Bible

Proverbs 20 - WEB (Kannada)

1 Wine is a mocker, and beer is a brawler; Whoever is led astray by them is not wise.ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ. ಇದ ರಿಂದ ಮೋಸಹೋದವನು ಜ್ಞಾನಿಯಲ್ಲ.

2 The terror of a king is like the roaring of a lion: He who provokes him to anger forfeits his own life.ಅರಸನ ಭಯವು ಸಿಂಹದ ಗರ್ಜನೆಯಂತಿದೆ; ಅವನಿಗೆ ಕೋಪ ವನ್ನೆಬ್ಬಿಸುವವನು ತನ್ನ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.

3 It is an honor for a man to keep aloof from strife; But every fool will be quarreling.ಕಲಹವನ್ನು ತಡೆಯುವವನು ಮಾನಕ್ಕೆ ಯೋಗ್ಯನು; ಪ್ರತಿಯೊಬ್ಬ ಬುದ್ಧಿಹೀನನು ತಲೆಹಾಕು ತ್ತಾನೆ.

4 The sluggard will not plow by reason of the winter; Therefore he shall beg in harvest, and have nothing.ಮೈಗಳ್ಳನು ಚಳಿಯ ನಿಮಿತ್ತವಾಗಿ ಉಳುವದಿಲ್ಲ; ಆದಕಾರಣ ಸುಗ್ಗಿಯಲ್ಲಿ ಅವನು ಬೇಡಿಕೊಂಡರೂ ಏನೂ ಸಿಕ್ಕುವದಿಲ್ಲ.

5 Counsel in the heart of man is like deep water; But a man of understanding will draw it out.ಮನುಷ್ಯನ ಹೃದಯದ ಆಲೋ ಚನೆಯು ಆಳವಾದ (ಬಾವಿಯ) ನೀರಿನಂತಿದೆ; ವಿವೇ ಕಿಯು ಅದನ್ನು ಸೇದುವನು.

6 Many men claim to be men of unfailing love, But who can find a faithful man?ಅನೇಕರಲ್ಲಿ ಪ್ರತಿಯೊ ಬ್ಬನು ತಮ್ಮ ಸ್ವಂತ ಸೌಜನ್ಯವನ್ನು ಸಾರುವನು; ನಂಬಿ ಗಸ್ತನಾದ ಮನುಷ್ಯನನ್ನು ಯಾರು ಕಂಡುಕೊಳ್ಳಬಲ್ಲರು?

7 A righteous man walks in integrity. Blessed are his children after him.ನೀತಿವಂತನು ತನ್ನ ಯಥಾರ್ಥತೆಯಲ್ಲಿ ನಡೆಯುತ್ತಾನೆ; ಅವನು ಗತಿಸಿದ ಮೇಲೆ ಅವನ ಮಕ್ಕಳು ಆಶೀರ್ವದಿ ಸಲ್ಪಡುವರು.

8 A king who sits on the throne of judgment Scatters away all evil with his eyes.ನ್ಯಾಯತೀರ್ಪಿನ ಸಿಂಹಾಸನದ ಮೇಲೆ ಕೂತಿರುವ ಅರಸನು ತನ್ನ ಕಣ್ಣು ದೃಷ್ಟಿಯಿಂದ ಸಕಲ ಕೆಟ್ಟತನವನ್ನು ಚದರಿಸುವನು.

9 Who can say, "I have made my heart pure. I am clean and without sin?"ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ, ನನ್ನ ಪಾಪದಿಂದ ನಾನು ಶುದ್ಧನು ಎಂದು ಯಾರು ಹೇಳಬಲ್ಲರು?

10 Differing weights and differing measures, Both of them alike are an abomination to Yahweh.ವಿಧ ವಿಧವಾದ ತೂಕಗಳೂ ತರತರವಾದ ಅಳತೆಗಳೂ ಇವೆರಡೂ ಸಮವಾಗಿಯೇ ಕರ್ತನಿಗೆ ಅಸಹ್ಯ.

11 Even a child makes himself known by his doings, Whether his work is pure, and whether it is right.ತನ್ನ ಕೆಲಸವು ಶುದ್ಧವೋ ಇಲ್ಲವೆ ನ್ಯಾಯವೋ ಎಂಬದು ತನ್ನ ಕ್ರಿಯೆಗಳಿಂದಲೇ ಹುಡುಗನು ತೋರ್ಪಡಿಸಿ ಕೊಳ್ಳುತ್ತಾನೆ.

12 The hearing ear, and the seeing eye, Yahweh has made even both of them.ಕೇಳುವ ಕಿವಿ ನೋಡುವ ಕಣ್ಣು, ಇವೆರಡನ್ನು ಕರ್ತನು ಮಾಡಿದ್ದಾನೆ.

13 Don't love sleep, lest you come to poverty; Open your eyes, and you shall be satisfied with bread.ನೀನು ಬಡ ತನಕ್ಕೆ ಬಾರದಂತೆ ನಿದ್ರೆಯಲ್ಲಿ ಆಸಕ್ತಿಯುಳ್ಳವನಾಗಿರ ಬೇಡ; ನಿನ್ನ ಕಣ್ಣುಗಳನ್ನು ತೆರೆದರೆ ನೀನು ರೊಟ್ಟಿ ಯಿಂದ ತೃಪ್ತನಾಗುವಿ.

14 "It's no good, it's no good," says the buyer; But when he is gone his way, then he boasts.ಇದು ನಿಷ್ಪ್ರಯೋಜಕವಾದದ್ದು, ಇದು ನಿಷ್ಪ್ರಯೋಜಕವಾದದ್ದು ಎಂದು ಕೊಳ್ಳು ವವನು ಹೇಳುತ್ತಾನೆ. ಅವನು ಹೋದ ಮೇಲೆ ಹೊಗ ಳುತ್ತಾನೆ.

15 There is gold and abundance of rubies; But the lips of knowledge are a rare jewel.ಬಂಗಾರವೂ ಮಾಣಿಕ್ಯಗಳ ರಾಶಿಯೂ ಇವೆ. ತಿಳುವಳಿಕೆಯ ತುಟಿಗಳು ಅಮೂಲ್ಯವಾದ ರತ್ನ ವಾಗಿವೆ.

16 Take the garment of one who puts up collateral for a stranger; And hold him in pledge for a wayward woman.ಪರರ ಹೊಣೆಯಾಗಿರುವ ಬಟ್ಟೆಯನ್ನು ತೆಗೆದುಕೋ; ಪರಸ್ತ್ರೀಗೋಸ್ಕರ ಅವನಿಂದ ಒತ್ತೆ ತೆಗೆ ದುಕೋ.

17 Fraudulent food is sweet to a man, But afterwards his mouth is filled with gravel.ಮೋಸದಿಂದ ಸಿಕ್ಕಿದ ರೊಟ್ಟಿಯು ಮನು ಷ್ಯನಿಗೆ ರುಚಿ; ಆಮೇಲೆ ಅವನ ಬಾಯಿಯು ಮರಳಿ ನಿಂದ ತುಂಬುವದು.

18 Plans are established by advice; By wise guidance you wage war!ಪ್ರತಿಯೊಂದು ಉದ್ದೇಶವು ಆಲೋಚನೆಯಿಂದ ಸಫಲವಾಗುವದು; ಹಿತವಾದ ಸಲಹೆಯಿಂದ ಯುದ್ಧಮಾಡು.

19 He who goes about as a tale-bearer reveals secrets; Therefore don't keep company with him who opens wide his lips.ತಿರುಗುವ ಚಾಡಿ ಕೋರನು ಗುಟ್ಟುಗಳನ್ನು ರಟ್ಟುಮಾಡುತ್ತಾನೆ. ಆದ ಕಾರಣ ತನ್ನ ತುಟಿಗಳಿಂದ ಮುಖಸ್ತುತಿ ಮಾಡುವವನ ಗೊಡವೆಗೆ ಹೋಗಬೇಡ.

20 Whoever curses his father or his mother, His lamp shall be put out in blackness of darkness.ತನ್ನ ತಂದೆ ತಾಯಿಯನ್ನಾ ಗಲಿ ಶಪಿಸುವವನ ದೀಪವು ಮಂಕಾದ ಕತ್ತಲೆಯಲ್ಲಿ ಆರಿಹೋಗುವದು.

21 An inheritance quickly gained at the beginning, Won't be blessed in the end.ಮೊದಲು ಸ್ವಾಸ್ತ್ಯವನ್ನೂ ತ್ವರೆ ಯಾಗಿ ಹೊಂದಬಹುದು; ಅದರ ಕೊನೆಯು ಆಶೀ ರ್ವದಿಸಲ್ಪಡುವದಿಲ್ಲ.

22 Don't say, "I will pay back evil." Wait for Yahweh, and he will save you.ನೀನು--ಕೇಡಿಗೆ ಮುಯ್ಯಿ ತೀರಿಸುವೆನು ಅನ್ನಬೇಡ; ಕರ್ತನನ್ನು ನಿರೀಕ್ಷಿಸು; ಆಗ ಆತನು ನಿನ್ನನ್ನು ರಕ್ಷಿಸುವನು.

23 Yahweh detests differing weights, And dishonest scales are not pleasing.ವಿಧವಿಧವಾದ ತೂಕ ಗಳು ಕರ್ತನಿಗೆ ಅಸಹ್ಯವಾಗಿವೆ; ಮೋಸದ ತಕ್ಕಡಿಯು ಒಳ್ಳೇದಲ್ಲ.

24 A man's steps are from Yahweh; How then can man understand his way?ಮನುಷ್ಯನ ನಡೆಗಳು ಕರ್ತನಿಂದಲೇ; ಹಾಗಾದರೆ ಒಬ್ಬ ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳುಕೊಳ್ಳಬಲ್ಲನು?

25 It is a snare to a man to make a rash dedication, Then later to consider his vows.ಪರಿಶುದ್ಧವಾದದ್ದನ್ನು ನುಂಗಿದವನಾಗಿ ತರುವಾಯ ವಿಚಾರಿಸುವದಕ್ಕಾಗಿ ಆಣೆಯಿಟ್ಟು ಕೊಳ್ಳುವದು ಒಬ್ಬ ಮನುಷ್ಯನಿಗೆ ಉರ್ಲಾ ಗಿದೆ.

26 A wise king winnows out the wicked, And drives the threshing wheel over them.ಜ್ಞಾನಿಯಾದ ಅರಸನು ದುಷ್ಟರನ್ನು ಚದರಿಸಿ ಅವರ ಮೇಲೆ ಚಕ್ರವನ್ನು ಎಳೆಯುತ್ತಾನೆ.

27 The spirit of man is Yahweh's lamp, Searching all his innermost parts.ಮನುಷ್ಯನ ಆತ್ಮವು ಹೊಟ್ಟೆಯ ಒಳಭಾಗಗಳನ್ನು ಶೋಧಿಸುವಂಥ ಕರ್ತನ ದೀಪವಾಗಿವೆ.

28 Love and faithfulness keep the king safe. His throne is sustained by love.ಕರುಣೆಯೂ ಸತ್ಯವೂ ಅರಸನನ್ನು ಕಾಯುತ್ತದೆ; ಕರುಣೆಯಿಂದಲೇ ಅವನ ಸಿಂಹಾಸನವು ಸ್ಥಿರಗೊಳ್ಳುತ್ತದೆ.

29 The glory of young men is their strength. The splendor of old men is their gray hair.ಯೌವನಸ್ಥರ ಘನತೆಯು ಅವರ ಬಲವೇ; ಮುದುಕರ ಅಲಂಕಾರವು ನರೆತ ತಲೆಯೇ.

30 Wounding blows cleanse away evil, And beatings purge the innermost parts.ನೀಲಿಯಾದ ಗಾಯವು ದುಷ್ಟ ತ್ವವನ್ನು ತೊಳೆಯುತ್ತದೆ; ಹಾಗೆಯೇ ಏಟುಗಳು ಹೊಟ್ಟೆಯ ಒಳಭಾಗಗಳನ್ನು ಶುದ್ಧಮಾಡುತ್ತವೆ.

Kannada Bible