Proverbs 23:29-34 in Kannada
Proverbs 23:29
ಯಾರಿಗೆ ಅಯ್ಯೋ? ಯಾರಿಗೆ ದುಃಖ? ಯಾರಿಗೆ ಕಲಹಗಳು? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯ ಪಡುತ್ತಾರೆ? ಯಾರಿಗೆ ಕೆಂಪೇ ರಿದ ಕಣ್ಣುಗಳು?
Proverbs 23:30
ದ್ರಾಕ್ಷಾರಸಕ್ಕಾಗಿ ಕಾದಿರುವಂಥ ವರು ಮಿಶ್ರಿತ ದ್ರಾಕ್ಷಾರಸವನ್ನು ಹುಡುಕುವವರಾಗಿ ಇರುತ್ತಾರೆ.
Proverbs 23:31
ದ್ರಾಕ್ಷಾರಸವು ಕೆಂಪಾಗಿದ್ದು ಪಾತ್ರೆಯಲ್ಲಿ ಥಳಥಳಿಸುತ್ತಾ ಚಲಿಸಿದರೆ ಅದನ್ನು ನೋಡಬೇಡ.
Proverbs 23:32
ಕೊನೆಗೆ ಅದು ಹಾವಿನಂತೆ ಮತ್ತು ವಿಷಸರ್ಪದಂತೆ ಕಚ್ಚುತ್ತದೆ.
Proverbs 23:33
ನಿನ್ನ ಕಣ್ಣುಗಳು ಪರಸ್ತ್ರೀಯರನ್ನು ನೋಡಿ ದರೆ ನಿನ್ನ ಹೃದಯವು ವಕ್ರವಾದ ಭಾಷೆಯನ್ನು ಉಚ್ಚರಿ ಸುವದು.
Proverbs 23:34
ಹೌದು, ಸಮುದ್ರದ ಮಧ್ಯದಲ್ಲಿ ಮಲಗಿ ರುವವನಂತೆ ಇಲ್ಲವೆ ಹಡಗಿನ ಕಂಬದ ತುದಿಯಲ್ಲಿ ಇದ್ದವನಂತೆ ನೀನು ಇರುವಿ.
Kannada Bible