Bible

Proverbs 25:1-27 in Kannada

Proverbs 25:1
ಯೆಹೂದದ ಅರಸನಾದ ಹಿಜ್ಕೀಯನ ಲೇಖಕರು ಬರೆದಿರುವ ಇವು ಕೂಡ ಸೊಲೊಮೋನನ ಸಾಮತಿಗಳೇ.

Proverbs 25:2
ವಿಷಯವನ್ನು ರಹಸ್ಯ ಮಾಡುವದು ದೇವರ ಮಹಿಮೆ; ಅರಸರ ಘನತೆಯು ವಿಷಯವನ್ನು ಶೋಧಿಸುವದು.

Proverbs 25:3
ಆಕಾ ಶವು, ಉನ್ನತ ಭೂಮಿಯು ಅಗಾಧ ಮತ್ತು ಅರಸರ ಹೃದಯವು ಅಗೋಚರ.

Proverbs 25:4
ಬೆಳ್ಳಿಯಿಂದ ಕಲ್ಮಶವನ್ನು ತೆಗೆದುಹಾಕಿದರೆ ಅಕ್ಕಸಾಲಿಗನಿಗೆ ಬೇಕಾದ ಪಾತ್ರೆಯು ಬರುವದು.

Proverbs 25:5
ಅರಸನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ ಅವನ ಸಿಂಹಾಸನವು ನೀತಿಯಲ್ಲಿ ಸ್ಥಿರವಾಗುವದು.

Proverbs 25:6
ಅರಸನ ಸನ್ನಿಧಿಯಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ದೊಡ್ಡವರ ಸ್ಥಾನದಲ್ಲಿ ನಿಲ್ಲಬೇಡ;

Proverbs 25:7
ಮೇಲಕ್ಕೆ ಬಾ ಎಂದು ನೀನು ಕರೆಯಿಸಿಕೊಳ್ಳುವದು, ನಿನ್ನ ಕಣ್ಣುಗಳು ನೋಡಿದ ರಾಜನ ಸನ್ನಿಧಿಯಲ್ಲಿ ನೀನು ಕೆಳಗಿನ ಸ್ಥಾನಕ್ಕೆ ತಗ್ಗಿಸಲ್ಪಡುವದಕ್ಕಿಂತ ಲೇಸು.

Proverbs 25:8
ನಿನ್ನ ನೆರೆಯವನು ನಿನ್ನನ್ನು ಅವಮಾನಕ್ಕೆ ಗುರಿಮಾಡಿದಾಗ ಕಡೆಯಲ್ಲಿ ಏನು ಮಾಡಬೇಕೆಂಬದು ನೀನು ತಿಳಿಯ ದಂತೆ ದುಡುಕಿನಿಂದ ಕಲಹಮಾಡುವದಕ್ಕಾಗಿ ಹೋಗ ಬೇಡ.

Proverbs 25:9
ನಿನ್ನ ನೆರೆಯವನೊಂದಿಗೆ ನಿನ್ನ ವ್ಯಾಜ್ಯವನ್ನು ಚರ್ಚಿಸು; ಗುಟ್ಟನ್ನು ಬೇರೊಬ್ಬನಿಗೆ ಹೊರಪಡಿಸಬೇಡ;

Proverbs 25:10
ಅದನ್ನು ಕೇಳುವವನು ನಿನ್ನನ್ನು ಅವಮಾನಕ್ಕೆ ಗುರಿಪಡಿಸಿಯಾನು, ನಿನ್ನ ಅಪಕೀರ್ತಿಯು ಹೋಗದೆ ಇದ್ದೀತು.

Proverbs 25:11
ಸಮಯೋಚಿತವಾದ ಮಾತು ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ.

Proverbs 25:12
ಕೇಳುವ ಕಿವಿಗೆ ಜ್ಞಾನಿಯ ಗದರಿಕೆಯು ಹೇಗೋ ಹಾಗೇ ಬಂಗಾ ರದ ಕಿವಿಯ ಓಲೆಯು ಚೊಕ್ಕಬಂಗಾರದ ಆಭರಣ ದಂತಿದೆ.

Proverbs 25:13
ಸುಗ್ಗಿಯ ಕಾಲದಲ್ಲಿ ಹಿಮಶೀತದ ಹಾಗೆ ತನ್ನನ್ನು ಕಳುಹಿಸುವವರಿಗೆ ನಂಬಿಗಸ್ಥನಾದ ಸೇವಕನಿ ದ್ದಾನೆ. ತನ್ನ ಯಜಮಾನರ ಪ್ರಾಣವನ್ನು ಅವನು ನವಚೈತನ್ಯಗೊಳಿಸುತ್ತಾನೆ.

Proverbs 25:14
ಸುಳ್ಳಾದ ದಾನದ ವಿಷ ಯವಾಗಿ ಹೊಗಳಿಕೊಳ್ಳುವವನು ಮಳೆ ಇಲ್ಲದ ಮೋಡ ಗಳ ಮತ್ತು ಗಾಳಿಯ ಹಾಗೆ ಇದ್ದಾನೆ.

Proverbs 25:15
ದೀರ್ಘ ಶಾಂತಿಯಿಂದ ಪ್ರಭುವನ್ನು ಸಮ್ಮತಿಪಡಿಸಬಹುದು. ಮೃದುವಾದ ನಾಲಿಗೆಯು ಎಲುಬನ್ನು ಮುರಿಯುತ್ತದೆ.

Proverbs 25:16
ಜೇನನ್ನು ಕಂಡುಕೊಂಡಿದ್ದೀಯಾ? ಅದನ್ನು ನಿನಗೆ ತೃಪ್ತಿಯಾಗುವಷ್ಟು ತಿನ್ನು; ಹೊಟ್ಟೆತುಂಬ ತಿಂದರೆ ಕಾರ ಬೇಕಾದೀತು.

Proverbs 25:17
ನೆರೆಯವನು ಬೇಸರಗೊಂಡು ಹಗೆ ಮಾಡದ ಹಾಗೆ ಅವನ ಮನೆಯಲ್ಲಿ ಅಪರೂಪವಾಗಿ ಹೆಜ್ಜೆಯಿಡು.

Proverbs 25:18
ತನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳುವವನು ಚಮಟಿಗೆ, ಕತ್ತಿ, ಮತ್ತು ಹರಿತವಾದ ಬಾಣವಾಗಿದ್ದಾನೆ.

Proverbs 25:19
ಕಷ್ಟ ಕಾಲದಲ್ಲಿ ಅಪನಂಬಿಗಸ್ಥನಾದ ಮನುಷ್ಯನಲ್ಲಿಯ ಭರವಸವು ಮುರಿದ ಹಲ್ಲು, ಕೀಲು ತಪ್ಪಿದ ಪಾದವು.

Proverbs 25:20
ಚಳಿಯಲ್ಲಿ ಬಟ್ಟೆಯನ್ನು ತೆಗೆದುಹಾಕುವವನು ಸೋಡಾಉಪ್ಪಿನ ಹುಳಿಯ ಹಾಗೆಯೇ ಮನಗುಂದಿದವನಿಗೆ ಸಂಗೀತಗ ಳನ್ನು ಹಾಡುವನು.

Proverbs 25:21
ನಿನ್ನ ಶತ್ರು ಹಸಿದಿದ್ದರೆ ತಿನ್ನುವ ದಕ್ಕೆ ಅವನಿಗೆ ರೊಟ್ಟಿ ಕೊಡು; ಅವನು ಬಾಯಾರಿದ್ದರೆ ಕುಡಿಯುವದಕ್ಕೆ ನೀರು ಕೊಡು.

Proverbs 25:22
ಅವನ ತಲೆಯ ಮೇಲೆ ಬೆಂಕಿಯ ಕೆಂಡಗಳನ್ನು ಹಾಕುವಿ; ಕರ್ತನು ನಿನಗೆ ಪ್ರತಿಫಲ ಕೊಡುವನು.

Proverbs 25:23
ಉತ್ತರದ ಗಾಳಿಯು ಮಳೆಯನ್ನು ನೂಕುತ್ತದೆ; ಅದರಂತೆಯೇ ಚಾಡಿಯ ನಾಲಿಗೆ ಕೋಪದ ಮುಖ ಮಾಡುವದೆ.

Proverbs 25:24
ವಿಶಾಲ ವಾದ ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವದ ಕ್ಕಿಂತ ಮಾಳಿಗೆಯ ಮೂಲೆಯಲ್ಲಿ ವಾಸಿಸುವದು ಲೇಸು.

Proverbs 25:25
ಬಾಯಾರಿದವನಿಗೆ ತಣ್ಣೀರು ಹೇಗೋ ದೂರ ದೇಶ ದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ.

Proverbs 25:26
ದುಷ್ಟರ ಮುಂದೆ ನೀತಿವಂತನು ಬೀಳುವದು, ಕದಲಿ ಸಲ್ಪಟ್ಟ ಬುಗ್ಗೆ, ಕೊಳಕಾದ ಒರತೆ ಇದ್ದಂತೆ.

Proverbs 25:27
ಜೇನನ್ನು ಹೆಚ್ಚಾಗಿ ತಿನ್ನುವದು ಹಿತವಲ್ಲ; ಹಾಗೆಯೇ ಮನುಷ್ಯರು ಸ್ವಂತ ಗೌರವವನ್ನು ಹುಡುಕುವದು ಗೌರವವಲ್ಲ.

Kannada Bible