Bible

Proverbs 16 - DBY (Kannada)

1 The purposes of the heart are of man, but the answer of the tongue is from Jehovah.ಮನುಷ್ಯನಲ್ಲಿ ಹೃದಯದ ಸಿದ್ಧತೆಗಳೂ ಬಾಯಿಯ ಪ್ರತ್ಯುತ್ತರವೂ ಕರ್ತನಿಂದಲೇ ಆಗುವವು.

2 All the ways of a man are clean in his own eyes; but Jehovah weigheth the spirits.ಮನುಷ್ಯನ ಮಾರ್ಗಗಳೆಲ್ಲಾ ತನ್ನ ಕಣ್ಣುಗಳ ಮುಂದೆ ಶುದ್ಧವಾಗಿವೆ; ಕರ್ತನು ಆತ್ಮಗಳನ್ನು ತೂಗಿಸುತ್ತಾನೆ.

3 Commit thy works unto Jehovah, and thy thoughts shall be established.ನಿನ್ನ ಕಾರ್ಯಗಳನ್ನು ಕರ್ತನಿಗೆ ಒಪ್ಪಿಸಿದರೆ ನಿನ್ನ ಆಲೋಚನೆಗಳು ಸ್ಥಿರವಾಗುವವು.

4 Jehovah hath wrought everything on his own account, yea, even the wicked for the day of evil.ಎಲ್ಲವುಗಳನ್ನು ಕರ್ತನು ತನಗಾಗಿ ಮಾಡಿದ್ದಾನೆ; ಹೌದು, ಕೇಡಿನ ದಿನಕ್ಕಾಗಿಯೂ ಕೆಡುಕರನ್ನು ಮಾಡಿ ದ್ದಾನೆ.

5 Every proud heart is an abomination to Jehovah: hand for hand, he shall not be held innocent.ಹೃದಯದಲ್ಲಿ ಗರ್ವಿಷ್ಠನಾದ ಪ್ರತಿಯೊಬ್ಬನೂ ಕರ್ತನಿಗೆ ಅಸಹ್ಯ. ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ.

6 By loving-kindness and truth iniquity is atoned for; and by the fear of Jehovah [men] depart from evil.ಕನಿಕರ ಮತ್ತು ಸತ್ಯದಿಂದ ಅಕ್ರಮವು ಶುದ್ಧೀಕರಿಸಲ್ಪಡುತ್ತದೆ; ಕರ್ತನ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.

7 When a man's ways please Jehovah, he maketh even his enemies to be at peace with him.ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.

8 Better is a little with righteousness, than great revenues without right.ಅನ್ಯಾಯದ ಬಹು ಆದಾಯಕ್ಕಿಂತಲೂ ನೀತಿಯೊಂದಿಗಿರುವ ಸ್ವಲ್ಪವೇ ಉತ್ತಮ.

9 The heart of man deviseth his way, but Jehovah directeth his steps.ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ; ಆದರೆ ಕರ್ತನು ಅವನ ಹೆಜ್ಜೆಗಳನ್ನು ನಡಿಸುತ್ತಾನೆ.

10 An oracle is on the lips of the king: his mouth will not err in judgment.ಅರಸನ ತುಟಿ ಗಳಲ್ಲಿ ದೈವೋಕ್ತಿ; ನ್ಯಾಯತೀರ್ಪಿನಲ್ಲಿ ಅವನ ಬಾಯಿ ಯು ದೋಷಮಾಡುವದಿಲ್ಲ.

11 The just balance and scales are Jehovah's; all the weights of the bag are his work.ನ್ಯಾಯದ ತೂಕವೂ ತಕ್ಕಡಿಯೂ ಕರ್ತನವು; ಚೀಲದ ತೂಕಗಳು ಆತನ ಕೈಕೆಲಸವೇ.

12 It is an abomination to kings to commit wickedness; for the throne is established by righteousness.ಕೆಟ್ಟದ್ದನ್ನು ಮಾಡುವವರು ರಾಜರಿಗೆ ಅಸಹ್ಯರು; ನೀತಿಯಿಂದ ಸಿಂಹಾಸನವು ಸ್ಥಾಪಿಸಲ್ಪಡು ತ್ತದೆ.

13 Righteous lips are the delight of kings, and they love him that speaketh aright.ನೀತಿಯ ತುಟಿಗಳು ಅರಸರ ಆನಂದ. ನ್ಯಾಯ ವಾದದ್ದನ್ನು ಮಾತನಾಡುವವನನ್ನು ಅವರು ಪ್ರೀತಿಸು ತ್ತಾರೆ.

14 The fury of a king is [as] messengers of death; but a wise man will pacify it.ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ; ಜ್ಞಾನಿಯು ಅದನ್ನು ಶಮನಪಡಿಸುವನು.

15 In the light of the king's countenance is life, and his favour is as a cloud of the latter rain.ಅರಸನ ಮುಖದ ಬೆಳಕಿನಲ್ಲಿ ಜೀವ; ಅವನ ದಯೆಯು ಹಿಂಗಾರು ಮಳೆಯ ಮೇಘದಂತಿದೆ.

16 How much better is it to get wisdom than fine gold, and the getting of intelligence to be preferred to silver!ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವದು ಎಷ್ಟೋ ಉತ್ತಮ.

17 The highway of the upright is to depart from evil: he that taketh heed to his way keepeth his soul.ಯಥಾರ್ಥವಂತರ ಹೆದ್ದಾರಿಯು ಕೆಟ್ಟತನದಿಂದ ತೊಲಗುವಂಥದ್ದಾಗಿದೆ. ತನ್ನ ಮಾರ್ಗ ವನ್ನು ಕಾಯುವವನು ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ.

18 Pride [goeth] before destruction, and a haughty spirit before a fall.ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.

19 Better is it to be of a humble spirit with the meek, than to divide the spoil with the proud.ಅಹಂಕಾರಿಗಳೊಂದಿಗೆ ಕೊಳ್ಳೆಯನ್ನು ಹಂಚಿಕೊಳ್ಳು ವದಕ್ಕಿಂತ ದೀನರೊಂದಿಗೆ ವಿನಯ ಮನಸ್ಸುಳ್ಳವರಾಗಿ ಇರುವದು ಉತ್ತಮ.

20 He that giveth heed to the word shall find good; and whoso confideth in Jehovah, happy is he.ಕಾರ್ಯವನ್ನು ಜ್ಞಾನದಿಂದ ನಡಿಸುವವನು ಒಳ್ಳೇದನ್ನು ಪಡೆಯುವನು; ಕರ್ತನಲ್ಲಿ ಭರವಸವಿಡುವವನು ಧನ್ಯನು.

21 The wise in heart is called intelligent, and the sweetness of the lips increaseth learning.ಹೃದಯದಲ್ಲಿ ಜ್ಞಾನ ವಂತರು ಜಾಣರೆಂದು ಕರೆಯಲ್ಪಡುವರು; ತುಟಿಗಳ ಮಧುರವು ಜ್ಞಾನವನ್ನು ಹೆಚ್ಚಿಸುತ್ತದೆ.

22 Wisdom is a fountain of life for him that hath it; but the instruction of fools is folly.ವಿವೇಕಿಗೆ ವಿವೇಕವೇ ಜೀವದ ಬುಗ್ಗೆ. ಬುದ್ಧಿಹೀನರ ಬೋಧ ನೆಯು ಮೂರ್ಖತನ.

23 The heart of the wise maketh his mouth intelligent, and upon his lips increaseth learning.ಜ್ಞಾನಿಯ ಹೃದಯವು ಬಾಯಿಗೆ ಬೋಧಿಸಿ ತನ್ನ ತುಟಿಗಳಿಗೆ ಜ್ಞಾನವನ್ನು ಹೆಚ್ಚಿಸುತ್ತದೆ.

24 Pleasant words are [as] a honeycomb, sweet to the soul, and health for the bones.ಮನೋಹರವಾದ ಮಾತುಗಳು ಜೇನು ತುಪ್ಪದಂತೆ ಪ್ರಾಣಕ್ಕೆ ಮಧುರವೂ ಎಲುಬು ಗಳಿಗೆ ಕ್ಷೇಮವೂ ಆಗಿವೆ.

25 There is a way that seemeth right unto a man, but the end thereof is the ways of death.ಮನುಷ್ಯರಿಗೆ ಸರಿಯಾಗಿ ತೋರುವ ಒಂದು ಮಾರ್ಗ ಉಂಟು; ಅದರ ಅಂತ್ಯವು ಮರಣದ ಮಾರ್ಗವೇ.

26 The appetite of the labourer laboureth for him, for his mouth urgeth him on.ದುಡಿಯುವವನು ತನ ಗಾಗಿಯೇ ದುಡಿಯುತ್ತಾನೆ; ಅವನ ಬಾಯಿಯು ಅದ ಕ್ಕಾಗಿ ಹಂಬಲಿಸುತ್ತದೆ.

27 A man of Belial diggeth up evil, and on his lips there is as a scorching fire.ಭಕ್ತಿಹೀನನು ದುಷ್ಟತ್ವವನ್ನು ಅಗೆಯುತ್ತಾನೆ; ಅವನ ತುಟಿಗಳು ಉರಿಯುವ ಬೆಂಕಿ ಯಂತಿವೆ.

28 A false man soweth contention; and a talebearer separateth very friends.ಮೂರ್ಖನು ಜಗಳವನ್ನು ಬಿತ್ತುತ್ತಾನೆ; ಪಿಸುಗುಟ್ಟುವವನು ಪ್ರಮುಖ ಸ್ನೇಹಿತರನ್ನು ಅಗಲಿಸು ತ್ತಾನೆ.

29 A violent man enticeth his neighbour, and leadeth him into a way that is not good.ಬಲಾತ್ಕಾರಿಯು ನೆರೆಯವನನ್ನು ಮರುಳು ಗೊಳಿಸಿ ದುರ್ಮಾರ್ಗಕ್ಕೆ ನಡಿಸುತ್ತಾನೆ.

30 He that shutteth his eyes, [it is] to devise froward things; biting his lips, he bringeth evil to pass.ವಕ್ರ ಬುದ್ಧಿಯ ಒಳಸಂಚುಗಳಿಗೆ ಅವನು ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುತ್ತಾನೆ; ತನ್ನ ತುಟಿಗಳನ್ನು ಕದಲಿಸುತ್ತಾ ಕೆಟ್ಟದ್ದು ಸಂಭವಿಸುವಂತೆ ಮಾಡುತ್ತಾನೆ.

31 The hoary head is a crown of glory, [if] it is found in the way of righteousness.ನೀತಿಯ ಮಾರ್ಗದಲ್ಲಿ ಕಾಣಿಸಲ್ಪಟ್ಟರೆ ನರೆತಲೆಯು ಸುಂದರ ಕಿರೀಟವಾಗಿವೆ.

32 He that is slow to anger is better than the mighty, and he that ruleth his spirit than he that taketh a city.ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠನು, ತನ್ನ ಮನಸ್ಸನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.

33 The lot is cast into the lap; but the whole decision is of Jehovah.ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.

Kannada Bible