Psalm 21 - YLT (Kannada)
1 To the Overseer. -- A Psalm of David. Jehovah, in Thy strength is the king joyful, In Thy salvation how greatly he rejoiceth.ಓ ಕರ್ತನೇ, ನಿನ್ನ ಬಲದಲ್ಲಿ ಅರಸನು ಸಂತೋಷಪಡುವನು; ನಿನ್ನ ರಕ್ಷಣೆಯಲ್ಲಿ ಎಷ್ಟೋ ಅಧಿಕವಾಗಿ ಉಲ್ಲಾಸಪಡುವನು.
2 The desire of his heart Thou gavest to him, And the request of his lips Thou hast not withheld. Selah.ಅವನ ಹೃದಯದ ಆಶೆಯನ್ನು ನೀನು ಅವನಿಗೆ ಪೂರೈಸಿ ಅವನ ತುಟಿಗಳ ಬಿನ್ನಹವನ್ನು ತಡೆಯಲಿಲ್ಲ. ಸೆಲಾ.
3 For Thou puttest before him blessings of goodness, Thou settest on his head a crown of fine gold.ಒಳ್ಳೇತನದ ಆಶೀರ್ವಾದಗಳೊಂದಿಗೆ ಅವನನ್ನು ಎದುರುಗೊಂಡು ಅಪರಂಜಿಯ ಕಿರೀಟವನ್ನು ಅವನ ತಲೆಗೆ ಇಡುತ್ತೀ.
4 Life he hath asked from Thee, Thou hast given to him -- length of days, Age-during -- and for ever.ಜೀವವನ್ನು ಅವನು ನಿನ್ನಿಂದ ಬೇಡಲು ನೀನು ಅವನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟೆ.
5 Great `is' his honour in Thy salvation, Honour and majesty Thou placest on him.ನ್ನ ರಕ್ಷಣೆಯಲ್ಲಿ ಅವನ ಹೆಚ್ಚಳವು ದೊಡ್ಡದಾಗಿದೆ, ಗೌರವವನ್ನೂ ಘನತೆಯನ್ನೂ ಅವನ ಮೇಲೆ ಇಡುತ್ತೀ.
6 For Thou makest him blessings for ever, Thou dost cause him to rejoice with joy, By Thy countenance.ನೀನು ಎಂದೆಂದಿಗೂ ಅವನನ್ನು ಅಧಿಕವಾಗಿ ಆಶೀರ್ವಾದ ಮಾಡಿದ್ದೀ. ನಿನ್ನ ಮುಖದ ಮುಂದೆ ಅವನನ್ನು ಅಧಿಕ ವಾಗಿ ಸಂತೋಷಪಡುವಂತೆ ಮಾಡಿದ್ದೀ.
7 For the king is trusting in Jehovah, And in the kindness of the Most High He is not moved.ಅರಸನು ಕರ್ತನಲ್ಲಿ ಭರವಸವಿಡುತ್ತಾನೆ; ಮಹೋನ್ನತನ ಕೃಪೆ ಯಿಂದ ಅವನು ಕದಲದೆ ಇರುವನು.
8 Thy hand cometh to all Thine enemies, Thy right hand doth find Thy haters.ನಿನ್ನ ಶತ್ರು ಗಳೆಲ್ಲಾ ನಿನ್ನ ಕೈಗೆ ಸಿಕ್ಕುವರು; ನಿನ್ನ ಬಲಗೈಗೆ ನಿನ್ನನ್ನು ಹಗೆಮಾಡುವವರು ಸಿಕ್ಕುವರು.
9 Thou makest them as a furnace of fire, At the time of Thy presence. Jehovah in His anger doth swallow them, And fire doth devour them.ನೀನು ಕೋಪಿಸುವ ಕಾಲದಲ್ಲಿ ಅವರನ್ನು ಬೆಂಕಿಯ ಒಲೆಯ ಹಾಗೆ ಮಾಡುವಿ; ಕರ್ತನು ತನ್ನ ಕೋಪದಿಂದ ಅವರನ್ನು ನುಂಗಿಬಿಡುವನು; ಬೆಂಕಿಯು ಅವರನ್ನು ದಹಿಸಿ ಬಿಡು ವದು.
10 Their fruit from earth Thou destroyest, And their seed from the sons of men.ನೀನು ಅವರ ಫಲವನ್ನು ಭೂಮಿಯೊಳ ಗಿಂದಲೂ ಅವರ ಸಂತತಿಯನ್ನು ಮನುಷ್ಯನ ಮಕ್ಕ ಳೊಳಗಿಂದಲೂ ನಾಶಮಾಡುವಿ.
11 For they stretched out against Thee evil, They devised a wicked device, they prevail not,ಅವರು ನಿನಗೆ ವಿರೋಧವಾಗಿ ಕೇಡನ್ನು ಯತ್ನಿಸಿದರು; ಪೂರೈಸಲಾ ರದ ಯುಕ್ತಿಯನ್ನು ಕಲ್ಪಿಸಿದರು.
12 For Thou makest them a butt, When Thy strings Thou preparest against their faces.ನೀನು ಅವರನ್ನು ಬೆನ್ನು ತಿರಿಗಿಸುವಂತೆ ಮಾಡುವಿ: ಅವರ ಮುಖಕ್ಕೆ ಎದುರಾಗಿ ನಿನ್ನ ಬಿಲ್ಲನೂ ಹಗ್ಗಗಳಲ್ಲಿ ಹೂಡುವಿ.
13 Be Thou exalted, O Jehovah in, Thy strength, We sing and we praise Thy might!ಕರ್ತನೇ, ನಿನ್ನ ಸ್ವಂತ ಬಲದಿಂದ ನೀನು ಘನ ಹೊಂದಿದವನಾಗು; ಹೀಗೆ ನಾವು ನಿನ್ನ ಪರಾಕ್ರಮ ವನ್ನು ಹಾಡಿ ಕೀರ್ತಿಸುವೆವು.
Kannada Bible