Psalm 21 - BBE (Kannada)
1 <To the chief music-maker. A Psalm. Of David.> The king will be glad in your strength, O Lord; how great will be his delight in your salvation!ಓ ಕರ್ತನೇ, ನಿನ್ನ ಬಲದಲ್ಲಿ ಅರಸನು ಸಂತೋಷಪಡುವನು; ನಿನ್ನ ರಕ್ಷಣೆಯಲ್ಲಿ ಎಷ್ಟೋ ಅಧಿಕವಾಗಿ ಉಲ್ಲಾಸಪಡುವನು.
2 You have given him his heart's desire, and have not kept back the request of his lips. (Selah.)ಅವನ ಹೃದಯದ ಆಶೆಯನ್ನು ನೀನು ಅವನಿಗೆ ಪೂರೈಸಿ ಅವನ ತುಟಿಗಳ ಬಿನ್ನಹವನ್ನು ತಡೆಯಲಿಲ್ಲ. ಸೆಲಾ.
3 For you go before him with the blessings of good things: you put a crown of fair gold on his head.ಒಳ್ಳೇತನದ ಆಶೀರ್ವಾದಗಳೊಂದಿಗೆ ಅವನನ್ನು ಎದುರುಗೊಂಡು ಅಪರಂಜಿಯ ಕಿರೀಟವನ್ನು ಅವನ ತಲೆಗೆ ಇಡುತ್ತೀ.
4 He made request to you for life, and you gave it to him, long life for ever and ever.ಜೀವವನ್ನು ಅವನು ನಿನ್ನಿಂದ ಬೇಡಲು ನೀನು ಅವನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟೆ.
5 His glory is great in your salvation: honour and authority have you put on him.ನ್ನ ರಕ್ಷಣೆಯಲ್ಲಿ ಅವನ ಹೆಚ್ಚಳವು ದೊಡ್ಡದಾಗಿದೆ, ಗೌರವವನ್ನೂ ಘನತೆಯನ್ನೂ ಅವನ ಮೇಲೆ ಇಡುತ್ತೀ.
6 For you have made him a blessing for ever: you have given him joy in the light of your face.ನೀನು ಎಂದೆಂದಿಗೂ ಅವನನ್ನು ಅಧಿಕವಾಗಿ ಆಶೀರ್ವಾದ ಮಾಡಿದ್ದೀ. ನಿನ್ನ ಮುಖದ ಮುಂದೆ ಅವನನ್ನು ಅಧಿಕ ವಾಗಿ ಸಂತೋಷಪಡುವಂತೆ ಮಾಡಿದ್ದೀ.
7 For the king has faith in the Lord, and through the mercy of the Most High he will not be moved.ಅರಸನು ಕರ್ತನಲ್ಲಿ ಭರವಸವಿಡುತ್ತಾನೆ; ಮಹೋನ್ನತನ ಕೃಪೆ ಯಿಂದ ಅವನು ಕದಲದೆ ಇರುವನು.
8 Your hand will make a search for all your haters; your right hand will be hard on all those who are against you.ನಿನ್ನ ಶತ್ರು ಗಳೆಲ್ಲಾ ನಿನ್ನ ಕೈಗೆ ಸಿಕ್ಕುವರು; ನಿನ್ನ ಬಲಗೈಗೆ ನಿನ್ನನ್ನು ಹಗೆಮಾಡುವವರು ಸಿಕ್ಕುವರು.
9 You will make them like a flaming oven before you; the Lord in his wrath will put an end to them, and they will be burned up in the fire.ನೀನು ಕೋಪಿಸುವ ಕಾಲದಲ್ಲಿ ಅವರನ್ನು ಬೆಂಕಿಯ ಒಲೆಯ ಹಾಗೆ ಮಾಡುವಿ; ಕರ್ತನು ತನ್ನ ಕೋಪದಿಂದ ಅವರನ್ನು ನುಂಗಿಬಿಡುವನು; ಬೆಂಕಿಯು ಅವರನ್ನು ದಹಿಸಿ ಬಿಡು ವದು.
10 Their fruit will be cut off from the earth, and their seed from among the children of men.ನೀನು ಅವರ ಫಲವನ್ನು ಭೂಮಿಯೊಳ ಗಿಂದಲೂ ಅವರ ಸಂತತಿಯನ್ನು ಮನುಷ್ಯನ ಮಕ್ಕ ಳೊಳಗಿಂದಲೂ ನಾಶಮಾಡುವಿ.
11 For their thoughts were bitter against you: they had an evil design in their minds, which they were not able to put into effect.ಅವರು ನಿನಗೆ ವಿರೋಧವಾಗಿ ಕೇಡನ್ನು ಯತ್ನಿಸಿದರು; ಪೂರೈಸಲಾ ರದ ಯುಕ್ತಿಯನ್ನು ಕಲ್ಪಿಸಿದರು.
12 Their backs will be turned when you make ready the cords of your bow against their faces.ನೀನು ಅವರನ್ನು ಬೆನ್ನು ತಿರಿಗಿಸುವಂತೆ ಮಾಡುವಿ: ಅವರ ಮುಖಕ್ಕೆ ಎದುರಾಗಿ ನಿನ್ನ ಬಿಲ್ಲನೂ ಹಗ್ಗಗಳಲ್ಲಿ ಹೂಡುವಿ.
13 Be lifted up, O Lord, in your strength; so will we make songs in praise of your power.ಕರ್ತನೇ, ನಿನ್ನ ಸ್ವಂತ ಬಲದಿಂದ ನೀನು ಘನ ಹೊಂದಿದವನಾಗು; ಹೀಗೆ ನಾವು ನಿನ್ನ ಪರಾಕ್ರಮ ವನ್ನು ಹಾಡಿ ಕೀರ್ತಿಸುವೆವು.
Kannada Bible