Bible

Proverbs 26:1-26 in Kannada

Proverbs 26:1
ಬೇಸಿಗೆಯಲ್ಲಿ ಹಿಮದಂತೆಯೂ ಸುಗ್ಗಿಯಲ್ಲಿ ಮಳೆಯಂತೆಯೂ ಬುದ್ಧಿಹೀನನಿಗೆ ಮಾನ ವು ಸರಿಯಲ್ಲ.

Proverbs 26:2
ಅಲೆದಾಡುವ ಪಕ್ಷಿಯಂತೆಯೂ ಹಾರಾ ಡುವ ಬಾನಕ್ಕಿಯಂತೆಯೂ ಕಾರಣವಿಲ್ಲದ ನಾಶವು ಬರುವದಿಲ್ಲ.

Proverbs 26:3
ಕುದುರೆಗೆ ಬಾರುಗೋಲು, ಕತ್ತೆಗೆ ಕಡಿ ವಾಣ, ಮೂಢನ ಬೆನ್ನಿಗೆ ಬೆತ್ತ.

Proverbs 26:4
ಮೂಢನ ಮೂರ್ಖ ತನಕ್ಕೆ ತಕ್ಕಂತೆ ಉತ್ತರಿಸಬೇಡ; ಇಲ್ಲವಾದರೆ ನೀನು ಅವನಿಗೆ ಸಮಾನನಾದೀಯೇ.

Proverbs 26:5
ಮೂಢನ ಮೂರ್ಖ ತನಕ್ಕೆ ತಕ್ಕಂತೆ ಉತ್ತರಕೊಡು; ಇಲ್ಲವಾದರೆ ತನ್ನ ದೃಷ್ಟಿ ಯಲ್ಲಿ ಅವನು ಜ್ಞಾನಿಯಾದಾನು.

Proverbs 26:6
ಬುದ್ಧಿಹೀನನ ಮೂಲಕ ವರ್ತಮಾನ ಕಳುಹಿಸುವವನು ಪಾದಗಳನ್ನು ಕಡಿದು ಕೇಡನ್ನು ಕುಡಿಯುತ್ತಾನೆ.

Proverbs 26:7
ಕುಂಟನ ಕಾಲು ಗಳು ಸಮವಲ್ಲ; ಹಾಗೆಯೇ ಬುದ್ಧಿಹೀನರ ಬಾಯಲ್ಲಿ ಸಾಮ್ಯವು ಇರುತ್ತದೆ.

Proverbs 26:8
ಕವಣಿಯಲ್ಲಿ ಕಲ್ಲನ್ನು ಕಟ್ಟುವವನ ಹಾಗೆಯೇ ಮೂಢನಿಗೆ ಮಾನಕೊಡುವವನು ಇರು ವನು.

Proverbs 26:9
ಕುಡುಕನ ಕೈಯಲ್ಲಿ ಮುಳ್ಳು ಹೊಕ್ಕಂತೆ ಬುದ್ಧಿ ಹೀನರ ಬಾಯಲ್ಲಿ ಸಾಮ್ಯವು ಇರುವದು.

Proverbs 26:10
ಎಲ್ಲವು ಗಳನ್ನು ನಿರ್ಮಿಸಿದ ಮಹಾ ದೇವರು ತಾನೇ ಮೂಢ ನಿಗೂ ಅಪರಾಧಿಗಳಿಗೂ ಪ್ರತಿಫಲ ಕೊಡುತ್ತಾನೆ.

Proverbs 26:11
ತಾನು ಕಕ್ಕಿದ್ದಕ್ಕೆ ನಾಯಿಯು ತಿರುಗುವಂತೆ ಮೂಢನು ತನ್ನ ಮೂಢತನಕ್ಕೆ ಹಿಂದಿರುಗುತ್ತಾನೆ.

Proverbs 26:12
ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ನೋಡಿ ದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ,

Proverbs 26:13
ಸೋಮಾರಿಯು --ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ಸಿಂಹ ಇದೆ ಎಂದು ಹೇಳುತ್ತಾನೆ.

Proverbs 26:14
ಬಾಗಲು ತಿರುಗುಣಿಗಳ ಮೇಲೆ ಹೇಗೆ ತಿರುಗುತ್ತದೋ ಹಾಗೆಯೇ ಸೋಮಾರಿಯು ತನ್ನ ಹಾಸಿಗೆಯ ಮೇಲೆ ತಿರುಗುತ್ತಾನೆ.

Proverbs 26:15
ಸೋಮಾ ರಿಯು ಎದೆಯಲ್ಲಿ ತನ್ನ ಕೈಯನ್ನು ಮುಚ್ಚಿಕೊಳ್ಳುತ್ತಾನೆ; ತಿರುಗಿ ಅದನ್ನು ತನ್ನ ಬಾಯಿಯ ಹತ್ತಿರ ತರುವದಕ್ಕೆ ಕೊರಗುತ್ತಾನೆ.

Proverbs 26:16
ತನ್ನ ಸ್ವಂತ ಅಭಿಪ್ರಾಯವುಳ್ಳ ಸೋಮಾರಿಯು ನೆವ ಹೇಳುವ ಏಳು ಮಂದಿಗಿಂತ ಜಾಣನಾಗಿದ್ದಾನೆ.

Proverbs 26:17
ಹಾದು ಹೋಗುತ್ತಾ ತನ್ನದಾಗ ದಿರುವ ವ್ಯಾಜ್ಯದಲ್ಲಿ ತಲೆಹಾಕುವವನು ಕಿವಿಹಿಡಿದು ನಾಯಿಯನ್ನು ತೆಗೆದುಕೊಂಡು ಹೋಗುವವನಂತೆ ಇದ್ದಾನೆ.

Proverbs 26:18
ನೆರೆಯವನನ್ನು ಮೋಸಗೊಳಿಸಿ ತಮಾಷೆ ಗೋಸ್ಕರ ಮಾಡಿದೆನಲ್ಲಾ ಎನ್ನುವವನು--

Proverbs 26:19
ಕೊಳ್ಳಿ ಗಳನ್ನೂ ಅಂಬುಗಳನ್ನೂ ಸಾವನ್ನೂ ಬೀರುವ ದೊಡ್ಡ ಹುಚ್ಚನ ಹಾಗೆ.

Proverbs 26:20
ಕಟ್ಟಿಗೆ ಇಲ್ಲದಿರುವಲ್ಲಿ ಬೆಂಕಿಯು ಆರಿ ಹೋಗುತ್ತದೆ--ಹಾಗಯೇ ಚಾಡಿಕೋರನು ಇಲ್ಲ ದಿರುವಲ್ಲಿ ಜಗಳ ಶಮನವಾಗುವದು.

Proverbs 26:21
ಕೆಂಡಗಳಿಗೆ ಇದ್ದಲು, ಬೆಂಕಿಗೆ ಕಟ್ಟಿಗೆ; ಹಾಗೆಯೇ ಜಗಳವನ್ನು ಕೆರಳಿಸುವಂತೆ ಕಲಹಮಾಡುವವನು ಇರುವನು.

Proverbs 26:22
ಚಾಡಿಕೋರನ ಮಾತುಗಳು ಗಾಯಗಳ ಹಾಗೆ ಹೊಟ್ಟೆಯೊಳಕ್ಕೆ ಇಳಿಯುತ್ತವೆ.

Proverbs 26:23
ಉರಿಯುವ ತುಟಿ ಗಳೂ ಕೆಟ್ಟಹೃದಯವೂ ಬೆಳ್ಳಿಯ ಕಿಟ್ಟದಿಂದ ಮುಚ್ಚ ಲ್ಪಟ್ಟ ಬೋಕಿಯಂತೆ ಇದೆ.

Proverbs 26:24
ಹಗೆಮಾಡುವವನು ತನ್ನ ತುಟಿಗಳಿಂದ ಮೋಸವನ್ನು ನಟಿಸುತ್ತಾನೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾನೆ.

Proverbs 26:25
ಸವಿ ಮಾತನ್ನಾಡಿದರೆ ಅವನನ್ನು ನಂಬಬೇಡ; ಅವನ ಹೃದಯದಲ್ಲಿ ಏಳು ಅಸಹ್ಯಗಳಿವೆ.

Proverbs 26:26
ಯಾವನ ಹಗೆ ತನವು ಮೋಸದಿಂದ ಮುಚ್ಚಲ್ಪಟ್ಟಿದೆಯೋ ಅವನ ಕೆಟ್ಟತನವು ಸಭೆಯಲ್ಲಿ ಬಯಲಾಗುವದು.

Kannada Bible