Bible

Proverbs 26 - WEB (Kannada)

1 Like snow in summer, and as rain in harvest, So honor is not fitting for a fool.ಬೇಸಿಗೆಯಲ್ಲಿ ಹಿಮದಂತೆಯೂ ಸುಗ್ಗಿಯಲ್ಲಿ ಮಳೆಯಂತೆಯೂ ಬುದ್ಧಿಹೀನನಿಗೆ ಮಾನ ವು ಸರಿಯಲ್ಲ.

2 Like a fluttering sparrow, Like a darting swallow, So the undeserved curse doesn't come to rest.ಅಲೆದಾಡುವ ಪಕ್ಷಿಯಂತೆಯೂ ಹಾರಾ ಡುವ ಬಾನಕ್ಕಿಯಂತೆಯೂ ಕಾರಣವಿಲ್ಲದ ನಾಶವು ಬರುವದಿಲ್ಲ.

3 A whip for the horse, A bridle for the donkey, And a rod for the back of fools!ಕುದುರೆಗೆ ಬಾರುಗೋಲು, ಕತ್ತೆಗೆ ಕಡಿ ವಾಣ, ಮೂಢನ ಬೆನ್ನಿಗೆ ಬೆತ್ತ.

4 Don't answer a fool according to his folly, Lest you also be like him.ಮೂಢನ ಮೂರ್ಖ ತನಕ್ಕೆ ತಕ್ಕಂತೆ ಉತ್ತರಿಸಬೇಡ; ಇಲ್ಲವಾದರೆ ನೀನು ಅವನಿಗೆ ಸಮಾನನಾದೀಯೇ.

5 Answer a fool according to his folly, Lest he be wise in his own eyes.ಮೂಢನ ಮೂರ್ಖ ತನಕ್ಕೆ ತಕ್ಕಂತೆ ಉತ್ತರಕೊಡು; ಇಲ್ಲವಾದರೆ ತನ್ನ ದೃಷ್ಟಿ ಯಲ್ಲಿ ಅವನು ಜ್ಞಾನಿಯಾದಾನು.

6 One who sends a message by the hand of a fool Is cutting off feet and drinking violence.ಬುದ್ಧಿಹೀನನ ಮೂಲಕ ವರ್ತಮಾನ ಕಳುಹಿಸುವವನು ಪಾದಗಳನ್ನು ಕಡಿದು ಕೇಡನ್ನು ಕುಡಿಯುತ್ತಾನೆ.

7 Like the legs of the lame that hang loose: So is a parable in the mouth of fools.ಕುಂಟನ ಕಾಲು ಗಳು ಸಮವಲ್ಲ; ಹಾಗೆಯೇ ಬುದ್ಧಿಹೀನರ ಬಾಯಲ್ಲಿ ಸಾಮ್ಯವು ಇರುತ್ತದೆ.

8 As one who binds a stone in a sling, So is he who gives honor to a fool.ಕವಣಿಯಲ್ಲಿ ಕಲ್ಲನ್ನು ಕಟ್ಟುವವನ ಹಾಗೆಯೇ ಮೂಢನಿಗೆ ಮಾನಕೊಡುವವನು ಇರು ವನು.

9 Like a thornbush that goes into the hand of a drunkard, So is a parable in the mouth of fools.ಕುಡುಕನ ಕೈಯಲ್ಲಿ ಮುಳ್ಳು ಹೊಕ್ಕಂತೆ ಬುದ್ಧಿ ಹೀನರ ಬಾಯಲ್ಲಿ ಸಾಮ್ಯವು ಇರುವದು.

10 As an archer who wounds all, So is he who hires a fool Or he who hires those who pass by.ಎಲ್ಲವು ಗಳನ್ನು ನಿರ್ಮಿಸಿದ ಮಹಾ ದೇವರು ತಾನೇ ಮೂಢ ನಿಗೂ ಅಪರಾಧಿಗಳಿಗೂ ಪ್ರತಿಫಲ ಕೊಡುತ್ತಾನೆ.

11 As a dog that returns to his vomit, So is a fool who repeats his folly.ತಾನು ಕಕ್ಕಿದ್ದಕ್ಕೆ ನಾಯಿಯು ತಿರುಗುವಂತೆ ಮೂಢನು ತನ್ನ ಮೂಢತನಕ್ಕೆ ಹಿಂದಿರುಗುತ್ತಾನೆ.

12 Do you see a man wise in his own eyes? There is more hope for a fool than for him.ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ನೋಡಿ ದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ,

13 The sluggard says, "There is a lion in the road! A fierce lion roams the streets!"ಸೋಮಾರಿಯು --ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ಸಿಂಹ ಇದೆ ಎಂದು ಹೇಳುತ್ತಾನೆ.

14 As the door turns on its hinges, So does the sluggard on his bed.ಬಾಗಲು ತಿರುಗುಣಿಗಳ ಮೇಲೆ ಹೇಗೆ ತಿರುಗುತ್ತದೋ ಹಾಗೆಯೇ ಸೋಮಾರಿಯು ತನ್ನ ಹಾಸಿಗೆಯ ಮೇಲೆ ತಿರುಗುತ್ತಾನೆ.

15 The sluggard buries his hand in the dish. He is too lazy to bring it back to his mouth.ಸೋಮಾ ರಿಯು ಎದೆಯಲ್ಲಿ ತನ್ನ ಕೈಯನ್ನು ಮುಚ್ಚಿಕೊಳ್ಳುತ್ತಾನೆ; ತಿರುಗಿ ಅದನ್ನು ತನ್ನ ಬಾಯಿಯ ಹತ್ತಿರ ತರುವದಕ್ಕೆ ಕೊರಗುತ್ತಾನೆ.

16 The sluggard is wiser in his own eyes Than seven men who answer with discretion.ತನ್ನ ಸ್ವಂತ ಅಭಿಪ್ರಾಯವುಳ್ಳ ಸೋಮಾರಿಯು ನೆವ ಹೇಳುವ ಏಳು ಮಂದಿಗಿಂತ ಜಾಣನಾಗಿದ್ದಾನೆ.

17 Like one who grabs a dog's ears Is one who passes by and meddles in a quarrel not his own.ಹಾದು ಹೋಗುತ್ತಾ ತನ್ನದಾಗ ದಿರುವ ವ್ಯಾಜ್ಯದಲ್ಲಿ ತಲೆಹಾಕುವವನು ಕಿವಿಹಿಡಿದು ನಾಯಿಯನ್ನು ತೆಗೆದುಕೊಂಡು ಹೋಗುವವನಂತೆ ಇದ್ದಾನೆ.

18 Like a madman who shoots firebrands, arrows, and death,ನೆರೆಯವನನ್ನು ಮೋಸಗೊಳಿಸಿ ತಮಾಷೆ ಗೋಸ್ಕರ ಮಾಡಿದೆನಲ್ಲಾ ಎನ್ನುವವನು--

19 Is the man who deceives his neighbor and says, "Am I not joking?"ಕೊಳ್ಳಿ ಗಳನ್ನೂ ಅಂಬುಗಳನ್ನೂ ಸಾವನ್ನೂ ಬೀರುವ ದೊಡ್ಡ ಹುಚ್ಚನ ಹಾಗೆ.

20 For lack of wood a fire goes out; Without gossip, a quarrel dies down.ಕಟ್ಟಿಗೆ ಇಲ್ಲದಿರುವಲ್ಲಿ ಬೆಂಕಿಯು ಆರಿ ಹೋಗುತ್ತದೆ--ಹಾಗಯೇ ಚಾಡಿಕೋರನು ಇಲ್ಲ ದಿರುವಲ್ಲಿ ಜಗಳ ಶಮನವಾಗುವದು.

21 As coals are to hot embers, And wood to fire, So is a contentious man to kindling strife.ಕೆಂಡಗಳಿಗೆ ಇದ್ದಲು, ಬೆಂಕಿಗೆ ಕಟ್ಟಿಗೆ; ಹಾಗೆಯೇ ಜಗಳವನ್ನು ಕೆರಳಿಸುವಂತೆ ಕಲಹಮಾಡುವವನು ಇರುವನು.

22 The words of a whisperer are as dainty morsels, They go down into the innermost parts.ಚಾಡಿಕೋರನ ಮಾತುಗಳು ಗಾಯಗಳ ಹಾಗೆ ಹೊಟ್ಟೆಯೊಳಕ್ಕೆ ಇಳಿಯುತ್ತವೆ.

23 Like silver dross on an earthen vessel Are the lips of a fervent one with an evil heart.ಉರಿಯುವ ತುಟಿ ಗಳೂ ಕೆಟ್ಟಹೃದಯವೂ ಬೆಳ್ಳಿಯ ಕಿಟ್ಟದಿಂದ ಮುಚ್ಚ ಲ್ಪಟ್ಟ ಬೋಕಿಯಂತೆ ಇದೆ.

24 A malicious man disguises himself with his lips, But he harbors evil in his heart.ಹಗೆಮಾಡುವವನು ತನ್ನ ತುಟಿಗಳಿಂದ ಮೋಸವನ್ನು ನಟಿಸುತ್ತಾನೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾನೆ.

25 When his speech is charming, don't believe him; For there are seven abominations in his heart:ಸವಿ ಮಾತನ್ನಾಡಿದರೆ ಅವನನ್ನು ನಂಬಬೇಡ; ಅವನ ಹೃದಯದಲ್ಲಿ ಏಳು ಅಸಹ್ಯಗಳಿವೆ.

26 His malice may be concealed by deception, But his wickedness will be exposed in the assembly.ಯಾವನ ಹಗೆ ತನವು ಮೋಸದಿಂದ ಮುಚ್ಚಲ್ಪಟ್ಟಿದೆಯೋ ಅವನ ಕೆಟ್ಟತನವು ಸಭೆಯಲ್ಲಿ ಬಯಲಾಗುವದು.

27 Whoever digs a pit shall fall into it. Whoever rolls a stone, it will come back on him.ಗುಂಡಿ ಯನ್ನು ತೋಡುವವನು ತಾನೇ ಅದರಲ್ಲಿ ಬೀಳುತ್ತಾನೆ; ಕಲ್ಲು ಹೊರಳಿಸುವವನ ಮೇಲೆಯೇ ಅದು ತಿರಿಗಿ ಹೊರಳುವದು.

28 A lying tongue hates those it hurts; And a flattering mouth works ruin.ಸುಳ್ಳು ನಾಲಿಗೆಯಿಂದ ಬಾಧಿಸಲ್ಪ ಟ್ಟವರನ್ನೇ ಅದು ಹಗೆಮಾಡುವದು; ಮುಖಸ್ತುತಿ ಮಾಡುವ ಬಾಯಿಯು ನಾಶನವನ್ನುಂಟುಮಾಡುತ್ತದೆ.

Kannada Bible