Psalm 147 - ASV (Kannada)
1 Praise ye Jehovah; For it is good to sing praises unto our God; For it is pleasant, `and' praise is comely.1 ಕರ್ತನನ್ನು ಸ್ತುತಿಸಿರಿ; ನಮ್ಮ ದೇವರನ್ನು ಕೀರ್ತಿಸುವದು ಒಳ್ಳೇದು; ಸ್ತೋತ್ರವು ರಮ್ಯವೂ ಯೋಗ್ಯವೂ ಆಗಿದೆ.
2 Jehovah doth build up Jerusalem; He gathereth together the outcasts of Israel.ಕರ್ತನು ಯೆರೂಸಲೇಮನ್ನು ಕಟ್ಟುತ್ತಾನೆ; ಚದರಿಹೋದ ಇಸ್ರಾಯೇಲ್ಯರನ್ನು ಕೂಡಿಸುತ್ತಾನೆ.
3 He healeth the broken in heart, And bindeth up their wounds.ಆತನು ಮುರಿದ ಹೃದಯದವರನ್ನು ಸ್ವಸ್ಥಮಾಡಿ ಅವರ ಗಾಯಗಳನ್ನು ಕಟ್ಟುತ್ತಾನೆ.
4 He counteth the number of the stars; He calleth them all by `their' names.ಆತನು ನಕ್ಷತ್ರಗಳ ಸಂಖ್ಯೆಯನ್ನು ಹೇಳು ತ್ತಾನೆ; ಅವೆಲ್ಲವುಗಳನ್ನು ಅವುಗಳ ಹೆಸರಿನಿಂದ ಕರೆ ಯುತ್ತಾನೆ.
5 Great is our Lord, and mighty in power; His understanding is infinite.ನಮ್ಮ ಕರ್ತನು ದೊಡ್ಡವನೂ, ಪರಾ ಕ್ರಮಿಯೂ, ವಿವೇಕಕ್ಕೆ ಎಣೆಯಿಲ್ಲ.
6 Jehovah upholdeth the meek: He bringeth the wicked down to the ground.ಕರ್ತನು ಸಾತ್ವಿಕರನ್ನು ಎತ್ತುತ್ತಾನೆ. ದುಷ್ಟರನ್ನು ನೆಲಕ್ಕೆ ಹಾಕುತ್ತಾನೆ.
7 Sing unto Jehovah with thanksgiving; Sing praises upon the harp unto our God,ಕರ್ತನಿಗೆ ಸ್ತೋತ್ರದಿಂದ ಹಾಡಿರಿ; ನಮ್ಮ ದೇವ ರನ್ನು ಕಿನ್ನರಿಯಿಂದ ಕೀರ್ತಿಸಿರಿ.
8 Who covereth the heavens with clouds, Who prepareth rain for the earth, Who maketh grass to grow upon the mountains.ಆತನು ಆಕಾಶವನ್ನು ಮೋಡಗಳಿಂದ ಮುಚ್ಚುತ್ತಾನೆ; ಭೂಮಿಗೆ ಮಳೆ ಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ.
9 He giveth to the beast his food, `And' to the young ravens which cry.ಆತನು ಪಶುಗಳಿಗೂ ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾನೆ.
10 He delighteth not in the strength of the horse: He taketh no pleasure in the legs of a man.ಆತನು ಕುದು ರೆಯ ಶಕ್ತಿಯಲ್ಲಿ ಸಂತೋಷಿಸುವದಿಲ್ಲ; ಮನುಷ್ಯನ ತೊಡೆಯಬಲವನ್ನು ಮೆಚ್ಚುವದಿಲ್ಲ.
11 Jehovah taketh pleasure in them that fear him, In those that hope in his lovingkindness.ಕರ್ತನು ತನಗೆ ಭಯಪಡುವವರಲ್ಲಿಯೂ ತನ್ನ ಕರುಣೆಗೆ ಎದುರು ನೋಡುವವರಲ್ಲಿಯೂ ಇಷ್ಟಪಡುತ್ತಾನೆ.
12 Praise Jehovah, O Jerusalem; Praise thy God, O Zion.ಓ ಯೆರೂ ಸಲೇಮೇ, ಕರ್ತನನ್ನು ಸ್ತುತಿಸು; ಓ ಚೀಯೋನೇ, ನಿನ್ನ ದೇವರನ್ನು ಸ್ತುತಿಸು.
13 For he hath strengthened the bars of thy gates; He hath blessed thy children within thee.ನಿನ್ನ ಬಾಗಲುಗಳ ಅಗುಳಿ ಗಳನ್ನು ಬಲಮಾಡಿ ಆತನು ನಿನ್ನ ಮಕ್ಕಳನ್ನು ನಿನ್ನ ಮಧ್ಯದಲ್ಲಿ ಆಶೀರ್ವದಿಸುತ್ತಾನೆ.
14 He maketh peace in thy borders; He filleth thee with the finest of the wheat.ಆತನು ನಿನ್ನ ಮೇರೆಗಳನ್ನು ಸಮಾಧಾನಪಡಿಸುತ್ತಾನೆ. ಶ್ರೇಷ್ಠವಾದ ಗೋಧಿಯಿಂದ ನಿನ್ನನ್ನು ತೃಪ್ತಿಪಡಿಸುತ್ತಾನೆ.
15 He sendeth out his commandment upon earth; His word runneth very swiftly.ಆತನು ತನ್ನ ಆಜ್ಞೆಯನ್ನು ಭೂಮಿಗೆ ಕಳುಹಿಸುತ್ತಾನೆ; ಅತಿ ತೀವ್ರವಾಗಿ ಆತನ ವಾಕ್ಯವು ಓಡುತ್ತದೆ;
16 He giveth snow like wool; He scattereth the hoar-frost like ashes.ಆತನು ಹಿಮವನ್ನು ಉಣ್ಣೆಯ ಹಾಗೆ ಕೊಡುತ್ತಾನೆ; ಮಂಜನ್ನು ಬೂದಿಯ ಹಾಗೆ ಚದರಿಸುತ್ತಾನೆ.
17 He casteth forth his ice like morsels: Who can stand before his cold?ತನ್ನ ನೀರುಗಡ್ಡೆ ಯನ್ನು ತುಂಡುಗಳ ಹಾಗೆ ಹಾಕುತ್ತಾನೆ; ಆತನ ಚಳಿಯ ಮುಂದೆ ಯಾರು ನಿಲ್ಲುವರು?
18 He sendeth out his word, and melteth them: He causeth his wind to blow, and the waters flow.ಆತನು ತನ್ನ ವಾಕ್ಯವನ್ನು ಕಳುಹಿಸಿ ಅವುಗಳನ್ನು ಕರಗಿಸುತ್ತಾನೆ; ತನ್ನ ಗಾಳಿಯನ್ನು ಬೀಸಮಾಡುತ್ತಾನೆ; ನೀರು ಹರಿಯುತ್ತದೆ.
19 He showeth his word unto Jacob, His statutes and his ordinances unto Israel.ಆತನು ಯಾಕೋಬರಿಗೆ ತನ್ನ ವಾಕ್ಯವನ್ನೂ ಇಸ್ರಾಯೇಲಿಗೆ ನಿಯಮಗಳನ್ನೂ ನ್ಯಾಯವಿಧಿಗಳನ್ನೂ ತಿಳಿಸುತ್ತಾನೆ.
20 He hath not dealt so with any nation; And as for his ordinances, they have not known them. Praise ye Jehovah.ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.
Kannada Bible