Proverbs 7 - YLT (Kannada)
1 My son! keep my sayings, And my commands lay up with thee.ನನ್ನ ಮಗನೇ, ನನ್ನ ಮಾತುಗಳನ್ನು ಅನುಸರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಇಟ್ಟುಕೋ.
2 Keep my commands, and live, And my law as the pupil of thine eye.ನನ್ನ ಅಜ್ಞೆಗಳನ್ನು ಅನುಸರಿಸಿ ಬಾಳು; ನಿನ್ನ ಕಣ್ಣು ಗುಡ್ಡೆಯಂತೆ ನನ್ನ ಕಟ್ಟಳೆಯನ್ನು ಕಾಪಾಡು.
3 Bind them on thy fingers, Write them on the tablet of thy heart.ಅವುಗ ಳನ್ನು ನಿನ್ನ ಬೆರಳುಗಳಿಗೆ ಕಟ್ಟಿಕೋ, ನಿನ್ನ ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆ.
4 Say to wisdom, `My sister Thou `art'.' And cry to understanding, `Kinswoman!'ಜ್ಞಾನಕ್ಕೆ--ನೀನು ನನ್ನ ಸಹೋದರಿ ಎಂದೂ ವಿವೇಕವು ನನ್ನ ಬಂಧು ಎಂದೂ ಹೇಳು;
5 To preserve thee from a strange woman, From a stranger who hath made smooth her sayings.ಪರಸ್ತ್ರೀಯಿಂದಲೂ ತನ್ನ ಮಾತು ಗಳಿಂದ ಮುಖಸ್ತುತಿ ಮಾಡುವ ಅನ್ಯಳಿಂದಲೂ ಅವು ನಿನ್ನನ್ನು ಕಾಪಾಡುವವು.
6 For, at a window of my house, Through my casement I have looked out,ನನ್ನ ಮನೆಯ ಕಿಟಿಕಿಯ ಜಾಲರಿಯಿಂದ ದೃಷ್ಟಿ ಸುವವನಾಗಿ ಜ್ಞಾನಹೀನರಾದವರಲ್ಲಿ ನೋಡಿದಾಗ
7 And I do see among the simple ones, I discern among the sons, A young man lacking understanding,ಯುವಕರ ಮಧ್ಯದಲ್ಲಿ ತಿಳುವಳಿಕೆಯಿಲ್ಲದ ಒಬ್ಬ ಯೌವನಸ್ಥನನ್ನು ಕಂಡೆನು.
8 Passing on in the street, near her corner, And the way `to' her house he doth step,ಅವನು ಅವಳ ಮೂಲೆಯ ಬೀದಿಯಿಂದ ಹಾದುಹೋಗುತ್ತಾ
9 In the twilight -- in the evening of day, In the darkness of night and blackness.ಸಂಜೆಯ ಮೊಬ್ಬಿನಲ್ಲಿ ಗಾಡಾಂಧಕಾರದಲ್ಲಿ ಅವಳ ಮನೆಗೆ ಹೋದನು.
10 And, lo, a woman to meet him -- (A harlot's dress, and watchful of heart,ಇಗೋ, ವೇಶ್ಯಳ ವಸ್ತ್ರವನ್ನು ಧರಿಸಿ ಕೊಂಡು ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರು ಗೊಂಡಳು.
11 Noisy she `is', and stubborn, In her house her feet rest not.(ಅವಳು ಕೂಗಾಡುವವಳು, ಹಠ ಮಾರಿ; ಅವಳ ಪಾದಗಳು ಮನೆಯಲ್ಲಿ ನಿಲ್ಲುವದಿಲ್ಲ.
12 Now in an out-place, now in broad places, And near every corner she lieth in wait) --ಒಂದು ಸಮಯದಲ್ಲಿ ಅವಳು ಹೊರಗೆ ಮತ್ತೊಂದು ಸಮಯದಲ್ಲಿ ಬೀದಿಗಳಲ್ಲಿ ಪ್ರತಿಯೊಂದು ಮೂಲೆ ಯಲ್ಲಿ ಹೊಂಚುಹಾಕುವಳು).
13 And she laid hold on him, and kissed him, She hath hardened her face, and saith to him,ಹೀಗೆ ಅವಳು ಅವ ನನ್ನು--ಹಿಡುಕೊಂಡು ಮುದ್ದಿಟ್ಟು
14 `Sacrifices of peace-offerings `are' by me, To-day I have completed my vows.ನಾಚಿಕೆಯಿಲ್ಲದೆ --ನನ್ನಲ್ಲಿ ಸಮಾಧಾನ ಅರ್ಪಣೆಗಳು ಇವೆ; ಈ ದಿವಸ ನನ್ನ ಪ್ರಮಾಣಗಳನ್ನು ನಾನು ಸಲ್ಲಿಸಿದ್ದೇನೆ.
15 Therefore I have come forth to meet thee, To seek earnestly thy face, and I find thee.ಆದಕಾರಣ ನಾನು ನಿನ್ನನ್ನು ಎದುರುಗೊಳ್ಳುವದಕ್ಕೆ ಬಂದೆನು; ಅತ್ಯಾಶೆಯಿಂದ ನಿನ್ನನ್ನು ತ್ರೀವ್ರವಾಗಿ ಹುಡು ಕುವದಕ್ಕೆ ಬಂದು ನಿನ್ನನ್ನು ಕಂಡುಕೊಂಡಿದ್ದೇನೆ.
16 `With' ornamental coverings I decked my couch, Carved works -- cotton of Egypt.ಚಿತ್ರವಾಗಿ ನೇಯ್ದ ವಸ್ತುಗಳಿಂದಲೂ ವಿಚಿತ್ರ ವಸ್ತು ಗಳಿಂದಲೂ ಐಗುಪ್ತದ ನಯವಾದ ನಾರುಮಡಿ ಯಿಂದಲೂ ನನ್ನ ಹಾಸಿಗೆಯನ್ನು ಅಲಂಕರಿಸಿದ್ದೇನೆ.
17 I sprinkled my bed -- myrrh, aloes, and cinnamon.ರಕ್ತಬೋಳ ಅಗರು ಲವಂಗ ಚೆಕ್ಕೆಗಳಿಂದ ನನ್ನ ಹಾಸಿಗೆಯನ್ನು ಸುವಾಸನೆ ಗೊಳಿಸಿದ್ದೇನೆ.
18 Come, we are filled `with' loves till the morning, We delight ourselves in loves.ಬಾ, ಬೆಳಗಿನ ವರೆಗೂ ತೃಪ್ತಿಯಾಗುವ ತನಕ ಪ್ರೀತಿಯ ವಶದಲ್ಲಿ ತುಂಬಿಕೊಳ್ಳುವ ಕಾಮ ವಿಲಾಸಗಳಿಂದ ನಮ್ಮನ್ನು ನಾವು ಆದರಿಸಿಕೊಳ್ಳೋಣ.
19 For the man is not in his house, He hath gone on a long journey.ಯಜಮಾ ನನು ಮನೆಯಲ್ಲಿ ಇಲ್ಲ; ಅವನು ದೀರ್ಘದ ಪ್ರಯಾಣ ಕೈಕೊಂಡಿದ್ದಾನೆ.
20 A bag of money he hath taken in his hand, At the day of the new moon he cometh to his house.'ಅವನು ತನ್ನೊಂದಿಗೆ ಹಣದ ಚೀಲವನ್ನು ತೆಗೆದುಕೊಂಡು ಹೋಗಿದ್ದಾನೆ; ನೇಮಕ ವಾದ ದಿನದಲ್ಲಿಯೇ ಅವನು ಈ ಮನೆಗೆ ಬರುವವನಾ ಗಿದ್ದಾನೆ ಎಂದು
21 She turneth him aside with the abundance of her speech, With the flattery of her lips she forceth him.ಬಹಳವಾದ ತನ್ನ ಸವಿಮಾತಿನಿಂದ ಅವಳು ಅವನನ್ನು ಒಪ್ಪಿಸಿ ತನ್ನ ತುಟಿಗಳ ಮುಖಸ್ತುತಿ ಯಿಂದ ಅವನನ್ನು ಬಲಾತ್ಕರಿಸಿದಳು.
22 He is going after her straightway, As an ox unto the slaughter he cometh, And as a fetter unto the chastisement of a fool,ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ ಇಲ್ಲವೆ ಮೂರ್ಖನು ಶಿಕ್ಷೆಯ ದಂಡನೆಗೆ ಹೋಗುವಂತೆ
23 Till an arrow doth split his liver, As a bird hath hastened unto a snare, And hath not known that it `is' for its life.ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವ ವರೆಗೆ ತನ್ನ ಪ್ರಾಣಕ್ಕಾಗಿ ಬಲೆಯನ್ನು ಒಡ್ಡಿದ್ದಾನೆಂದು ತಿಳಿಯದೆ ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.
24 And now, ye sons, hearken to me, And give attention to sayings of my mouth.ಆದುದರಿಂದ ಓ ನನ್ನ ಮಕ್ಕಳಿರಾ, ನನ್ನ ಕಡೆಗೆ ಕಿವಿಗೊಡಿರಿ; ನನ್ನ ಬಾಯಿಯ ಮಾತುಗಳನ್ನು ಆಲಿಸಿರಿ.
25 Let not thy heart turn unto her ways, Do not wander in her paths,ಅವಳ ಮಾರ್ಗಗಳಿಗೆ ನಿನ್ನ ಹೃದಯವು ತಿರುಗದೆ ಇರಲಿ. ಅವಳ ದಾರಿಗಳಲ್ಲಿ ತಪ್ಪಿಹೋಗದೆ ಇರಲಿ.
26 For many `are' the wounded she caused to fall, And mighty `are' all her slain ones.ಬಹು ಜನರನ್ನು ಅವಳು ಗಾಯಪಡಿಸಿ ಬೀಳಿಸಿ ದ್ದಾಳೆ; ಹೌದು, ಬಲಿಷ್ಠರಾದ ಅನೇಕ ಪುರುಷರು ಅವಳಿಂದ ಹತರಾಗಿದ್ದಾರೆ.
27 The ways of Sheol -- her house, Going down unto inner chambers of death!ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದುಹೋಗುತ್ತದೆ.
Kannada Bible