Bible

Psalm 147 - BBE (Kannada)

1 Give praise to the Lord; for it is good to make melody to our God; praise is pleasing and beautiful.1 ಕರ್ತನನ್ನು ಸ್ತುತಿಸಿರಿ; ನಮ್ಮ ದೇವರನ್ನು ಕೀರ್ತಿಸುವದು ಒಳ್ಳೇದು; ಸ್ತೋತ್ರವು ರಮ್ಯವೂ ಯೋಗ್ಯವೂ ಆಗಿದೆ.

2 The Lord is building up Jerusalem; he makes all the outlaws of Israel come together.ಕರ್ತನು ಯೆರೂಸಲೇಮನ್ನು ಕಟ್ಟುತ್ತಾನೆ; ಚದರಿಹೋದ ಇಸ್ರಾಯೇಲ್ಯರನ್ನು ಕೂಡಿಸುತ್ತಾನೆ.

3 He makes the broken-hearted well, and puts oil on their wounds.ಆತನು ಮುರಿದ ಹೃದಯದವರನ್ನು ಸ್ವಸ್ಥಮಾಡಿ ಅವರ ಗಾಯಗಳನ್ನು ಕಟ್ಟುತ್ತಾನೆ.

4 He sees the number of the stars; he gives them all their names.ಆತನು ನಕ್ಷತ್ರಗಳ ಸಂಖ್ಯೆಯನ್ನು ಹೇಳು ತ್ತಾನೆ; ಅವೆಲ್ಲವುಗಳನ್ನು ಅವುಗಳ ಹೆಸರಿನಿಂದ ಕರೆ ಯುತ್ತಾನೆ.

5 Great is our Lord, and great his power; there is no limit to his wisdom.ನಮ್ಮ ಕರ್ತನು ದೊಡ್ಡವನೂ, ಪರಾ ಕ್ರಮಿಯೂ, ವಿವೇಕಕ್ಕೆ ಎಣೆಯಿಲ್ಲ.

6 The Lord gives help to the poor in spirit; but he sends sinners down in shame.ಕರ್ತನು ಸಾತ್ವಿಕರನ್ನು ಎತ್ತುತ್ತಾನೆ. ದುಷ್ಟರನ್ನು ನೆಲಕ್ಕೆ ಹಾಕುತ್ತಾನೆ.

7 Make songs of praise to the Lord; make melody to our God with instruments of music.ಕರ್ತನಿಗೆ ಸ್ತೋತ್ರದಿಂದ ಹಾಡಿರಿ; ನಮ್ಮ ದೇವ ರನ್ನು ಕಿನ್ನರಿಯಿಂದ ಕೀರ್ತಿಸಿರಿ.

8 By his hand the heaven is covered with clouds and rain is stored up for the earth; he makes the grass tall on the mountains.ಆತನು ಆಕಾಶವನ್ನು ಮೋಡಗಳಿಂದ ಮುಚ್ಚುತ್ತಾನೆ; ಭೂಮಿಗೆ ಮಳೆ ಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ.

9 He gives food to every beast, and to the young ravens in answer to their cry.ಆತನು ಪಶುಗಳಿಗೂ ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾನೆ.

10 He has no delight in the strength of a horse; he takes no pleasure in the legs of a man.ಆತನು ಕುದು ರೆಯ ಶಕ್ತಿಯಲ್ಲಿ ಸಂತೋಷಿಸುವದಿಲ್ಲ; ಮನುಷ್ಯನ ತೊಡೆಯಬಲವನ್ನು ಮೆಚ್ಚುವದಿಲ್ಲ.

11 The Lord takes pleasure in his worshippers, and in those whose hope is in his mercy.ಕರ್ತನು ತನಗೆ ಭಯಪಡುವವರಲ್ಲಿಯೂ ತನ್ನ ಕರುಣೆಗೆ ಎದುರು ನೋಡುವವರಲ್ಲಿಯೂ ಇಷ್ಟಪಡುತ್ತಾನೆ.

12 Give praise to the Lord, O Jerusalem; give praise to your God, O Zion.ಓ ಯೆರೂ ಸಲೇಮೇ, ಕರ್ತನನ್ನು ಸ್ತುತಿಸು; ಓ ಚೀಯೋನೇ, ನಿನ್ನ ದೇವರನ್ನು ಸ್ತುತಿಸು.

13 He has made strong the iron bands of your doors; he has sent blessings on your children inside your walls.ನಿನ್ನ ಬಾಗಲುಗಳ ಅಗುಳಿ ಗಳನ್ನು ಬಲಮಾಡಿ ಆತನು ನಿನ್ನ ಮಕ್ಕಳನ್ನು ನಿನ್ನ ಮಧ್ಯದಲ್ಲಿ ಆಶೀರ್ವದಿಸುತ್ತಾನೆ.

14 He gives peace in all your land, making your stores full of fat grain.ಆತನು ನಿನ್ನ ಮೇರೆಗಳನ್ನು ಸಮಾಧಾನಪಡಿಸುತ್ತಾನೆ. ಶ್ರೇಷ್ಠವಾದ ಗೋಧಿಯಿಂದ ನಿನ್ನನ್ನು ತೃಪ್ತಿಪಡಿಸುತ್ತಾನೆ.

15 He sends out his orders to the earth; his word goes out quickly.ಆತನು ತನ್ನ ಆಜ್ಞೆಯನ್ನು ಭೂಮಿಗೆ ಕಳುಹಿಸುತ್ತಾನೆ; ಅತಿ ತೀವ್ರವಾಗಿ ಆತನ ವಾಕ್ಯವು ಓಡುತ್ತದೆ;

16 He gives snow like wool; he sends out ice-drops like dust.ಆತನು ಹಿಮವನ್ನು ಉಣ್ಣೆಯ ಹಾಗೆ ಕೊಡುತ್ತಾನೆ; ಮಂಜನ್ನು ಬೂದಿಯ ಹಾಗೆ ಚದರಿಸುತ್ತಾನೆ.

17 He sends down ice like raindrops: water is made hard by his cold.ತನ್ನ ನೀರುಗಡ್ಡೆ ಯನ್ನು ತುಂಡುಗಳ ಹಾಗೆ ಹಾಕುತ್ತಾನೆ; ಆತನ ಚಳಿಯ ಮುಂದೆ ಯಾರು ನಿಲ್ಲುವರು?

18 At the outgoing of his word, the ice is turned to water; when he sends out his wind, there is a flowing of waters.ಆತನು ತನ್ನ ವಾಕ್ಯವನ್ನು ಕಳುಹಿಸಿ ಅವುಗಳನ್ನು ಕರಗಿಸುತ್ತಾನೆ; ತನ್ನ ಗಾಳಿಯನ್ನು ಬೀಸಮಾಡುತ್ತಾನೆ; ನೀರು ಹರಿಯುತ್ತದೆ.

19 He makes his word clear to Jacob, teaching Israel his laws and his decisions.ಆತನು ಯಾಕೋಬರಿಗೆ ತನ್ನ ವಾಕ್ಯವನ್ನೂ ಇಸ್ರಾಯೇಲಿಗೆ ನಿಯಮಗಳನ್ನೂ ನ್ಯಾಯವಿಧಿಗಳನ್ನೂ ತಿಳಿಸುತ್ತಾನೆ.

20 He has not done these things for any other nation: and as for his laws, they have no knowledge of them. Let the Lord be praised.ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.

Kannada Bible