Psalm 106 - WEB (Kannada)
1 Praise Yahweh! Give thanks to Yahweh, for he is good, For his loving kindness endures forever.ನೀವು ಕರ್ತನನ್ನು ಸ್ತುತಿಸಿರಿ, ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನು ಒಳ್ಳೆಯವನು, ಆತನ ಕರುಣೆಯು ಶಾಶ್ವತ ವಾಗಿರುವದು.
2 Who can utter the mighty acts of Yahweh, Or fully declare all his praise?ಕರ್ತನ ಪರಾಕ್ರಮ ಕ್ರಿಯೆಗಳನ್ನು ಪ್ರಕಟಿಸುವವನಾರು? ಆತನ ಸ್ತೋತ್ರಗಳನ್ನು ಪ್ರಸಿದ್ಧಿ ಪಡಿಸುವವನಾರು?
3 Blessed are those who keep justice. Blessed is one who does what is right at all times.ನ್ಯಾಯವನ್ನು ಕೈಕೊಂಡು ಎಲ್ಲಾ ಕಾಲದಲ್ಲಿ ನೀತಿಯನ್ನು ಮಾಡುವವರು ಧನ್ಯರು.
4 Remember me, Yahweh, with the favor that you show to your people. Visit me with your salvation,ಓ ಕರ್ತನೇ, ನಿನ್ನ ಜನರ ಮೇಲಿರುವ ಕಟಾಕ್ಷದಿಂದ ನನ್ನನ್ನೂ ಜ್ಞಾಪಿಸಿಕೋ; ನಿನ್ನ ರಕ್ಷಣೆಯಿಂದ ನನ್ನನ್ನು ದರ್ಶಿಸು.
5 That I may see the prosperity of your chosen, That I may rejoice in the gladness of your nation, That I may glory with your inheritance.ಕರ್ತನೇ, ನೀನು ಆದುಕೊಂಡವರ ಸುಖವನ್ನು ನಾನು ನೋಡಿ ನಿನ್ನ ಜನಾಂಗದ ಸಂತೋಷ ದೊಂದಿಗೆ ಸಂತೋಷಿಸಿ ನಿನ್ನ ಬಾಧ್ಯತೆಯ ಸಂಗಡ ಹೊಗಳಿಕೊಳ್ಳುವೆನು.
6 We have sinned with our fathers. We have committed iniquity. We have done wickedly.ನಮ್ಮ ತಂದೆಗಳ ಸಂಗಡ ನಾವು ಪಾಪಮಾಡಿದ್ದೇವೆ, ಅಕ್ರಮಮಾಡಿದ್ದೇವೆ, ದುಷ್ಟತ್ವವನ್ನು ನಡಿಸಿದ್ದೇವೆ.
7 Our fathers didn't understand your wonders in Egypt. They didn't remember the multitude of your loving kindnesses, But were rebellious at the sea, even at the Red Sea.ನಮ್ಮ ತಂದೆಗಳು ಐಗುಪ್ತದಲ್ಲಿ ನಿನ್ನ ಅದ್ಭುತಗಳನ್ನು ತಿಳಿಯದೆ ನಿನ್ನ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ, ಅಂದರೆ ಕೆಂಪು ಸಮುದ್ರದ ಹತ್ತಿರ ನಿನಗೆ ತಿರುಗಿ ಬಿದ್ದರು.
8 Nevertheless he saved them for his name's sake, That he might make his mighty power known.ಆದಾಗ್ಯೂ ಆತನು ತನ್ನ ಮಹಾಶಕ್ತಿಯನ್ನು ಅವರಿಗೆ ತಿಳಿಯ ಮಾಡುವ ಹಾಗೆ ತನ್ನ ಹೆಸರಿನ ನಿಮಿತ್ತ ಅವರನ್ನು ರಕ್ಷಿಸಿದನು.
9 He rebuked the Red Sea also, and it was dried up; So he led them through the depths, as through a desert.ಆತನು ಕೆಂಪು ಸಮುದ್ರವನ್ನು ಗದರಿಸಲು ಅದು ಒಣಗಿ ಹೋಯಿತು. ಹೀಗೆ ಜಲಾಗಾಧದಲ್ಲಿ, ಅರಣ್ಯ ದಲ್ಲಿದ್ದ ಹಾಗೆಯೇ ಆತನು ಅವರನ್ನು ನಡಿಸಿದನು.
10 He saved them from the hand of him who hated them, And redeemed them from the hand of the enemy.ವೈರಿಯ ಕೈಯೊಳಗಿಂದ ಅವರನ್ನು ರಕ್ಷಿಸಿ, ಶತ್ರು ವಿನ ಕೈಯಿಂದ ಅವರನ್ನು ಬಿಡುಗಡೆ ಮಾಡಿದನು.
11 The waters covered their adversaries. There was not one of them left.ನೀರುಗಳು ಅವರ ವೈರಿಗಳನ್ನು ಮುಚ್ಚಿಬಿಟ್ಟವು; ಅವರಲ್ಲಿ ಒಬ್ಬನಾದರೂ ಉಳಿಯಲಿಲ್ಲ.
12 Then they believed his words. They sang his praise.ಆಗ ಅವರು ಆತನ ಮಾತುಗಳನ್ನು ನಂಬಿ ಆತನ ಸ್ತೋತ್ರ ವನ್ನು ಹಾಡಿದರು.
13 They soon forgot his works. They didn't wait for his counsel,ಆತನ ಕೆಲಸಗಳನ್ನು ಬೇಗ ಮರೆತುಬಿಟ್ಟು ಆತನ ಆಲೋಚನೆಗೆ ಅವರು ಕಾದುಕೊಳ್ಳದೆ ಇದ್ದರು.
14 But gave in to craving in the desert, And tested God in the wasteland.ಅರಣ್ಯದಲ್ಲಿ ದುರಾಶೆಯಿಂದ ಆಶಿಸಿ ಮರುಭೂಮಿ ಯಲ್ಲಿ ದೇವರನ್ನು ಪರೀಕ್ಷಿಸಿದರು.
15 He gave them their request, But sent leanness into their soul.ಆಗ ಅವರ ಬೇಡಿಕೆಯಂತೆ ಅವರಿಗೆ ಆತನು ಕೊಟ್ಟನು; ಆದರೆ ಅವರ ಪ್ರಾಣದಲ್ಲಿ ಕ್ಷೀಣತೆಯನ್ನು ಕಳುಹಿಸಿದನು.
16 They envied Moses also in the camp, And Aaron, Yahweh's saint.ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ ಕರ್ತನ ಪರಿಶುದ್ದನಾದ ಆರೋನನ ಮೇಲೆಯೂ ಹೊಟ್ಟೇಕಿಚ್ಚು ಪಟ್ಟರು.
17 The earth opened and swallowed up Dathan, And covered the company of Abiram.ಭೂಮಿಯು ಬಾಯಿತೆರೆದು ದಾತಾನನನ್ನು ನುಂಗಿ ಅಬಿರಾಮನ ಗುಂಪನ್ನು ಮುಚ್ಚಿ ಬಿಟ್ಟಿತು.
18 A fire was kindled in their company. The flame burned up the wicked.ಬೆಂಕಿಯು ಅವರ ಗುಂಪಿನಲ್ಲಿ ಉರಿದು, ಜ್ವಾಲೆಯು ದುಷ್ಟರನ್ನು ಸುಟ್ಟಿತು.
19 They made a calf in Horeb, And worshiped a molten image.ಅವರು ಹೋರೇಬಿ ನಲ್ಲಿ ಕರುವನ್ನು ಮಾಡಿ ಎರಕದ ವಿಗ್ರಹಕ್ಕೆ ಅಡ್ಡ ಬಿದ್ದರು.
20 Thus they exchanged their glory For an image of a bull that eats grass.ತಮ್ಮ ಘನವನ್ನು ಹುಲ್ಲು ತಿನ್ನುವ ಎತ್ತಿನ ರೂಪಕ್ಕೆ ಬದಲಾಯಿಸಿದರು.
21 They forgot God, their Savior, Who had done great things in Egypt,ತಮ್ಮ ರಕ್ಷಕನಾಗಿ ಐಗುಪ್ತದೇಶದಲ್ಲಿ ದೊಡ್ಡ ಕೆಲಸಗಳನ್ನೂ
22 Wondrous works in the land of Ham, And awesome things by the Red Sea.ಹಾಮನ ದೇಶದಲ್ಲಿ ಅದ್ಭುತಗಳನ್ನೂ ಕೆಂಪು ಸಮುದ್ರದ ಬಳಿ ಯಲ್ಲಿ ಭಯಂಕರವಾದವುಗಳನ್ನೂ ಮಾಡಿದ ದೇವ ರನ್ನು ಅವರು ಮರೆತರು.
23 Therefore he said that he would destroy them, Had Moses, his chosen, not stood before him in the breach, To turn away his wrath, so that he wouldn't destroy them.ಆದದರಿಂದ ಆತನು ಅವರನ್ನು ನಾಶಮಾಡುತ್ತೇನೆಂದು ಹೇಳಿದನು. ಆದರೆ ಆತನು ಆದುಕೊಂಡ ಮೋಶೆಯು ಆತನ ಕೋಪ ವನ್ನು ತಿರುಗಿಸುವ ಹಾಗೆ ಆಪತ್ತಿನಲ್ಲಿ ಆತನ ಮುಂದೆ ನಿಂತುಕೊಂಡನು.
24 Yes, they despised the pleasant land. They didn't believe his word,ಹೌದು, ಅವರು, ಮನೋಹರವಾದ ದೇಶ ವನ್ನು ಅಸಹ್ಯಿಸಿಬಿಟ್ಟು ಆತನ ಮಾತನ್ನು ನಂಬದೆ ಹೋದರು.
25 But murmured in their tents, And didn't listen to Yahweh's voice.ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ ಕರ್ತನ ಸ್ವರವನ್ನು ಕೇಳದೆ ಹೋದರು.
26 Therefore he swore to them That he would overthrow them in the wilderness,ಆದದರಿಂದ ಅವರನ್ನು ಅರಣ್ಯದಲ್ಲಿ ಕೆಡವುವದಕ್ಕೂ
27 That he would overthrow their seed among the nations, And scatter them in the lands.ಅವರ ಸಂತತಿಯನ್ನು ಜನಾಂಗಗಳಲ್ಲಿ ಕೆಡವಿ, ಅವರನ್ನು ದೇಶಗಳಲ್ಲಿ ಚದರಿಸುವದಕ್ಕೂ ಆತನು ತನ್ನ ಕೈಯನ್ನು ಅವರ ಮೇಲೆತ್ತಿದನು.
28 They joined themselves also to Baal Peor, And ate the sacrifices of the dead.ಬಾಳ್‌ಪೆಗೊ ಯೋರಿಗೆ ಕೂಡಿಕೊಂಡು ಸತ್ತವರಿಗೆ ಅರ್ಪಿಸಿದ ಬಲಿಗಳನ್ನು ತಿಂದು
29 Thus they provoked him to anger with their deeds. The plague broke in on them.ತಮ್ಮ ಕ್ರಿಯೆಗಳಿಂದ ಆತನಿಗೆ ಕೋಪವನ್ನು ಎಬ್ಬಿಸಿದರು; ಆದದರಿಂದ ವ್ಯಾಧಿಯು ಅವರಲ್ಲಿ ಹೊಕ್ಕಿತು.
30 Then Phinehas stood up, and executed judgment, So the plague was stopped.ಆಗ ಫೀನೆಹಾಸನು ನಿಂತು ಕೊಂಡು ನ್ಯಾಯತೀರಿಸಿದ್ದರಿಂದ ವ್ಯಾಧಿಯು ನಿಂತು ಹೋಯಿತು.
31 That was credited to him for righteousness, For all generations to come.ಇದು ತಲತಲಾಂತರಕ್ಕೂ ಯುಗ ಯುಗಕ್ಕೂ ಆತನಿಗೆ ನೀತಿಯೆಂದು ಎಣಿಸಲ್ಪಟ್ಟಿತು.
32 They angered him also at the waters of Meribah, So that Moses was troubled for their sakes;ಅವರು ವಿವಾದದ ನೀರಿನ ಬಳಿಯಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು; ಅವರ ನಿಮಿತ್ತ ಮೋಶೆಗೆ ಕೇಡು ಬಂತು.
33 Because they were rebellious against his spirit, He spoke rashly with his lips.ಅವರು ದೇವರಾತ್ಮನನ್ನು ಕೆಣ ಕಿದರು; ಆದದರಿಂದ ಅವನು ಬುದ್ಧಿಹೀನತೆಯಿಂದ ಮಾತನಾಡಿದನು.
34 They didn't destroy the peoples, As Yahweh commanded them,ಕರ್ತನು ಅವರಿಗೆ ಹೇಳಿದ ಜನಗಳನ್ನು ಅವರು ನಾಶಮಾಡದೆ ಹೋದರು.
35 But mixed themselves with the nations, And learned their works.ಆದರೆ ಅನ್ಯಜನಾಂಗ ಗಳ ಸಂಗಡ ಕೂಡಿಕೊಂಡು; ಅವರ ಕೆಲಸಗಳನ್ನು ಕಲಿತುಕೊಂಡರು.
36 They served their idols, Which became a snare to them.ಅವರ ವಿಗ್ರಹಗಳಿಗೆ ಸೇವೆ ಮಾಡಿದರು ಅವು ಅವರಿಗೆ ನೇಣು ಆದವು.
37 Yes, they sacrificed their sons and their daughters to demons.ತಮ್ಮ ಗಂಡು ಹೆಣ್ಣು ಮಕ್ಕಳನ್ನೂ ದೆವ್ವಗಳಿಗೆ ಅರ್ಪಿಸಿದರು.
38 They shed innocent blood, Even the blood of their sons and of their daughters, Whom they sacrificed to the idols of Canaan. The land was polluted with blood.ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾ ಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ; ದೇಶವನ್ನು ರಕ್ತದಿಂದ ಅಶುದ್ಧಮಾಡಿದರು.
39 Thus were they defiled with their works, And prostituted themselves in their deeds.ಹೀಗೆ ತಮ್ಮ ಕೆಲಸಗಳಿಂದ ತಮ್ಮನ್ನು ಹೊಲೆಮಾಡಿಕೊಂಡು, ತಮ್ಮ ಕ್ರಿಯೆಗಳಿಂದ ಜಾರರಾದರು.
40 Therefore Yahweh burned with anger against his people. He abhorred his inheritance.ಆಗ ಕರ್ತನ ಕೋಪವು ಆತನ ಜನರಿಗೆ ವಿರೋಧವಾಗಿ ಉರಿ ಯಿತು; ಆತನು ತನ್ನ ಸ್ವಂತ ಬಾಧ್ಯತೆಯನ್ನು ಅಸಹ್ಯಿಸಿ ಕೊಂಡು
41 He gave them into the hand of the nations. Those who hated them ruled over them.ಅವರನ್ನು ಅನ್ಯಜನಾಂಗಗಳ ಕೈಗೆಕೊಟ್ಟನು; ಅವರ ಹಗೆಯವರು ಅವರನ್ನು ಆಳಿದರು.
42 Their enemies also oppressed them. They were brought into subjection under their hand.ಅವರ ಶತ್ರುಗಳು ಅವರನ್ನು ಬಾಧೆಪಡಿಸಿದರು; ಅವರ ಕೈಕೆಳಗೆ ಅಧೀನರಾದರು.
43 Many times he delivered them, But they were rebellious in their counsel, And were brought low in their iniquity.ಬಹಳ ಸಾರಿ ಆತನು ಅವರನ್ನು ಬಿಡಿಸಿದನು; ಆದರೆ ಅವರು ತಮ್ಮ ಆಲೋಚನೆಯಿಂದ ಆತನಿಗೆ ಕೋಪವನ್ನೆಬ್ಬಿಸಿದರು. ತಮ್ಮ ಅಕ್ರಮದಿಂದ ಅವರು ಕುಗ್ಗಿಹೋದರು.
44 Nevertheless he regarded their distress, When he heard their cry.ಆದಾಗ್ಯೂ ಅವರ ಕೂಗನ್ನು ಆತನು ಕೇಳಿದಾಗ ಅವರ ಇಕ್ಕಟ್ಟಿನ ಮೇಲೆ ಲಕ್ಷ್ಯವಿಟ್ಟು
45 He remembered for them his covenant, And repented according to the multitude of his loving kindnesses.ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು.
46 He made them also to be pitied By all those who carried them captive.ಅವರನ್ನು ಸೆರೆಹಿಡಿದವರ ಮುಂದೆ ಅವರು ಕರುಣೆ ಹೊಂದುವಂತೆ ಮಾಡಿದನು.
47 Save us, Yahweh, our God, Gather us from among the nations, To give thanks to your holy name, To triumph in your praise!ಓ ನಮ್ಮ ದೇವರಾದ ಕರ್ತನೇ, ನಾವು ನಿನ್ನ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ ನಿನ್ನ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ ನಮ್ಮನ್ನು ರಕ್ಷಿಸು. ಅನ್ಯಜನಾಂಗಗಳೊಳಗಿಂದ ನಮ್ಮನ್ನು ಹೊರಗೆ ಬರಮಾಡು.
48 Blessed be Yahweh, the God of Israel, From everlasting even to everlasting! Let all the people say, "Amen." Praise Yah!ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ.
Kannada Bible