in Thessalonica you sent once and again to my need.ನಾನು ಥೆಸಲೋನಿಕದಲ್ಲಿ ದ್ದಾಗಲೂ ನೀವು ಕೆಲವು ಸಾರಿ ನನ್ನ ಕೊರತೆಯನ್ನು ನೀಗಿಸುವದಕ್ಕೆ ಕೊಟ್ಟು ಕಳುಹಿಸಿದಿರಲ್ಲಾ.

17 Not that I seek for the gift, but I seek for the fruit that increases to your account.ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವೆನೆಂತಲ್ಲ ಆದರೆ ನಿಮ್ಮ ಲೆಕ್ಕಕ್ಕೆ ಸಮೃದ್ಧಿಯಾದ ಫಲವನ್ನೇ ಅಪೇಕ್ಷಿಸು ತ್ತೇನೆ. ಆದರೆ ಬೇಕಾದದ್ದೆಲ್ಲ ನನಗುಂಟು, ಸಮೃದ್ಧಿ ಯಾಯಿತು.

18 But I have all things, and abound. I am filled, having received from Epaphroditus the things that came from you, a sweet-smelling fragrance, an acceptable and well-pleasing sacrifice to God.ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ

19 My God will supply every need of yours according to his riches in glory in Christ Jesus.ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.

20 Now to our God and Father be the glory forever and ever! Amen.ನಮ್ಮ ತಂದೆಯೂ ದೇವರೂ ಆಗಿರುವಾತನಿಗೆ ಯುಗ ಯುಗಾಂತರಗಳಲ್ಲಿಯೂ ಮಹಿಮೆ ಇರಲಿ. ಆಮೆನ್‌.

21 Greet every saint in Christ Jesus. The brothers who are with me greet you.ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬ ಪರಿಶುದ್ಧನಿಗೆ ವಂದನೆ. ನನ್ನ ಜೊತೆಯಲ್ಲಿರುವ ಸಹೋದರರು ನಿಮ್ಮನ್ನು ವಂದಿಸುತ್ತಾರೆ.

22 All the saints greet you, especially those who are of Caesar's household.ಪರಿಶುದ್ದರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಮುಖ್ಯವಾಗಿ ಕೈಸರನ ಮನೆಯವರು ನಿಮ್ಮನ್ನು ವಂದಿಸುತ್ತಾರೆ;

23 The grace of the Lord Jesus Christ be with you all. Amen.ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. ಆಮೆನ್‌.

Kannada Bible